RBI MPC Meet June 2024: ಬಡ್ಡಿದರ ಯಥಾಸ್ಥಿತಿ ಮುಂದುವರಿಸಲು ಆರ್​ಬಿಐ ನಿರ್ಧಾರ

RBI Governor Shaktikanta Das Press Conference: ಆರ್​ಬಿಐ ತನ್ನ ರೆಪೋ ದರವನ್ನು ಶೇ. 6.50ರಲ್ಲೇ ಮುಂದುವರಿಸಲು ನಿರ್ಧರಿಸಿದೆ. 2023ರ ಫೆಬ್ರುವರಿ 8ರಿಂದಲೂ ರೆಪೋ ದರ ಇಷ್ಟೇ ಇದೆ. ನವೆಂಬರ್ ಅಥವಾ ಡಿಸೆಂಬರ್​ನಲ್ಲಿ ಬಡ್ಡಿದರ ಇಳಿಸುವ ಸಂಭಾವ್ಯತೆ ಇದೆ. ಮೂರು ದಿನಗಳ ಎಂಪಿಸಿ ಸಭೆ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಆರ್​​ಬಿಐ ಗವರ್ನರ್ ಶಕ್ತಿಕಾಂತ ದಾಸ್, ದೇಶದ ಆರ್ಥಿಕ ಪರಿಸ್ಥಿತಿ ಬಗ್ಗೆ ಸಕಾರಾತ್ಮಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

RBI MPC Meet June 2024: ಬಡ್ಡಿದರ ಯಥಾಸ್ಥಿತಿ ಮುಂದುವರಿಸಲು ಆರ್​ಬಿಐ ನಿರ್ಧಾರ
ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Jun 07, 2024 | 10:25 AM

ನವದೆಹಲಿ, ಜೂನ್ 7: ಭಾರತೀಯ ರಿಸರ್ವ್ ಬ್ಯಾಂಕ್ ಇಂದು ಶುಕ್ರವಾರ ರೆಪೋ ದರವನ್ನು ಶೇ. 6.5ರಲ್ಲಿ ಮುಂದುವರಿಸಲು ನಿರ್ಧರಿಸಿದೆ. ಬುಧವಾರದಿಂದ (ಜೂನ್ 5) ನಡೆದ ಮಾನಿಟರಿ ಪಾಲಿಸಿ ಕಮಿಟಿ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರವನ್ನು ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ಇಂದು ಪ್ರಕಟಿಸಿದ್ದಾರೆ. ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಶಕ್ತಿಕಾಂತ ದಾಸ್, ಹಣದುಬ್ಬರ ಇನ್ನೂ ಗುರಿಗಿಂತ ಮೇಲೆಯೇ ಇರುವುದರಿಂದ ಇನ್ನಷ್ಟು ಕಾಲ ಬಡ್ಡಿದರ ಮುಂದುವರಿಸುವುದು ಸೂಕ್ತ ಎನ್ನುವ ನಿಲುವು ತಳೆದಿದ್ದಾರೆ. ಕಳೆದ 15-16 ತಿಂಗಳಿಂದ ಆರ್​ಬಿಐ ತನ್ನ ರೆಪೋ ಅಥವಾ ಬಡ್ಡಿದರದಲ್ಲಿ ಬದಲಾವಣೆ ಮಾಡಿಲ್ಲ. 2023ರ ಫೆಬ್ರುವರಿ 8ರಂದು ರೆಪೋ ದರವನ್ನು ಶೇ. 6.25ರಿಂದ ಶೇ. 6.50ಕ್ಕೆ ಹೆಚ್ಚಿಸಲಾಗಿತ್ತು. ಅಲ್ಲಿಂದ ಈವರೆಗೂ ರೆಪೋ ದರದಲ್ಲಿ ಬದಲಾವಣೆ ಮಾಡಲಾಗಿಲ್ಲ. ಇನ್ನಷ್ಟು ತಿಂಗಳು ಇದೇ ದರ ಮುಂದುವರಿಯುವ ಸಾಧ್ಯತೆ ಇದೆ.

