AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Galaxy F54 5G: 6000mAh ಬ್ಯಾಟರಿ: ಭಾರತಕ್ಕೆ ಬರುತ್ತಿದೆ ಕಡಿಮೆ ಬೆಲೆಯ 108MP ಕ್ಯಾಮೆರಾದ ಹೊಚ್ಚ ಹೊಸ ಸ್ಮಾರ್ಟ್​ಫೋನ್

ಹೊಸ ಗ್ಯಾಲಕ್ಸಿ F54 5G ಫೋನ್‌ ಇದೇ ಏಪ್ರಿಲ್ ತಿಂಗಳ ಅಂತ್ಯದಲ್ಲಿ ಭಾರತದಲ್ಲಿ ಲಾಂಚ್ ಆಗುವ ಸಾಧ್ಯತೆಗಳಿವೆ. ಈ ಫೋನಿನ ಬೆಲೆಯ ಕುರಿತು ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಆದರೆ, ಮೂಲಗಳ ಪ್ರಕಾರ 25,000 ರೂ. ಗಳ ಆಸುಪಾಸು ಇರಬಹುದು ಎಂದು ಅಂದಾಜಿಸಲಾಗಿದೆ. ಹೊಸ ಗ್ಯಾಲಕ್ಸಿ F54 5G ಫೋನ್‌ ಇದೇ ಏಪ್ರಿಲ್ ತಿಂಗಳ ಅಂತ್ಯದಲ್ಲಿ ಭಾರತದಲ್ಲಿ ಲಾಂಚ್ ಆಗುವ ಸಾಧ್ಯತೆಗಳಿವೆ. ಈ ಫೋನಿನ ಬೆಲೆಯ ಕುರಿತು ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಆದರೆ, ಮೂಲಗಳ ಪ್ರಕಾರ 25,000 ರೂ. ಗಳ ಆಸುಪಾಸು ಇರಬಹುದು ಎಂದು ಅಂದಾಜಿಸಲಾಗಿದೆ.

Galaxy F54 5G: 6000mAh ಬ್ಯಾಟರಿ: ಭಾರತಕ್ಕೆ ಬರುತ್ತಿದೆ ಕಡಿಮೆ ಬೆಲೆಯ 108MP ಕ್ಯಾಮೆರಾದ ಹೊಚ್ಚ ಹೊಸ ಸ್ಮಾರ್ಟ್​ಫೋನ್
Samsung Galaxy F54 5G
Vinay Bhat
| Edited By: |

Updated on:Oct 07, 2026 | 6:10 PM

Share

ಮುಖ್ಯಾಂಶಗಳು

  • ಬರುತ್ತಿದೆ 108 ಮೆಗಾಪಿಕ್ಸೆಲ್ ಕ್ಯಾಮೆರಾd ಹೊಸ ಫೋನ್
  • ಬಿಡುಗಡೆಗೆ ಸಿದ್ದವಾಗಿದೆ ಹೊಸ ಗ್ಯಾಲಕ್ಸಿ F54 5G ಸ್ಮಾರ್ಟ್​ಫೋನ್
  • ಈ ಫೋನ್ 6,000mAh ಬ್ಯಾಟರಿ ಬ್ಯಾಕ್‌ಅಪ್ ಪಡೆದುಕೊಂಡಿದೆ

