AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RBI ವಿತ್ತೀಯ ನೀತಿ ಪ್ರಕಟ: ರೆಪೊ ದರದಲ್ಲಿಲ್ಲ ಬದಲಾವಣೆ

ಆರ್ಥಿಕತೆಗೆ ಬಲ ತುಂಬುವ ಕೆಲಸವನ್ನು ನಾವು ಮಾಡುತ್ತೇವೆ.  ಕೊರೊನಾ ಬಂದ ನಂತರದ ದಿನದಿಂದ ಇಲ್ಲಿಯವರೆಗೆ ಆರ್ಥಿಕತೆ ಚೇತರಿಕೆಗೆ ಬೇಕಾದ ಕೆಲಸವನ್ನು ಮಾಡಿದ್ದೇವೆ ಎಂದು ಶಕ್ತಿಕಾಂತ್​ ದಾಸ್​ ತಿಳಿಸಿದ್ದಾರೆ. 

RBI ವಿತ್ತೀಯ ನೀತಿ ಪ್ರಕಟ: ರೆಪೊ ದರದಲ್ಲಿಲ್ಲ ಬದಲಾವಣೆ
ಆರ್​ಬಿಐ ಗವರ್ನರ್ ಶಕ್ತಿಕಾಂತ್​ ದಾಸ್ (ಸಂಗ್ರಹ ಚಿತ್ರ)
ರಾಜೇಶ್ ದುಗ್ಗುಮನೆ
| Edited By: |

Updated on: Feb 05, 2021 | 2:13 PM

Share

ಮುಂಬೈ: ರಿಸರ್ವ್​ ಬ್ಯಾಂಕ್​ ಆಫ್​ ಇಂಡಿಯಾ ಇಂದು (ಫೆ.5) ವಿತ್ತೀಯ ನೀತಿ ಪ್ರಕಟಿಸಿದೆ. ಸತತ ನಾಲ್ಕನೇ ಬಾರಿಗೆ ರೆಪೊ ದರದಲ್ಲಿ ಆರ್​ಬಿಐ ಯಾವುದೇ ಬದಲಾವಣೆ ಮಾಡಿಲ್ಲ. ಈ ವಿಷಯವನ್ನು ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಿಸರ್ವ್​ ಬ್ಯಾಂಕ್​ ಆಫ್​ ಇಂಡಿಯಾ ಗವರ್ನರ್​ ಶಕ್ತಿಕಾಂತ್​ ದಾಸ್​ ಈ ಕುರಿತು ಮಾಹಿತಿ ನೀಡಿದರು.

ಹಣಕಾಸು ನೀತಿ ಸಮಿತಿ ಈ ಬಾರಿ ರೆಪೊ ದರದಲ್ಲಿ ಯಾವುದೆ ಬದಲಾವಣೆ ಮಾಡುತ್ತಿಲ್ಲ. ಹೀಗಾಗಿ, ಹಾಲಿ ಚಾಲ್ತಿಯಲ್ಲಿರುವ ಶೇ 4ರ ರೆಪೊ ದರ ಮುಂದುವರಿಯಲಿದೆ.  ರಿವರ್ಸ್​ ರೆಪೊ ದರ ಕೂಡ ಯಾವುದೇ ಬದಲಾವಣೆ ಕಾಣದೆ ಶೇ 3.35 ಇದೆ ಎಂದು ತಿಳಿಸಿದರು. 2021ರ ಬಜೆಟ್ ನಂತರ ಆರು ಸದಸ್ಯರ ಹಣಕಾಸು ನೀತಿ ಸಮಿತಿಯ ಮೊದಲ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಮುಂದಿನ ದಿನಗಳಲ್ಲಿ ಭಾರತದ ಆರ್ಥಿಕತೆ ಸುಧಾರಿಸಲಿದೆ. ಕೊರೊನಾದಿಂದ ಉಂಟಾದ ಹಾನಿಯನ್ನು ಭವಿಷ್ಯದಲ್ಲಿ ನಾವು ಕಡಿಮೆ ಮಾಡಲು ಪ್ರಯತ್ನಿಸುತ್ತೇವೆ. ರಿಸರ್ವ್​ ಬ್ಯಾಂಕ್​ 2020 ಮೇ ತಿಂಗಳಲ್ಲಿ ಕೊನೆಯ ಬಾರಿಗೆ ರೆಪೊ ದರವನ್ನು ಕಡಿಮೆ ಮಾಡಿತ್ತು. ಈ ಮೂಲಕ ಆರ್ಥಿಕತೆಗೆ ಬಲ ತುಂಬುವ ಕೆಲಸ ಮಾಡಿತ್ತು.