ಈ ಬಾರಿ ಆರ್​ಬಿಐನಿಂದ ಬಡ್ಡಿದರದಲ್ಲಿ ಬದಲಾವಣೆ ಮಾಡುವ ಸಾಧ್ಯತೆ ಇಲ್ಲ ಎಂದೇ ಬಹಳಷ್ಟು ಆರ್ಥಿಕ ತಜ್ಞರು ಅಂದಾಜಿಸಿದ್ದರು. ಅದು ನಿಜವಾಗಿದೆ. ಹಣದುಬ್ಬರ ಇನ್ನಷ್ಟು ಕಾಲ ತುಸು ಮೇಲ್ಮಟ್ಟದಲ್ಲೇ ಇರುವುದರಿಂದ, ಮತ್ತು ಹಣದುಬ್ಬರ ಹೆಚ್ಚೇ ಇದ್ದರೂ ಜಿಡಿಪಿ ನಿರೀಕ್ಷೆಮೀರಿ ಬೆಳೆಯುತ್ತಿರುವುದರಿಂದ ರೆಪೋ ದರದಲ್ಲಿ ಬದಲಾವಣೆ ಮಾಡುವ ಅವಶ್ಯಕತೆ ಆರ್​ಬಿಐಗೆ ಬಂದಿಲ್ಲ. ಶಕ್ತಿಕಾಂತ ದಾಸ್ ಕೂಡ ಇಂದು ಸುದ್ದಿಗೋಷ್ಠಿಯಲ್ಲಿ ಈ ಅಂಶಗಳನ್ನು ಉಲ್ಲೇಖಿಸಿದ್ದಾರೆ. ರೆಪೋದರ, ರಿವರ್ಸ್ ರೆಪೋ, ವಿತ್​ಡ್ರಾಯಲ್ ಆಫ್ ಅಕಾಮೊಡೇಶನ್, ಎಸ್​ಎಲ್​ಆರ್ ಹೀಗೆ ವಿವಿಧ ದರಗಳ ಯಥಾಸ್ಥಿತಿ ಮುಂದುವರಿಯಲಿದೆ. ರೆಪೋ ದರದ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ವಿಚಾರದಲ್ಲಿ ಈ ಬಾರಿಯ ಎಂಪಿಸಿ ಸಭೆಯ ವಿಶೇಷತೆ ಎಂದರೆ ಯಥಾಸ್ಥಿತಿ ಮುಂದುವರಿಸುವ ನಿರ್ಧಾರದ ಪರವಾಗಿ 4:2ರ ಬಹುಮತ ವ್ಯಕ್ತವಾಗಿದೆ. ಆರು ಸದಸ್ಯರಿರುವ ಎಂಪಿಸಿ ಸಭೆಯಲ್ಲಿ ಇಬ್ಬರು ಇದಕ್ಕೆ ವಿರೋಧ ವ್ಯಕ್ತಪಡಿಸಿರುವುದು ಗಮನಾರ್ಹ. ಹಿಂದಿನ ಕೆಲ ಎಂಪಿಸಿ ಸಭೆಗಳಲ್ಲಿ 5:1ರ ಬಹುಮತದಿಂದ ನಿರ್ಧಾರ ಪ್ರಕಟವಾಗುತ್ತಿತ್ತು.

ಇದನ್ನೂ ಓದಿ: ಷೇರುಪೇಟೆ ಧೂಳಿನಲ್ಲಿ ನಿಮಗೆ ಬೇಕಾದ ರತ್ನಗಳನ್ನು ಹುಡುಕಿ ಪಡೆಯಿರಿ: ಮಾರ್ಕ್ ಮೋಬಿಯಸ್

ರೆಪೋ ದರ, ರಿವರ್ಸ್ ರೆಪೋ ದರ ಎಂದರೇನು?

