AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RBI Policy: ಆರ್​ಬಿಐನಿಂದ ಬಡ್ಡಿದರದಲ್ಲಿ ಇಲ್ಲ ಬದಲಾವಣೆ; ಹಣದುಬ್ಬರ ಶೇ. 4.6 ಎಂದು ಅಂದಾಜು

RBI MPC meeting decision announcement: ಆರ್​ಬಿಐನ ಎಂಪಿಸಿ ಸಭೆಯು ರಿಪೋ ದರವನ್ನು ಶೇ. 5.25ರಲ್ಲಿ ಮುಂದುವರಿಸಲು ನಿರ್ಧರಿಸಿದೆ. ಕಳೆದ ಬಾರಿಯ ಎಂಪಿಸಿ ಸಭೆಯಲ್ಲಿ, ಮುಂಬರುವ ದಿನಗಳಲ್ಲಿ ರಿಪೋ ದರ ಇಳಿಸುವ ಸಾಧ್ಯತೆಯ ಸುಳಿವನ್ನು ನೀಡಲಾಗಿತ್ತು. ಆದರೆ, ಪಶ್ಚಿಮ ಏಷ್ಯಾ ಬಿಕ್ಕಟ್ಟಿನಿಂದಾಗಿ ಬಡ್ಡಿದರದಲ್ಲಿ ಯಾವುದೇ ಬದಲಾವಣೆ ಮಾಡದಿರಲು ನಿರ್ಧರಿಸಲಾಗಿದೆ.

RBI Policy: ಆರ್​ಬಿಐನಿಂದ ಬಡ್ಡಿದರದಲ್ಲಿ ಇಲ್ಲ ಬದಲಾವಣೆ; ಹಣದುಬ್ಬರ ಶೇ. 4.6 ಎಂದು ಅಂದಾಜು
ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾImage Credit source: DD
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Apr 08, 2026 | 10:52 AM

Share

ನವದೆಹಲಿ, ಏಪ್ರಿಲ್ 8: ಭಾರತೀಯ ರಿಸರ್ವ್ ಬ್ಯಾಂಕ್​ನ ಮಾನಿಟರಿ ಪಾಲಿಸಿ ಸಮಿತಿಯು (RBI MPC meeting) ನಿರೀಕ್ಷೆಯಂತೆ ರಿಪೋ ದರದ ಯಥಾಸ್ಥಿತಿ ಮುಂದುವರಿಸಲು ನಿರ್ಧರಿಸಿದೆ. ಮೊನ್ನೆಯಿಂದ ನಡೆದ ಆರ್​ಬಿಐ ಎಂಪಿಸಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದರೊಂದಿಗೆ ಆರ್​ಬಿಐನ ರಿಪೋ ದರ ಅಥವಾ ಬಡ್ಡಿದರವು (Repo Rate) ಶೇ. 5.25ರಲ್ಲಿ ಮುಂದುವರಿಯಲಿದೆ. ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ ಹಣದುಬ್ಬರ ಏರಿಕೆಯಾಗುವ ಸಾಧ್ಯತೆ ಇದ್ದರಿಂದ ಬಡ್ಡಿದರ ಇಳಿಸದೇ ಇರುವ ತೀರ್ಮಾನವನ್ನು ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.

ಎಂಪಿಸಿ ಸಭೆ ಬಳಿಕ ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು ಪತ್ರಿಕಾಗೋಷ್ಠಿ ಕರೆದು ಪಾಲಿಸಿ ನಿರ್ಧಾರಗಳನ್ನು ಪ್ರಕಟಿಸಿದರು. ಹಾಗೆಯೇ, 2026-27ರ ವರ್ಷಕ್ಕೆ ಜಿಡಿಪಿ ಬೆಳವಣಿಗೆ ಮತ್ತು ಹಣದುಬ್ಬರ ಎಷ್ಟಾಗಬಹುದು ಎಂದು ಮಾಡಲಾಗಿರುವ ಅಂದಾಜನ್ನೂ ಬಹಿರಂಗಪಡಿಸಿದರು.

