SBI FD Interest Rates: ಎಸ್​ಬಿಐ ಎಫ್​ಡಿ ಬಡ್ಡಿ ದರ ಮೇ 10ರಿಂದ ಹೆಚ್ಚಳ; ಇಲ್ಲಿದೆ ದರದ ಮಾಹಿತಿ

ಮೇ 10, 2022ರಿಂದ ಅನ್ವಯ ಆಗುವಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ವಿವಿಧ ಅವಧಿಯ ಫಿಕ್ಸೆಡ್ ಡೆಪಾಸಿಟ್​ಗಳ ಬಡ್ಡಿ ದರವನ್ನು ಏರಿಕೆ ಮಾಡಲಾಗಿದೆ.

SBI FD Interest Rates: ಎಸ್​ಬಿಐ ಎಫ್​ಡಿ ಬಡ್ಡಿ ದರ ಮೇ 10ರಿಂದ ಹೆಚ್ಚಳ; ಇಲ್ಲಿದೆ ದರದ ಮಾಹಿತಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: May 10, 2022 | 5:35 PM

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (State Bank Of India) ಹಲವಾರು ನಿಶ್ಚಿತ ಠೇವಣಿಗಳ (Fixed Deposits) ಮೇಲಿನ ಬಡ್ಡಿದರಗಳನ್ನು ಹೆಚ್ಚಿಸಿದೆ. ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿನ ಅಪ್​ಡೇಟ್ ಪ್ರಕಾರ, ಭಾರತದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ರೂ. 2 ಕೋಟಿ ಮತ್ತು ಅದಕ್ಕಿಂತ ಹೆಚ್ಚಿನ ಠೇವಣಿಗಳ ಮೇಲಿನ ಬಡ್ಡಿದರಗಳನ್ನು ಹೆಚ್ಚಿಸಿದೆ. ಹೊಸ ದರಗಳು ಮೇ 10ರ ಮಂಗಳವಾರದಿಂದ ಜಾರಿಗೆ ಬಂದಿದೆ. ಆದರೆ 7 ರಿಂದ 45 ದಿನಗಳವರೆಗೆ ಅಲ್ಪಾವಧಿಯ ನಿಶ್ಚಿತ ಠೇವಣಿ (SBI FD) ಮೇಲೆ ಬಡ್ಡಿಯನ್ನು ಹೆಚ್ಚಿಸಿಲ್ಲ. ಹೊಸ ದರಗಳ ಅಡಿಯಲ್ಲಿ 46 ದಿನಗಳಿಂದ 149 ದಿನಗಳವರೆಗೆ ಮುಕ್ತಾಯಗೊಳ್ಳುವ ಎಫ್​ಡಿಗಳು 50 ಬೇಸಿಸ್ ಪಾಯಿಂಟ್ ಹೆಚ್ಚಿನ ಆದಾಯವನ್ನು ನೀಡುತ್ತವೆ. ಒಂದು ವರ್ಷಕ್ಕಿಂತ ಹೆಚ್ಚು ಮತ್ತು 2 ವರ್ಷಕ್ಕಿಂತ ಕಡಿಮೆ ಅವಧಿಯ ಠೇವಣಿಗಳಿಗೆ ಬಡ್ಡಿಯನ್ನು 40 ಬೇಸಿಸ್ ಪಾಯಿಂಟ್‌ಗಳಷ್ಟು ಹೆಚ್ಚಿಸಲಾಗಿದೆ.