ಇನ್ನು, ​ ಆರ್ಥಿಕತೆಗೆ ಬಲ ತುಂಬುವ ಕೆಲಸವನ್ನು ನಾವು ಮಾಡುತ್ತೇವೆ.  ಕೊರೊನಾ ಬಂದ ನಂತರದ ದಿನದಿಂದ ಇಲ್ಲಿಯವರೆಗೆ ಆರ್ಥಿಕತೆ ಚೇತರಿಕೆಗೆ ಬೇಕಾದ ಕೆಲಸವನ್ನು ಮಾಡಿದ್ದೇವೆ ಎಂದು ಶಕ್ತಿಕಾಂತ್​ ದಾಸ್​ ತಿಳಿಸಿದ್ದಾರೆ. ಇನ್ನು, ಇಂದು ಹಣಕಾಸು ನೀತಿ ಘೋಷಣೆಗೂ ಮೊದಲೇ ಷೇರು ಮಾರುಕಟ್ಟೆಯಲ್ಲಿ ಭಾರೀ ಏರಿಕೆ ಕಂಡಿತ್ತು. ನಿಫ್ಟಿ 15 ಸಾವಿರದ ಗಡಿ ತಲುಪಿದರೆ, ಸೆನ್ಸೆಕ್ಸ್​ 51 ಸಾವಿರದ ಗಡಿ ತಲುಪಿದೆ. ಮಧ್ಯಾಹ್ನದ ವೇಳೆಗೆ ಷೇರು ಮಾರುಕಟ್ಟೆಯಲ್ಲಿ ಇಳಿಕೆ ಕಂಡಿದೆ.

ಏನಿದು ರೆಪೊ ದರ? ನಮಗೆ ಸಾಲ ನೀಡುವುದಕ್ಕೆ ಬ್ಯಾಂಕ್​ಗಳು ಆರ್​ಬಿಐನಿಂದ ಸಾಲ ಪಡೆಯುತ್ತವೆ. ಆರ್​ಬಿಐ ಬ್ಯಾಂಕ್​ಗಳಿಗೆ ನೀಡುವ ಹಣಕ್ಕೆ ಬಡ್ಡಿ ಹಾಕುತ್ತದೆ. ಈ ಬಡ್ಡಿ ದರವೇ ರೆಪೊ ದರ. ಒಂದೊಮ್ಮೆ ರೆಪೊ ದರವನ್ನು ಆರ್​ಬಿಐ​ ಹೆಚ್ಚಿಸಿದರೆ ಜನಸಾಮಾನ್ಯರಿಗೆ ನೀಡುವ ಸಾಲದ ಬಡ್ಡಿ ದರ ಹೆಚ್ಚಲಿದೆ. ರೆಪೊ ದರ ಕಡಿಮೆ ಆದರೆ, ನಮಗೆ ಸಿಗುವ ಸಾಲದ ಬಡ್ಡಿ ದರ ಕಡಿಮೆ ಆಗಲಿದೆ. ಇಂದು ರೆಪೊ ದರದಲ್ಲಿ ಯಾವುದೆ ಬದಲಾವಣೆ ಕಂಡಿಲ್ಲ. ಹೀಗಾಗಿ, ಸಾಮಾನ್ಯರಿಗೆ ಸಿಗುವ ಸಾಲದ ಹಣದ ಬಡ್ಡಿ ದರ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ.

Stock Market: ಷೇರು ಮಾರುಕಟ್ಟೆ ಬೆಳವಣಿಗೆಯಿಂದ ಜನ ಸಾಮಾನ್ಯರಿಗೇನು ಲಾಭ?

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?