Adani Group: ಹಿಂಡನ್​ಬರ್ಗ್ ಅಕ್ರಮದ ಆರೋಪಕ್ಕೆ ಅದಾನಿ ಸಮೂಹ ತತ್ತರ; ಒಂದೇ ದಿನ 46,000 ಕೋಟಿ ನಷ್ಟ

ಹಿಂಡನ್​ಬರ್ಗ್ ವರದಿ ಬೆನ್ನಲ್ಲೇ ಷೇರು ಮಾರುಕಟ್ಟೆಯಲ್ಲಿ ಅದಾನಿ ಸಮೂಹದ ಅಂಗ ಸಂಸ್ಥೆಗಳ ಷೇರು ಮೌಲ್ಯದಲ್ಲಿ ಭಾರೀ ಕುಸಿತವಾಗಿದೆ. ಪರಿಣಾಮವಾಗಿ ಅದಾನಿ ಸಮೂಹ 46,086 ಕೋಟಿ ರೂ. ಕಳೆದುಕೊಂಡಿದೆ.

Adani Group: ಹಿಂಡನ್​ಬರ್ಗ್ ಅಕ್ರಮದ ಆರೋಪಕ್ಕೆ ಅದಾನಿ ಸಮೂಹ ತತ್ತರ; ಒಂದೇ ದಿನ 46,000 ಕೋಟಿ ನಷ್ಟ
ಅದಾನಿ ಸಮೂಹImage Credit source: Reuters
Follow us
Ganapathi Sharma
|

Updated on:Jan 25, 2023 | 5:09 PM

ಮುಂಬೈ: ಅಕ್ರಮಕ್ಕೆ ಸಂಬಂಧಿಸಿ ಹಿಂಡನ್​ಬರ್ಗ್ ರಿಸರ್ಚ್​ (Hindenburg Research) ಆರೋಪ ಮಾಡಿದ ಬೆನ್ನಲ್ಲೇ ವಿಶ್ವದ ಅತ್ಯಂತ ಶ್ರೀಮಂತ ಉದ್ಯಮಿ ಗೌತಮ್ ಅದಾನಿ (Gautam Adani) ಒಡೆತನದ ಅದಾನಿ ಸಮೂಹ (Adani Group) ಕಂಪನಿಗಳ ಷೇರು ಮೌಲ್ಯದಲ್ಲಿ ಗಣನೀಯವಾಗಿ ಕುಸಿತ ಕಂಡುಬಂದಿದೆ. ಒಂದೇ ದಿನ ಕಂಪನಿಯು ಸುಮಾರು 46,086 ಕೋಟಿ ರೂ. ಕಳೆದುಕೊಂಡಿದೆ. ಇದರೊಂದಿಗೆ ವಿಶ್ವದ ಶ್ರೀಮಂತ ವ್ಯಕ್ತಿಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಕುಸಿದ ಬೆನ್ನಲ್ಲೇ ಅದಾನಿ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅದಾನಿ ಸಮೂಹವು ಷೇರುಗಳ ತಿರುಚುವಿಕೆಯಲ್ಲಿ ತೊಡಗಿಕೊಂಡಿರುವುದಲ್ಲದೆ ದಶಕಗಳಿಂದ ಲೆಕ್ಕಪತ್ರ ವಂಚನೆ ಎಸಗಿದೆ ಎಂದು ಹಿಂಡನ್​ಬರ್ಗ್ ರಿಸರ್ಚ್ ಆರೋಪಿಸಿತ್ತು. ಈ ವಿಚಾರವಾಗಿ ಹಿಂಡನ್​ಬರ್ಗ್ ರಿಸರ್ಚ್ ಸುಮಾರು ಎರಡು ವರ್ಷಗಳಿಂದ ತನಿಖೆ ನಡೆಸುತ್ತಿತ್ತು ಎನ್ನಲಾಗಿದೆ.

ಗೌತಮ್ ಅದಾನಿ 120 ಶತಕೋಟಿ ಡಾಲರ್ ಸಂಪತ್ತನ್ನು ಹೊಂದಿದ್ದು, ಕಳೆದ ಮೂರು ವರ್ಷಗಳಲ್ಲಿ ಸುಮಾರು 100 ಶತಕೋಟಿ ಡಾಲರ್​​ನಷ್ಟು ಸಂಪತ್ತು ಹೆಚ್ಚಿಸಿಕೊಂಡಿದ್ದರು. ಅವರ ಒಡೆತನದ ವಿವಿಧ ಕಂಪನಿಗಳ ಷೇರುಗಳ ದರ ಸರಾಸರಿ ಶೇ 819ರಷ್ಟು ಹೆಚ್ಚಾಗಿತ್ತು ಎಂದು ಹಿಂಡನ್​ಬರ್ಗ್ ರಿಸರ್ಚ್ ಹೇಳಿತ್ತು. ಅದಾನಿ ಸಮೂಹದ ಮಾಜಿ ಹಿರಿಯ ಅಧಿಕಾರಿಗಳು ಸೇರಿದಂತೆ ಅನೇಕರನ್ನು ಸಂದರ್ಶನ ನಡೆಸಿದ್ದ ಕಂಪನಿ ಸಾವಿರಾರು ದಾಖಲೆಗಳನ್ನು ಪರಿಶೀಲಿಸಿತ್ತು. ವಿವಿಧ ರಾಷ್ಟ್ರಗಳ ಸೈಟ್​ಗಳನ್ನೂ ಪರಿಶೀಲಿಸಿತ್ತು. ಬಳಿಕ ವರದಿ ಸಿದ್ಧಪಡಿಸಿತ್ತು.

