AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Galaxy A53: ನಂಬಲಾಗದ ಆಫರ್: 38,990 ರೂ. ಬೆಲೆಯ ಈ ಫೋನ್ ಮೇಲೆ 34,000 ರೂ. ಡಿಸ್ಕೌಂಟ್

ಖರೀದಿದಾರರಿಗೆ ಸ್ಮಾರ್ಟ್‌ಫೋನ್‌ಗಳು, ಎಲೆಕ್ಟ್ರಾನಿಕ್ಸ್, ಲ್ಯಾಪ್‌ಟಾಪ್‌ಗಳು ಮತ್ತು ಹೆಚ್ಚಿನ ಉತ್ಪನ್ನಗಳ ಮೇಲೆ ಬಿಗ್‌ ಆಫರ್‌ಗಳನ್ನು ನೀಡಲಾಗಿದೆ. ಅದರಲ್ಲೂ ಹೊಸ ಹೊಸ ಮೊಬೈಲ್​ಗಳ ಮೇಲೆ ಆಕರ್ಷಕ ಡಿಸ್ಕೌಂಟ್ ಪಡೆಯಬಹುದು. ನೀವು ಹೊಸ ಸ್ಮಾರ್ಟ್‌ಫೋನ್ (Smartphone) ಖರೀದಿಸುವ ಯೋಚನೆಯಲ್ಲಿದ್ದರೆ ಇದುವೇ ಬೆಸ್ಟ್​ ಟೈಮ್. ಈ ಸೇಲ್​ನಲ್ಲಿ 38,990 ರೂ. ಮೂಲಬೆಲೆ ಇರುವ ಸ್ಯಾಮ್​ಸಂಗ್ ಗ್ಯಾಲಕ್ಸಿ ಎ53 5ಜಿ (Samsung Galaxy A53 5G) ಸ್ಮಾರ್ಟ್​​ಫೋನ್ ಅನ್ನು ಅತಿ ಕಡಿಮೆ ಬೆಲೆಗೆ ಖರೀದಿಸಬಹುದು.

Galaxy A53: ನಂಬಲಾಗದ ಆಫರ್: 38,990 ರೂ. ಬೆಲೆಯ ಈ ಫೋನ್ ಮೇಲೆ 34,000 ರೂ. ಡಿಸ್ಕೌಂಟ್
samsung galaxy a53
Vinay Bhat
| Edited By: |

Updated on:Oct 08, 2026 | 2:47 PM

Share

ಮುಖ್ಯಾಂಶಗಳು

  • ಫ್ಲಿಪ್​ಕಾರ್ಟ್​ನಲ್ಲಿ​ ಬಹುನಿರೀಕ್ಷಿತ ಬಿಗ್‌ ಸೇವಿಂಗ್‌ ಡೇಸ್‌ ಸೇಲ್
  • ಸ್ಯಾಮ್‌ಸಂಗ್ ಗ್ಯಾಲಕ್ಸಿ A53 5G ಫೋನ್​ಗೆ ಬಂಪರ್ ಆಫರ್
  • ಗ್ಯಾಲಕ್ಸಿ M32 ಕೇವಲ 3,749 ರೂ. ಗೆ ನಿಮ್ಮದಾಗಿಸಬಹುದು