ಇತರೆ ದೇಶಗಳಿಗೆ ಹೋಲಿಸಿದರೆ ಆಕರ್ಷಕ ಕ್ಯಾಮೆರಾದ ಸ್ಮಾರ್ಟ್​ಫೋನ್​ಗಳಿಗೆ (Smartphones) ಭಾರತದಲ್ಲಿ ಬೇಡಿಕೆ ಹೆಚ್ಚಿದೆ. ಅದರಲ್ಲೂ 108 ಮೆಗಾಪಿಕ್ಸೆಲ್ ಕ್ಯಾಮೆರಾ ಫೋನ್​ಗಳು ದೇಶದಲ್ಲಿ ಎಗ್ಗಿಲ್ಲದೆ ಸೇಲ್ ಆಗುತ್ತಿದೆ. ವಿಶೇಷ ಎಂದರೆ ಇವುಗಳು ಕಡಿಮೆ ಬೆಲೆಗೆ ಕೂಡ ಲಭ್ಯವಿದೆ. ಇದೀಗ ದಕ್ಷಿಣ ಕೊರಿಯಾ ಮೂಲದ ಸ್ಯಾಮ್​ಸಂಗ್ (Samsung) ಕಂಪನಿ ಕ್ಯಾಮೆರಾ ಪ್ರಿಯರಿಗಾಗಿ ಹೊಸ ಮೊಬೈಲ್ ರಿಲೀಸ್ ಮಾಡಲು ಮುಂದಾಗಿದೆ. ಗ್ಯಾಲಕ್ಸಿ F ಸರಣಿಯ ಸ್ಮಾರ್ಟ್​ಫೋನ್​ಗಳಿಗೆ ಭಾರತದಲ್ಲಿ ಭರ್ಜರಿ ಬೇಡಿಕೆ ಇದೆ. ಈ ಸರಣಿಯ ಫೋನ್​ಗಳು ಬಿಡುಗಡೆ ಆಯಿತು ಎಂದಾದರೆ ಅದು ಬೊಂಬಾಟ್ ಸೇಲ್ ಕಾಣುತ್ತದೆ. ಇದಕ್ಕಾಗಿಯೆ ಸ್ಯಾಮ್‌ಸಂಗ್ ಇದೀಗ ಗ್ಯಾಲಕ್ಸಿ F ಸರಣಿಯಲ್ಲಿ 108 ಮೆಗಾಪಿಕ್ಸೆಲ್ ಕ್ಯಾಮೆರಾ ಇರುವ ಹೊಸ ಗ್ಯಾಲಕ್ಸಿ F54 5G (Galaxy F54 5G) ಸ್ಮಾರ್ಟ್‌ಫೋನ್‌ ಅನಾವರಣ ಮಾಡುತ್ತಿದೆ. ಇದು ಮೀಡ್‌ರೇಂಜ್‌ ಮಾದರಿಯಲ್ಲಿ ಇರಲಿದೆ ಎಂದು ಹೇಳಲಾಗಿದೆ.

ಹೊಸ ಗ್ಯಾಲಕ್ಸಿ F54 5G ಫೋನ್‌ ಇದೇ ಏಪ್ರಿಲ್ ತಿಂಗಳ ಅಂತ್ಯದಲ್ಲಿ ಭಾರತದಲ್ಲಿ ಲಾಂಚ್ ಆಗುವ ಸಾಧ್ಯತೆಗಳಿವೆ. ಈ ಫೋನಿನ ಬೆಲೆಯ ಕುರಿತು ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಆದರೆ, ಮೂಲಗಳ ಪ್ರಕಾರ 25,000 ರೂ. ಗಳ ಆಸುಪಾಸು ಇರಬಹುದು ಎಂದು ಅಂದಾಜಿಸಲಾಗಿದೆ. ಈ ಸ್ಮಾರ್ಟ್‌ಫೋನ್‌ ಫೀಚರ್ಸ್ ಬಗ್ಗೆ ಕೆಲ ಮಾಹಿತಿ ಸೋರಿಕೆ ಆಗಿದೆ. ಇದರ ಪ್ರಕಾರ, ನೂತನ ಫೋನ್‌ ಸೂಪರ್‌ AMOLED ಡಿಸ್‌ಪ್ಲೇ ಅನ್ನು ಒಳಗೊಂಡಿರಲಿದ್ದು, 120Hz ರಿಫ್ರೆಶ್‌ ರೇಟ್‌ ಅನ್ನು ಪಡೆದಿರಲಿದೆ. ಹಿಂಬದಿಯ ಪ್ರಾಥಮಿಕ ಕ್ಯಾಮೆರಾ 108 ಮೆಗಾ ಪಿಕ್ಸಲ್‌ ಸೆನ್ಸಾರ್‌ನಲ್ಲಿ ಇರಲಿದೆ.

