AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಮಿಕಾನ್ ಇಂಡಿಯಾ 2026: 50,000ಕ್ಕೂ ಹೆಚ್ಚು ನೋಂದಣಿ, 600ಕ್ಕೂ ಹೆಚ್ಚು ಕಂಪನಿಗಳು ಭಾಗಿ; ಗಮನ ಸೆಳೆದ ಕರ್ನಾಟಕ ಪೆವಿಲಿಯನ್

ಭಾರತದಲ್ಲಿ ನಡೆದ ಸೆಮಿಕಾನ್ ಇಂಡಿಯಾ 2026 ಕಾರ್ಯಕ್ರಮವು ಜಾಗತಿಕ ಮಟ್ಟದಲ್ಲಿ ಸದ್ದು ಮಾಡಿದ್ದು, ದೇಶ ವಿದೇಶಗಳಿಂದ ಪರಿಣಿತರನ್ನು ಆಕರ್ಷಿಸಿದೆ. ವಿಶ್ವಾದ್ಯಂತ ಸೆಮಿಕಂಡಕ್ಟರ್ ಕ್ಷೇತ್ರದ 600ಕ್ಕೂ ಹೆಚ್ಚು ಸಂಸ್ಥೆಗಳು ಪಾಲ್ಗೊಂಡವು. 50,000ಕ್ಕೂ ಅಧಿಕ ನೊಂದಣಿಗಳು ದಾಖಲಾಗಿವೆ. ದೆಹಲಿ ಸಮೀಪದ ಯಶೋಭೂಮಿಯಲ್ಲಿ ಸೆ. 17ರಿಂದ 19ವರೆಗೆ ಸೆಮಿಕಾನ್ ಕಾರ್ಯಕ್ರಮ ನಡೆಯಿತು.

ಸೆಮಿಕಾನ್ ಇಂಡಿಯಾ 2026: 50,000ಕ್ಕೂ ಹೆಚ್ಚು ನೋಂದಣಿ, 600ಕ್ಕೂ ಹೆಚ್ಚು ಕಂಪನಿಗಳು ಭಾಗಿ; ಗಮನ ಸೆಳೆದ ಕರ್ನಾಟಕ ಪೆವಿಲಿಯನ್
ಸೆಮಿಕಾನ್ ಇಂಡಿಯಾ 2026Image Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 20, 2026 | 4:55 PM

Share

ನವದೆಹಲಿ, ಸೆಪ್ಟೆಂಬರ್ 20: ಗ್ರೇಟರ್ ನೋಯ್ಡಾದ ಯಶೋಭೂಮಿ ಕನ್ವೆನ್ಷನ್ ಹಾಲ್​ನಲ್ಲಿ ನಿನ್ನೆ (ಸೆ. 19) ಮುಕ್ತಾಯಗೊಂಡ ಮೂರು ದಿನಗಳ ಸೆಮಿಕಾನ್ ಇಂಡಿಯಾ (Semicon India 2026) ಕಾರ್ಯಕ್ರಮ ವಿಶ್ವದ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಸೆಪ್ಟೆಂಬರ್ 17ರಿಂದ 19ರವರೆಗೆ ನಡೆದ ಈ ಕಾರ್ಯಕ್ರಮವು 600ಕ್ಕೂ ಹೆಚ್ಚು ಸಂಸ್ಥೆಗಳು ಹಾಗೂ 50,000ಕ್ಕೂ ಅಧಿಕ ನೊಂದಣಿಗಳನ್ನು ಆಕರ್ಷಿಸಿದೆ. ಜಾಗತಿಕ ಮಟ್ಟದ ಸೆಮಿಕಂಡಕ್ಟರ್ ಸಮಾವೇಶವಾಗಿ ಮಿಂಚುವಲ್ಲಿ ಯಶಸ್ವಿಯಾಗಿದೆ.