ಪ್ರಸಿದ್ಧ ಇ ಕಾಮರ್ಸ್​ ತಾಣವಾದ ಫ್ಲಿಪ್​ಕಾರ್ಟ್​ನಲ್ಲಿ​ ಬಹುನಿರೀಕ್ಷಿತ ಬಿಗ್‌ ಸೇವಿಂಗ್‌ ಡೇಸ್‌ (Flipkart Big Saving Days sale) ಸೇಲ್ ಶುರುವಾಗಿದೆ. ಆರು ದಿನಗಳ ಕಾಲ ನಡೆಯಲಿರುವ ಈ ಸೇಲ್ ಮೇ 10ಕ್ಕೆ ಕೊನೆಗೊಳ್ಳಲಿದೆ. ಮಾರಾಟದ ಸಮಯದಲ್ಲಿ, ಖರೀದಿದಾರರಿಗೆ ಸ್ಮಾರ್ಟ್‌ಫೋನ್‌ಗಳು, ಎಲೆಕ್ಟ್ರಾನಿಕ್ಸ್, ಲ್ಯಾಪ್‌ಟಾಪ್‌ಗಳು ಮತ್ತು ಹೆಚ್ಚಿನ ಉತ್ಪನ್ನಗಳ ಮೇಲೆ ಬಿಗ್‌ ಆಫರ್‌ಗಳನ್ನು ನೀಡಲಾಗಿದೆ. ಅದರಲ್ಲೂ ಹೊಸ ಹೊಸ ಮೊಬೈಲ್​ಗಳ ಮೇಲೆ ಆಕರ್ಷಕ ಡಿಸ್ಕೌಂಟ್ ಪಡೆಯಬಹುದು. ನೀವು ಹೊಸ ಸ್ಮಾರ್ಟ್‌ಫೋನ್ (Smartphone) ಖರೀದಿಸುವ ಯೋಚನೆಯಲ್ಲಿದ್ದರೆ ಇದುವೇ ಬೆಸ್ಟ್​ ಟೈಮ್. ಈ ಸೇಲ್​ನಲ್ಲಿ 38,990 ರೂ. ಮೂಲಬೆಲೆ ಇರುವ ಸ್ಯಾಮ್​ಸಂಗ್ ಗ್ಯಾಲಕ್ಸಿ ಎ53 5ಜಿ (Samsung Galaxy A53 5G) ಸ್ಮಾರ್ಟ್​​ಫೋನ್ ಅನ್ನು ಅತಿ ಕಡಿಮೆ ಬೆಲೆಗೆ ಖರೀದಿಸಬಹುದು.

ಆಫರ್ ಏನು?:

ಸ್ಯಾಮ್‌ಸಂಗ್ ಗ್ಯಾಲಕ್ಸಿ A53 5G ಫೋನ್​ನ 8GB RAM + 128GB ವೇರಿಯಂಟ್‌ ಫೋನ್​ನ ಮೂಲಬೆಲೆ 38,990 ರೂ. ಆಗಿದೆ. ಆದರೀಗ ಈ ಫೋನ್ ಮೇಲೆ ಶೇ. 17 ರಷ್ಟು ರಿಯಾಯಿತಿ ಘೋಷಿಸಲಾಗಿದೆ. ಈ ಮೂಲಕ 31,999 ರೂ. ಬೆಲೆಯಲ್ಲಿ ಲಭ್ಯವಾಗುತ್ತಿದೆ. 6991 ರೂ. ಅನ್ನು ಉಳಿಸಿಕೊಳ್ಳಬಹುದು. ಇದರ ಜೊತೆಗೆ ಆಕರ್ಷಕ ಎಕ್ಸ್​ಚೇಂಜ್ ಆಫರ್ ಕೂಡ ನೀಡಲಾಗಿದೆ. 28,250 ರೂ. ವರೆಗೆ ಎಕ್ಸ್​ಚೇಂಜ್ ಆಫರ್ ಪಡೆಯುವ ಅವಕಾಶ ಮಾಡಿಕೊಡಲಾಗಿದ್ದು, ನಿಮ್ಮ ಹಳೆಯ ಮೊಬೈಲ್ ಯಾವುದೇ ಸಮಸ್ಯೆ ಇಲ್ಲದೆ ಅತ್ಯುತ್ತಮವಾಗಿದ್ದರೆ ಅಷ್ಟೂ ಮೊತ್ತಕ್ಕೆ ಸೇಲ್ ಆಗಬಹುದು. ಹೀಗಾದಾಗ ಗ್ಯಾಲಕ್ಸಿ M32 ಸ್ಮಾರ್ಟ್​​ಫೋನ್ ಅನ್ನು ನೀವು ಕೇವಲ 3,749 ರೂ. ಗೆ ನಿಮ್ಮದಾಗಿಸಬಹುದು.

