RBI MPC Meet October 2024: ಸತತ ಹತ್ತನೇ ಬಾರಿ ಶೇ. 6.5ರ ರೆಪೋದರದಲ್ಲಿ ಇಲ್ಲ ಬದಲಾವಣೆ; ಆರ್ಥಿಕ ಬೆಳವಣಿಗೆ ಬಗ್ಗೆ ಆರ್​ಬಿಐ ಆಶಾದಾಯಕ

RBI Governor Shaktikanta Das Press Meet: ನಿರೀಕ್ಷೆಯಂತೆ ಆರ್​ಬಿಐನ ರಿಪೋದರ ಶೇ. 6.5ರಲ್ಲೇ ಮುಂದುವರಿಯಲಿದೆ. ಹಣದುಬ್ಬರ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಬಡ್ಡಿದರವನ್ನು ಅಧಿಕ ಮಟ್ಟದಲ್ಲೇ ಮುಂದುವರಿಸಲು ಆರ್​ಬಿಐನ ಎಂಪಿಸಿ ನಿರ್ಧರಿಸಿದೆ. ಹಣದುಬ್ಬರ ಈ ಹಣಕಾಸು ವರ್ಷದಲ್ಲಿ ಶೇ. 4.5ರಷ್ಟು ಇರಬಹುದು ಎಂದು ಆರ್​ಬಿಐ ಅಂದಾಜಿಸಿದೆ.

RBI MPC Meet October 2024: ಸತತ ಹತ್ತನೇ ಬಾರಿ ಶೇ. 6.5ರ ರೆಪೋದರದಲ್ಲಿ ಇಲ್ಲ ಬದಲಾವಣೆ; ಆರ್ಥಿಕ ಬೆಳವಣಿಗೆ ಬಗ್ಗೆ ಆರ್​ಬಿಐ ಆಶಾದಾಯಕ
ಶಕ್ತಿಕಾಂತ ದಾಸ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Oct 09, 2024 | 10:31 AM

ನವದೆಹಲಿ, ಅಕ್ಟೋಬರ್ 9: ಆರ್​ಬಿಐ ಬಡ್ಡಿದರ ಯಥಾಸ್ಥಿತಿಯಲ್ಲಿ ಮುಂದುವರಿಸಲು ನಿರ್ಧರಿಸಿದೆ. ಸತತ 10ನೇ ಬಾರಿ ಆರ್​ಬಿಐ ನಿಲುವು ಅಚಲವಾಗಿದೆ. ಇದರೊಂದಿಗೆ ರೆಪೋ ದರ ಅಥವಾ ಬಡ್ಡಿದರ ಶೇ. 6.50ರಲ್ಲಿ ಮುಂದುವರಿಯಲಿದೆ. ಸೋಮವಾರದಿಂದ ಮೂರು ದಿನಗಳ ಕಾಲ ನಡೆದ ಎಂಪಿಸಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ಈ ಸಭೆಯ ನಿರ್ಧಾರಗಳನ್ನು ಇಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಆರ್​ಬಿಐನ ಆರು ಎಂಪಿಸಿ ಸದಸ್ಯರಲ್ಲಿ ಐವರು ಸದಸ್ಯರು ರೆಪೋ ದರ ಶೇ. 6.5ರಲ್ಲಿ ಮುಂದುವರಿಸಲು ನಿರ್ಧರಿಸಿದರು ಎಂದು ಶಕ್ತಿಕಾಂತದಾಸ್ ಹೇಳಿದ್ದಾರೆ. ಎಂಎಸ್​ಎಲ್​ಆರ್ ಇತ್ಯಾದಿ ಇತರ ದರಗಳೂ ಯಥಾಸ್ಥಿತಿಯಲ್ಲಿ ಮುಂದುವರಿಯಲಿವೆ.

ಇದನ್ನೂ ಓದಿ: ಭಾರತದಲ್ಲಿ ಮ್ಯುಚುವಲ್ ಫಂಡ್​ಗೆ ಎಂಟು ದಶಕಗಳ ಇತಿಹಾಸ; 1963ರಿಂದ ಈ ಉದ್ಯಮ ಬೆಳೆದದ್ದು ಹೇಗೆ?

ರಿಪೋ ದರ ಎಂದರೇನು?

ರಿಪೋ ದರ ಎಂದರೆ ಬ್ಯಾಂಕುಗಳು ಆರ್​ಬಿಐನಿಂದ ಪಡೆಯುವ ಸಾಲಕ್ಕೆ ವಿಧಿಸಲಾಗುವ ಬಡ್ಡಿದರವಾಗಿದೆ. ರಿವರ್ಸ್ ರಿಪೋ ಎಂದರೆ ಆರ್​ಬಿಐನಲ್ಲಿ ಬ್ಯಾಂಕುಗಳು ಇಡುವ ಠೇವಣಿಗೆ ಸಿಗುವ ಬಡ್ಡಿಯಾಗಿದೆ. ಆರ್​ಬಿಐನ ಈ ದರಗಳು ಬ್ಯಾಂಕುಗಳ ಬಡ್ಡಿದರ ನೀತಿಗೆ ಪ್ರಭಾವ ಬೀರುತ್ತವೆ. ರಿಪೋ ದರಗಳು ಹೆಚ್ಚಾದರೆ ಬ್ಯಾಂಕುಗಳು ತಮ್ಮ ಗ್ರಾಹಕರಿಗೆ ಬಡ್ಡಿದರ ಹೆಚ್ಚಿಸಬಹುದು. ಹೀಗಾಗಿ, ಆರ್​ಬಿಐನ ರಿಪೋದರ ದೇಶದ ಹಣಕಾಸು ಮಾರುಕಟ್ಟೆಯಲ್ಲಿ ಪರಿಣಾಮ ಬೀರುತ್ತದೆ.

