AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇ-ಮುದ್ರಾ ಭದ್ರತಾ ಲೋಪದ ಕುರಿತು ಕೇಂದ್ರ ಸರ್ಕಾರ ಸ್ಪಷ್ಟನೆ; ನಿಜಕ್ಕೂ ಏನಾಯ್ತು?

ಇ-ಮುದ್ರಾ ಸಂಸ್ಥೆಯಲ್ಲಿನ ಭದ್ರತಾ ದೋಷಗಳ ಕುರಿತಾದ ವರದಿಗಳಿಗೆ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಸ್ಪಷ್ಟನೆ ನೀಡಿದೆ. ಇದರ ತನಿಖೆಗಾಗಿ ವಿಶೇಷ ತಂಡವನ್ನು ರಚಿಸಲಾಗುತ್ತಿದೆ. ಇ-ಮುದ್ರಾ ಕಂಪನಿಯು ಪ್ರಪಂಚದಾದ್ಯಂತದ ಜನಪ್ರಿಯ ವೆಬ್ ಬ್ರೌಸರ್‌ಗಳು ಮತ್ತು ಆಪರೇಟಿಂಗ್ ಸಿಸ್ಟಮ್‌ಗಳಿಗೆ ಡಿಜಿಟಲ್ ಪ್ರಮಾಣಪತ್ರಗಳನ್ನು ಸಹ ನೀಡುತ್ತದೆ. ಈ ಪ್ರಮಾಣಪತ್ರಗಳು ವೆಬ್‌ಸೈಟ್‌ಗಳು, ಸಾಫ್ಟ್‌ವೇರ್ ಮತ್ತು ಆನ್‌ಲೈನ್ ಮಾಹಿತಿಗೆ ಭದ್ರತೆಯನ್ನು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಕಂಪನಿಯು ಮುಖ್ಯವಾಗಿ ಅಂತಾರಾಷ್ಟ್ರೀಯ ಮಾನದಂಡಗಳಿಗೆ ಅನುಗುಣವಾಗಿ ಸ್ವತಂತ್ರವಾಗಿ ಆಡಿಟ್ ನಡೆಸುವ ಸೇವೆಗಳನ್ನು ಸಹ ಒದಗಿಸುತ್ತದೆ. ಆದರೆ, ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ ಒದಗಿಸಲಾದ ಸೇವೆಗಳೊಂದಿಗೆ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದೆ.

ಇ-ಮುದ್ರಾ ಭದ್ರತಾ ಲೋಪದ ಕುರಿತು ಕೇಂದ್ರ ಸರ್ಕಾರ ಸ್ಪಷ್ಟನೆ; ನಿಜಕ್ಕೂ ಏನಾಯ್ತು?
ಇ-ಮುದ್ರಾImage Credit source: TV9
ಸುಷ್ಮಾ ಚಕ್ರೆ
|

Updated on: Oct 21, 2026 | 9:13 PM

Share

ನವದೆಹಲಿ, ಅಕ್ಟೋಬರ್ 21: ಭಾರತೀಯ ಪ್ರಮುಖ ಡಿಜಿಟಲ್ ಪ್ರಮಾಣಪತ್ರ ಸಂಸ್ಥೆಯಾದ ಇ-ಮುದ್ರಾ ಕಂಪನಿಯ ಸೈಬರ್ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿರುವ ಭೀತಿ ಹಾಗೂ ಸುಳ್ಳು ವದಂತಿಗಳ ಕುರಿತು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಸ್ಪಷ್ಟನೆ ನೀಡಿದೆ. ಕೇಂದ್ರ ಸರ್ಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ಪ್ರಕರಣದ ತನಿಖೆಗೆ ವಿಶೇಷ ಸಮಿತಿಯನ್ನು ರಚಿಸಿದೆ. ಇದರ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಅನಗತ್ಯ ಸುಳ್ಳು ಆಪಾದನೆ ಮತ್ತು ಭೀತಿಯ ಕುರಿತು ಸರ್ಕಾರವು ಸ್ಪಷ್ಟನೆ ನೀಡಿದೆ.

ಕೇಂದ್ರ ಸರ್ಕಾರದ ಸ್ಪಷ್ಟನೆಯೇನು?:

ಇ-ಮುದ್ರಾ ಕಂಪನಿಯು ಎರಡು ಪ್ರತ್ಯೇಕ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತದೆ. ಅವುಗಳಲ್ಲಿ ಒಂದು ಡಿಜಿಟಲ್ ಸಹಿ ಮತ್ತು ಇ-ಸೈನ್ ಸೇವೆಗಳು. ಇದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ವ್ಯಾಪ್ತಿಗೆ ಬರುವ ‘ಕಂಟ್ರೋಲರ್ ಆಫ್ ಸರ್ಟಿಫೈಯಿಂಗ್ ಅಥಾರಿಟೀಸ್’ (ಸಿಸಿಎ) ನಿಯಂತ್ರಣದಲ್ಲಿ ಕಾರ್ಯನಿರ್ವಹಿಸುತ್ತದೆ.

