Closing bell: ಷೇರುಪೇಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ 465 ಪಾಯಿಂಟ್ಸ್, ನಿಫ್ಟಿ 138 ಪಾಯಿಂಟ್ಸ್ ಕುಸಿತ

ಭಾರತದ ಷೇರುಪೇಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಮೇ 4, 2021ರ ಮಂಗಳವಾರದಂದು ಇಳಿಕೆ ದಾಖಲಿಸಿವೆ. ಯಾವ ಪ್ರಮುಖ ಕಂಪೆನಿ ಷೇರು ಎಷ್ಟು ಏರಿದೆ ಹಾಗೂ ಇಳಿದಿದೆ ಎಂಬುದನ್ನು ತಿಳಿಯಿರಿ.

Closing bell: ಷೇರುಪೇಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ 465 ಪಾಯಿಂಟ್ಸ್, ನಿಫ್ಟಿ 138 ಪಾಯಿಂಟ್ಸ್ ಕುಸಿತ
ಲಾಭದ ನಗದು
Follow us
Srinivas Mata
|

Updated on: May 04, 2021 | 4:05 PM

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಮಂಗಳವಾರದಂದು (ಮೇ 4, 2021) ಇಳಿಕೆ ದಾಖಲಿಸಿವೆ. ಸೆನ್ಸೆಕ್ಸ್ ಸೂಚ್ಯಂಕವು 465.01 ಪಾಯಿಂಟ್ ಇಳಿಕೆಯಾಗಿ, 48,253.51 ಪಾಯಿಂಟ್​ಗಳಲ್ಲಿ ದಿನದ ವ್ಯವಹಾರವನ್ನು ಮುಕ್ತಾಯ ಮಾಡಿದೆ. ಇನ್ನು ಎನ್​ಎಸ್​ಇ ನಿಫ್ಟಿ 137.70 ಪಾಯಿಂಟ್ ಕೆಳಗಿಳಿದು 14,496.50 ಪಾಯಿಂಟ್​ನೊಂದಿಗೆ ವಹಿವಾಟು ಚುಕ್ತಾ ಮಾಡಿದೆ. ಬ್ಯಾಂಕ್ ನಿಫ್ಟಿಯ ವಿಚಾರಕ್ಕೆ ಬಂದರೆ, 195.50 ಪಾಯಿಂಟ್​ಗಳ ಕುಸಿತ ದಾಖಲಿಸಿ, 32,270.30 ಪಾಯಿಂಟ್​ನಲ್ಲಿದೆ. ಈ ದಿನದ ವಹಿವಾಟಿನಲ್ಲಿ 1374 ಕಂಪೆನಿಗಳ ಷೇರು ಏರಿಕೆ ದಾಖಲಿಸಿದರೆ, 1534 ಕಂಪೆನಿ ಷೇರುಗಳು ಇಳಿಕೆ ಕಂಡವು. 169 ಕಂಪೆನಿಯ ಷೇರುಗಳಲ್ಲಿ ಯಾವುದೇ ಬದಲಾವಣೆ ಆಗಲಿಲ್ಲ.

ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್​ಗಳನ್ನು ಹೊರತುಪಡಿಸಿದಂತೆ ಎಲ್ಲ ವಲಯದ ಸೂಚ್ಯಂಕಗಳು ಇಳಿಕೆಯಲ್ಲಿ ದಿನಾಂತ್ಯ ಕಂಡಿವೆ. ಬಿಎಸ್​ಇ ಮಿಡ್​ಕ್ಯಾಪ್ ಮತ್ತು ಸ್ಮಾಲ್​ಕ್ಯಾಪ್ ಸೂಚ್ಯಂಕಗಳೂ ನಷ್ಟವನ್ನು ಅನುಭವಿಸಿವೆ. ಇಂದಿನ ವಹಿವಾಟಿನಲ್ಲಿ ಫಾರ್ಮಾಸ್ಯುಟಿಕಲ್ಸ್, ಲೋಹಗಳು ಮತ್ತು ವಾಹನ ವಲಯದ ಷೇರುಗಳು ಸೂಚ್ಯಂಕಗಳು ಕುಸಿತ ಕಾಣುವುದಕ್ಕೆ ಕಾರಣ ಆದವು.

ನಿಫ್ಟಿಯಲ್ಲಿ ಏರಿಕೆ ಕಂಡ ಷೇರುಗಳು ಮತ್ತು ಪರ್ಸೆಂಟ್ ಎಸ್​ಬಿಐ ಲೈಫ್ ಇನ್ಷೂರೆನ್ಸ್ ಶೇ 2.53 ಒಎನ್​ಜಿಸಿ ಶೇ 1.81 ಬಿಪಿಸಿಎಲ್ ಶೇ 1.31 ಬಜಾಜ್ ಫೈನಾನ್ಸ್ ಶೇ 1.16 ಅದಾನಿ ಪೋರ್ಟ್ಸ್ ಶೇ 0.97

ನಿಫ್ಟಿಯಲ್ಲಿ ಇಳಿಕೆ ಕಂಡ ಷೇರುಗಳು ಮತ್ತು ಪರ್ಸೆಂಟ್ ಟಾಟಾ ಕನ್ಸ್ಯೂಮರ್ ಪಾಡಕ್ಟ್ ಶೇ -4.70 ಸಿಪ್ಲಾ ಶೇ -3.49 ಡಾ. ರೆಡ್ಡೀಸ್ ಲ್ಯಾಬ್ಸ್ ಶೇ -2.29 ಡಿವೀಸ್ ಲ್ಯಾಬ್ಸ್ ಶೇ -2.18 ರಿಲಯನ್ಸ್ ಇಂಡಸ್ಟ್ರೀಸ್ ಶೇ -2.17

ಇದನ್ನೂ ಓದಿ: 10,000 ರೂಪಾಯಿ ಹೂಡಿದವರಿಗೆ 20 ವರ್ಷದಲ್ಲಿ 2 ಕೋಟಿ ಮಾಡಿಕೊಟ್ಟ ಕಂಪೆನಿಯ ಕಥೆಯಿದು

(Indian stock market index sensex tank 465 points and nifty 138 points on May 4, 2021. Here are the nifty top gainers and losers)

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್