ಫೀಚರ್ಸ್ ಏನಿದೆ?:

ಸ್ಯಾಮ್​ಸಂಗ್ ಗ್ಯಾಲಕ್ಸಿ M32 ಸ್ಮಾರ್ಟ್​​ಫೋನ್ 6.4 ಇಂಚಿನ ಎಸ್-ಅಮೋಲೆಡ್ (sAMOLED) ಎಫ್‌ಹೆಚ್‌ಡಿ ಪ್ಯಾನೆಲ್ ಸ್ಕ್ರೀನ್ ಇದ್ದು, 90Hz ರೀಫ್ರೆಶ್ ರೇಟ್ ಇದೆ. ಮೀಡಿಯಾಟೆಕ್ ಹೀಲಿಯೋ ಜಿ80 ಪ್ರೊಸೆಸರ್ ಜೊತೆಗೂಡಿರುವುದರಿಂದ ಕಾರ್ಯಾಚರಣೆಯು ಸುಲಲಿತವಾಗಿದೆ. ಆಂಡ್ರಾಯ್ಡ್ 11 ಆಧಾರಿತ ಒನ್‌ಯುಐ 3.1 ನೊಂದಿಗೆ ಬರುತ್ತದೆ.

ಈ ಫೋನ್‌ನ ಪ್ರಧಾನ ಕ್ಯಾಮೆರಾದಲ್ಲಿ 64 ಮೆಗಾಪಿಕ್ಸೆಲ್ ಸಾಮರ್ಥ್ಯದ ಪ್ರಧಾನ ಸೆನ್ಸರ್ ಇದ್ದು, 8MP ವೈಡ್ ಆ್ಯಂಗಲ್ ಲೆನ್ಸ್ ಹಾಗೂ ತಲಾ 2 ಮೆಗಾಪಿಕ್ಸೆಲ್ ಸಾಮರ್ಥ್ಯದ ಮ್ಯಾಕ್ರೋ ಮತ್ತು ಡೆಪ್ತ್ ಸೆನ್ಸರ್ ಲೆನ್ಸ್‌ಗಳಿವೆ. ಸೆಲ್ಫೀಗಾಗಿ 20 ಮೆಗಾಪಿಕ್ಸೆಲ್ ಸಾಮರ್ಥ್ಯದ ಮುಂಭಾಗದ ಕ್ಯಾಮೆರಾ ಸೆಟಪ್ ನೀಡಲಾಗಿದೆ.

ಪ್ರಧಾನ ಕ್ಯಾಮೆರಾವು ಹೊರಾಂಗಣದಲ್ಲಿ ಅದ್ಭುತವಾಗಿ ಬಣ್ಣಗಳ ಮಿಳಿತದೊಂದಿಗೆ ಚಿತ್ರಗಳನ್ನು ಸೆರೆಹಿಡಿಯುತ್ತದೆ. ಸಮೀಪದ ವಸ್ತುಗಳು ಮ್ಯಾಕ್ರೋ ಮತ್ತು ಡೆಪ್ತ್ ಸೆನ್ಸರ್‌ಗಳಿಂದಾಗಿ ಅತ್ಯುತ್ತಮವಾಗಿ ಸೆರೆಯಾಗುತ್ತವೆ. 20MP ಸಾಮರ್ಥ್ಯದ ಲೆನ್ಸ್ ಮೂಲಕ ಸೆಲ್ಫೀ, ಈಗಿನ ಅಗತ್ಯಕ್ಕೆ ತಕ್ಕಂತೆ ಚಿತ್ರಗಳಿಗೆ ಹೆಚ್ಚು ಸೌಂದರ್ಯ ಒದಗಿಸುತ್ತದೆ.

ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4ಜಿ, ವೈ-ಫೈ, ಬ್ಲೂಟೂತ್, ಮತ್ತು ಜಿಪಿಎಸ್ ಸೇರಿದಂತೆ ಪ್ರಮುಖ ನೂತನ ಫೀಚರ್​ಗಳಿಂದ ಕೂಡಿದೆ.

