AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RBI MPC Meet: ಶೇ. 6.5ರಷ್ಟು ಬಡ್ಡಿದರ ಮುಂದುವರಿಸಿದ ಆರ್​ಬಿಐ; ಸತತ ಆರನೇ ಬಾರಿ ಬಡ್ಡಿದರ ಯಥಾಸ್ಥಿತಿ

RBI Governor Shaktikanta Das Pressmeet: ರೆಪೋ ದರವನ್ನು ಶೇ. 6.5ರಲ್ಲಿ ಮುಂದುವರಿಸಲು ಆರ್​ಬಿಐ ನಿರ್ಧರಿಸಿದೆ. ಇದರೊಂದಿಗೆ ಸತತ 5ನೇ ಬಾರಿ ರೆಪೋ ದರ ಯಥಾಸ್ಥಿತಿಯಲ್ಲಿದೆ. ಎಸ್​ಡಿಎಫ್ ಮತ್ತು ಎಂಎಸ್​ಎಫ್ ದರಗಳ ಯಥಾಸ್ಥಿತಿ ಕಾಯ್ದುಕೊಳ್ಳಲೂ ಆರ್​ಬಿಐ ನಿರ್ಧರಿಸಿದೆ. ಈ ಹಣಕಾಸು ವರ್ಷದಲ್ಲಿ ಜಿಡಿಪಿ ಬೆಳವಣಿಗೆಯ ಅಂದಾಜನ್ನು ಆರ್​​ಬಿಐ ಹೆಚ್ಚಿಸಿದೆ. ಮುಂದಿನ ನಾಲ್ಕು ತ್ರೈಮಾಸಿಕ ಅವಧಿಯ ಜಿಡಿಪಿ ಬೆಳವಣಿಗೆ ಅಂದಾಜು ಮಾಡಿದೆ. ಇನ್ನು, ಹಣದುಬ್ಬರವು ಆರ್​ಬಿಐಗೆ ತಲೆನೋವಾಗಿ ಮುಂದುವರಿದಿದೆ. 2023-24ರಲ್ಲಿ ಹಣದುಬ್ಬರ ಶೇ. 5.4ರಷ್ಟಿರಬಹುದು ಎಂದಿದೆ.

RBI MPC Meet: ಶೇ. 6.5ರಷ್ಟು ಬಡ್ಡಿದರ ಮುಂದುವರಿಸಿದ ಆರ್​ಬಿಐ; ಸತತ ಆರನೇ ಬಾರಿ ಬಡ್ಡಿದರ ಯಥಾಸ್ಥಿತಿ
ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Dec 08, 2023 | 10:37 AM

Share

ನವದೆಹಲಿ, ಡಿಸೆಂಬರ್ 8: ಭಾರತೀಯ ರಿಸರ್ವ್ ಬ್ಯಾಂಕ್ ನಿರೀಕ್ಷೆಯಂತೆ ರೆಪೋ ದರದ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧರಿಸಿದೆ. ಮೂರು ದಿನಗಳ ಎಂಪಿಸಿ ಸಭೆ ಬಳಿಕ ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು ಬಡ್ಡಿದರವನ್ನು ಶೇ. 6.5ರಲ್ಲಿ ಮುಂದುವರಿಸುತ್ತಿರುವುದಾಗಿ ಘೋಷಿಸಿದ್ದಾರೆ. ಸತತ ಐದನೇ ಬಾರಿ ರೆಪೋ ದರ ಶೇ. 6.5ರ ದರದ ಮಟ್ಟದಲ್ಲೇ ಇದೆ.

ಪ್ರತೀ ಎರಡು ತಿಂಗಳು ನಡೆಯುವ ಎಂಪಿಸಿ ಸಭೆಯಲ್ಲಿ ರೆಪೋ ದರ ಮಾತ್ರವಲ್ಲ ಸ್ಟ್ಯಾಂಡಿಂಗ್ ಡೆಪಾಸಿಟ್ ಫೆಸಿಲಿಟಿ ಮತ್ತು ಮಾರ್ಜಿನಲ್ ಸ್ಟ್ಯಾಂಡಿಂಗ್ ಫೆಸಿಲಿಟಿ ದರವನ್ನು ಕ್ರಮವಾಗಿ ಶೇ. 6.25 ಮತ್ತು ಶೇ. 6.75ರಲ್ಲಿ ಮುಂದುವರಿಸಲು ನಿರ್ಧರಿಸಲಾಗಿದೆ. ಇನ್ನು, ಹಣದುಬ್ಬರಕ್ಕೆ ಕಡಿವಾಣ ಹಾಕಲು ಒಂದು ಪ್ರಮುಖ ಅಸ್ತ್ರವೆನ್ನಲಾದ ವಿತ್​ಡ್ರಾಯಲ್ ಆಫ್ ಅಕಾಮಡೇಶನ್​ನ ಕ್ರಮವನ್ನು ಮುಂದುವರಿಸಲು ನಿರ್ಧರಿಸಲಾಯಿತು. ಆರ್​ಬಿಐನ ಆರು ಮಂದಿ ಎಂಪಿಸಿ ಸದಸ್ಯರ ಪೈಕಿ ಐವರು ಇದಕ್ಕೆ ಬೆಂಬಲ ಸೂಚಿಸಿದ್ದು ತಿಳಿದುಬಂದಿದೆ.