ಜಾಗತಿಕ ಸೆಮಿಕಂಡಕ್ಟರ್ ಹಬ್: ಭಾರತವನ್ನು ಜಾಗತಿಕ ಮಟ್ಟದ ಸೆಮಿಕಂಡಕ್ಟರ್ ವಿನ್ಯಾಸ, ಉತ್ಪಾದನೆ ಮತ್ತು ಪ್ಯಾಕೇಜಿಂಗ್ ಕೇಂದ್ರವನ್ನಾಗಿ ರೂಪಿಸುವ ಸರ್ಕಾರದ ಪ್ರಯತ್ನಕ್ಕೆ ಈ ಪ್ರದರ್ಶನವು ಬಲವಾದ ವೇದಿಕೆ ಒದಗಿಸಿದೆ. ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಜಾಗತಿಕವಾಗಿ ಮುಂಚೂಣಿಯಲ್ಲಿರುವ ಅಪ್ಲೈಡ್ ಮೆಟೀರಿಯಲ್ಸ್ (Applied Materials), ಎಎಂಡಿ (AMD), ಎನ್‌ವಿಡಿಯಾ (Nvidia), ಮತ್ತು ಮೈಕ್ರಾನ್ (Micron) ಸೇರಿದಂತೆ ನೂರಾರು ಪ್ರಮುಖ ಪೂರೈಕೆದಾರರು ಹಾಗೂ ತಂತ್ರಜ್ಞಾನ ಸಂಸ್ಥೆಗಳು ತಮ್ಮ ಹೊಸ ಪರಿಕಲ್ಪನೆ ಮತ್ತು ಉತ್ಪನ್ನಗಳನ್ನು ಪ್ರದರ್ಶಿಸಿವೆ.

ಇದನ್ನೂ ಓದಿ: ಎಐನಿಂದ ವಿಶ್ವವಿನಾಶವಾಗುತ್ತಾ? ಚಾನ್ಸೇ ಇಲ್ಲ ಎನ್ನುತ್ತಾರೆ ಎನ್​ವಿಡಿಯಾ ಮುಖ್ಯಸ್ಥ ಜೆನ್ಸೆನ್ ಹುವಾಂಗ್

ಭಾರತದ ಪ್ರಗತಿ: ‘ಇಂಡಿಯಾ ಸೆಮಿಕಂಡಕ್ಟರ್ ಮಿಷನ್’ (ISM) ಅಡಿಯಲ್ಲಿ ಘೋಷಿಸಲಾದ ಪ್ರಮುಖ ಯೋಜನೆಗಳು ಕಾರ್ಯಗತಗೊಳ್ಳುತ್ತಿದ್ದು, ಸ್ಥಳೀಯ ಪೂರೈಕೆ ಸರಪಳಿ (Supply Chain) ಮತ್ತು ಇಕೋಸಿಸ್ಟಮ್ ಅಭಿವೃದ್ಧಿಗೆ ಇದು ಹೊಸ ವೇಗ ನೀಡಿದೆ.

ಈ ಬೃಹತ್ ಸಮಾವೇಶವು ಭಾರತದಲ್ಲಿ ಸೆಮಿಕಂಡಕ್ಟರ್ ಉತ್ಪಾದನೆ ಮತ್ತು ಉದ್ಯೋಗ ಸೃಷ್ಟಿಗೆ ಹೊಸ ಹೂಡಿಕೆಗಳನ್ನು ಆಕರ್ಷಿಸಲು ನೆರವಾಗಲಿದೆ ಎಂದು ಉದ್ಯಮಿಗಳು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಭಾರತ ಮುಂದಿನ 20 ವರ್ಷದಲ್ಲಿ 38 ಟ್ರಿಲಿಯನ್ ಡಾಲರ್ ಆರ್ಥಿಕತೆಯ ದೇಶವಾಗಲಿದೆ: ಅಜಿತ್ ದೋವಲ್

ಸೆಮಿಕಾನ್​ನಲ್ಲಿ ಗಮನ ಸೆಳೆದ ಕರ್ನಾಟಕ

ಸೆಮಿಕಾನ್ ಇಂಡಿಯಾ 2026 ಕಾರ್ಯಕ್ರಮದಲ್ಲಿ 6 ದೇಶಗಳು ಹಾಗು ಭಾರತದ 12 ರಾಜ್ಯಗಳ ಪೆವಿಲಿಯನ್​ಗಳನ್ನು ಸ್ಥಾಪಿಸಲಾಗಿತ್ತು. ಕರ್ನಾಟಕ, ತಮಿಳುನಾಡು, ಗುಜರಾತ್, ಕೇರಳ, ಉತ್ತರಪ್ರದೇಶ, ಅಸ್ಸಾಂ, ಆಂಧ್ರ, ತೆಲಂಗಾಣ ಮೊದಲಾದ ರಾಜ್ಯಗಳು ಪಾಲ್ಗೊಡಿದ್ದವು. ಕರ್ನಾಟಕದ ಪೆವಿಲಿಯನ್​ನಲ್ಲಿ ಚಿಪ್ ಡಿಸೈನ್, ಆರ್ ಅಂಡ್ ಡಿ, ತಂತ್ರಜ್ಞಾನ ಆಧಾರಿತ ಬೆಳವಣಿಗೆಯಲ್ಲಿ ರಾಜ್ಯ ಎಷ್ಟು ಮುಂದಿದೆ ಎಂಬುದನ್ನು ಪ್ರದರ್ಶಿಸಲಾಗಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!