AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Closing Bell: ಷೇರುಪೇಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಭರ್ಜರಿ ಏರಿಕೆ; ಟೈಟನ್ ಕಂಪೆನಿ ಗಳಿಕೆ

ಭಾರತೀಯ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಜೂನ್ 21ನೇ ತಾರೀಕಿನ ಮಂಗಳವಾರದಂದು ಭಾರೀ ಏರಿಕೆ ದಾಖಲಿಸಿವೆ.

Closing Bell: ಷೇರುಪೇಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಭರ್ಜರಿ ಏರಿಕೆ; ಟೈಟನ್ ಕಂಪೆನಿ ಗಳಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 21, 2022 | 5:30 PM

Share

ಭಾರತದ ಷೇರು ಮಾರುಕಟ್ಟೆ (Stock Market) ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಜೂನ್ 21ನೇ ತಾರೀಕಿನ ಮಂಗಳವಾರದಂದು ಭಾರೀ ಏರಿಕೆ ದಾಖಲಿಸಿವೆ. ದಿನಾಂತ್ಯಕ್ಕೆ ಸೆನ್ಸೆಕ್ಸ್ 934.23 ಪಾಯಿಂಟ್ಸ್ ಅಥವಾ ಶೇ 1.81ರಷ್ಟು ಹೆಚ್ಚಳವಾಗಿ, 52,532.07 ಪಾಯಿಂಟ್ಸ್​ನೊಂದಿಗೆ ಮುಕ್ತಾಯ ಕಂಡಿದೆ. ಇನ್ನು ನಿಫ್ಟಿ 288.60 ಪಾಯಿಂಟ್ಸ್ ಅಥವಾ ಶೇ 1.88ರಷ್ಟು ಹೆಚ್ಚಳವಾಗಿ 15,638.80 ಪಾಯಿಂಟ್ಸ್​ನಲ್ಲಿ ವಹಿವಾಟು ಚುಕ್ತಾ ಮಾಡಿತು. ಇಂದಿನ ವಹಿವಾಟಿನಲ್ಲಿನ 2428 ಕಂಪೆನಿಯ ಷೇರುಗಳು ಏರಿಕೆಯನ್ನು ದಾಖಲಿಸಿದರೆ, 819 ಕಂಪೆನಿಯ ಷೇರುಗಳು ಇಳಿಕೆ ಕಂಡವು ಮತ್ತು 125 ಕಂಪೆನಿಯ ಷೇರುಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಲಿಲ್ಲ.

ಎಲ್ಲ ವಲಯದ ಸೂಚ್ಯಂಕಗಳು ಗಳಿಕೆಯನ್ನು ದಾಖಲಿಸಿದವು. ಮಾಹಿತಿ ತಂತ್ರಜ್ಞಾನ, ಲೋಹ, ತೈಲ ಮತ್ತು ಅನಿಲ, ವಿದ್ಯುತ್, ರಿಯಾಲ್ಟಿ ಹಾಗೂ ಪಿಎಸ್​ಯು ಬ್ಯಾಂಕ್ ಸೂಚ್ಯಂಕಗಳು ಶೇ 3ರಿಂದ ಶೇ 6ರಷ್ಟು ಏರಿಕೆ ದಾಖಲಿಸಿದವು. ಇನ್ನು ಬಿಎಸ್​ಇ ಮಿಡ್​ಕ್ಯಾಪ್ ಶೇ 2.4ರಷ್ಟು ಮೇಲೇರಿದರೆ, ಸ್ಮಾಲ್​ಕ್ಯಾಪ್ ಶೇ 3ರಷ್ಟು ಹೆಚ್ಚಳವಾಯಿತು.

ಅಮೆರಿಕ ಡಾಲರ್​ ವಿರುದ್ಧ ರೂಪಾಯಿ ಮೌಲ್ಯ 10 ಪೈಸೆಯಷ್ಟು ಕುಸಿಯಿತು. ಸೋಮವಾರ ದಿನದ ಕೊನೆಗೆ 77.98 ಇದ್ದದ್ದು, ಇವತ್ತಿಗೆ 78.08ರಲ್ಲಿ ಮುಕ್ತಾಯ ಕಂಡಿತು.

ನಿಫ್ಟಿಯಲ್ಲಿ ಏರಿಕೆ ಕಂಡ ಪ್ರಮುಖ ಷೇರುಗಳು ಮತ್ತು ಶೇಕಡಾವಾರು ಪ್ರಮಾಣ

ಟೈಟನ್ ಶೇ 5.93

ಹಿಂಡಾಲ್ಕೋ ಶೇ 5.52

ಜೆಎಸ್​ಡಬ್ಲ್ಯು ಸ್ಟೀಲ್ ಶೇ 4.70

ಕೋಲ್ ಇಂಡಿಯಾ ಶೇ 4.50

ಅದಾನಿ ಪೋರ್ಟ್ಸ್ ಶೇ 3.91

ನಿಫ್ಟಿಯಲ್ಲಿ ಇಳಿಕೆ ಕಂಡ ಪ್ರಮುಖ ಷೇರುಗಳು ಮತ್ತು ಶೇಕಡಾವಾರು ಪ್ರಮಾಣ

ಅಪೋಲೋ ಹಾಸ್ಪಿಟಲ್ ಶೇ -0.09

ಇನ್ನಷ್ಟು ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: Stock Market Investment Tips: ಷೇರು ಮಾರುಕಟ್ಟೆ ಹೂಡಿಕೆಯ ಆರಂಭ ಹಂತದಲ್ಲಿ ಇರುವವರಿಗೆ 5 ಟಿಪ್ಸ್

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್