Sign In

By signing in or creating an account, you agree with Associated Broadcasting Company's Terms & Conditions and Privacy Policy.

Repo Rate Hike; ಆರ್​ಬಿಐ ರೆಪೊ ದರ ಮತ್ತೆ 25 ಮೂಲಾಂಶ ಹೆಚ್ಚಳ; ಹೆಚ್ಚಾಗಲಿದೆ ಇಎಂಐ ಮೊತ್ತ

RBI MPC Meet 2023; ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ರೆಪೊ ದರವನ್ನು ಮತ್ತೆ ಹೆಚ್ಚಿಸಿದೆ. ಹಣಕಾಸು ನೀತಿ ಸಮಿತಿ ಸಭೆಯ ನಿರ್ಣಯಗಳನ್ನು ಗವರ್ನರ್ ಶಕ್ತಿಕಾಂತ ದಾಸ್ ಬುಧವಾರ ಬೆಳಿಗ್ಗೆ ಪ್ರಕಟಿಸಿದರು.

Repo Rate Hike; ಆರ್​ಬಿಐ ರೆಪೊ ದರ ಮತ್ತೆ 25 ಮೂಲಾಂಶ ಹೆಚ್ಚಳ; ಹೆಚ್ಚಾಗಲಿದೆ ಇಎಂಐ ಮೊತ್ತ
RBI repo rate hike Best time to book your fixed deposits FDs know interest rates here
Follow us
Ganapathi Sharma
|

Updated on:Feb 08, 2023 | 12:35 PM

ಮುಂಬೈ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI)  ರೆಪೊ ದರವನ್ನು (Repo Rate) ಮತ್ತೆ 25 ಮೂಲಾಂಶ ಹೆಚ್ಚಿಸಿದೆ. ಪರಿಷ್ಕೃತ ರೆಪೊ ದರವೀಗ ಶೇ 6.50 ಆಗಿದೆ. ಸೋಮವಾರದಿಂದ ಆರಂಭಗೊಂಡಿದ್ದ ಹಣಕಾಸು ನೀತಿ ಸಮಿತಿಯ ಸಭೆ ಬುಧವಾರ ಕೊನೆಗೊಂಡಿದ್ದು, ನಿರ್ಣಯಗಳನ್ನು (MPC) ಗವರ್ನರ್ ಶಕ್ತಿಕಾಂತ ದಾಸ್ (Shaktikanta Das) ಪ್ರಕಟಿಸಿದರು. ಇದರೊಂದಿಗೆ, 2022ರ ಮೇ ತಿಂಗಳ ನಂತರ ಸತತವಾಗಿ ಆರ್​ಬಿಐ ರೆಪೊ ದರ ಹೆಚ್ಚಿಸುತ್ತಾ ಬಂದಂತಾಗಿದ್ದು, ಒಟ್ಟಾರೆಯಾಗಿ 23ನೇ ಹಣಕಾಸು ವರ್ಷದಲ್ಲಿ ಆರ್​ಬಿಐ 250 ಮೂಲಾಂಶದಷ್ಟು ರೆಪೊ ದರ ಹೆಚ್ಚಿಸಿದಂತಾಗಿದೆ. ಕಳೆದ ಕೆಲವು ಹಣಕಾಸು ನೀತಿಗಳಲ್ಲಿ ನಿರಂತರವಾಗಿ ರೆಪೊ ದರ ಹೆಚ್ಚಿಸುತ್ತಾ ಬಂದಿರುವುದು ಪರಿಣಾಮ ಬೀರಿದೆ. ಅದರಿಂದಾಗಿ ಸಗಟು ಮತ್ತು ಚಿಲ್ಲರೆ ಹಣದುಬ್ಬರಗಳು ಸಹನೆಯ ಮಟ್ಟಕ್ಕೆ ಬಂದಿವೆ. ಆದಾಗ್ಯೂ ಜಾಗತಿಕ ಆರ್ಥಿಕ ಪರಿಸ್ಥಿತಿ, ಅಮೆರಿಕದ ಫೆಡರಲ್ ಬ್ಯಾಂಕ್ ಮತ್ತು ಇತರ ದೇಶಗಳ ಕೇಂದ್ರೀಯ ಬ್ಯಾಂಕ್​​ಗಳ ನಿರ್ಣಯಗಳನ್ನು ನಾವು ಗಮನಿಸಿದ್ದೇವೆ. ದೇಶದ ಆರ್ಥಿಕ ಪರಿಸ್ಥಿತಿ ಚೆನ್ನಾಗಿದೆ. ಹಣದುಬ್ಬರದ ವಿಚಾರದಲ್ಲಿ ನಮ್ಮ ಗುರಿಯನ್ನು ತಲುಪುವುದಕ್ಕಾಗಿ ದರ ಹೆಚ್ಚಿಸುವುದು ಸದ್ಯದ ಮಟ್ಟಿಗೆ ಅನಿವಾರ್ಯವಾಗಿದೆ. ಹೀಗಾಗಿ ರೆಪೊ ದರ ಹೆಚ್ಚಿಸುತ್ತಿದ್ದೇವೆ ಎಂದು ಶಕ್ತಿಕಾಂತ ದಾಸ್ ಹೇಳಿದರು.

