Rs. 2,000 ನೋಟು ಹಿಂಪಡೆದ ಆರ್​ಬಿಐ; ನಿಮ್ಮಲ್ಲಿ ಆ ನೋಟಿದ್ದರೆ ಏನು ಕಥೆ? ಇಲ್ಲಿದೆ ಡೀಟೇಲ್ಸ್

RBI Withdraws Rs 2,000 Notes From Circulation: ಎರಡು ಸಾವಿರ ರೂ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧರಿಸಿದೆ. ಆದರೆ, ಈ ಕರೆನ್ಸಿ ನೋಟುಗಳು ಲೀಗಲ್ ಅಗಿ ಮುಂದುವರಿಯಲಿವೆ.

Rs. 2,000 ನೋಟು ಹಿಂಪಡೆದ ಆರ್​ಬಿಐ; ನಿಮ್ಮಲ್ಲಿ ಆ ನೋಟಿದ್ದರೆ ಏನು ಕಥೆ? ಇಲ್ಲಿದೆ ಡೀಟೇಲ್ಸ್
2000 ರೂ ನೋಟು
Follow us
ಸುಗ್ಗನಹಳ್ಳಿ ವಿಜಯಸಾರಥಿ
| Updated By: ಆಯೇಷಾ ಬಾನು

Updated on:May 20, 2023 | 7:18 AM

ನವದೆಹಲಿ: ಎರಡು ಸಾವಿರ ರೂ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧರಿಸಿದೆ. ಆದರೆ, ಈ ಕರೆನ್ಸಿ ನೋಟುಗಳು ಕಾನೂನಾತ್ಮಕವಾಗಿ ಸಿಂಧುವಾಗಿ ಮುಂದುವರಿಯಲಿವೆ. ಆರ್​ಬಿಐ ಶುಕ್ರವಾರ ಈ ಹೇಳಿಕೆ ನೀಡಿದೆ. 2,000 ರೂ ನೋಟು ಹೊಂದಿರುವವರು ಅದನ್ನು ಮರಳಿಸಲು ಸಮಯಾವಕಾಶ ಕೊಡಲಾಗುತ್ತದೆ. ಆರ್​ಬಿಐ ನೀಡಿರುವ ಮಾಹಿತಿ ಪ್ರಕಾರ 2023 ಸೆಪ್ಟಂಬರ್ 30ರೊಳಗೆ 2,000 ಮುಖಬೆಲೆಯ ನೋಟುಗಳನ್ನು ವಾಪಸ್ ಕೊಟ್ಟು ವಿನಿಮಯ ಮಾಡಿಕೊಳ್ಳಬಹುದು. ಮೇ 23ರಿಂದ ನೋಟು ವಿನಿಮಯಕ್ಕೆ ಅವಕಾಶ ಕೊಡಲಾಗುತ್ತದೆ.

2,000 ರೂ ಮುಖಬೆಲೆಯ ನೋಟು ಹಿಂಪಡೆಯಲು ಏನು ಕಾರಣ?

  • ಈಗ ಚಲಾವಣೆಯಲ್ಲಿರುವ 2,000ರೂ ಮುಖಬೆಲೆಯ ನೋಟುಗಳಲ್ಲಿ ಶೇ. 89ರಷ್ಟು ನೋಟುಗಳನ್ನು 2017ರ ಮಾರ್ಚ್​ಗೆ ಮುಂಚೆ ಮುದ್ರಿಸಿ ಬಿಡುಗಡೆ ಮಾಡಿದಂಥವು. ಇವುಗಳ ಕಾಲಾವಧಿ 4-5 ವರ್ಷ ಮಾತ್ರ. ಹೀಗಾಗಿ, ಈ ನೋಟುಗಳನ್ನು ಹಿಂಪಡೆಯಲಾಗುತ್ತಿದೆ.
  • 2,000 ರೂ ಮುಖಬೆಲೆಯ ನೋಟುಗಳು ಹೆಚ್ಚು ಚಲಾವಣೆಯಲ್ಲಿ ಇಲ್ಲದಿರುವುದು
  • ಜನರ ಹಣ ವಹಿವಾಟಿನ ಅಗತ್ಯಕ್ಕೆ ಬೇರೆ ಕರೆನ್ಸಿಗಳು ಸಾಕಷ್ಟು ಇರುವುದು

ಇದನ್ನೂ ಓದಿ: RBI: ಆರ್​ಬಿಐನಿಂದ ಕೇಂದ್ರಕ್ಕೆ 87,416 ಕೋಟಿ ಡಿವಿಡೆಂಡ್; ರಿಸರ್ವ್ ಬ್ಯಾಂಕ್​ಗೆ ಆದಾಯ ಎಲ್ಲಿಂದ? ಇಲ್ಲಿದೆ ಡೀಟೇಲ್ಸ್

2018ರ ಮಾರ್ಚ್ 31ರಲ್ಲಿ 2,000 ರೂ ಮುಖಬೆಲೆಯ ನೋಟುಗಳ ಒಟ್ಟು ಮೌಲ್ಯ 6.73 ಲಕ್ಷ ಕೋಟಿ ರೂ ಇತ್ತು. ಎಲ್ಲಾ ಕರೆನ್ಸಿ ನೋಟುಗಳ ಒಟ್ಟು ಮೊತ್ತದ ಶೇ. 37.3 ರಷ್ಟು ನೋಟುಗಳು 2,000 ರೂ ಮುಖಬೆಲೆಯದ್ದಾಗಿದ್ದವು. ಈ ಸಂಖ್ಯೆಯು 2023 ಮಾರ್ಚ್ 31ಕ್ಕೆ ಶೇ. 10.8ಕ್ಕೆ ಬಂದಿಳಿದಿದೆ.

