Repo Rate: ಮತ್ತೆ ರೆಪೊ ದರ ಹೆಚ್ಚಳದ ಶಾಕ್ ನೀಡುತ್ತಾ ಆರ್​ಬಿಐ? ಇಲ್ಲಿದೆ ತಜ್ಞರ ಅಭಿಪ್ರಾಯ

ಈ ಬಾರಿ 25 ಮೂಲಾಂಶದಷ್ಟು ರೆಪೊ ದರ ಹೆಚ್ಚಳವಾದರೂ ಬ್ಯಾಂಕ್​ಗಳು ಎಫ್​ಡಿ ಬಡ್ಡಿ ದರವನ್ನು ತಕ್ಷಣವೇ ಹೆಚ್ಚಿಸುವ ಸಾಧ್ಯತೆ ಇಲ್ಲ ಎನ್ನಲಾಗಿದೆ. ಆರ್​ಬಿಐ ರೆಪೊ ದರ ಹೆಚ್ಚಳವನ್ನು ಬ್ಯಾಂಕ್​ಗಳು ಯಾವ ಪ್ರಮಾಣದಲ್ಲಿ ಗ್ರಾಹಕರಿಗೆ ವರ್ಗಾಯಿಸುತ್ತವೆ ಎಂಬುದನ್ನು ಕಾದುನೋಡಬೇಕಷ್ಟೆ ಎಂದು ತಜ್ಞರು ಹೇಳಿದ್ದಾರೆ.

Repo Rate: ಮತ್ತೆ ರೆಪೊ ದರ ಹೆಚ್ಚಳದ ಶಾಕ್ ನೀಡುತ್ತಾ ಆರ್​ಬಿಐ? ಇಲ್ಲಿದೆ ತಜ್ಞರ ಅಭಿಪ್ರಾಯ
RBI repo rate hike Best time to book your fixed deposits FDs know interest rates here
Follow us
Ganapathi Sharma
|

Updated on: Jan 30, 2023 | 1:20 PM

ನವದೆಹಲಿ: ಕೇಂದ್ರ ಬಜೆಟ್​ ಮಂಡನೆಯಾದ ಕೆಲವೇ ದಿನಗಳಲ್ಲಿ ಆರ್​ಬಿಐ (RBI) ಹಣಕಾಸು ನೀತಿ ಸಮಿತಿ ಸಭೆ (MPC) ಸೇರಲಿದ್ದು, ರೆಪೊ ದರವನ್ನು ಮತ್ತೆ 25 ಮೂಲಾಂಶ ಹೆಚ್ಚಿಸಿ ಶೇ 6.50ಕ್ಕೆ ನಿಗದಿಪಡಿಸುವ ನಿರೀಕ್ಷೆ ಇದೆ ಎಂದು ‘ರಾಯಿಟರ್ಸ್​​’ ಸುದ್ದಿ ಸಂಸ್ಥೆಯ ಸಮೀಕ್ಷಾ ವರದಿ ತಿಳಿಸಿದೆ. ಅರ್ಥಶಾಸ್ತ್ರಜ್ಞರನ್ನು ಸಮೀಕ್ಷೆಗೆ ಒಳಪಡಿಸಿ ಸುದ್ದಿ ಸಂಸ್ಥೆ ವರದಿ ಸಿದ್ಧಪಡಿಸಿದೆ. ಸಮೀಕ್ಷೆಯಲ್ಲಿ ಭಾಗವಹಿಸಿದ 52 ಮಂದಿ ಅರ್ಥಶಾಸ್ತ್ರಜ್ಞರ ಪೈಕಿ 40 ಮಂದಿ ರೆಪೊ ದರ ಹೆಚ್ಚಳದ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ. ಉಳಿದ 12 ಮಂದಿ ರೆಪೊ ದರ ಬದಲಾಗುವ ಸಾಧ್ಯತೆ ಕಡಿಮೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಜನವರಿ 13-27 ಅವಧಿಯಲ್ಲಿ ಸಮೀಕ್ಷೆ ನಡೆಸಲಾಗಿತ್ತು. 2023ರ ಅಂತ್ಯದ ವರೆಗೂ ರೆಪೊ ದರವನ್ನು ಆರ್​ಬಿಐ ಶೇ 6.50 ಮಟ್ಟದಲ್ಲಿ ಇರಿಸುವ ಸಾಧ್ಯತೆ ಇದೆ ಎಂದೂ ಅರ್ಥಶಾಸ್ತ್ರಜ್ಞರು ಅಭಿಪ್ರಾಯಪಟ್ಟಿದ್ದಾರೆ.

