AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Retail Inflation: ಬೆಲೆ ಏರಿಕೆ ಪರಿಣಾಮ; ಜೂನ್​ನಲ್ಲಿ ಮೂರು ತಿಂಗಳ ಗರಿಷ್ಠ ಮಟ್ಟಕ್ಕೆ ಚಿಲ್ಲರೆ ಹಣದುಬ್ಬರ

ಆದಾಗ್ಯೂ, ಹಣದುಬ್ಬರವು ಆರ್‌ಬಿಐನ ಸಹನೆಯ ಮಿತಿ ಶೇ 6ಕ್ಕಿಂತ ಕಡಿಮೆಯೇ ಇದೆ. ಈ ಹಿಂದೆ ಮಾರ್ಚ್‌ನಲ್ಲಿ ಗ್ರಾಹಕ ದರ ಸೂಚ್ಯಂಕ ಆಧಾರಿತ ಹಣದುಬ್ಬರವು ಶೇ 5.66 ರಷ್ಟಿತ್ತು.

Retail Inflation: ಬೆಲೆ ಏರಿಕೆ ಪರಿಣಾಮ; ಜೂನ್​ನಲ್ಲಿ ಮೂರು ತಿಂಗಳ ಗರಿಷ್ಠ ಮಟ್ಟಕ್ಕೆ ಚಿಲ್ಲರೆ ಹಣದುಬ್ಬರ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Jul 12, 2023 | 7:06 PM

Share

ನವದೆಹಲಿ: ಆಹಾರ ವಸ್ತುಗಳ ಬೆಲೆ ಸತತವಾಗಿ ಏರಿಕೆಯಾಗುತ್ತಿರುವುದರ ಪರಿಣಾಮವಾಗಿ ಚಿಲ್ಲರೆ ಹಣದುಬ್ಬರ (Retail Inflation) ಪ್ರಮಾಣ ಜೂನ್​ ತಿಂಗಳಲ್ಲಿ ಮೂರು ತಿಂಗಳ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. ಜೂನ್​ನಲ್ಲಿ ಚಿಲ್ಲರೆ ಹಣದುಬ್ಬರ ಪ್ರಮಾಣ ಶೇ 4.81ಕ್ಕೆ ಹೆಚ್ಚಳವಾಗಿರುವುದು ಸರ್ಕಾರದ ಅಂಕಿಅಂಶಗಳಿಂದ ತಿಳಿದುಬಂದಿದೆ. ಗ್ರಾಹಕ ದರ ಸೂಚ್ಯಂಕ (CPI) ಆಧಾರಿತ ಹಣದುಬ್ಬರವು ಮೇ ತಿಂಗಳಲ್ಲಿ ಶೇ 4.31 ಇತ್ತು. ಇದು 2022ರ ಜೂನ್​ನಲ್ಲಿ ಶೇ 7 ರಷ್ಟಿತ್ತು.

ಆದಾಗ್ಯೂ, ಹಣದುಬ್ಬರವು ಆರ್‌ಬಿಐನ ಸಹನೆಯ ಮಿತಿ ಶೇ 6ಕ್ಕಿಂತ ಕಡಿಮೆಯೇ ಇದೆ. ಈ ಹಿಂದೆ ಮಾರ್ಚ್‌ನಲ್ಲಿ ಗ್ರಾಹಕ ದರ ಸೂಚ್ಯಂಕ ಆಧಾರಿತ ಹಣದುಬ್ಬರವು ಶೇ 5.66 ರಷ್ಟಿತ್ತು.

ಚಿಲ್ಲರೆ ಹಣದುಬ್ಬರ ಪ್ರಮಾಣವನ್ನು ಶೇ 4 ರ ಒಳಗೆ ಇರುವಂತೆ ನೋಡಿಕೊಳ್ಳಲಿ ಕೇಂದ್ರ ಸರ್ಕಾರವು ಆರ್​ಬಿಐಗೆ ನಿರ್ದೇಶನ ನೀಡಿದೆ. ಆರ್​ಬಿಐನ ಮುಂದಿನ ದ್ವೈಮಾಸಿಕ ನೀತಿ ಮುಂದಿನ ತಿಂಗಳ ಆರಂಭದಲ್ಲಿ ಪ್ರಕಟವಾಗಲಿದೆ.

ಆಹಾರ ದರ ಆಧಾರಿತ ಹಣದುಬ್ಬರವು ಜೂನ್‌ನಲ್ಲಿ ಶೇಕಡಾ 4.49 ತಲುಪಿತ್ತು. ಮೇ ತಿಂಗಳಲ್ಲಿ ಶೇಕಡಾ 2.96 ಇತ್ತು. ಗ್ರಾಹಕ ದರ ಸೂಚ್ಯಂಕ ಆಧಾರಿತ ಹಣದುಬ್ಬರದ ಏರಿಕೆಗೆ ಬಹುಪಾಲು ಆಹಾರ ವಸ್ತುಗಳ ಬೆಲೆ ಏರಿಕೆಯೇ ಕಾರಣವಾಗಿದೆ.

ಇದನ್ನೂ ಓದಿ: Poor and Inflation: ಬಡವರು ಇನ್ನಷ್ಟು ಬಡವರಾಗಲು, ಸಿರಿವಂತರು ಇನ್ನಷ್ಟು ಸಿರಿವಂತರಾಗಲು ಏನು ಕಾರಣ? ವಿಷ ವರ್ತುಲವಾ ಹಣದುಬ್ಬರ? ಕುತೂಹಲದ ಉದಾಹರಣೆ

ಕಳೆದ ತಿಂಗಳು ದ್ವೈಮಾಸಿಕ ಹಣಕಾಸು ನೀತಿ ಪ್ರಕಟಿಸಿದ್ದ ಆರ್​ಬಿಐ, ರೆಪೊ ದರದಲ್ಲಿ ಬದಲಾವಣೆ ಮಾಡದೆ, ಶೇಕಡಾ 6.5 ರ ಯಥಾಸ್ಥಿತಿ ಕಾಯ್ದುಕೊಂಡಿತ್ತು. ಪ್ರಸಕ್ತ ಹಣಕಾಸು ವರ್ಷದಲ್ಲಿ ಚಿಲ್ಲರೆ ಹಣದುಬ್ಬರ ಪ್ರಮಾಣವನ್ನು ಸರಾಸರಿ ಶೇ 5.1 ರಲ್ಲಿ ಇರುವಂತೆ ನೋಡಿಕೊಳ್ಳುವ ಗುರಿ ಹಾಕಿಕೊಂಡಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