AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಳಿತಾಯ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಷ್ಟಿರಲೇಬೇಕು

ಕೆಲವರು ದೈನಂದಿನ ವ್ಯವಹಾರಗಳನ್ನು ಉಳಿತಾಯ ಖಾತೆಯ ಮೂಲಕವೇ ನಡೆಸುತ್ತಾರೆ. ಈ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಟ್ಟುಕೊಳ್ಳುವುದು ಮುಖ್ಯ. ಆದರೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಎಲ್ಲಾ ಬ್ಯಾಂಕ್‌ಗಳಿಗೂ ಒಂದೇ ರೀತಿಯ ಕನಿಷ್ಠ ಬ್ಯಾಲೆನ್ಸ್ ನಿಯಮವನ್ನು ಕಡ್ಡಾಯಗೊಳಿಸಿಲ್ಲ. ಹೀಗಾಗಿ ಈ ಮೊತ್ತವು ಶಾಖೆ ಇರುವ ಪ್ರದೇಶದ ಆಧಾರದ ಮೇಲೆ ಬ್ಯಾಂಕ್‌ನಿಂದ ಬ್ಯಾಂಕ್‌ಗೆ ಬದಲಾಗುತ್ತದೆ.

ಉಳಿತಾಯ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಷ್ಟಿರಲೇಬೇಕು
ಸಾಂದರ್ಭಿಕ ಚಿತ್ರImage Credit source: Guido Mieth/Moment/Getty Images
ಸಾಯಿನಂದಾ
|

Updated on:Aug 28, 2026 | 6:57 PM

Share

ಮುಖ್ಯಾಂಶಗಳು

  • ಪ್ರತಿಯೊಬ್ಬರ ಬಳಿ ಉಳಿತಾಯ ಖಾತೆ ಇದ್ದೇ ಇರುತ್ತದೆ
  • ಕೆಲ ಖಾತೆಗಳಿಗೆ ಕನಿಷ್ಠ ಬ್ಯಾಲೆನ್ಸ್ ಹೊಂದಿರುವುದು ಕಡ್ಡಾಯವಲ್ಲ
  • ಕನಿಷ್ಠ ಬ್ಯಾಲೆನ್ಸ್‌ ಹೊಂದಿಲ್ಲದಿದ್ದರೆ ಬ್ಯಾಂಕ್‌ಗಳು ದಂಡವನ್ನು ವಿಧಿಸುತ್ತವೆ

ಪ್ರತಿಯೊಬ್ಬರ ಬಳಿ ಉಳಿತಾಯ ಖಾತೆ (Saving Account) ಇದ್ದೇ ಇರುತ್ತದೆ. ಆದರೆ ಕೆಲವರ ಖಾತೆಯಲ್ಲಿ ಒಂದೇ ಒಂದೂ ರೂಪಾಯಿ ಇರಲ್ಲ, ಆದರೆ ಒಬ್ಬ ವ್ಯಕ್ತಿ ತನ್ನ ಉಳಿತಾಯ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಎಷ್ಟು ಹೊಂದುವುದು ಕಡ್ಡಾಯ ಎಂದು ನಿಮ್ಗೆ ತಿಳಿದಿದೆಯೇ?. ಈ ಕನಿಷ್ಠ ಬ್ಯಾಲೆನ್ಸ್ ಬಗ್ಗೆ ನಿಮಗೂ ಕೂಡ ಗೊಂದಲವಿರಬಹುದು. ಆದರೆ ಆರ್‌ಬಿಐ ಎಲ್ಲಾ ಬ್ಯಾಂಕುಗಳಿಗೂ ಒಂದೇ ರೀತಿಯ ಕನಿಷ್ಠ ಬ್ಯಾಲೆನ್ಸ್ ನಿಯಮವನ್ನು ಕಡ್ಡಾಯಗೊಳಿಸಿಲ್ಲ. ಒಂದು ವೇಳೆ ನೀವು ಕನಿಷ್ಠ ಬ್ಯಾಲೆನ್ಸ್ ಕಾಯ್ದುಕೊಳ್ಳದಿದ್ದರೆ ಬ್ಯಾಂಕ್‌ಗಳು ನಿರ್ವಹಣಾ ಶುಲ್ಕ ಅಥವಾ ದಂಡವನ್ನು ವಿಧಿಸುತ್ತವೆ.

ಉಳಿತಾಯ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಎಷ್ಟು ಇರಬೇಕು?

