ಮಹಾರಾಷ್ಟ್ರ ಸರ್ಕಾರದಿಂದ ಜನರಿಗೆ ಭರ್ಜರಿ ಗಿಫ್ಟ್: ಮಾಸಿಕ 1,500 ರೂ ಸಹಾಯಧನ, 3 ಉಚಿತ ಎಲ್​ಪಿಜಿ, ಪೆಟ್ರೋಲ್ ಬೆಲೆ ಇಳಿಕೆ ಇತ್ಯಾದಿ ಇತ್ಯಾದಿ

Maharashtra state budget 2024: ಚುನಾವಣೆಯ ಹೊಸ್ತಿಲಲ್ಲಿ ಇರುವ ಮಹಾರಾಷ್ಟ್ರದಲ್ಲಿ ಅಲ್ಲಿನ ಸರ್ಕಾರ ಜನಪ್ರಿಯ ಯೋಜನೆಗಳ ಮಹಾಪೂರವನ್ನೇ ಘೋಷಿಸಿದೆ. ಮಹಿಳೆಯರಿಗೆ ತಿಂಗಳಿಗೆ 1,500 ರೂ ಸಹಾಯಧನ, ಪ್ರತೀ ಮನೆಗೆ ಮೂರು ಉಚಿತ ಗ್ಯಾಸ್ ಸಿಲಂಡರ್ ಇತ್ಯಾದಿ ಸ್ಕೀಮ್​ಗಳನ್ನು ಪ್ರಕಟಿಸಲಾಗಿದೆ. ಪೆಟ್ರೋಲ್ ಮತ್ತು ಡೀಸಲ್ ಮೇಲಿನ ತೆರಿಗೆಯನ್ನು ಇಳಿಸಿ ಬೆಲೆ ಇಳಿಕೆಗೆ ಕಾರಣವಾಗಿದೆ.

ಮಹಾರಾಷ್ಟ್ರ ಸರ್ಕಾರದಿಂದ ಜನರಿಗೆ ಭರ್ಜರಿ ಗಿಫ್ಟ್: ಮಾಸಿಕ 1,500 ರೂ ಸಹಾಯಧನ, 3 ಉಚಿತ ಎಲ್​ಪಿಜಿ, ಪೆಟ್ರೋಲ್ ಬೆಲೆ ಇಳಿಕೆ ಇತ್ಯಾದಿ ಇತ್ಯಾದಿ
ಮಹಾರಾಷ್ಟ್ರ ಸರ್ಕಾರ
Follow us
|

Updated on: Jun 28, 2024 | 5:06 PM

ಮುಂಬೈ, ಜೂನ್ 28: ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಭಾರೀ ಹಿನ್ನಡೆ ಕಂಡಿದ್ದ ಎನ್​ಡಿಎ ಮೈತ್ರಿಕೂಟ ಸರ್ಕಾರ ಈ ಬಾರಿಯ ರಾಜ್ಯ ಬಜೆಟ್​ನಲ್ಲಿ ಜನಪ್ರಿಯ ಸ್ಕೀಮ್​ಗಳಿಗೆ ಶರಣಾಗಿದೆ. ಕರ್ನಾಟಕದ ಗೃಹಲಕ್ಷ್ಮೀ ಯೋಜನೆ ಮಾದರಿಯಲ್ಲಿ ಮಹಾರಾಷ್ಟ್ರದಲ್ಲೂ ಮಹಿಳೆಯರಿಗೆ ಸರ್ಕಾರ ಮಾಸಿಕ ಸಹಾಯಧನ ಒದಗಿಸಲು ಘೋಷಿಸಿದೆ. 21 ವರ್ಷದಿಂದ 60 ವರ್ಷದವರೆಗಿನ ವಯಸ್ಸಿನ ಮಹಿಳೆಯರಿಗೆ ಮಾಸಿಕವಾಗಿ 1,500 ರೂ ನೀಡುವುದಾಗಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ತಮ್ಮ ಬಜೆಟ್​ನಲ್ಲಿ ತಿಳಿಸಿದ್ದಾರೆ. ಕರ್ನಾಟಕದ ಗೃಹಲಕ್ಷ್ಮೀ ಸ್ಕೀಮ್​ನಲ್ಲಿ ಅರ್ಹ ಫಲಾನುಭವಿ ಮಹಿಳೆಯರಿಗೆ ತಿಂಗಳಿಗೆ ಎರಡು ಸಾವಿರ ರೂ ಸಿಗುತ್ತದೆ.

ಎನ್​ಸಿಪಿ ಬಂಡಾಯ ಗುಂಪಿನ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಹಣಕಾಸು ಖಾತೆಯನ್ನೂ ಹೊಂದಿದ್ದು, ಇಂದು ಶುಕ್ರವಾರ ಬಜೆಟ್ ಮಂಡನೆ ಮಾಡಿದ್ದಾರೆ. ಇದೇ ಅಕ್ಟೋಬರ್ ತಿಂಗಳಲ್ಲಿ ವಿಧಾನಸಭಾ ಚುನಾವಣೆ ಇದ್ದು ಜನಪ್ರಿಯತೆ ಗಿಟ್ಟಿಸಲು ಸರ್ಕಾರ ಇನ್ನಿಲ್ಲದ ಕಸರತ್ತು ನಡೆಸಬೇಕಾಗಿದೆ. ಈ ಬಾರಿಯ ಬಜೆಟ್​ನಲ್ಲಿ ಸಹಜವಾಗಿಯೇ ಬಹಳಷ್ಟು ಜನಪ್ರಿಯವೆನಿಸುವ ಸ್ಕೀಮ್​ಗಳನ್ನು ಘೋಷಿಸಲಾಗಿದೆ. ಇವುಗಳ ವಿವರ ಇಲ್ಲಿದೆ…

