SBI Interest Rate on FD: ಎಫ್​ಡಿ ಬಡ್ಡಿ ಹೆಚ್ಚಿಸಿದ ಎಸ್​ಬಿಐ, ಇಲ್ಲಿದೆ ಪರಿಷ್ಕೃತ ಬಡ್ಡಿ ದರ ಮಾಹಿತಿ

2 ಕೋಟಿ ರೂಪಾಯಿಗಿಂತ ಕಡಿಮೆ ಮೊತ್ತದ ಸ್ಥಿರ ಠೇವಣಿಗಳ ಬಡ್ಡಿ ದರವನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹೆಚ್ಚಿಸಿದೆ. ಪರಿಷ್ಕೃತ ಬಡ್ಡಿ ದರ ಇಂದಿನಿಂದಲೇ (ಅಕ್ಟೋಬರ್ 15) ಜಾರಿಗೆ ಬರಲಿದೆ.

SBI Interest Rate on FD: ಎಫ್​ಡಿ ಬಡ್ಡಿ ಹೆಚ್ಚಿಸಿದ ಎಸ್​ಬಿಐ, ಇಲ್ಲಿದೆ ಪರಿಷ್ಕೃತ ಬಡ್ಡಿ ದರ ಮಾಹಿತಿ
ಸಾಂದರ್ಭಿಕ ಚಿತ್ರ
Follow us
| Updated By: ಗಣಪತಿ ಶರ್ಮ

Updated on: Oct 15, 2022 | 6:00 PM

ನವದೆಹಲಿ: 2 ಕೋಟಿ ರೂಪಾಯಿಗಿಂತ ಕಡಿಮೆ ಮೊತ್ತದ ಸ್ಥಿರ ಠೇವಣಿಗಳ (FDs) ಬಡ್ಡಿ ದರವನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 20 ಮೂಲಾಂಶಗಳ ವರೆಗೆ ಹೆಚ್ಚಿಸಿದೆ. ಪರಿಷ್ಕೃತ ಬಡ್ಡಿ ದರ ಇಂದಿನಿಂದಲೇ (ಅಕ್ಟೋಬರ್ 15) ಜಾರಿಗೆ ಬರಲಿದೆ. ಎಲ್ಲ ಅವಧಿಯ ಸ್ಥಿರ ಠೇವಣಿಗಳ ಬಡ್ಡಿ ದರವನ್ನೂ ಹೆಚ್ಚಿಸಲಾಗಿದೆ. ಇದಲ್ಲದೆ, ಹಿರಿಯ ನಾಗರಿಕರು ಹೆಚ್ಚಿನದ ಬಡ್ಡಿ ಪಡೆಯಲಿದ್ದಾರೆ. 2 ಕೋಟಿ ರೂಪಾಯಿಗಿಂತ ಕಡಿಮೆ ಮೊತ್ತದ ಸ್ಥಿರ ಠೇವಣಿಗಳ ಪೈಕಿ 7ರಿಂದ 45 ದಿನಗಳ ಅವಧಿಯ ಠೇವಣಿಯ ಬಡ್ಡಿ ದರವನ್ನು ಶೇಕಡಾ 3ಕ್ಕೆ ಹೆಚ್ಚಿಸಲಾಗಿದೆ. ಹಿರಿಯ ನಾಗರಿಕರಿಗೆ ಶೇಕಡಾ 3.5ರ ಬಡ್ಡಿ ದರ ನಿಗದಿಪಡಿಸಲಾಗಿದೆ.

46ರಿಂದ 179 ದಿನಗಳ ಅವಧಿಯ ಸ್ಥಿರ ಠೇವಣಿಗೆ ಪರಿಷ್ಕೃತ ದರದ ಪ್ರಕಾರ ಶೇಕಡಾ 4ರ ಬಡ್ಡಿ ದೊರೆಯಲಿದೆ. ಹಿರಿಯ ನಾಗರಿಕರಿಗೆ ಇದು ಶೇಕಡಾ 4.5 ಆಗಿರಲಿದೆ. 180 ಮತ್ತು 210 ದಿನಗಳ ನಡುವಣ ಅವಧಿಯಲ್ಲಿ ಮೆಚೂರ್ ಆಗುವ ಸ್ಥಿರ ಠೇವಣಿಯ ಬಡ್ಡಿ ದರವನ್ನು ಕ್ರಮವಾಗಿ ಶೇಕಡಾ 4.65 ಹಾಗೂ ಶೇಕಡಾ 5.15ರಷ್ಟು ಹೆಚ್ಚಿಸಲಾಗಿದೆ.

