Closing Bell: ಸೆನ್ಸೆಕ್ಸ್ 462, ನಿಫ್ಟಿ 143 ಪಾಯಿಂಟ್ಸ್ ಏರಿಕೆ; ಮಹೀಂದ್ರಾ ಅಂಡ್ ಮಹೀಂದ್ರಾ 44 ರೂ. ಗಳಿಕೆ

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಹಾಗೂ ನಿಫ್ಟಿ ಜೂನ್ 24ನೇ ತಾರೀಕಿನ ಶುಕ್ರವಾರದಂದು ಏರಿಕೆ ದಾಖಲಿಸಿವೆ. ಪ್ರಮುಖವಾಗಿ ಏರಿಕೆ, ಇಳಿಕೆ ದಾಖಲಿಸಿದ ಷೇರುಗಳ ವಿವರ ಇಲ್ಲಿದೆ.

Closing Bell: ಸೆನ್ಸೆಕ್ಸ್ 462, ನಿಫ್ಟಿ 143 ಪಾಯಿಂಟ್ಸ್ ಏರಿಕೆ; ಮಹೀಂದ್ರಾ ಅಂಡ್ ಮಹೀಂದ್ರಾ 44 ರೂ. ಗಳಿಕೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on:Jun 24, 2022 | 4:40 PM

ಭಾರತದ ಷೇರು ಮಾರುಕಟ್ಟೆ (Stock Market) ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಜೂನ್ 24ನೇ ತಾರೀಕಿನ ಶುಕ್ರವಾರದಂದು ಏರಿಕೆಯಲ್ಲಿ ಕೊನೆಗೊಂಡಿವೆ. ನಿಫ್ಟಿ 15,700 ಪಾಯಿಂಟ್ಸ್​ ಬಳಿ ಇದೆ. ದಿನಾಂತ್ಯಕ್ಕೆ ಸೆನ್ಸೆಕ್ಸ್ 462.26 ಪಾಯಿಂಟ್ಸ್ ಅಥವಾ ಶೇ 0.88ರಷ್ಟು ಏರಿಕೆಯಾಗಿ 52,727.98 ಪಾಯಿಂಟ್ಸ್​ನಲ್ಲಿ ವ್ಯವಹಾರ ಮುಗಿಸಿದರೆ, ನಿಫ್ಟಿ 142.60 ಪಾಯಿಂಟ್ಸ್ ಅಥವಾ ಶೇ 0.92ರಷ್ಟು ಮೇಲೇರಿ 15,699.30 ಪಾಯಿಂಟ್ಸ್​ನಲ್ಲಿ ವಹಿವಾಟು ಚುಕ್ತಾ ಮಾಡಿತು. ಇಂದಿನ ವಹಿವಾಟಿನಲ್ಲಿ 2332 ಕಂಪೆನಿಯ ಷೇರುಗಳು ಗಳಿಕೆಯನ್ನು ಕಂಡರೆ, 899 ಕಂಪೆನಿ ಷೇರುಗಳು ಇಳಿಕೆ ಕಂಡವು. ಇನ್ನು 133 ಕಂಪೆನಿಯ ಷೇರುಗಳಲ್ಲಿ ಯಾವುದೇ ಬದಲಾವಣೆ ಆಗಲಿಲ್ಲ.

ವಲಯವಾರು ಗಮನಿಸುವುದಾದರೆ ವಾಹನ, ತೈಲ ಮತ್ತು ಅನಿಲ, ವಿದ್ಯುತ್, ಬ್ಯಾಂಕ್, ಲೋಹ ಮತ್ತು ಎಫ್​ಎಂಸಿಜಿ ಸೂಚ್ಯಂಕಗಳು ತಲಾ ಶೇ 1ರಷ್ಟು ಹೆಚ್ಚಳ ಕಂಡವು. ಆದರೆ ಮಾಹಿತಿ ತಂತ್ರಜ್ಞಾನ ವಲಯದ ಕೆಲವು ಷೇರುಗಳಲ್ಲಿ ಕುಸಿತ ಕಂಡುಬಂತು. ಬಿಎಸ್​ಇ ಮಿಡ್​ಕ್ಯಾಪ್ ಮತ್ತು ಸ್ಮಾಲ್​ಕ್ಯಾಪ್ ಸೂಚ್ಯಂಕಗಳು ತಲಾ ಶೇ 1ರಷ್ಟು ಗಳಿಕೆಯನ್ನು ಕಂಡವು.

ನಿಫ್ಟಿಯಲ್ಲಿ ಏರಿಕೆ ಕಂಡ ಷೇರುಗಳು ಮತ್ತು ಶೇಕಡಾವಾರು ಪ್ರಮಾಣ

ಮಹೀಂದ್ರಾ ಅಂಡ್ ಮಹೀಂದ್ರಾ ಶೇ 4.32

ಹೀರೋ ಮೋಟೋಕಾರ್ಪ್ ಶೇ 3.21

ಇಂಡಸ್​ಇಂಡ್​ ಬ್ಯಾಂಕ್ ಶೇ 2.75

ಬಜಾಜ್ ಫೈನಾನ್ಸ್ ಶೇ 2.56

ಹಿಂದೂಸ್ತಾನ್ ಯುನಿಲಿವರ್ ಶೇ 2.28

ನಿಫ್ಟಿಯಲ್ಲಿ ಇಳಿಕೆ ಕಂಡ ಷೇರುಗಳು ಮತ್ತು ಶೇಕಡಾವಾರು ಪ್ರಮಾಣ

ಟೆಕ್ ಮಹೀಂದ್ರಾ ಶೇ -1.00

ಇನ್ಫೋಸಿಸ್ ಶೇ -0.78

ಟಿಸಿಎಸ್ ಶೇ -0.47

ಎಚ್​ಸಿಎಲ್​ ಟೆಕ್ ಶೇ -0.47

ಕೋಲ್ ಇಂಡಿಯಾ ಶೇ -0.47

ಇದನ್ನೂ ಓದಿ: Stock Market Investment Tips: ಷೇರು ಮಾರುಕಟ್ಟೆ ಹೂಡಿಕೆಯ ಆರಂಭ ಹಂತದಲ್ಲಿ ಇರುವವರಿಗೆ 5 ಟಿಪ್ಸ್

Published On - 4:40 pm, Fri, 24 June 22

ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