  • 21 ವರ್ಷದಿಂದ 60 ವರ್ಷದವರೆಗಿನ ವಯಸ್ಸಿನ ಅರ್ಹ ಮಹಿಳೆಯರಿಗೆ ತಿಂಗಳಿಗೆ 1,500 ರೂ ಸಹಾಯಧನ ಒದಗಿಸುವ ಯೋಜನೆ.
  • ಮುಖ್ಯಮಂತ್ರಿ ಮಝಿ ಲಡ್ಕಿ ಬಾಹಿನ್ ಯೋಜನೆಗೆ ವರ್ಷಕ್ಕೆ 46,000 ಕೋಟಿ ರೂ ಫಂಡಿಗ್ ಬೇಕಾಗುತ್ತದೆ.
  • ಮುಖ್ಯಮಂತ್ರಿ ಅನ್ನಪೂರ್ಣ ಯೋಜನೆ ಅಡಿಯಲ್ಲಿ ಐದು ಮಂದಿ ಇರುವ ಅರ್ಹ ಕುಟುಂಬವೊಂದಕ್ಕೆ ವರ್ಷಕ್ಕೆ ಮೂರು ಅಡುಗೆ ಅನಿಲದ ಸಿಲಿಂಡರ್​ಗಳು ಉಚಿತವಾಗಿ ಸಿಗುತ್ತವೆ.
  • ಮಹಾರಾಷ್ಟ್ರದ ಹತ್ತಿ ಮತ್ತು ಸೋಯಾಬೀನ್ ಬೆಳೆಗಳಿಗೆ ಪ್ರತೀ ಹೆಕ್ಟೇರ್​ಗೆ 5,000 ರೂ ಬೋನಸ್ ಹಣವನ್ನು ರೈತರಿಗೆ ನೀಡಲಾಗುತ್ತದೆ.
  • ಹಾಲು ಉತ್ಪಾದಕ ರೈತರಿಗೆ ಜುಲೈ 1ರ ಬಳಿಕ ಪ್ರತೀ ಲೀಟರ್ ಹಾಲಿಗೆ 5 ರೂ ಹೆಚ್ಚುವರಿ ಬೋನಸ್ ಕೊಡಲಾಗುತ್ತದೆ.
  • ಪ್ರಾಣಿಗಳ ದಾಳಿಯಿಂದ ಮೃತ ಪಡುವ ವ್ಯಕ್ತಿಗಳ ಸಂಬಂಧಿಕರಿಗೆ ನೀಡಲಾಗುವ ಪರಿಹಾರ ಹಣವನ್ನು 20 ಲಕ್ಷ ರೂನಿಂದ 25 ಲಕ್ಷ ರೂಗೆ ಏರಿಸಲಾಗಿದೆ.

ಇದನ್ನೂ ಓದಿ: ದೆಹಲಿ ವಿಮಾನ ನಿಲ್ದಾಣದ ಮೇಲ್ಛಾವಣಿ ಕುಸಿತ: ಮೃತರಿಗೆ ₹20 ಲಕ್ಷ ಪರಿಹಾರ, ತನಿಖೆಗೆ ಕೇಂದ್ರ ಆದೇಶ

ಪೆಟ್ರೋಲ್ ಬೆಲೆ ಇಳಿಕೆ

ಪೆಟ್ರೋಲ್ ಮತ್ತು ಡೀಸಲ್ ಮೇಲಿನ ತೆರಿಗೆಯನ್ನು ಮಹಾರಾಷ್ಟ್ರ ಸರ್ಕಾರ ಇದೇ ವೇಳೆ ಇಳಿಕೆ ಮಾಡಿದೆ. ಪೆಟ್ರೋಲ್ ಮೇಲೆ ಶೇ. 26 ಇದ್ದ ಟ್ಯಾಕ್ಸ್ ಅನ್ನು ಶೇ. 25ಕ್ಕೆ ಇಳಿಸಲಾಗಿದೆ. ಡೀಸಲ್ ಮೇಲೆ ಶೇ. 24ರಷ್ಟಿದ್ದ ತೆರಿಗೆಯನ್ನು ಶೇ. 21ಕ್ಕೆ ಇಳಿಸಲಾಗಿದೆ. ಇದರೊಂದಿಗೆ ಮುಂಬೈನಲ್ಲಿ ಪೆಟ್ರೋಲ್ ಬೆಲೆ 65 ಪೈಸೆ ಇಳಿಕೆ ಆದರೆ, ಡೀಸಲ್ ಬೆಲೆ ಎರಡು ರೂನಷ್ಟು ತಗ್ಗಲಿದೆ.

ಸದ್ಯ ಮುಂಬೈನಲ್ಲಿ ಪೆಟ್ರೋಲ್ ಬೆಲೆ 104.21 ರೂ ಇದ್ದರೆ, ಡೀಸಲ್ ಬೆಲೆ ಲೀಟರ್​ಗೆ 92.15 ರೂ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?
T20 World Cup: ದ್ರಾವಿಡ್ ಭಾವನಾತ್ಮಕ ಸಂಭ್ರಮಾಚರಣೆ ಹೇಗಿದೆ ನೋಡಿ
T20 World Cup: ದ್ರಾವಿಡ್ ಭಾವನಾತ್ಮಕ ಸಂಭ್ರಮಾಚರಣೆ ಹೇಗಿದೆ ನೋಡಿ