Stock Market News: ಸೆನ್ಸೆಕ್ಸ್ 709 ಪಾಯಿಂಟ್ಸ್ ಜಿಗಿತ, ನಿಫ್ಟಿ 206 ಪಾಯಿಂಟ್ಸ್ ಏರಿಕೆ

2022-23ರ ಹೊಸ ಹಣಕಾಸು ವರ್ಷದ ಮೊದಲ ದಿನವಾದ ಏಪ್ರಿಲ್ 1ನೇ ತಾರೀಕಿನ ಶುಕ್ರವಾರದಂದು ಸೆನ್ಸೆಕ್ಸ್ 709 ಪಾಯಿಂಟ್ಸ್ ಹಾಗೂ ನಿಫ್ಟಿ 206 ಪಾಯಿಂಟ್ಸ್ ಏರಿಕೆ ದಾಖಲಿಸಿವೆ.

Stock Market News: ಸೆನ್ಸೆಕ್ಸ್ 709 ಪಾಯಿಂಟ್ಸ್ ಜಿಗಿತ, ನಿಫ್ಟಿ 206 ಪಾಯಿಂಟ್ಸ್ ಏರಿಕೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: Apr 01, 2022 | 4:55 PM

ಭಾರತದ ಷೇರುಪೇಟೆ (Stock Market) ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಏಪ್ರಿಲ್ 1ನೇ ತಾರೀಕಿನ ಶುಕ್ರವಾರದಂದು ಭರ್ಜರಿ ಏರಿಕೆಯನ್ನು ದಾಖಲಿಸಿವೆ. ಹೊಸ ಹಣಕಾಸು ವರ್ಷದ ಮೊದಲ ದಿನ ಸೆನ್ಸೆಕ್ಸ್ 708.18 ಪಾಯಿಂಟ್ಸ್ ಅಥವಾ ಶೇ 1.21ರಷ್ಟು ಹೆಚ್ಚಳ ಕಂಡು, 59,276.69 ಪಾಯಿಂಟ್ಸ್​ನೊಂದಿಗೆ ವಹಿವಾಟು ಮುಕ್ತಾಯಗೊಳಿಸಿತು. ಇತ್ತು ನಿಫ್ಟಿ ಸೂಚ್ಯಂಕವು 205.70 ಪಾಯಿಂಟ್ಸ್ ಅಥವಾ ಶೇ 1.18ರಷ್ಟು ಮೇಲೇರಿ 17,670.50 ಪಾಯಿಂಟ್ಸ್​ನೊಂದಿಗೆ ಈ ದಿನದ- ವಾರದ ವ್ಯವಹಾರವನ್ನು ಮುಗಿಸಿದೆ. ಇಂದಿನ ವಹಿವಾಟಿನಲ್ಲಿ 2564 ಕಂಪೆನಿಯ ಷೇರುಗಳು ಏರಿಕೆಯನ್ನು ಕಂಡರೆ, 645 ಕಂಪೆನಿಯ ಷೇರುಗಳು ಕುಸಿತ ಕಂಡಿವೆ. 84 ಕಂಪೆನಿಯ ಷೇರುಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಲಿಲ್ಲ.

ಎಲ್ಲ ವಲಯದ ಸೂಚ್ಯಂಕಗಳು ಏರಿಕೆಯಲ್ಲೇ ಮುಕ್ತಾಯ ಕಂಡಿವೆ. ವಾಹನ, ಬ್ಯಾಂಕ್, ತೈಲ ಮತ್ತು ಅನಿಲ, ರಿಯಾಲ್ಟಿ, ವಿದ್ಯುತ್ ಹಾಗೂ ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್​ಗಳ ಸೂಚ್ಯಂಕಗಳು ಶೇ 1ರಿಂದ 4ರಷ್ಟು ಮೇಲೇರಿವೆ. ಬಿಎಸ್​ಇ ಮಿಡ್​ಕ್ಯಾಪ್ ಮತ್ತು ಸ್ಮಾಲ್​ಕ್ಯಾಪ್​ ಸೂಚ್ಯಂಕಗಳು ತಲಾ ಶೇ 1ರಷ್ಟು ಹೆಚ್ಚಳ ಕಂಡಿವೆ.

ಎನ್​ಎಸ್​ಇಯಲ್ಲಿ ಏರಿಕೆ ಕಂಡ ಪ್ರಮುಖ ಷೇರುಗಳು ಮತ್ತು ಶೇಕಡಾವಾರು ಪ್ರಮಾಣ ಎನ್​ಟಿಪಿಸಿ ಶೇ 5.89 ಬಿಪಿಸಿಎಲ್ ಶೇ 4.19 ಪವರ್​ಗ್ರಿಡ್ ಕಾರ್ಪೊರೇಷನ್ ಶೇ 3.81 ಇಂಡಸ್​ಇಂಡ್ ಬ್ಯಾಂಕ್ ಶೇ 3.55 ಎಸ್​ಬಿಐ ಶೇ 2.97

ಎನ್​ಎಸ್​ಇಯಲ್ಲಿ ಇಳಿಕೆ ಕಂಡ ಪ್ರಮುಖ ಷೇರುಗಳು ಮತ್ತು ಶೇಕಡಾವಾರು ಪ್ರಮಾಣ ಹೀರೋ ಮೋಟೋಕಾರ್ಪ್ ಶೇ -2.35 ಟೆಕ್ ಮಹೀಂದ್ರಾ ಶೇ -0.82 ಎಸ್​ಬಿಐ ಲೈಫ್ ಇನ್ಷೂರೆನ್ಸ್ ಶೇ -0.72 ಸನ್​ ಫಾರ್ಮಾ ಶೇ -0.66 ಟೈಟನ್ ಕಂಪೆನಿ ಶೇ -0.60

ಇದನ್ನೂ ಓದಿ: Stock Market Investment Tips: ಷೇರು ಮಾರುಕಟ್ಟೆ ಹೂಡಿಕೆಯ ಆರಂಭ ಹಂತದಲ್ಲಿ ಇರುವವರಿಗೆ 5 ಟಿಪ್ಸ್

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