Retail Inflation: ಒಂದು ವರ್ಷದ ಕನಿಷ್ಠ ಮಟ್ಟಕ್ಕೆ ಇಳಿಕೆಯಾದ ಚಿಲ್ಲರೆ ಹಣದುಬ್ಬರ

ಗ್ರಾಹಕ ದರ ಸೂಚ್ಯಂಕ ಆಧಾರಿತ ಚಿಲ್ಲರೆ ಹಣದುಬ್ಬರ ಪ್ರಮಾಣ ಒಂದು ವರ್ಷದ ಕನಿಷ್ಠ ಮಟ್ಟಕ್ಕೆ, ಅಂದರೆ ಶೇಕಡಾ 5.72ಕ್ಕೆ ಇಳಿಕೆಯಾಗಿದೆ. ನವೆಂಬರ್​ನಲ್ಲಿ ಶೇಕಡಾ 5.88ಕ್ಕೆ ಇಳಿಕೆಯಾಗಿದ್ದ ಚಿಲ್ಲರೆ ಹಣದುಬ್ಬರ ಡಿಸೆಂಬರ್​​ನಲ್ಲಿ ಶೇಕಡಾ 5.72ಕ್ಕೆ ಇಳಿಕೆಯಾಗಿದೆ

Retail Inflation: ಒಂದು ವರ್ಷದ ಕನಿಷ್ಠ ಮಟ್ಟಕ್ಕೆ ಇಳಿಕೆಯಾದ ಚಿಲ್ಲರೆ ಹಣದುಬ್ಬರ
ಹಣದುಬ್ಬರ (ಸಾಂದರ್ಭಿಕ ಚಿತ್ರ)Image Credit source: PTI
Follow us
TV9 Web
| Updated By: Ganapathi Sharma

Updated on:Jan 12, 2023 | 7:03 PM

ಮುಂಬೈ: ಗ್ರಾಹಕ ದರ ಸೂಚ್ಯಂಕ ಆಧಾರಿತ (CPI) ಚಿಲ್ಲರೆ ಹಣದುಬ್ಬರ (Retail Inflation) ಪ್ರಮಾಣ ಒಂದು ವರ್ಷದ ಕನಿಷ್ಠ ಮಟ್ಟಕ್ಕೆ, ಅಂದರೆ ಶೇಕಡಾ 5.72ಕ್ಕೆ ಇಳಿಕೆಯಾಗಿದೆ. ನವೆಂಬರ್​ನಲ್ಲಿ ಶೇಕಡಾ 5.88ಕ್ಕೆ ಇಳಿಕೆಯಾಗಿದ್ದ ಚಿಲ್ಲರೆ ಹಣದುಬ್ಬರ ಡಿಸೆಂಬರ್​​ನಲ್ಲಿ ಶೇಕಡಾ 5.72ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಸಾಂಖ್ಯಿಕ, ಯೋಜನಾನುಷ್ಠಾನ ಸಚಿವಾಲಯ ಗುರುವಾರ ತಿಳಿಸಿದೆ. ಕೈಗಾರಿಕಾ ಉತ್ಪಾದನೆ (IIP) ಶೇಕಡಾ 7.1ಕ್ಕೆ ಹೆಚ್ಚಳವಾಗಿದೆ ಎಂದೂ ಸಚಿವಾಲಯ ಹೇಳಿದೆ. ಗಣಿಕಾರಿಗೆ ಉತ್ಪಾದನೆ ಪ್ರಮಾಣ ಶೇಕಡಾ 9.7ಕ್ಕೆ ಹೆಚ್ಚಳಗೊಂಡಿದೆ. ವಿದ್ಯುತ್ ಉತ್ಪಾದನೆ ಶೇಕಡಾ 12.7ಕ್ಕೆ ಹೆಚ್ಚಳವಾಗಿದೆ ಎಂದು ಸಚಿವಾಲಯದ ಅಂಕಿಅಂಶಗಳಿಂದ ತಿಳಿದುಬಂದಿದೆ.

ಸತತ 11 ತಿಂಗಳ ಬಳಿಕ ಚಿಲ್ಲರೆ ಹಣದುಬ್ಬರ ನವೆಂಬರ್​​ನಲ್ಲಿ ಶೇಕಡಾ 6ಕ್ಕಿಂತ ಕೆಳಗಿದು, ಆರ್​​ಬಿಐ ಸಹನೆಯ ಮಟ್ಟಕ್ಕೆ ಇಳಿಕೆಯಾಗಿತ್ತು. ಹಣದುಬ್ಬರ ತಡೆಯುವ ಸಲುವಾಗಿ ಆರ್​ಬಿಐ ಹಣಕಾಸು ನೀತಿ ಸಮಿತಿಯು ಡಿಸೆಂಬರ್ 7ರಂದು ರೆಪೊ ದರವನ್ನು 35 ಮೂಲಾಂಶದಷ್ಟು ಹೆಚ್ಚಿಸಿ ಶೇಕಡಾ 6.25ಕ್ಕೆ ನಿಗದಿ ಮಾಡಿತ್ತು. 20206 ಮಾರ್ಚ್ ಒಳಗಾಗಿ ಚಿಲ್ಲರೆ ಹಣದುಬ್ಬರವನ್ನು ಶೇಕಡಾ 2ರಿಂದ 4ರ ಮಟ್ಟದಲ್ಲಿ ಇರುವಂತೆ ಮಾಡುವುದು ಆರ್​ಬಿಐ ಗುರಿಯಾಗಿದೆ.

ಚಿಲ್ಲರೆ ಹಣದುಬ್ಬರ 2022ರ ಅಕ್ಟೋಬರ್​​ನಲ್ಲಿ ಶೇಕಡಾ 6.77 ಇತ್ತು. ಚಿಲ್ಲರೆ ಹಣದುಬ್ಬರ ಸತತ ಮೂರು ತ್ರೈಮಾಸಿಕಗಳಿಂದಲೂ ಹೆಚ್ಚು ಅವಧಿಗೆ ಶೇಕಡಾ 6ರ ಮೇಲಿದ್ದುದರಿಂದ ಆರ್​ಬಿಐ ಹಣಕಾಸು ನೀತಿ ಸಮಿತಿ 2022ರ ನವೆಂಬರ್​​ನಲ್ಲಿ ವಿಶೇಷ ಸಭೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:01 pm, Thu, 12 January 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