ದೇಶದ ಆರ್ಥಿಕ ಪರಿಸ್ಥಿತಿ ಮೇಲೆ ಸೂಕ್ಷ್ಮವಾಗಿ ನಿಗಾ ಇರಿಸುವುದನ್ನು ಆರ್​ಬಿಐ ಮುಂದುವರಿಸಿದೆ. ನಾಲ್ಕನೇ ತ್ರೈಮಾಸಿಕದಲ್ಲಿ ಒಟ್ಟಾರೆ ಚಿಲ್ಲರೆ ಹಣದುಬ್ಬರ ಶೇ 5.6ರಷ್ಟು ಇರುವ ನಿರೀಕ್ಷೆ ಇದೆ ಎಂದು ಶಕ್ತಿಕಾಂತ ದಾಸ್ ತಿಳಿಸಿದರು. ಪ್ರಸಕ್ತ ಹಣಕಾಸು ವರ್ಷದಲ್ಲಿ ಹಣದುಬ್ಬರ ಪ್ರಮಾಣ ಶೇ 6.5ರಷ್ಟು ಇರಲಿದೆ. ಸಾಮಾನ್ಯ ಮುಂಗಾರಿನ ನಿರೀಕ್ಷೆಯೊಂದಿಗೆ 2023-24ನೇ ಸಾಲಿನ ಗ್ರಾಹಕ ದರ ಸೂಚ್ಯಂಕ ಆಧಾರಿತ ಹಣದುಬ್ಬರ (CPI inflation) ಶೇ 5.3 ಇರಲಿದೆ ಎಂದು ಅಂದಾಜಿಸಲಾಗಿದೆ. ಹಣದುಬ್ಬರ ಪ್ರಮಾಣವನ್ನು ಶೇ 4ರ ಕೆಳಗೆ ತರಬೇಕೆಂದು ಗುರಿ ಹಾಕಿಕೊಳ್ಳಲಾಗಿದ್ದು, ಅದಕ್ಕೆ ಆರ್​ಬಿಐ ಬದ್ಧವಾಗಿದೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: Coin Vending Machine: ಬರಲಿದೆ ಕ್ಯುಆರ್ ಕೋಡ್ ಆಧಾರಿತ ಕಾಯಿನ್ ವೆಂಡಿಗ್ ಮಷಿನ್; ಏನಿದು ಆರ್​​ಬಿಐ ಹೊಸ ಯೋಜನೆ?

ಕಳೆದ ಮೂರು ವರ್ಷಗಳಲ್ಲಿ ಹಿಂದೆಂದೂ ನಡೆಯದಂಥ ಘಟನಾವಳಿಗಳು ವಿಶ್ವದಾದ್ಯಂತ ಕೇಂದ್ರೀಯ ಬ್ಯಾಂಕ್​​ಗಳ ಹಣಕಾಸು ನೀತಿಗಳನ್ನು ಪರೀಕ್ಷೆಗೆ ಒಳಪಡಿಸಿವೆ. ಬೆಳವಣಿಗೆ ಹೊಂದುತ್ತಿರುವ ಆರ್ಥಿಕತೆಗಳು ಕಠಿಣ ಸವಾಲುಗಳನ್ನು ಎದುರಿಸುತ್ತಿವೆ. ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುವುದರ ಜತೆ ಹಣದುಬ್ಬರ ಏರಿಕೆ ತಡೆಯುವುದು ಕೇಂದ್ರೀಯ ಬ್ಯಾಂಕ್​​ಗಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು ಅವರು ಹೇಳಿದರು.