ಇದನ್ನೂ ಓದಿ: ಬೆಂಗಳೂರು ಸಮೀಪ ದೇಶದ ಅತಿದೊಡ್ಡ ಐಫೋನ್ ಘಟಕ; ಹೊಸೂರಿನಲ್ಲಿ ಟಾಟಾ ಯೋಜನೆ; 50,000 ಮಂದಿಗೆ ಉದ್ಯೋಗ

ಜಿಡಿಪಿ ಬೆಳವಣಿಗೆ ನಿರೀಕ್ಷೆ ಹೆಚ್ಚಿಸಿದ ಆರ್​ಬಿಐ

ಈ ಹಣಕಾಸು ವರ್ಷದ ಎರಡನೇ ತ್ರೈಮಾಸಿಕ ಅವಧಿಯಲ್ಲಿ ಭಾರತದ ಜಿಡಿಪಿ ಶೇ. 7.6ರಷ್ಟು ಬೆಳೆದು ಎಲ್ಲರ ನಿರೀಕ್ಷೆಮೀರಿಸಿರುವ ಬೆನ್ನಲ್ಲೇ ಇದೀಗ ಆರ್​ಬಿಐ ಪ್ರಸಕ್ತ ಹಣಕಾಸು ವರ್ಷದಲ್ಲಿ ತನ್ನ ಅಂದಾಜನ್ನು ಬದಲಿಸಿದೆ. 2023-24ರ ವರ್ಷದಲ್ಲಿ ಭಾರತದ ಜಿಡಿಪಿ ಶೇ. 6.5ರಷ್ಟಿರಬಹುದು ಎಂದು ಕಳೆದ ಬಾರಿಯ ಎಂಪಿಸಿ ಸಭೆಯಲ್ಲಿ ಆರ್​ಬಿಐ ಅಂದಾಜು ಮಾಡಿತ್ತು. ಈ ಬಾರಿ ತನ್ನ ಅಭಿಪ್ರಾಯವನ್ನು ಬದಲಿಸಿದ್ದು, ಪ್ರಸಕ್ತ ಹಣಕಾಸು ವರ್ಷದಲ್ಲಿ ದೇಶದ ಆರ್ಥಿಕತೆ ಶೇ. 7ರಷ್ಟು ಬೆಳೆಯಬಹುದು ಎಂದು ನಿರೀಕ್ಷಿಸಿದೆ.

ಆರ್​ಬಿಐನ ಜಿಡಿಪಿ ಬೆಳವಣಿಗೆಯ ಅಂದಾಜು ಬದಲು

  • 2023ರ ಅಕ್ಟೋಬರ್​ನಿಂದ ಡಿಸೆಂಬರ್: ಶೇ. 6ರಿಂದ ಶೇ. 6.5ಕ್ಕೆ
  • 2024ರ ಜನವರಿಯಿಂದ ಮಾರ್ಚ್: ಶೇ. 5.7ರಿಂದ ಶೇ. 6ಕ್ಕೆ
  • 2024ರ ಏಪ್ರಿಲ್​ನಿಂದ ಜೂನ್: ಶೇ. 6.66ರಿಂದ ಶೇ. 6.7ಕ್ಕೆ
  • 2024ರ ಜುಲೈನಿಂದ ಸೆಪ್ಟೆಂಬರ್: ಶೇ. 6.5
  • 2024ರ ಅಕ್ಟೋಬರ್​ನಿಂದ ಡಿಸೆಂಬರ್: ಶೇ. 6.4

ಇದನ್ನೂ ಓದಿ: ಚಿದಂಬರಂ, ರಾಜನ್​ರಿಗೆ ಮ್ಯಾನುಫ್ಯಾಕ್ಚರಿಂಗ್ ಪಾಠ ಬೋಧಿಸಿ, ಟ್ರೋಲ್ ಮಾಡಿದ ಸಚಿವ ಎ ವೈಷ್ಣವ್

ಹಣದುಬ್ಬರ ಶೇ. 5.4ರಷ್ಟು: ಆರ್​ಬಿಐ ಅಂದಾಜು

ಈ ಹಣಕಾಸು ವರ್ಷದಲ್ಲಿ (2023-24) ಗ್ರಾಹಕ ಬೆಲೆ ಅನುಸೂಚಿ (ಸಿಪಿಐ) ಆಧಾರಿತ ಹಣದುಬ್ಬರ ಅಥವಾ ರೀಟೇಲ್ ಇನ್​ಫ್ಲೇಶನ್ ಶೇ. 5.4ರಷ್ಟು ಇರಬಹುದು ಎಂದು ಆರ್​ಬಿಐ ಅಂದಾಜು ಮಾಡಿದೆ. ಸದ್ಯದಲ್ಲೇ ಹಣದುಬ್ಬರ ನಿಗದಿತ ಗುರಿಯಾದ ಶೇ. 4ರ ದರಕ್ಕೆ ಇಳಿಸುವುದು ಸಾಧ್ಯವಿಲ್ಲ ಎನ್ನುವ ಸೂಚನೆಯನ್ನು ಆರ್​ಬಿಐ ರವಾನಿಸಿದೆ. ಆಹಾರ ಬೆಲೆ ಏರಿಕೆಯು ಹಣದುಬ್ಬರ ನಿಯಂತ್ರಣ ಕಾರ್ಯವನ್ನು ಕಷ್ಟವಾಗಿಸಿದೆ ಎಂಬುದು ಆರ್​ಬಿಐ ಅನಿಸಿಕೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:12 am, Fri, 8 December 23

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