Retail Inflation: 2021ರ ನವೆಂಬರ್ ಚಿಲ್ಲರೆ ಹಣದುಬ್ಬರ ದರ ಶೇ 4.91ಕ್ಕೆ ಏರಿಕೆ

2021ನೇ ಇಸವಿಯ ನವೆಂಬರ್ ತಿಂಗಳಲ್ಲಿ ಗ್ರಾಹಕ ದರ ಸೂಚ್ಯಂಕ ಆಧಾರಿತ ಚಿಲ್ಲರೆ ಹಣದುಬ್ಬರ ದರವು ಶೇ 4.98 ತಲುಪಿದೆ. ಅದಕ್ಕೆ ಕಾರಣ ಏನು ಎಂಬುದರ ವಿವರ ಇಲ್ಲಿದೆ.

Retail Inflation: 2021ರ ನವೆಂಬರ್ ಚಿಲ್ಲರೆ ಹಣದುಬ್ಬರ ದರ ಶೇ 4.91ಕ್ಕೆ ಏರಿಕೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on:Dec 13, 2021 | 8:15 PM

ಸಾಂಖ್ಯಿಕ ಹಾಗೂ ಕಾರ್ಯಕ್ರಮ ಅನುಷ್ಠಾನ ಸಚಿವಾಲಯ (MoSPI) ಡಿಸೆಂಬರ್ 13ರ ಸೋಮವಾರ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ಗ್ರಾಹಕ ಬೆಲೆ ಸೂಚ್ಯಂಕದಿಂದ (CPI) ಅಳೆಯುವ ದೇಶದ ಚಿಲ್ಲರೆ ಹಣದುಬ್ಬರ ದರವು 2021ರ ನವೆಂಬರ್​ನಲ್ಲಿ ಶೇಕಡಾ 4.91ಕ್ಕೆ ಏರಿಕೆ ಆಗಿದೆ. 2021ರ ಅಕ್ಟೋಬರ್‌ನಲ್ಲಿ ಶೇ 4.48ರಷ್ಟು ದಾಖಲಾದ ಹಣದುಬ್ಬರವು ಅನುಕ್ರಮವಾಗಿ ಹೆಚ್ಚಿದೆ. ಆದರೆ ವರ್ಷದಿಂದ ವರ್ಷಕ್ಕೆ, ಅಂದರೆ 2020ರ ನವೆಂಬರ್​ನಲ್ಲಿ ಇದ್ದ ಹಣದುಬ್ಬರದ ದರ ಶೇ 6.93ಕ್ಕೆ ಹೋಲಿಸಿದಲ್ಲಿ ಕುಸಿತವನ್ನು ದಾಖಲಿಸಿದೆ. ಅನುಕ್ರಮದ ಆಧಾರದಲ್ಲಿ ಈ ಏರಿಕೆಗೆ ಆಹಾರದ ಬೆಲೆಗಳಲ್ಲಿ, ಅದರಲ್ಲೂ ವಿಶೇಷವಾಗಿ ತರಕಾರಿಗಳ ಬೆಲೆ ಹೆಚ್ಚಳವು ಇದಕ್ಕೆ ಕಾರಣವಾಯಿತು ಎಂದು ಸರ್ಕಾರದ ಅಂಕಿ-ಅಂಶಗಳು ತೋರಿಸಿವೆ. ಒಟ್ಟಾರೆ ಗ್ರಾಹಕ ಆಹಾರ ಬೆಲೆ ಸೂಚ್ಯಂಕವು (CFPI) ಹಿಂದಿನ ತಿಂಗಳಲ್ಲಿ ಶೇ 0.85ಕ್ಕೆ ಹೋಲಿಸಿದರೆ ಶೇ 1.87ಕ್ಕೆ ಏರಿದೆ.

ನವೆಂಬರ್‌ನಲ್ಲಿ CFPI ಮತ್ತು CPI-ಆಧಾರಿತ ಹಣದುಬ್ಬರ ಎರಡೂ ಗ್ರಾಮೀಣ ಪ್ರದೇಶಕ್ಕೆ ಹೋಲಿಸಿದರೆ ದೇಶದ ನಗರ ಭಾಗಗಳಲ್ಲಿ ಹೆಚ್ಚಾಗಿದೆ. ರೀಟೇಲ್ ಚಿಲ್ಲರೆ ಹಣದುಬ್ಬರವು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕ್ರಮವಾಗಿ ಶೇ 5.54 ಮತ್ತು ಶೇ 4.29ರಷ್ಟು ಏರಿಕೆಯಾಗಿದೆ. ಆದರೆ ಆಹಾರ ಹಣದುಬ್ಬರವು ನಗರ ಪ್ರದೇಶಗಳಲ್ಲಿ ಶೇ 3.33 ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಶೇ 1.09ರಷ್ಟು ಏರಿಕೆಯಾಗಿದೆ. ಸತತ ಐದನೇ ತಿಂಗಳು ಚಿಲ್ಲರೆ ಹಣದುಬ್ಬರವು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI) ಗುರಿಯಾದ ಶೇ 6ಕ್ಕಿಂತ ಕೆಳಗಿದೆ. 2026ರ ಮಾರ್ಚ್​ವರೆಗೆ ಚಿಲ್ಲರೆ ಹಣದುಬ್ಬರ ದರವು ಶೇ 4ರ ಮೇಲಿನ ಹಾಗೂ ಕೆಳಗಿನ ಸ್ತರದಲ್ಲಿ ಶೇ 2 (+ ಅಥವಾ -)ರಲ್ಲೇ ನಿರ್ವಹಣೆ ಮಾಡುವಂತೆ ಕೇಂದ್ರದಿಂದ ನಿರ್ದೇಶಿಸಲಾಗಿದೆ.

ಆರ್​ಬಿಐ ದ್ವೈಮಾಸಿಕ ಹಣಕಾಸು ನೀತಿಯನ್ನು ಸಿದ್ಧಪಡಿಸುವಾಗ ಡಿಸೆಂಬರ್ 8ರಂದು ಕೇಂದ್ರ ಬ್ಯಾಂಕ್‌ನ ಹಣಕಾಸು ನೀತಿ ಸಮಿತಿಯು (MPC) ಸತತ ಒಂಬತ್ತನೇ ಬಾರಿಗೆ ರೆಪೊ ದರವನ್ನು ಶೇಕಡಾ 4ರಲ್ಲಿ ಯಥಾಸ್ಥಿತಿಯಲ್ಲಿ ಇಡಲು ನಿರ್ಧರಿಸಿತು. ಗಮನಿಸಬೇಕಾದ ಅಂಶವೇನೆಂದರೆ, ಆರ್‌ಬಿಐ 2021-22ರ ಹಣಕಾಸು ವರ್ಷದಲ್ಲಿ ಸಿಪಿಐ ಹಣದುಬ್ಬರವನ್ನು ಶೇಕಡಾ 5.3 ಎಂದು ಅಂದಾಜು ಮಾಡಿದೆ. ಇದು ಎರಡನೇ ತ್ರೈಮಾಸಿಕದಲ್ಲಿ ಶೇ 5.1, ಮೂರನೆಯದರಲ್ಲಿ ಶೇ 4.5, ಆರ್ಥಿಕ ವರ್ಷದ ಕೊನೆಯ ತ್ರೈಮಾಸಿಕದಲ್ಲಿ ಶೇ 5.8 ಎಂದು ಅಂದಾಜು ಮಾಡಿದೆ. 2022-23ರ ಏಪ್ರಿಲ್-ಜೂನ್ ಅವಧಿಯಲ್ಲಿ ಚಿಲ್ಲರೆ ಹಣದುಬ್ಬರವು ಶೇ 5.2 ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: Retail Inflation: ಅಕ್ಟೋಬರ್ ಚಿಲ್ಲರೆ ಹಣದುಬ್ಬರ ದರ ಶೇ 4.48ಕ್ಕೆ ಏರಿಕೆ

Published On - 8:13 pm, Mon, 13 December 21

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