‘ನಮ್ಮ ತನಿಖಾ ವರದಿಯನ್ನು ನೀವು ನಿರ್ಲಕ್ಷಿಸಿದರೂ ಅದಾನಿ ಸಮೂಹದ ಮುಖೆಬೆಲೆಯಲ್ಲಿ ಶೇ 85ರಷ್ಟು ನಷ್ಟವಾಗಿರುವುದು ನಿಜ. ಪಟ್ಟಿ ಮಾಡಿರುವ ಅದಾನಿ ಸಮೂಹದ ಪ್ರಮುಖ ಕಂಪನಿಗಳು ಗಮನಾರ್ಹವಾದ ಸಾಲವನ್ನು ಪಡೆದಿದ್ದು, ತಮ್ಮ ಷೇರುಗಳನ್ನು ಸಾಲಗಳಿಗೆ ಮೇಲಾಧಾರವಾಗಿ ಒತ್ತೆ ಇಡುವ ಮೂಲಕ, ಗುಂಪಿನ ಒಟ್ಟಾರೆ ಆರ್ಥಿಕ ಪರಿಸ್ಥಿತಿಯನ್ನು ಅಪಾಯಕ್ಕೆ ಸಿಲುಕಿಸುತ್ತವೆ’ ಎಂದು ಹಿಂಡನ್​ಬರ್ಗ್ ವರದಿ ಹೇಳಿತ್ತು.

ಕರಗಿತು ಅದಾನಿ ಸಮೂಹದ ಸಂಪತ್ತು

ಹಿಂಡನ್​ಬರ್ಗ್ ವರದಿ ಬೆನ್ನಲ್ಲೇ ಷೇರು ಮಾರುಕಟ್ಟೆಯಲ್ಲಿ ಅದಾನಿ ಸಮೂಹದ ಅಂಗ ಸಂಸ್ಥೆಗಳ ಷೇರು ಮೌಲ್ಯದಲ್ಲಿ ಭಾರೀ ಕುಸಿತವಾಗಿದೆ. ಅದಾನಿ ಟೋಟಲ್ ಗ್ಯಾಸ್, ಅದಾನಿ ಎಂಟರ್​​ಪ್ರೈಸಸ್, ಅದಾನಿ ಟ್ರಾನ್ಸ್​ಮಿಷನ್, ಅದಾನಿ ಗ್ರೀನ್ ಎನರ್ಜಿ, ಅದಾನಿ ಪೋರ್ಟ್ಸ್ ಆ್ಯಂಡ್ ಸ್ಪೆಷಲ್ ಎಕನಾಮಿಕ್ ಝೋನ್, ಅದಾನಿ ಪವರ್, ಅದಾನಿ ವಿಲ್ಮರ್ ಷೇರುಗಳು ಶೇ 1ರಿಂದ 4ರಷ್ಟು ಕೆಳಮಟ್ಟದಲ್ಲಿ ವಹಿವಾಟು ನಡೆಸಿವೆ. ಪರಿಣಾಮವಾಗಿ ಅದಾನಿ ಸಮೂಹ 46,086 ಕೋಟಿ ರೂ. ಕಳೆದುಕೊಂಡಿದೆ.

ಇದನ್ನೂ ಓದಿ: Gautam Adani: ಐದು ಕಂಪನಿಗಳ ಐಪಿಒಗೆ ಉದ್ಯಮಿ ಗೌತಮ್ ಅದಾನಿ ಚಿಂತನೆ

ಮಂಗಳವಾರ ಪ್ರಕಟಗೊಂಡಿದ್ದ ವಿಶ್ವದ ಶ್ರೀಮಂತ ವ್ಯಕ್ತಿಗಳಿಗೆ ಸಂಬಂಧಿಸಿದ ‘ಬ್ಲೂಮ್​ಬರ್ಗ್ ಕೋಟ್ಯಧಿಪತಿಗಳ ಸೂಚ್ಯಂಕ’ದಲ್ಲಿ ಉದ್ಯಮಿ ಗೌತಮ್ ಅದಾನಿ ನಾಲ್ಕನೇ ಸ್ಥಾನಕ್ಕೆ ಕುಸಿದಿದ್ದರು. ಅಮೆಜಾನ್ ಸ್ಥಾಪಕ ಜೆಫ್ ಬೆಜೋಸ್ ಮೂರನೇ ಸ್ಥಾನಕ್ಕೇರಿದ್ದರು. ಇದರ ಬೆನ್ನಲ್ಲೇ ಹಿಂಡನ್​ಬರ್ಗ್ ವರದಿಯು ಅದಾನಿ ಸಮೂಹವನ್ನು ತತ್ತರಿಸುವಂತೆ ಮಾಡಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:59 pm, Wed, 25 January 23

ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಒಡೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಒಡೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