ಆಹಾರ ಮತ್ತು ಲೋಹಗಳ ಬೆಲೆಗಳಲ್ಲಿ ಇತ್ತೀಚೆಗೆ ಆಗಿರುವ ಹೆಚ್ಚಳವು ಹಣದುಬ್ಬರ ಹೆಚ್ಚಳಕ್ಕೆ ಎಡೆ ಮಾಡಿಕೊಡಬಹುದು ಎನ್ನುವ ಆತಂಕವನ್ನು ಶಕ್ತಿಕಾಂತ ದಾಸ್ ವ್ಯಕ್ತಪಡಿಸಿದ್ದಾರೆ. ಅವರ ಅಂದಾಜಿನ ಪ್ರಕಾರ ಈ ಹಣಕಾಸು ವರ್ಷದಲ್ಲಿ ಹಣದುಬ್ಬರ ಶೇ. 4ರಿಂದ 5ರ ವ್ಯಾಪ್ತಿಯಲ್ಲಿ ಇರಲಿದೆ. 2024-25ರ ಹಣಕಾಸು ವರ್ಷದಲ್ಲಿ ಹಣದುಬ್ಬರ ಶೇ. 4.5ರಷ್ಟು ಇರಲಿದೆ ಎಂದಿದ್ದಾರೆ ಆರ್​ಬಿಐ ಗವರ್ನರ್. ಮೂರು ಮತ್ತು ನಾಲ್ಕನೇ ಕ್ವಾರ್ಟರ್​ನಲ್ಲಿ ಹಣದುಬ್ಬರ ಶೇ. 4.8 ಮತ್ತು ಶೇ. 4.2ರಷ್ಟು ಇರಬಹುದು ಎಂಬುದು ಅವರ ಅಂದಾಜು. ಹಾಗೆಯೇ, 2025-26ರ ಹಣಕಾಸು ವರ್ಷದ ಮೊದಲ ಕ್ವಾರ್ಟರ್​ನಲ್ಲಿ, ಅಂದರೆ 2025ರ ಏಪ್ರಿಲ್​ನಿಂದ ಜೂನ್​ವರೆಗಿನ ಅವಧಿಯಲ್ಲಿ ಹಣದುಬ್ಬರ ಶೇ. 4.3ರಷ್ಟಿರಬಹುದು ಎನ್ನುವ ಅಂದಾಜನ್ನೂಆರ್​ಬಿಐ ಮಾಡಿದೆ.

ಇದನ್ನೂ ಓದಿ: ಆದಾಯ ತೆರಿಗೆ ಕಾಯ್ದೆಯಲ್ಲಿ ಅಮೂಲಾಗ್ರ ಪರಿಷ್ಕರಣೆಗೆ ಸರ್ಕಾರ ನಿರ್ಧಾರ; ಪೋರ್ಟಲ್​ನಲ್ಲಿ ಸಾರ್ವಜನಿಕರ ಅಭಿಪ್ರಾಯಕ್ಕೂ ಅವಕಾಶ

ಜಿಡಿಪಿ ದರ ಶೇ. 7.2: ಆರ್​​ಬಿಐ ಅಂದಾಜು

ಆರ್​​ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು ಆರ್ಥಿಕತೆ ಬಗ್ಗೆ ಆಶಾದಾಯಕವಾಗಿದ್ದಾರೆ. 2024-25ರ ಹಣಕಾಸು ವರ್ಷದಲ್ಲಿ ಆರ್ಥಿಕತೆ ಶೇ. 7.2ರಷ್ಟು ಬೆಳೆಯಬಹುದು ಎಂದಿದ್ದಾರೆ. ಈ ಹಣಕಾಸು ವರ್ಷದ ಎರಡು, ಮೂರು ಮತ್ತು ನಾಲ್ಕನೇ ಕ್ವಾರ್ಟರ್​ನಲ್ಲಿ ಜಿಡಿಪಿ ಕ್ರಮವಾಗಿ ಶೇ. 7.0, ಶೇ. 7.4, ಮತ್ತು ಶೇ. 7.4ರ ದರದಲ್ಲಿ ಬೆಳೆಯಬಹುದು ಎಂದಿದ್ದಾರೆ. ಮುಂದಿನ ಹಣಕಾಸು ವರ್ಷದ ಮೊದಲ ಕ್ವಾರ್ಟರ್​ನಲ್ಲಿ ಜಿಡಿಪಿ ಶೇ. 7.3ರಷ್ಟು ಹೆಚ್ಚಬಹುದು ಎಂದೂ ಅಂದಾಜಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:16 am, Wed, 9 October 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