ರೆಪೋ ದರ ಎಂದರೆ ಇದು ವಾಣಿಜ್ಯ ಬ್ಯಾಂಕುಗಳು ಆರ್​ಬಿಐನಿಂದ ಪಡೆಯುವ ಸಾಲಕ್ಕೆ ತೆರಬೇಕಿರುವ ಬಡ್ಡಿದರ. ಇದಕ್ಕೆ ಅನುಗುಣವಾಗಿ ಬ್ಯಾಂಕುಗಳು ತಮ್ಮ ಗ್ರಾಹಕರಿಗೆ ಬಡ್ಡಿ ನಿಗದಿ ಮಾಡಬಹುದು.

ಇನ್ನು, ರಿವರ್ಸ್ ರೆಪೋ ದರ ಎಂದರೆ ಬ್ಯಾಂಕುಗಳು ಆರ್​ಬಿಐನಲ್ಲಿ ಇರಿಸುವ ಠೇವಣಿಗೆ ಸಿಗುವ ಬಡ್ಡಿದರವಾಗಿದೆ. ರೆಪೋ ದರಕ್ಕಿಂತ ರಿವರ್ಸ್ ರೆಪೋ ದರ ತುಸು ಕಡಿಮೆ ಇರುತ್ತದೆ.

ಜಿಡಿಪಿ ದರ 2024-25ರಲ್ಲಿ ಶೇ. 7.2; ನಿರೀಕ್ಷೆ ಹೆಚ್ಚಿಸಿದ ಆರ್​ಬಿಐ

ಭಾರತದ ಆರ್ಥಿಕತೆ 2024-25ರ ಹಣಕಾಸು ವರ್ಷದಲ್ಲಿ ಶೇ. 7.2ರಷ್ಟು ಬೆಳೆಯಬಹುದು ಎಂದು ಎಂಪಿಸಿ ಸಭೆಯಲ್ಲಿ ಚರ್ಚಿತವಾದ ಅಭಿಪ್ರಾಯವನ್ನು ಶಕ್ತಿಕಾಂತ ದಾಸ್ ಬಹಿರಂಗಪಡಿಸಿದ್ದಾರೆ. ಹಿಂದಿನ ಎಂಪಿಸಿ ಸಭೆಯಲ್ಲಿ ಈ ಹಣಕಾಸು ವರ್ಷಕ್ಕೆ ಜಿಡಿಪಿದರ ಶೇ. 7ರಷ್ಟಿರಬಹುದು ಎಂದು ಅಂದಾಜು ಮಾಡಲಾಗಿತ್ತು. ಈ ಆರ್​ಬಿಐ ತನ್ನ ನಿರೀಕ್ಷೆ ಹೆಚ್ಚಿಸಿದೆ.

ಇದನ್ನೂ ಓದಿ: ಆರ್​ಬಿಐ ರೆಪೋ ದರ ಇಳಿಸದಿದ್ದರೂ ಬ್ಯಾಂಕುಗಳು ಬಡ್ಡಿದರ ಹೆಚ್ಚಿಸುವ ಸಾಧ್ಯತೆ

ಈ ಬಾರಿ ಮುಂಗಾರು ಮಳೆ ಚೆನ್ನಾಗಿ ಆಗುವ ಸಾಧ್ಯತೆ ಇರುವುದರಿಂದ ಕೃಷಿ ಉತ್ಪಾದನೆಯಲ್ಲಿ ಹೆಚ್ಚಾಗಬಹುದು. ಇದರಿಂದ ಆಹಾರ ಹಣದುಬ್ಬರ ಕಡಿಮೆ ಆಗಬಹುದು. ಆ ಮೂಲಕ ಒಟ್ಟಾರೆ ಹಣದುಬ್ಬರ ಕಡಿಮೆ ಆಗಬಹುದು ಎನ್ನುವ ಹರ್ಷದ ಸಂಗತಿಯನ್ನು ಆರ್​ಬಿಐ ಗವರ್ನರ್ ಹಂಚಿಕೊಂಡಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:06 am, Fri, 7 June 24

Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