2 ರಿಂದ 3 ವರ್ಷಗಳ ನಡುವಿನ ಅವಧಿಯ ಠೇವಣಿಗಳಿಗೆ ಬಡ್ಡಿದರವನ್ನು 65 ಬೇಸಿಸ್​ ಪಾಯಿಂಟ್​ಗಳಷ್ಟು ಹೆಚ್ಚಿಸಲಾಗಿದೆ. 3ರಿಂದ 5 ವರ್ಷಗಳವರೆಗೆ ಮತ್ತು 5 ರಿಂದ 10 ವರ್ಷಗಳವರೆಗೆ ಎಫ್‌ಡಿಯಲ್ಲಿ ಹೆಚ್ಚಳವು ಭಾರೀ ಪ್ರಮಾಣದಲ್ಲಿ ಆಗಿದೆ. ಇದಕ್ಕಾಗಿ ಈಗ ಶೇಕಡಾ 4.5ರ ಬಡ್ಡಿಯನ್ನು ಪಡೆಯುತ್ತಾರೆ, ಈ ಹಿಂದೆ ಶೇಕಡಾ 3.6ರಷ್ಟಿತ್ತು. ಕಳೆದ ವಾರ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ರೆಪೋ ದರವನ್ನು 40 ಬೇಸಿಸ್ ಪಾಯಿಂಟ್‌ಗಳಿಂದ, ಅಂದರೆ ಶೇಕಡಾ 4.40ಕ್ಕೆ ಹೆಚ್ಚಿಸುವುದಾಗಿ ಘೋಷಿಸಿದ ನಂತರ ಹಲವಾರು ಬ್ಯಾಂಕ್‌ಗಳು ದರ ಏರಿಕೆಯನ್ನು ಘೋಷಿಸುತ್ತಿವೆ. ಭಾರತದಲ್ಲಿ ಹೆಚ್ಚುತ್ತಿರುವ ಹಣದುಬ್ಬರವನ್ನು ನಿಯಂತ್ರಿಸಲು ಇದನ್ನು ಪ್ರಾಥಮಿಕವಾಗಿ ಮಾಡಲಾಗುತ್ತಿದೆ.

ಎಸ್​ಬಿಐ ಎಫ್​ಡಿ ಬಡ್ಡಿ ದರಗಳ ವಿವರ ಇಲ್ಲಿದೆ: 7 ರಿಂದ 45 ದಿನಗಳು- ಶೇ 3

46 ರಿಂದ 179 ದಿನಗಳು- ಶೇ 3.5

180 ದಿನಗಳಿಂದ 210 ದಿನಗಳು- ಶೇ 3.5

211 ದಿನಗಳಿಂದ 1 ವರ್ಷ- ಶೇ 3.75

1 ವರ್ಷದಿಂದ 2 ವರ್ಷಗಳವರೆಗೆ- ಶೇ 4

2 ವರ್ಷದಿಂದ 3 ವರ್ಷಗಳವರೆಗೆ- ಶೇ 4.25

3 ವರ್ಷದಿಂದ 5 ವರ್ಷಗಳವರೆಗೆ- ಶೇ 4.5

5 ವರ್ಷದಿಂದ 10 ವರ್ಷಗಳವರೆಗೆ- ಶೇ 4.5

ಹಿರಿಯ ನಾಗರಿಕರಿಗೆ 2022ರ ಎಸ್‌ಬಿಐ ಎಫ್‌ಡಿ ಬಡ್ಡಿ ದರಗಳು ಎಲ್ಲ ಅವಧಿಗಳಿಗೆ ಸಾಮಾನ್ಯ ಬಡ್ಡಿ ದರಗಳಿಗಿಂತ 50 ಬೇಸಿಸ್ ಪಾಯಿಂಟ್‌ಗಳು ಹೆಚ್ಚು ನೀಡಲಾಗುತ್ತದೆ.

ಇನ್ನೂ ಹೆಚ್ಚಿನ ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: Bank Locker Fee: ಎಸ್​ಬಿಐ, ಐಸಿಐಸಿಐ ಬ್ಯಾಂಕ್, ಪಿಎನ್​ಬಿ ಬ್ಯಾಂಕ್ ಲಾಕರ್​ ಶುಲ್ಕಗಳ ವಿವರ ಇಲ್ಲಿದೆ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್