ಹೆಚ್ಚಿನ ಟೆಕ್ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:09 pm, Fri, 5 May 23

Follow Us
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
ನಂಜನಗೂಡು ಸಿದ್ದೇಶ್ವರ ಜಾತ್ರೆ ಮೆರವಣಿಗೆ ವೇಳೆ ಗಲಾಟೆ, ಕಲ್ಲುತೂರಾಟ
ನಂಜನಗೂಡು ಸಿದ್ದೇಶ್ವರ ಜಾತ್ರೆ ಮೆರವಣಿಗೆ ವೇಳೆ ಗಲಾಟೆ, ಕಲ್ಲುತೂರಾಟ
Horoscope Today: ಕುಜ ಗ್ರಹವು ಕರ್ಕಾಟಕ ರಾಶಿಯಿಂದ ಸಿಂಹ ರಾಶಿಗೆ ಪ್ರವೇಶ
Horoscope Today: ಕುಜ ಗ್ರಹವು ಕರ್ಕಾಟಕ ರಾಶಿಯಿಂದ ಸಿಂಹ ರಾಶಿಗೆ ಪ್ರವೇಶ
ಬಿಗ್ ಬಾಸ್ ಮನೆಯಲ್ಲಿ ಗಾನವಿಗೆ ಮೆಮೋರಿ ಲಾಸ್? ಟಾಸ್ಕ್ ಬಳಿಕ ಏನೂ ನೆನಪಿಲ್ಲ
ಬಿಗ್ ಬಾಸ್ ಮನೆಯಲ್ಲಿ ಗಾನವಿಗೆ ಮೆಮೋರಿ ಲಾಸ್? ಟಾಸ್ಕ್ ಬಳಿಕ ಏನೂ ನೆನಪಿಲ್ಲ
ರಿಷಬ್ ಶೆಟ್ಟಿ, ಪ್ರಮೋದ್ ಶೆಟ್ಟಿ ದೂರ ಆಗಿಲ್ಲ: ಸ್ಪಷ್ಟನೆ ನೀಡಿದ ನಟ
ರಿಷಬ್ ಶೆಟ್ಟಿ, ಪ್ರಮೋದ್ ಶೆಟ್ಟಿ ದೂರ ಆಗಿಲ್ಲ: ಸ್ಪಷ್ಟನೆ ನೀಡಿದ ನಟ
ಹಾವೇರಿಯಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಎಮರ್ಜೆನ್ಸಿ ಲ್ಯಾಂಡಿಂಗ್
ಹಾವೇರಿಯಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಎಮರ್ಜೆನ್ಸಿ ಲ್ಯಾಂಡಿಂಗ್
ಹಾಸನ ಡಿಸಿ ವಿರುದ್ಧ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಜೆಡಿಎಸ್ ದೂರು
ಹಾಸನ ಡಿಸಿ ವಿರುದ್ಧ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಜೆಡಿಎಸ್ ದೂರು
25 ಲಕ್ಷ ರೂ. ಲಂಚ ಪಡೆದು ತಹಸೀಲ್ದಾರ್ ವಂಚಿಸಿದ ಆರೋಪ
25 ಲಕ್ಷ ರೂ. ಲಂಚ ಪಡೆದು ತಹಸೀಲ್ದಾರ್ ವಂಚಿಸಿದ ಆರೋಪ
ರಸ್ತೆ ಗುಂಡಿ ಮುಚ್ಚಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದ ನಟ ವಿನೋದ್ ರಾಜ್
ರಸ್ತೆ ಗುಂಡಿ ಮುಚ್ಚಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದ ನಟ ವಿನೋದ್ ರಾಜ್
KPSC ಹಗರಣ: ಸಾಹುಕಾರ್, ಕನ್ನಾಳೆ ಜಾಮೀನು ಅರ್ಜಿ ವಜಾ; ಗೀತಾಗೆ ಜಾಮೀನು
KPSC ಹಗರಣ: ಸಾಹುಕಾರ್, ಕನ್ನಾಳೆ ಜಾಮೀನು ಅರ್ಜಿ ವಜಾ; ಗೀತಾಗೆ ಜಾಮೀನು
ಮಂಜ ಬಂದಿದ್ದೆ, ಮತ್ತೆ ರದ್ದಾಯ್ತು ಟಾಸ್ಕ್: ವಿಡಿಯೋ
ಮಂಜ ಬಂದಿದ್ದೆ, ಮತ್ತೆ ರದ್ದಾಯ್ತು ಟಾಸ್ಕ್: ವಿಡಿಯೋ