AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಬರ್ ವಂಚನೆ ಪ್ರಕರಣಗಳ ಬಗ್ಗೆ ಚರ್ಚಿಸಲು ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳ ಸಭೆ ಕರೆದ ಸರ್ಕಾರ

Government Calls Meeting of Banks: ದೇಶಾದ್ಯಂತ ಡಿಜಿಟಲ್ ಪೇಮೆಂಟ್ ವಿಚಾರದಲ್ಲಿ ಸಾಕಷ್ಟು ವಂಚನೆ ಪ್ರಕರಣಗಳು ಬೆಳಕಿಗೆ ಬರುವುದು ಹೆಚ್ಚುತ್ತಿದೆ. ಈ ಬಗ್ಗೆ ಸರ್ಕಾರ ಗಂಭೀರವಾಗಿದೆ. ಸೈಬರ್ ವಂಚನೆಗಳನ್ನು ನಿಗ್ರಹಿಸಲು ಏನೇನು ಕ್ರಮ ಕೈಗೊಳ್ಳಬಹುದು ಎಂದು ಅವಲೋಕಿಸಲು ಹಣಕಾಸು ಸಂಸ್ಥೆಗಳ ಸಭೆ ಕರೆಯಲಾಗಿದೆ. ಸರ್ಕಾರದ ವಿವಿಧ ಇಲಾಖೆ, ಸಂಸ್ಥೆ, ಬ್ಯಾಂಕ್ ಹಾಗೂ ಹಣಕಾಸು ಸಂಸ್ಥೆಗಳು ಈ ಸಭೆಯಲ್ಲಿ ಪಾಲ್ಗೊಳ್ಳುತ್ತಿವೆ.

ಸೈಬರ್ ವಂಚನೆ ಪ್ರಕರಣಗಳ ಬಗ್ಗೆ ಚರ್ಚಿಸಲು ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳ ಸಭೆ ಕರೆದ ಸರ್ಕಾರ
ಸೈಬರ್ ವಂಚನೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Nov 28, 2023 | 1:45 PM

Share

ನವದೆಹಲಿ, ನವೆಂಬರ್ 28: ದೇಶಾದ್ಯಂತ ಸೈಬರ್ ವಂಚನೆ ಮತ್ತು ದತ್ತಾಂಶ ಕಳುವು (data breach) ಪ್ರಕರಣಗಳ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಅದನ್ನು ನಿಯಂತ್ರಿಸುವ ಪ್ರಯತ್ನವಾಗಿ ಸರ್ಕಾರ ಹಣಕಾಸು ಸಂಸ್ಥೆಗಳ (fintech companies) ಸಭೆ ಕರೆದಿದೆ. ಸಿಎನ್​ಬಿಸಿ ವರದಿ ಪ್ರಕಾರ ಹಣಕಾಸು ಸಚಿವಾಲಯ ಹಾಗೂ ಆರ್​ಬಿಐ ಈ ಸಭೆ ಕರೆದಿರುವ ಈ ಸಭೆ ಇಂದು ನಡೆಯಲಿದೆ. ದೇಶದ ವಿವಿಧ ಬ್ಯಾಂಕುಗಳು ಹಾಗೂ ಹಣಕಾಸು ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸೈಬರ್ ವಂಚನೆ ಇತ್ಯಾದಿ ಘಟನೆಗಳನ್ನು ತಪ್ಪಿಸುವುದು ಹೇಗೆ, ಯಾವೆಲ್ಲಾ ಕ್ರಮಗಳನ್ನು ಕೈಗೊಳ್ಳಬಹುದು ಇವೇ ಮುಂತಾದ ಸಂಗತಿಗಳನ್ನು ಈ ಸಭೆಯಲ್ಲಿ ಚರ್ಚಿಸುವ ಸಾಧ್ಯತೆ ಇದೆ.