ಗ್ಯಾಲಕ್ಸಿ F54 5G ಸ್ಮಾರ್ಟ್‌ಫೋನ್‌ ಅಧಿಕ ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯ ಹೊಂದಿರಲಿದ್ದು, 6.67 ಇಂಚಿನ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಪಡೆದಿರಲಿದೆ. ಬಲಿಷ್ಠವಾದ ಸ್ಯಾಮ್‌ಸಂಗ್‌ನ Exynos 1380 ಪ್ರೊಸೆಸರ್‌ ಪ್ರೊಸೆಸರ್‌ ಬಲದಲ್ಲಿ ಕಾರ್ಯನಿರ್ವಹಿಸಲಿದ್ದು, ಇತ್ತೀಚಿಗಿನ 13 ಓಎಸ್‌ ಸಪೋರ್ಟ್‌ ಸಹ ಪಡೆದಿರಲಿದೆ. ಜೊತೆಗೆ 6GB RAM + 128GB ಮತ್ತು 8GB RAM + 256GB ಆಯ್ಕೆಗಳಲ್ಲಿ ಬರುವುದು ಬಹುತೇಕ ಖಚಿತ.

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ, ಈ ಸ್ಮಾರ್ಟ್‌ಫೋನ್‌ ಹಿಂಭಾಗದಲ್ಲಿ ತ್ರಿವಳಿ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿರಲಿದ್ದು, ಮುಖ್ಯ ಕ್ಯಾಮೆರಾವು ಬರೋಬ್ಬರಿ 108 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿರಲಿದೆ. ಇದು ಫೋಟೋಗ್ರಫಿಗೆ ಸೂಕ್ತವಾಗಿದ್ದು ಅತ್ಯುತ್ತಮ ಕ್ವಾಲಿಟಿಯಲ್ಲಿ ವಿಡಿಯೋವನ್ನು ಸೆರೆಹಿಡಿಯುತ್ತದೆ. ಇದರಲ್ಲಿರುವ ಸೆಕೆಂಡರಿ ಕ್ಯಾಮೆರಾವು 8 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್ ಪಡೆದಿರಲಿದೆ. ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ಸೆಲ್ಫಿ ಕ್ಯಾಮೆರಾ 32 ಮೆಗಾ ಪಿಕ್ಸೆಲ್ ಸೆನ್ಸಾರ್ ನಲ್ಲಿ ಇರಲಿದೆ ಎಂದು ಹೇಳಲಾಗಿದೆ.

ಗ್ಯಾಲಕ್ಸಿ F54 5G ಫೋನ್ ದೀರ್ಘ ಸಮಯ ಬಾಳಕೆ ಬರುವ 6,000mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿರಲಿದ್ದು, ಜೊತೆಗೆ 25W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒಳಗೊಂಡಿರಲಿದೆ. ಇದರೊಂದಿಗೆ 5G, GPS, Wi-Fi 6, ಬ್ಲೂಟೂತ್ 5.2, ಮತ್ತು USB 2.0 ಟೈಪ್-C ಪೋರ್ಟ್ ಆಯ್ಕೆಗಳು ಇರಲಿವೆ. ಕಡಿಮೆ ಬೆಲೆಗೆ ಉತ್ತಮ ಕ್ಯಾಮೆರಾ, ಡೀಸೆಂಟ್ ಪ್ರೊಸೆಸರ್, ಬಿಗ್ ಬ್ಯಾಟರಿಯ ಫೋನ್ ಖರೀದಿಸುವ ಪ್ಲಾನ್​ನಲ್ಲಿ ನೀವಿದ್ದರೆ ಈ ಫೋನ್​ಗಾಗಿ ಕೆಲ ದಿನಗಳ ಕಾಲ ಕಾಯುವುದು ಉತ್ತಮ.

Published On - 2:10 pm, Sat, 15 April 23

Follow Us
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