ಅಲ್ಲದೇ ಜನರೂ ಕೂಡ 2,000 ರೂ ನೋಟಿನ ಚಲಾವಣೆಯನ್ನೂ ತೀರಾ ಕಡಿಮೆ ಮಾಡಿದ್ದಾರೆ. 500 ರೂ ಮುಖಬೆಲೆಯ ನೋಟುಗಳಿಗೆ ಹೆಚ್ಚು ಬೇಡಿಕೆ ಇದೆ.

ಇದನ್ನೂ ಓದಿ: Flying Taxis: ಹಾರುವ ಕಾರು, ಡ್ರೋನ್​ಗಳ ನಿರ್ಮಾಣಕ್ಕೆ ಮೈಸೂರು, ಬೆಂಗಳೂರಿನ ಟೆಕ್ ಕಂಪನಿಗಳ ಒಪ್ಪಂದ

ಸಾರ್ವಜನಿಕರು ತಮ್ಮ ಬಳಿ 2,000 ರೂ ಮುಖಬೆಲೆಯ ನೋಟುಗಳಿದ್ದರೆ ಅದನ್ನು ತಮ್ಮ ಬ್ಯಾಂಕ್ ಖಾತೆಗೆ ಜಮೆ ಮಾಡಬಹುದು. ಯಾವುದೇ ಬ್ಯಾಂಕ್ ಬ್ರ್ಯಾಂಚ್​ಗೆ ಹೋಗಿ ಹಣ ಡೆಪಾಸಿಟ್ ಮಾಡಲು ಅವಕಾಶ ಇರುತ್ತದೆ. 2016ರ ನೋಟ್ ಬ್ಯಾನ್ ಸಂದರ್ಭದಲ್ಲಿ ಇದ್ದ ನಿಯಮಗಳನ್ನು ಈಗ ಮಾಡಲಾಗುತ್ತಿಲ್ಲ. 2,000 ರೂ ನೋಟುಗಳನ್ನು ಡೆಪಾಸಿಟ್ ಮಾಡಲು ಯಾವುದೇ ದಾಖಲೆ ಕೊಡಬೇಕಿಲ್ಲ. ಈ ನೋಟನ್ನು ಅಮಾನ್ಯ ಮಾಡಲಾಗಿಲ್ಲ. ಚಲಾವಣೆಯಿಂದ ಹಿಂಪಡೆಯಲಾಗಿದೆ ಅಷ್ಟೇ. ಈ ನೋಟುಗಳ ವಿನಿಮಯಕ್ಕೆ ಸರ್ಕಾರ ಕೊಟ್ಟಿರುವ ಕಾಲಾವಕಾಶ ಮುಗಿದ ಬಳಿಕ ಈ ನೋಟು ಅಸಿಂಧುಗೊಳ್ಳಬಹುದಾ ಎಂಬ ಮಾಹಿತಿ ತಿಳಿದಿಲ್ಲ.

2,000 ರೂ ನೋಟು ವಿನಿಮಯಕ್ಕೆ ಏನಿವೆ ನಿಯಮಗಳು?

  • ಸಾರ್ವಜನಿಕರು ಒಮ್ಮೆಗೆ 20,000 ರೂ ಮೊತ್ತದ ನೋಟುಗಳನ್ನು ವಿನಿಯಮ ಮಾಡಿಕೊಳ್ಳಲು ಅವಕಾಶ ಇದೆ. ಅಂದರೆ 2,000 ರೂ ಮುಖಬೆಲೆಯ 10 ನೋಟುಗಳನ್ನು ಮಾತ್ರ ಎಕ್ಸ್​ಚೇಂಜ್ ಮಾಡಬಹುದು.
  • ಬ್ಯಾಂಕ್ ಖಾತೆ ಹೊಂದಿಲ್ಲದಿದ್ದವರೂ ಕೂಡ ಯಾವುದೇ ಬ್ಯಾಂಕ್ ಕಚೇರಿಗೆ ಹೋಗಿ ಏಕಕಾಲದಲ್ಲಿ 2,000 ರೂ ಮುಖಬೆಲೆಯ 10 ನೋಟುಗಳನ್ನು ವಿನಿಯಮ ಮಾಡಿಕೊಳ್ಳಬಹುದು.
  • ಬ್ಯಾಂಕ್ ಖಾತೆಗೆ ಹಣ ಜಮೆ ಮಾಡಲು ಯಾವುದೇ ಮಿತಿ ಇಲ್ಲ. 2,000 ರೂ ಮುಖಬೆಲೆಯ ಎಷ್ಟು ಬೇಕಾದರೂ ನೋಟುಗಳನ್ನು ಅಕೌಂಟ್​ಗೆ ಡೆಪಾಸಿಟ್ ಮಾಡಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 7:10 pm, Fri, 19 May 23

ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