ಹಣಕಾಸು ಸೇವೆ ಇಲಾಖೆಯ ಕಾರ್ಯದರ್ಶಿ ಅವರು ಈ ಸಭೆಯ ನೇತೃತ್ವ ವಹಿಸುತ್ತಿದ್ದಾರೆ. ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಶನ್ (ಎನ್​ಪಿಸಿಐ), ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯ, ಗೃಹ ವ್ಯವಹಾರಗಳ ಸಚಿವಾಲಯ, ಟೆಲಿಕಾಂ ಇಲಾಖೆ, ದೂರವಾಣಿ ನಿಯಂತ್ರಕ ಪ್ರಾಧಿಕಾರ (TRAI), ಆಧಾರ್​ನ ಯುಐಡಿಎಐ ಮತ್ತು ಎಫ್​ಐಯು ಅಧಿಕಾರಿಗಳೂ ಕೂಡ ಈ ಸಭೆಯಲ್ಲಿ ಉಪಸ್ಥಿತರಿರಲಿದ್ದಾರೆ.

ಇದನ್ನೂ ಓದಿ: ಜೀವ ಪ್ರಮಾಣಪತ್ರ ಸಲ್ಲಿಸಲು ಎರಡೇ ದಿನ ಬಾಕಿ; ನ. 30ಕ್ಕೆ ಕೊಡದಿದ್ದರೆ ಪಿಂಚಣಿ ಸಿಗೋದಿಲ್ವಾ?

ಡಿಜಿಟಲ್ ಪೇಮೆಂಟ್ ವಿಚಾರದಲ್ಲಿ ದೇಶಾದ್ಯಂತ ಸಾಕಷ್ಟು ವಂಚನೆ ಪ್ರಕರಣಗಳು ಬೆಳಕಿಗೆ ಬಂದಿವೆ. ಆಧಾರ್ ಗುರುತು ದುರುಪಯೋಗಿಸಿ ಹಣ ಲಪಟಾಯಿಸುತ್ತಿರುವ ಪ್ರಕರಣ ಇತ್ತೀಚೆಗೆ ಹೆಚ್ಚಾಗಿದೆ. ಈ ಪ್ರಕರಣಗಳನ್ನು ಸರ್ಕಾರ ಹಾಗೂ ಆರ್​ಬಿಐ ಗಂಭೀರವಾಗಿ ಪರಿಗಣಿಸಿದೆ. ಆದರೆ, ಇವುಗಳನ್ನು ನಿಯಂತ್ರಿಸುವುದು ಬಹಳ ಕ್ಲಿಷ್ಟಕರವಾದ ಸವಾಲಿನ ವಿಚಾರ. ಎಲ್ಲಾ ದೃಷ್ಟಿಕೋನದಿಂದಲೂ ಸಮಗ್ರವಾಗಿ ಇವತ್ತು ಚರ್ಚೆ ಆಗಬಹುದು. ಸೈಬರ್ ಸೆಕ್ಯೂರಿಟಿ ಭದ್ರಪಡಿಸಲು ಏಕೀಕೃತ ವಿಧಾನವನ್ನು ರೂಪಿಸಲು ಏನೇನು ಕ್ರಮ ಸಾಧ್ಯ ಎಂಬುದನ್ನು ಅವಲೋಕಿಸುವುದು ಈ ಸಭೆಯ ಒಟ್ಟಾರೆ ಗುರಿ.

ಇತ್ತೀಚೆಗೆ ಸರ್ಕಾರ ಗೂಗಲ್ ಸಂಸ್ಥೆಯನ್ನು ಸಂಪರ್ಕಿಸಿ, ಅಲ್ಲಿನ ಸೆಕ್ಯೂರಿಟಿ ತಂತ್ರಜ್ಞಾನವನ್ನು ಅರಿಯುವ ಪ್ರಯತ್ನ ಮಾಡಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 1:10 pm, Tue, 28 November 23

ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?