ಮೂರು ವರ್ಷ ಮೇಲ್ಪಟ್ಟ ಹಾಗೂ ಐದು ವರ್ಷಕ್ಕಿಂತ ಮೊದಲು ಅವಧಿ ಪೂರೈಸುವ ಸ್ಥಿರ ಠೇವಣಿ ಬಡ್ಡಿ ದರವನ್ನು ಶೇಕಡಾ 5.60ಯಿಂದ 5.80ಕ್ಕೆ ಹೆಚ್ಚಿಸಲಾಗಿದೆ. ಹಿರಿಯ ನಾಗರಿಕರಿಗೆ ಇದನ್ನು ಶೇಕಡಾ 6.10ರಿಂದ 6.30ಕ್ಕೆ ಹೆಚ್ಚಿಸಲಾಗಿದೆ.

ಇದನ್ನೂ ಓದಿ
Image
ಕೇವಲ 31 ಪೈಸೆ ಸಾಲ ಉಳಿಸಿಕೊಂಡಿದ್ದ ಗುಜರಾತ್ ರೈತನಿಗೆ ಸಾಲ ತೀರಿಸಿದ ಪತ್ರ ನೀಡಲು ನಿರಾಕರಿಸಿದ SBI, ಛೀಮಾರಿ ಹಾಕಿದ ಹೈಕೋರ್ಟ್​
Image
SBI Home Loans: ನಿಮ್ಮ CIBIL ಸ್ಕೋರ್ ಆಧರಿಸಿ ಈ ಹಬ್ಬದ ಋತುವಿನಲ್ಲಿ SBI ಅಗ್ಗದ ಗೃಹ ಸಾಲ ನೀಡುತ್ತಿದೆ
Image
Bank Interest: ಬಡ್ಡಿದರ ಹೆಚ್ಚಿಸಿದ ಐಸಿಐಸಿಐ ಬ್ಯಾಂಕ್, ಪಿಎನ್​ಬಿ, ಬ್ಯಾಂಕ್ ಆಫ್ ಬರೋಡ, ಕೆನರಾ ಬ್ಯಾಂಕ್

ಇದನ್ನೂ ಓದಿ: HDFC Bank Net Profit: ಎಚ್​ಡಿಎಫ್​ಸಿ ಬ್ಯಾಂಕ್​ ನಿವ್ವಳ ಲಾಭದಲ್ಲಿ ಭಾರಿ ಜಿಗಿತ

ಐದು ವರ್ಷ ಹಾಗೂ ಅದಕ್ಕಿಂತ ಹೆಚ್ಚಿನ ಅವಧಿಯ ಸಾಲಗಳ ಬಡ್ಡಿ ದರವನ್ನೂ ಶೇಕಡಾ 5.65ರಿಂದ 5.85ಕ್ಕೆ ಹೆಚ್ಚಿಸಲಾಗಿದೆ. ಹಿರಿಯ ನಾಗರಿಕರ ಬಡ್ಡಿ ದರವನ್ನು ಶೇಕಡಾ 6.45ರಿಂದ 6.65ಕ್ಕೆ ಹೆಚ್ಚಿಸಲಾಗಿದೆ ಎಂದು ಬ್ಯಾಂಕ್​ ತಿಳಿಸಿದೆ.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್​ಬಿಐ) ರೆಪೊ ದರ ಹೆಚ್ಚಿಸಿದಾಗಲೆಲ್ಲ ಸಾಮಾನ್ಯವಾಗಿ ಬ್ಯಾಂಕ್​ಗಳು ಮತ್ತು ಹಣಕಾಸು ಸಂಸ್ಥೆಗಳು ಬಡ್ಡಿ ದರ ಪರಿಷ್ಕರಿಸುತ್ತವೆ. ಅದೇ ರೀತಿ ಎಸ್​ಬಿಐ ಕೂಡ ಸ್ಥಿರ ಠೇವಣಿ ಮತ್ತು ಸಾಲದ ಬಡ್ಡಿ ದರ ಪರಿಷ್ಕರಣೆ ಮಾಡಿದೆ. ಸೆಪ್ಟೆಂಬರ್ 30ರಂದು ಪ್ರಕಟಿಸಿದ್ದ ಹಣಕಾಸು ನೀತಿಯಲ್ಲಿ ಆರ್​ಬಿಐ ರೆಪೊ ದರವನ್ನು ಶೇಕಡಾ 0.50 ಹೆಚ್ಚಿಸಿತ್ತು. ಇದರೊಂದಿಗೆ ಪರಿಷ್ಕೃತ ರೆಪೊ ದರ ಶೇಕಡಾ 5.9 ಆಗಿತ್ತು. ಇದಕ್ಕೂ ಮುನ್ನ ಸತತ 3 ಬಾರಿ ಆರ್​ಬಿಐ ರೆಪೊ ದರ ಹೆಚ್ಚಳ ಮಾಡಿತ್ತು. ಆವಾಗಲೂ ಪ್ರಮುಖ ಬ್ಯಾಂಕ್​ಗಳು ಬಡ್ಡಿ ದರವನ್ನು ಹೆಚ್ಚಿಸಿದ್ದವು.

ಇನ್ನಷ್ಟು ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?