ಗೃಹ, ವಾಹನ ಸಾಲಗಳ ಇಎಂಐ ಮೊತ್ತ ಇನ್ನಷ್ಟು ದುಬಾರಿ

ಕಳೆದ ಬಾರಿಯ, ಅಂದರೆ 2022ರ ಡಿಸೆಂಬರ್​​ನಲ್ಲಿ ಪ್ರಕಟಿಸಿದ ಹಣಕಾಸು ನೀತಿಯಲ್ಲಿ ಆರ್​ಬಿಐ ರೆಪೊ ದರವನ್ನು 35 ಮೂಲಾಂಶ ಹೆಚ್ಚಿಸಿ ಶೇಕಡಾ 6.25ಕ್ಕೆ ನಿಗದಿಪಡಿಸಿತ್ತು. ಪರಿಣಾಮವಾಗಿ ಸಾಲಗಳ ಮೇಲಿನ ಬಡ್ಡಿ ದರ, ಎಫ್​ಡಿ ಸೇರಿದಂತೆ ಉಳಿತಾಯ ಖಾತೆಗಳ ಮೇಲಿನ ಬಡ್ಡಿ ದರಗಳನ್ನೂ ಬ್ಯಾಂಕ್​ಗಳು ಹೆಚ್ಚಿಸಿದ್ದವು. ಇದೀಗ ಮತ್ತೆ ರೆಪೊ ದರ ಹೆಚ್ಚಿಸಿರುವುದರಿಂದ ಗೃಹ, ವಾಹನ ಸಾಲ ಸೇರಿದಂತೆ ವಿವಿಧ ಸಾಲಗಳ ಬಡ್ಡಿ ದರ, ಇಎಂಐ ಮೊತ್ತ ಇನ್ನಷ್ಟು ದುಬಾರಿಯಾಗುವ ಸಾಧ್ಯತೆ ಇದೆ. ಆದರೆ, ಈ ಬಾರಿ ಬ್ಯಾಂಕ್​​ಗಳು ಠೇವಣಿಗಳ ಮೇಲಿನ ಬಡ್ಡಿ ದರ ಹೆಚ್ಚಿಸುವ ಸಾಧ್ಯತೆ ಕಡಿಮೆ ಎಂದು ಕೆಲವು ಮಂದಿ ಹಣಕಾಸು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನೂ ಓದಿ: Repo Rate: ಆರ್​ಬಿಐ ಹಣಕಾಸು ನೀತಿ, ರೆಪೊ ದರ, ರಿವರ್ಸ್ ರೆಪೊ ದರ ಎಂದರೇನು? ಇಲ್ಲಿದೆ ಪೂರ್ತಿ ವಿವರ

ಎಷ್ಟಿರಲಿದೆ ಜಿಡಿಪಿ ಬೆಳವಣಿಗೆ ದರ?

2023-24ನೇ ಸಾಲಿನ ಮೊದಲ ತ್ರೈಮಾಸಿಕ ಅವಧಿಯಲ್ಲಿ ರಿಯಲ್ ಜಿಡಿಪಿ ಬೆಳವಣಿಗೆ ದರ ಶೇ 6.4ರಷ್ಟು ಇರಬಹುದು ಎಂದು ಹಣಕಾಸು ನೀತಿ ಸಮಿತಿ ಸಭೆ ಅಂದಾಜಿಸಿದೆ. ಎರಡನೇ ತ್ರೈಮಾಸಿಕ ಅವಧಿಯಲ್ಲಿ ಶೇ 6.2, ಮೂರನೇ ತ್ರೈಮಾಸಿಕ ಅವಧಿಯಲ್ಲಿ ಶೇ 6 ಹಾಗೂ ನಾಲ್ಕನೇ ತ್ರೈಮಾಸಿಕ ಅವಧಿಯಲ್ಲಿ ಶೇ 5.8 ಇರಲಿದೆ ಎಂದು ಅಂದಾಜಿಸಲಾಗಿದೆ ಎಂದು ಶಕ್ತಿಕಾಂತ ದಾಸ್ ತಿಳಿಸಿದರು. ಭಾರತದ ರೂಪಾಯಿ ಏಷ್ಯಾದಲ್ಲೇ ಅತ್ಯಂತ ಹೆಚ್ಚಿನ ಏರಿಳಿತ ಕಂಡ ಕರೆನ್ಸಿಯಾಗಿ 2022ರಲ್ಲಿ ಗುರುತಿಸಿಕೊಂಡಿತ್ತು. ರೂಪಾಯಿ ಮೌಲ್ಯ ಸ್ಥಿರವಾಗಿಸಲು ಮತ್ತು ವೃದ್ಧಿಗೆ ಕೂಡ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:12 am, Wed, 8 February 23

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್