ಇದನ್ನೂ ಓದಿ: ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೆ ಸಿಲುಕಿರುವ ಸಣ್ಣ ಉದ್ದಿಮೆಗಳಿಗೆ ಸರ್ಕಾರದಿಂದ 2.5 ಲಕ್ಷ ಕೋಟಿ ರೂ ಸಾಲ ಖಾತ್ರಿ ಯೋಜನೆ ನೆರವು

2026-27ರಲ್ಲಿ ಶೇ. 4.6 ಹಣದುಬ್ಬರ

ಈ ಹಣಕಾಸು ವರ್ಷದಲ್ಲಿ (2026-27) ಹಣದುಬ್ಬರ ಶೇ. 4.6 ಇರಬಹುದು ಎಂದು ಆರ್​ಬಿಐ ಪ್ರೊಜೆಕ್ಟ್ ಮಾಡಿದೆ. ಮೊದಲ ಕ್ವಾರ್ಟರ್​ನಲ್ಲಿ ಶೇ. 4, ಎರಡನೇ ಕ್ವಾರ್ಟರ್​ನಲ್ಲಿ ಶೇ. 4.4, ಮೂರನೇ ಕ್ವಾರ್ಟರ್​ನಲ್ಲಿ ಶೇ. 5.2, ನಾಲ್ಕನೇ ಕ್ವಾರ್ಟರ್​ನಲ್ಲಿ ಶೇ. 4.7ರಷ್ಟು ಹಣದುಬ್ಬರ ಇರಬಹುದು ಎನ್ನುವುದು ಆರ್​ಬಿಐ ಎಂಪಿಸಿಯಲ್ಲಿ ಬಂದಿರುವ ಅಭಿಪ್ರಾಯ.

2026-27ರಲ್ಲಿ ಜಿಡಿಪಿ ಶೇ. 6.9: ಆರ್​ಬಿಐ ಅಂದಾಜು

ಈ ಹಣಕಾಸು ವರ್ಷದಲ್ಲಿ ದೇಶದ ಜಿಡಿಪಿ ಸರಾಸರಿಯಾಗಿ ಶೇ. 6.9 ಜಿಡಿಪಿ ಬೆಳೆಯಬಹುದು ಎಂದು ಆರ್​ಬಿಐ ಈ ಬಾರಿ ಅಂದಾಜು ಮಾಡಿದೆ. ಮೊದಲ ಕ್ವಾರ್ಟರ್​ನಲ್ಲಿ (2026ರ ಏಪ್ರಿಲ್​ನಿಂದ ಜೂನ್) ಶೇ. 6.8, ಎರಡನೇ ಕ್ವಾರ್ಟರ್​ನಲ್ಲಿ ಶೇ. 6.7, ಮೂರನೇ ಕ್ವಾರ್ಟರ್​ನಲ್ಲಿ ಶೇ. 7 ಮತ್ತು ನಾಲ್ಕನೇ ಕ್ವಾರ್ಟರ್​ನಲ್ಲಿ ಶೇ. 7.2ರಷ್ಟು ಆರ್ಥಿಕತೆ ಬೆಳೆಯಬಹುದು ಎಂದು ಸಂಜಯ್ ಮಲ್ಹೋತ್ರಾ ತಿಳಿಸಿದರು.

ಇದನ್ನೂ ಓದಿ: ಅಮೆರಿಕ, ಜಪಾನ್, ಜರ್ಮನಿಗೂ ಸಾಧ್ಯವಾಗದ ಅಡ್ವಾನ್ಸ್ಡ್ ರಿಯಾಕ್ಟರ್ ಸಾಧಿಸಿದ ಭಾರತ; ದೇಶದ ಇಂಧನ ಭವಿಷ್ಯ ಸುರಕ್ಷಿತ?

ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ವಿಚಾರ ಪ್ರಸ್ತಾಪಿಸಿದ ಆರ್​ಬಿಐ ಗವರ್ನರ್, ಪ್ರಸಕ್ತ ವರ್ಷದ ಆರ್ಥಿಕ ಬೆಳವಣಿಗೆಯ ಮೇಲೆ ಈ ಬಿಕ್ಕಟ್ಟು ಪರಿಣಾಮ ಬೀರುವ ಸಾಧ್ಯತೆಯನ್ನು ವಿವರಿಸಿದರು. ಬಿಕ್ಕಟ್ಟಿನಿಂದ ವಿವಿಧ ಕ್ಷೇತ್ರಗಳನ್ನು ರಕ್ಷಿಸಲು ಸರ್ಕಾರ ತೆಗೆದುಕೊಂಡಿರುವ, ತೆಗೆದುಕೊಳ್ಳುತ್ತಿರುವ ವಿವಿಧ ಕ್ರಮಗಳನ್ನು ಅವರು ಸ್ವಾಗತಿಸಿದರು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:35 am, Wed, 8 April 26

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!