ಇದನ್ನೂ ಓದಿ: PM Mudra Scheme: ಮಹಿಳೆಯರಿಗೆ ವರದಾನವಾಗುತ್ತಿರುವ ಪಿಎಂ ಮುದ್ರಾ ಯೋಜನೆ

ಇನ್ನೊಂದು, ಅಂತಾರಾಷ್ಟ್ರೀಯ ಡಿಜಿಟಲ್ ಪ್ರಮಾಣಪತ್ರಗಳ ವಿತರಣೆ. ಇದು ವಿವಿಧ ವೆಬ್‌ಸೈಟ್‌ಗಳು, ಸಾಫ್ಟ್‌ವೇರ್‌ಗಳು ಹಾಗೂ ಆನ್‌ಲೈನ್ ಸಂವಹನಗಳ ಭದ್ರತೆಗಾಗಿ ಜಾಗತಿಕ ಬ್ರೌಸರ್‌ಗಳು ಮತ್ತು ಆಪರೇಟಿಂಗ್ ಸಿಸ್ಟಮ್‌ಗಳಿಂದ ಮಾನ್ಯತೆ ಪಡೆದ ಪ್ರಮಾಣಪತ್ರಗಳನ್ನು ನೀಡುವ ಸೇವೆ.

ಪ್ರಸ್ತುತ ವರದಿಯಾಗಿರುವ ಭದ್ರತಾ ಲೋಪವು ಕೇವಲ ಇ-ಮುದ್ರಾ ಸಂಸ್ಥೆಯ ಅಂತಾರಾಷ್ಟ್ರೀಯ ಡಿಜಿಟಲ್ ಪ್ರಮಾಣಪತ್ರ ಸೇವೆಗೆ ಮಾತ್ರ ಸೀಮಿತವಾಗಿದೆ. ಈ ವಿಭಾಗವು ಜಾಗತಿಕ ನಿಯಮಾವಳಿಗಳಡಿ ಕಾರ್ಯನಿರ್ವಹಿಸುತ್ತಿದ್ದು, ‘ಬಿಡಿಒ ಇಂಟರ್​ನ್ಯಾಷನಲ್ ಲಿಮಿಟೆಡ್’ ನಡೆಸುವ ‘ವೆಬ್​ಟ್ರಸ್ಟ್’ ಆಡಿಟ್ ಸೇರಿದಂತೆ ಸ್ವತಂತ್ರ ಆಡಿಟ್‌ಗೆ ಒಳಪಟ್ಟಿರುತ್ತದೆ.

ಇದನ್ನೂ ಓದಿ: ಎಸ್‌ಬಿಐ ಡೇಟಾ ಡಾರ್ಕ್ ವೆಬ್‌ನಲ್ಲಿ ಸೋರಿಕೆ: 3,897 ಗ್ರಾಹಕರ ವೈಯಕ್ತಿಕ ಮಾಹಿತಿ ಪತ್ತೆ

ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ  ಇದರ ಆಡಿಟ್ ಪ್ರಕ್ರಿಯೆಯಲ್ಲಿ ಭಾಗಿಯಾಗಿರುವುದಿಲ್ಲ. ಈ ಭದ್ರತಾ ಘಟನೆಯಿಂದ ಭಾರತೀಯ ವೆಬ್‌ಸೈಟ್‌ಗಳು ಮತ್ತು ಮೊಬೈಲ್ ಅಪ್ಲಿಕೇಶನ್‌ಗಳ ಮೇಲಾದ ಪರಿಣಾಮವು ಅತ್ಯಂತ ಸೀಮಿತವಾಗಿದ್ದು, ಅತ್ಯಲ್ಪ ಸಮಯಕ್ಕೆ ಮಾತ್ರ ಸೀಮಿತವಾಗಿತ್ತು. ಭಾರತದ ಸಿಸಿಎ ನಿಯಂತ್ರಣದಲ್ಲಿರುವ ಡಿಜಿಟಲ್ ಸಿಗ್ನೇಚರ್ ಸರ್ಟಿಫಿಕೇಟ್ ಹಾಗೂ ಇ-ಸೈನ್ ಸೇವೆಗಳು ಸಂಪೂರ್ಣವಾಗಿ ಸುರಕ್ಷಿತವಾಗಿದ್ದು, ಈ ಘಟನೆಯಿಂದ ಅವುಗಳಿಗೆ ಯಾವುದೇ ರೀತಿಯ ಧಕ್ಕೆಯಾಗಿಲ್ಲ ಎಂದು ಸಚಿವಾಲಯ ತಿಳಿಸಿದೆ.

ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಪ್ರಸ್ತುತ ಘಟನೆಯನ್ನು ಬೇಗ ಬಗೆಹರಿಸಲು ಎಲ್ಲಾ ಸಂಬಂಧಿತ ಸಂಸ್ಥೆಗಳೊಂದಿಗೆ ಸಂಪರ್ಕದಲ್ಲಿದೆ. ಜೊತೆಗೆ ಭಾರತೀಯ ಕಂಪ್ಯೂಟರ್ ತುರ್ತು ಸ್ಪಂದನಾ ಪಡೆ ಈಗಾಗಲೇ ಅಗತ್ಯ ಮುನ್ನೆಚ್ಚರಿಕೆ ಮತ್ತು ಪರಿಹಾರ ಕ್ರಮಗಳ ಕುರಿತು ಅಧಿಕೃತ ಮಾರ್ಗದರ್ಶಿ ಸೂಚನೆಯನ್ನು ಹೊರಡಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಜಾತ್ರೆ ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ಜಾತ್ರೆ ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ಅಂಬಾರಿ ಹೊತ್ತ ಆನೆಯ ರಂಪಾಟ: ಜಿಲ್ಲಾಡಳಿತದ ಎಡವಟ್ಟಿನಿಂದ ಈ ಅವಘಡ
ಅಂಬಾರಿ ಹೊತ್ತ ಆನೆಯ ರಂಪಾಟ: ಜಿಲ್ಲಾಡಳಿತದ ಎಡವಟ್ಟಿನಿಂದ ಈ ಅವಘಡ
ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗಿಯಾದ ಕನ್ನಡ ಚಿತ್ರರಂಗದ ತಾರೆಯರು
ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗಿಯಾದ ಕನ್ನಡ ಚಿತ್ರರಂಗದ ತಾರೆಯರು
ಜಂಬೂಸವಾರಿ ವೈಭವ ಕಣ್ತುಂಬಿಕೊಂಡ ತೆಲಂಗಾಣ, ಕೇರಳ ಮುಖ್ಯಮಂತ್ರಿಗಳು
ಜಂಬೂಸವಾರಿ ವೈಭವ ಕಣ್ತುಂಬಿಕೊಂಡ ತೆಲಂಗಾಣ, ಕೇರಳ ಮುಖ್ಯಮಂತ್ರಿಗಳು
ಪಟ್ಟದಾನೆ ಶ್ರೀಕಂಠನ ಗಾಂಭೀರ್ಯದ ಹೆಜ್ಜೆಗಳಿಗೆ ಮರುಳಾದ ಜನಸಾಗರ
ಪಟ್ಟದಾನೆ ಶ್ರೀಕಂಠನ ಗಾಂಭೀರ್ಯದ ಹೆಜ್ಜೆಗಳಿಗೆ ಮರುಳಾದ ಜನಸಾಗರ
ಪ್ರಶಾಂತನ ಮೇಲೆ ಬಂದ ಚಾಮುಂಡೇಶ್ವರಿಗೆ ಡಿಕೆಶಿ ಪುಷ್ಪಾರ್ಚನೆ
ಪ್ರಶಾಂತನ ಮೇಲೆ ಬಂದ ಚಾಮುಂಡೇಶ್ವರಿಗೆ ಡಿಕೆಶಿ ಪುಷ್ಪಾರ್ಚನೆ
ಪ್ರಶಾಂತ ಆನೆ ಬೆನ್ನಿಗೆ 750 ಕೆಜಿ ಚಿನ್ನದ ಅಂಬಾರಿ ಕಟ್ಟುವ ಪ್ರಕ್ರಿಯೆ ನೋಡಿ
ಪ್ರಶಾಂತ ಆನೆ ಬೆನ್ನಿಗೆ 750 ಕೆಜಿ ಚಿನ್ನದ ಅಂಬಾರಿ ಕಟ್ಟುವ ಪ್ರಕ್ರಿಯೆ ನೋಡಿ
ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಮೆರುಗು ನೀಡಿದ ಸ್ತಬ್ಧ ಚಿತ್ರಗಳು
ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಮೆರುಗು ನೀಡಿದ ಸ್ತಬ್ಧ ಚಿತ್ರಗಳು
ದಸರಾ ಹಾಗೂ ಮೈಸೂರಿನ ಬಗ್ಗೆ ರಮೇಶ್ ಮಾತು: ವಿಡಿಯೋ ನೋಡಿ
ದಸರಾ ಹಾಗೂ ಮೈಸೂರಿನ ಬಗ್ಗೆ ರಮೇಶ್ ಮಾತು: ವಿಡಿಯೋ ನೋಡಿ
ನನ್ನ ಬದುಕಿನಲ್ಲಿ ಇವತ್ತು ಮರೆಯಲಾಗದ ದಿನ: ಜನತೆಗೆ ಡಿಕೆಶಿ ಧನ್ಯವಾದ
ನನ್ನ ಬದುಕಿನಲ್ಲಿ ಇವತ್ತು ಮರೆಯಲಾಗದ ದಿನ: ಜನತೆಗೆ ಡಿಕೆಶಿ ಧನ್ಯವಾದ