ಅಲೆಗಳಿಗೆ ಸಿಲುಕಿ ಸಮುದ್ರ ಪಾಲಾಗುತ್ತಿದ್ದ 6 ಜನರ ರಕ್ಷಣೆ; ವಿಡಿಯೋ ಇದೆ
ಕುಟುಂಬ ಸಮೇತರಾಗಿ ಬಂದಿದ್ದ ಪ್ರವಾಸಿಗರು ನೀರು ಪಾಲಾಗುತ್ತಿದ್ದರು. ಆರು ಜನರ ಪೈಕಿ ನಾಲ್ಕು ಜನ ಮಕ್ಕಳನ್ನು ರಕ್ಷಣೆ ಮಾಡಲಾಗಿದೆ.
ಕಾರವಾರ: ಅಲೆಗಳಿಗೆ ಸಿಲುಕಿ ಸಮುದ್ರ ಪಾಲಾಗುತ್ತಿದ್ದ 6 ಜನರನ್ನು ರಕ್ಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದ ರವೀಂದ್ರನಾಥ ಕಡಲತೀರದಲ್ಲಿ ಆರು ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ. ಸಮುದ್ರದ ಅಲೆಗೆ ಸಿಲುಕಿ ನೀರು ಪಾಲಾಗುತ್ತಿದ್ದರು. ಪ್ರವಾಸಿಗರು ಹುಬ್ಬಳ್ಳಿಯಿಂದ ಬಂದಿದ್ದರು. ಕುಟುಂಬ ಸಮೇತರಾಗಿ ಬಂದಿದ್ದ ಪ್ರವಾಸಿಗರು ನೀರು ಪಾಲಾಗುತ್ತಿದ್ದರು. ಆರು ಜನರ ಪೈಕಿ ನಾಲ್ಕು ಜನ ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. ಸಮುದ್ರದಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದರು. ಈ ವೇಳೆ ಬೋಟ್ನಿಂದ ಆರು ಜನ ಬೀಳುತ್ತಾರೆ. ಆರು ಜನರಲ್ಲಿ ನಾಲ್ಕು ಜನ ಮಕ್ಕಳಿರುತ್ತಾರೆ. ಸಮುದ್ರ ಬಳಿಯಿದ್ದ ಸ್ಥಳೀಯರು ನೀರು ಪಾಲಾಗುತ್ತಿದ್ದವರನ್ನು ರಕ್ಷಿಸಿದ್ದಾರೆ.