‘ಈ ಹಿಂದೆ ಹಣಕಾಸು ನೀತಿ ಸಮಿತಿಯು ಕೈಗೊಂಡಿದ್ದ ಕಠಿಣ ಕ್ರಮಗಳು ಒಟ್ಟಾರೆ ಆರ್ಥಿಕ ಬೆಳವಣಿಗೆ ಮತ್ತು ಹಣದುಬ್ಬರದ ಮೇಲೆ ಪರಿಣಾಮ ಬೀರಿದೆ. ಒಂದು ಹಂತದಲ್ಲಿ ಅವರು (ಆರ್​​ಬಿಐ) ರೆಪೊ ದರವನ್ನು ಸ್ಥಗಿತಗೊಳಿಸುವ ಅಗತ್ಯವಿದೆ. ಶೇ 6.50ರ ರೆಪೊ ದರ ನಿಗದಿಪಡಿಸಿದ ಬಳಿಕ ಸ್ಥಗಿತಗೊಳಿಸುವುದು ಉತ್ತಮ ಎಂಬುದು ನನ್ನ ಭಾವನೆ’ ಎಂದು ಕೋಟಕ್ ಮಹೀಂದ್ರಾ ಬ್ಯಾಂಕ್​ನ ಮುಖ್ಯ ಅರ್ಥಶಾಸ್ತ್ರಜ್ಞೆ ಉಪಾಸನಾ ಭಾರದ್ವಾಜ್ ತಿಳಿಸಿದ್ದಾರೆ. ರೆಪೊ ದರ ಸ್ಥಗಿತಗೊಳಿಸಬೇಕು ಎಂದ ಮಾತ್ರಕ್ಕೆ ಅವರು ಹಣದುಬ್ಬರದ ಮೇಲಿನ ಗಮನ ಬಿಟ್ಟುಬಿಡುತ್ತಾರೆ ಎಂದರ್ಥವಲ್ಲ ಎಂದೂ ಅವರು ಹೇಳಿದ್ದಾರೆ.

ಇದನ್ನೂ ಓದಿ: Philips Layoff: ಮತ್ತೆ 6,000 ಉದ್ಯೋಗಿಗಳ ವಜಾಗೊಳಿಸಿದ ಫಿಲಿಪ್ಸ್

ಡಿಸೆಂಬರ್​​ 7ರಂದು ಹಣಕಾಸು ನೀತಿ ಸಮಿತಿಯು ರೆಪೊ ದರವನ್ನು 35 ಮೂಲಾಂಶ ಹೆಚ್ಚಿಸಿತ್ತು. ಇದರೊಂದಿಗೆ ಪರಿಷ್ಕೃತ ರೆಪೊ ದರ ಶೇಕಡಾ 6.25 ಆಗಿತ್ತು. ಇದರೊಂದಿಗೆ, ಒಟ್ಟಾರೆಯಾಗಿ 23ನೇ ಹಣಕಾಸು ವರ್ಷದಲ್ಲಿ ಆರ್​ಬಿಐ 225 ಮೂಲಾಂಶದಷ್ಟು ರೆಪೊ ದರ ಹೆಚ್ಚಿಸಿದಂತಾಗಿತ್ತು. ಪರಿಣಾಮವಾಗಿ ಸಾಲಗಳ ಮೇಲಿನ ಬಡ್ಡಿ ದರ, ಎಫ್​ಡಿ ಸೇರಿದಂತೆ ಉಳಿತಾಯ ಖಾತೆಗಳ ಮೇಲಿನ ಬಡ್ಡಿ ದರಗಳನ್ನೂ ಬ್ಯಾಂಕ್​ಗಳು ಹೆಚ್ಚಿಸಿದ್ದವು.

ಆದರೆ, ಈ ಬಾರಿ 25 ಮೂಲಾಂಶದಷ್ಟು ರೆಪೊ ದರ ಹೆಚ್ಚಳವಾದರೂ ಬ್ಯಾಂಕ್​ಗಳು ಎಫ್​ಡಿ ಬಡ್ಡಿ ದರವನ್ನು ತಕ್ಷಣವೇ ಹೆಚ್ಚಿಸುವ ಸಾಧ್ಯತೆ ಇಲ್ಲ ಎನ್ನಲಾಗಿದೆ. ಆರ್​ಬಿಐ ರೆಪೊ ದರ ಹೆಚ್ಚಳವನ್ನು ಬ್ಯಾಂಕ್​ಗಳು ಯಾವ ಪ್ರಮಾಣದಲ್ಲಿ ಗ್ರಾಹಕರಿಗೆ ವರ್ಗಾಯಿಸುತ್ತವೆ ಎಂಬುದನ್ನು ಕಾದುನೋಡಬೇಕಷ್ಟೆ ಎಂದು ತಜ್ಞರು ಹೇಳಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು