Revenue Deficit Grant: ಕರ್ನಾಟಕ ಸೇರಿ 17 ರಾಜ್ಯಗಳ ಆದಾಯ ಕೊರತೆಯ 9871 ಕೋಟಿ ರೂ. ಅನುದಾನ ಬಿಡುಗಡೆ

ಕರ್ನಾಟಕ ಸೇರಿದಂತೆ 17 ರಾಜ್ಯಗಳಿಗೆ ಆದಾಯ ಕೊರತೆ ಅನುದಾನ 9871 ಕೋಟಿ ರೂಪಾಯಿಯನ್ನು ಕೇಂದ್ರದಿಂದ ಬಿಡುಗಡೆ ಮಾಡಲಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

Revenue Deficit Grant: ಕರ್ನಾಟಕ ಸೇರಿ 17 ರಾಜ್ಯಗಳ ಆದಾಯ ಕೊರತೆಯ 9871 ಕೋಟಿ ರೂ. ಅನುದಾನ ಬಿಡುಗಡೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Srinivas Mata

Updated on: Sep 09, 2021 | 7:22 PM

17 ರಾಜ್ಯಗಳಿಗೆ 9,871 ಕೋಟಿ ರೂಪಾಯಿಗಳ ಆದಾಯ ಕೊರತೆಯ ಅನುದಾನದ ಆರನೇ ಮಾಸಿಕ ಕಂತನ್ನು ಬಿಡುಗಡೆ ಮಾಡಿರುವುದಾಗಿ ಕೇಂದ್ರ ಹಣಕಾಸು ಸಚಿವಾಲಯ ಗುರುವಾರ ಹೇಳಿದೆ. ಸಂವಿಧಾನದ ಪರಿಚ್ಛೇದ 275ರ ಅಡಿಯಲ್ಲಿ ರಾಜ್ಯಗಳಿಗೆ ವಿತರಣೆಯ ನಂತರದ ಆದಾಯ ಕೊರತೆಯ ಅನುದಾನವನ್ನು ಒದಗಿಸಲಾಗುವುದು. 15ನೇ ಹಣಕಾಸು ಆಯೋಗದ ಶಿಫಾರಸಿನಂತೆ ಮಾಸಿಕ ಕಂತುಗಳಲ್ಲಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. 2021-22ರ ಅವಧಿಯಲ್ಲಿ 17 ರಾಜ್ಯಗಳಿಗೆ ಈ ಅನುದಾನವನ್ನು ಆಯೋಗ ಶಿಫಾರಸು ಮಾಡಿದೆ.

ವೆಚ್ಚ ಇಲಾಖೆಯು ಆರನೇ ಮಾಸಿಕ ಕಂತಿನ ನಂತರದ ವಿತರಣೆ ಕಂದಾಯ ಕೊರತೆಯ (ಪಿಡಿಆರ್‌ಡಿ) ಅನುದಾನ 9,871 ಕೋಟಿ ರೂಪಾಯಿಗಳನ್ನು ಗುರುವಾರ ರಾಜ್ಯಗಳಿಗೆ ಬಿಡುಗಡೆ ಮಾಡಿದೆ ಎಂದು ಹಣಕಾಸು ಸಚಿವಾಲಯವು ಹೇಳಿಕೆಯಲ್ಲಿ ತಿಳಿಸಿದೆ. ಈ ಕಂತಿನೊಂದಿಗೆ ಪ್ರಸ್ತುತ ಹಣಕಾಸು ವರ್ಷದಲ್ಲಿ ಅರ್ಹ ರಾಜ್ಯಗಳಿಗೆ ಒಟ್ಟು 59,226 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದೆ. ರಾಜ್ಯದ ಆದಾಯ ಮತ್ತು ವೆಚ್ಚದ ಮೌಲ್ಯಮಾಪನದ ಮಧ್ಯೆ ಅಂತರವನ್ನು ಆಧರಿಸಿದ 2021-22ರ ಆರ್ಥಿಕ ವರ್ಷದ ಮೌಲ್ಯಮಾಪನವನ್ನು ಪರಿಗಣಿಸಿದ ನಂತರ ಈ ಅನುದಾನವನ್ನು ಸ್ವೀಕರಿಸಲು ರಾಜ್ಯಗಳ ಅರ್ಹತೆ ಮತ್ತು ಅನುದಾನದ ಪ್ರಮಾಣವನ್ನು ಆಯೋಗವು ನಿರ್ಧರಿಸುತ್ತದೆ.

ಹದಿನೈದನೆಯ ಹಣಕಾಸು ಆಯೋಗವು ಪಿಡಿಆರ್‌ಡಿ ಅನುದಾನಕ್ಕೆ ಶಿಫಾರಸು ಮಾಡಿದ ರಾಜ್ಯಗಳು ಇಂತಿವೆ: ಆಂಧ್ರಪ್ರದೇಶ, ಅಸ್ಸಾಂ, ಹರಿಯಾಣ, ಹಿಮಾಚಲ ಪ್ರದೇಶ, ಕರ್ನಾಟಕ, ಕೇರಳ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಪಂಜಾಬ್, ರಾಜಸ್ಥಾನ, ಸಿಕ್ಕಿಂ, ತಮಿಳುನಾಡು, ತ್ರಿಪುರಾ, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳ. ಹದಿನೈದನೆಯ ಹಣಕಾಸು ಆಯೋಗವು 2021-22ರಲ್ಲಿ 17 ರಾಜ್ಯಗಳಿಗೆ ಒಟ್ಟು 1,18,452 ಕೋಟಿ ರೂಪಾಯಿ PDRD ಅನುದಾನವನ್ನು ಶಿಫಾರಸು ಮಾಡಿದೆ. ಈ ಪೈಕಿ 59,226 ಕೋಟಿ ರೂಪಾಯಿಗಳನ್ನು (ಶೇ 50) ಇದುವರೆಗೆ ಬಿಡುಗಡೆ ಮಾಡಲಾಗಿದೆ.

ಇದನ್ನೂ ಓದಿ: ಬಂಡವಾಳ ಯೋಜನೆಗಳ ವೆಚ್ಚಕ್ಕಾಗಿ ಕೇಂದ್ರದಿಂದ ಹೆಚ್ಚುವರಿಯಾಗಿ 15,000 ಕೋಟಿ ರೂ. ಬಿಡುಗಡೆ

(Revenue Deficit Grant Of Rs 9871 Crore Released To 17 States Including Karnataka Said By Finance Ministry)

ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