AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Closing Bell: ಸೆನ್ಸೆಕ್ಸ್, ನಿಫ್ಟಿ ಗಳಿಕೆ; ಮಾರುತಿ ಸುಜುಕಿ ಷೇರು 488 ರೂಪಾಯಿ ಏರಿಕೆ

ಭಾರತದ ಷೇರುಪೇಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಜೂನ್ 23ನೇ ತಾರೀಕಿನ ಗುರುವಾರದಂದು ಏರಿಕೆ ದಾಖಲಾಗಿದೆ. ಪ್ರಮುಖವಾಗಿ ಏರಿಕೆ, ಇಳಿಕೆ ದಾಖಲಿಸಿದ ಷೇರುಗಳ ವಿವರ ಇಲ್ಲಿದೆ.

Closing Bell: ಸೆನ್ಸೆಕ್ಸ್, ನಿಫ್ಟಿ ಗಳಿಕೆ; ಮಾರುತಿ ಸುಜುಕಿ ಷೇರು 488 ರೂಪಾಯಿ ಏರಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 23, 2022 | 5:32 PM

Share

ಭಾರತದ ಷೇರು ಮಾರುಕಟ್ಟೆ (Stock Market) ಸೂಚ್ಯಂಕಗಳಾದ ಬಿಎಸ್​ಇ ಸೆನ್ಸೆಕ್ಸ್ ಮತ್ತು ನಿಫ್ಟಿ ಜೂನ್ 23ನೇ ತಾರೀಕಿನ ಗುರುವಾರದಂದು ಏರಿಕೆ ಕಂಡಿದೆ. ಭಾರೀ ಏರಿಳಿತದಿಂದ ಕೂಡಿದ್ದ ಮಾರುಕಟ್ಟೆಯು ದಿನದ ಕೊನೆಗೆ ಪಾಸಿಟಿವ್ ಆಗಿ ಮುಕ್ತಾಯಗೊಂಡಿದೆ. ನಿಫ್ಟಿ 15,500 ಪಾಯಿಂಟ್ಸ್​ಗೂ ಮೇಲ್ಮಟ್ಟದಲ್ಲಿ ವಹಿವಾಟು ಚುಕ್ತಾ ಮಾಡಿದೆ. ಸೆನ್ಸೆಕ್ಸ್ 443.19 ಪಾಯಿಂಟ್ಸ್ ಅಥವಾ ಶೇ 0.86ರಷ್ಟು ಮೇಲೇರಿ 52,265.72 ಪಾಯಿಂಟ್ಸ್​ನಲ್ಲಿ ವ್ಯವಹಾರ ಮುಗಿಸಿದೆ. ಇನ್ನು ನಿಫ್ಟಿ 143.40 ಪಾಯಿಂಟ್ಸ್ ಅಥವಾ ಶ 0.93ರಷ್ಟು ಹೆಚ್ಚಳ ಕಂಡು 15,556.70 ಪಾಯಿಂಟ್ಸ್​ನೊಂದಿಗೆ ವಹಿವಾಟು ಚುಕ್ತಾ ಮಾಡಿದೆ. ಇಂದಿನ ವಹಿವಾಟಿನಲ್ಲಿ 2037ರಷ್ಟು ಕಂಪೆನಿತ ಷೇರುಗಳು ಏರಿಕೆ ದಾಖಲಿಸಿತು.

ಮತ್ತೊಂದು ಕಡೆ 1188 ಕಂಪೆನಿಯ ಷೇರುಗಳು ಇಳಿಕೆ ದಾಖಲಿಸಿದವು. 123 ಕಂಪೆನಿಯ ಷೇರುಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಲಿಲ್ಲ. ವಾಹನ ಸೂಚ್ಯಂಕ ಶೇ 4ರಷ್ಟು ಮೇಲೇರಿದರೆ, ಕ್ಯಾಪಿಟಲ್ ಗೂಡ್ಸ್, ಮಾಹಿತಿ ತಂತ್ರಜ್ಞಾನ, ಫಾರ್ಮಾ ಮತ್ತು ರಿಯಾಲ್ಟಿ ಸೂಚ್ಯಂಕಗಳು ತಲಾ ಶೇ 1ರಷ್ಟು ಏರಿಕೆ ದಾಖಲಿಸಿದವು.

ನಿಫ್ಟಿಯಲ್ಲಿ ಏರಿಕೆ ಕಂಡ ಪ್ರಮುಖ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ

ಮಾರುತಿ ಸುಜುಕಿ ಶೇ 6.27

ಹೀರೋ ಮೋಟೋಕಾರ್ಪ್ ಶೇ 5.93

ಐಷರ್ ಮೋಟಾರ್ಸ್ ಶೇ 5.87

ಮಹೀಂದ್ರಾ ಅಂಡ್ ಮಹೀಂದ್ರಾ ಶೇ 4.46

ಬಜಾಜ್ ಆಟೋ ಶೇ 4.10

ನಿಫ್ಟಿಯಲ್ಲಿ ಇಳಿಕೆ ಕಂಡ ಪ್ರಮುಖ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ

ರಿಲಯನ್ಸ್ ಶೇ -1.62

ಕೋಲ್ ಇಂಡಿಯಾ ಶೇ -1.23

ಪವರ್​ ಗ್ರಿಡ್ ಕಾರ್ಪೊರೇಷನ್ ಶೇ -1.00

ಎನ್​ಟಿಪಿಸಿ ಶೇ -0.84

ಗ್ರಾಸಿಮ್ ಶೇ -0.67

ಇದನ್ನೂ ಓದಿ: Warren Buffett: ಷೇರುಗಳಲ್ಲಿ ಹೂಡಿಕೆ ಮಾಡುವವರು ಹೂಡಿಕೆದಾರರ ಜಗದ್ಗುರು ವಾರೆನ್ ಬಫೆಟ್ ಮಾತುಗಳನ್ನೊಮ್ಮೆ ಕೇಳಿಸಿಕೊಳ್ಳಿ

Follow Us
TV9 Web
TV9 Web

TV9 Kannada

Read More
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!