  • ಕೆಲ ಖಾತೆಗಳಿಗೆ ಹಾಗೂ ಬ್ಯಾಂಕ್‌ಗಳಲ್ಲಿ ಕನಿಷ್ಠ ಬ್ಯಾಲೆನ್ಸ್ (ಶೂನ್ಯ ಬ್ಯಾಲೆನ್ಸ್ ಖಾತೆ) ಹೊಂದಿರುವುದು ಕಡ್ಡಾಯವಿಲ್ಲ.
  • ಉಳಿತಾಯ ಖಾತೆಗಳಲ್ಲಿ ಮಾಸಿಕ, ತ್ರೈಮಾಸಿಕ ಬ್ಯಾಲೆನ್ಸ್ 1,000 ರೂ ರಿಂದ 10,000 ರೂ ಹೊಂದಿರುವುದು ಕಡ್ಡಾಯವಾಗಿದೆ.
  • ನಗರ, ಅರೆ-ನಗರ ಹಾಗೂ ಗ್ರಾಮೀಣ ಪ್ರದೇಶಗಳ ಆಧಾರದ ಮೇಲೆ ಕನಿಷ್ಠ ಬ್ಯಾಲೆನ್ಸ್‌ಗಳು ಬ್ಯಾಂಕ್‌ನಿಂದ ಬ್ಯಾಂಕ್‌ಗೆ ವ್ಯತ್ಯಾಸವಾಗುತ್ತದೆ.
  • ಮೆಟ್ರೋ ಹಾಗೂ ನಗರ ಪ್ರದೇಶಗಳಲ್ಲಿನ ಬ್ಯಾಂಕ್‌ಗಳಲ್ಲಿ ಖಾತೆ ಹೊಂದಿದ್ದರೆ ನೀವು 5,000 ರೂ ರಿಂದ 10,000 ರೂ ಹಾಗೂ ಅದಕ್ಕಿಂತ ಹೆಚ್ಚಿನ ಕನಿಷ್ಠ ಬ್ಯಾಲೆನ್ಸ್ ಹೊಂದಿರಲೇಬೇಕು.
  • ನಿಮ್ಮ ಖಾತೆ ಗ್ರಾಮೀಣ ಮತ್ತು ಅರೆ-ನಗರ ಪ್ರದೇಶಗಳಲ್ಲಿದ್ದರೆ ಕನಿಷ್ಠ ಮೊತ್ತವು 1,000 ರೂಯಿಂದ 5,000 ರೂ ಒಳಗೆ ಇರಬೇಕು.

ಇದನ್ನೂ ಓದಿ: ಸೆಪ್ಟೆಂಬರ್ ತಿಂಗಳಲ್ಲಿ ಜನ್ಮಾಷ್ಟಮಿ, ಗಣೇಶ ಚತುರ್ಥಿ, ಇಂದ್ರ ಜಾತ್ರಾ ಸೇರಿದಂತೆ 13 ದಿನಗಳವರೆಗೆ ಬ್ಯಾಂಕ್ ಬಂದ್; ಮುಷ್ಕರವೂ ಇದೆ ಗಮನಿಸಿ

ಸಾಮಾನ್ಯವಾಗಿ ಕೇಳುವ ಪ್ರಶ್ನೆ ಮತ್ತು ಉತ್ತರ (FAQs)

ಪ್ರಶ್ನೆ: ಉಳಿತಾಯ ಖಾತೆಯ ಕನಿಷ್ಠ ಬ್ಯಾಲೆನ್ಸ್ ಯಾವ ಆಧಾರ ಮೇಲೆ ನಿರ್ಧಾರವಾಗುತ್ತದೆ?

ಉತ್ತರ: ನಗರ, ಅರೆ-ನಗರ, ಹಾಗೂ ಗ್ರಾಮೀಣ ಪ್ರದೇಶಗಳ ಆಧಾರದ ಮೇಲೆ ಕನಿಷ್ಠ ಬ್ಯಾಲೆನ್ಸ್ ಗಳು ಬ್ಯಾಂಕ್ ನಿಂದ ಬ್ಯಾಂಕ್ ಗೆ ಬದಲಾಗುತ್ತವೆ.

ಪ್ರಶ್ನೆ: ಉಳಿತಾಯ ಖಾತೆ ಮುಖ್ಯ ಯಾಕೆ?

ಉತ್ತರ: ಉಳಿತಾಯ ಖಾತೆಯಲ್ಲಿ ಹಣವು ಸುರಕ್ಷಿತವಾಗಿರುತ್ತದೆ. ಎಟಿಎಂ, ಯುಪಿಐ ಹಾಗೂ ಮೊಬೈಲ್ ಬ್ಯಾಂಕಿಂಗ್ ಮೂಲಕ ಸುಲಭವಾಗಿ ಹಣ ವರ್ಗಾವಣೆ ಮಾಡಬಹುದು.

ಪ್ರಶ್ನೆ: ಉಳಿತಾಯ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲದಿದ್ದರೆ ಬ್ಯಾಂಕ್ ಎಷ್ಟು ದಂಡ ವಿಧಿಸುತ್ತವೆ?

ಉತ್ತರ: ಬ್ಯಾಂಕ್‌ಗಳು ಖಾತೆಯಲ್ಲಿರುವ ಕಡಿಮೆ ಬ್ಯಾಲೆನ್ಸ್ ಗೆ ಅನುಗುಣವಾಗಿ ತಿಂಗಳಿಗೆ 5 ರೂ ರಿಂದ 600 ರೂವರೆಗೆ ದಂಡ ವಿಧಿಸುತ್ತವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:51 pm, Fri, 28 August 26

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ನಾನಾ ಪಾಟೇಕರ್ ಜೊತೆ ಕರಿ ಸುಬ್ಬು ಒಡನಾಟ ಶುರು ಆಗಿದ್ದು ಹೇಗೆ? ವಿವರಿಸಿದ ನಟ
ನಾನಾ ಪಾಟೇಕರ್ ಜೊತೆ ಕರಿ ಸುಬ್ಬು ಒಡನಾಟ ಶುರು ಆಗಿದ್ದು ಹೇಗೆ? ವಿವರಿಸಿದ ನಟ
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