State Bank Of India: ಎಸ್​ಬಿಐ ಗ್ರಾಹಕರ ತುರ್ತು ಗಮನಕ್ಕೆ; ಡಿ. 11, 12ರಂದು ಬ್ಯಾಂಕ್​ನ ಈ ವಹಿವಾಟುಗಳು ಸಾಧ್ಯವಿಲ್ಲ

ಸ್ಟೇಟ್​ ಬ್ಯಾಂಕ್ ಆಫ್ ಇಂಡಿಯಾದಿಂದ ಗ್ರಾಹಕರಿಗೆ ಮುಖ್ಯವಾದ ಸೂಚನೆ ಇದೆ. ಡಿಸೆಂಬರ್ 11, 12ರಂದು ನಿರ್ದಿಷ್ಟ ಸಮಯದಲ್ಲಿ ಇಂಟರ್​ನೆಟ್​ ಬ್ಯಾಂಕಿಂಗ್ ಸೇವೆ ಲಭ್ಯ ಇರುವುದಿಲ್ಲ.

State Bank Of India: ಎಸ್​ಬಿಐ ಗ್ರಾಹಕರ ತುರ್ತು ಗಮನಕ್ಕೆ; ಡಿ. 11, 12ರಂದು ಬ್ಯಾಂಕ್​ನ ಈ ವಹಿವಾಟುಗಳು ಸಾಧ್ಯವಿಲ್ಲ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: Dec 10, 2021 | 1:48 PM

ಭಾರತದ ಅತಿದೊಡ್ಡ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಗ್ರಾಹಕರು ನಾಳೆ (ಡಿಸೆಂಬರ್ 11, 2021) ನಿರ್ದಿಷ್ಟ ಅವಧಿಯವರೆಗೆ ಇಂಟರ್​ನೆಟ್ ಬ್ಯಾಂಕಿಂಗ್ ಸೇವೆಗಳನ್ನು ಬಳಸಲು ಸಾಧ್ಯ ಆಗುವುದಿಲ್ಲ. ನಿಗದಿತ ನಿರ್ವಹಣೆ ಚಟುವಟಿಕೆಗಳಿಂದಾಗಿ ಶನಿವಾರ ಮತ್ತು ಭಾನುವಾರದಂದು ಎಸ್​ಬಿಐ ಇಂಟರ್​ನೆಟ್ ಬ್ಯಾಂಕಿಂಗ್ ಸೇವೆಗಳ ಬಳಕೆದಾರರು ಒಟ್ಟು 300 ನಿಮಿಷಗಳ ಕಾಲ ಇಂಟರ್​ನೆಟ್ ಬ್ಯಾಂಕಿಂಗ್, YONO, YONO ಲೈಟ್, ಯುಪಿಐನಂತಹ ವಿವಿಧ ವೈಶಿಷ್ಟ್ಯಗಳನ್ನು ಬಳಸಲು ಸಾಧ್ಯ ಆಗುವುದಿಲ್ಲ. ಎಸ್‌ಬಿಐ ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ ಮೂಲಕ ಟ್ವೀಟ್ ಮಾಡಿದ್ದು, “ನಾವು ಉತ್ತಮ ಬ್ಯಾಂಕಿಂಗ್ ಅನುಭವವನ್ನು ಒದಗಿಸಲು ಪ್ರಯತ್ನಿಸುತ್ತಿರುವಾಗ ನಮ್ಮ ಗೌರವಾನ್ವಿತ ಗ್ರಾಹಕರು ನಮ್ಮೊಂದಿಗೆ ಸಹಿಸಿಕೊಳ್ಳಬೇಕೆಂದು ವಿನಂತಿಸುತ್ತೇವೆ.”

“ನಾವು 11ನೇ ಡಿಸೆಂಬರ್ 2021ರಂದು 23.30ರಿಂದ 4.30ರ ವರೆಗೆ (300 ನಿಮಿಷಗಳು) ತಂತ್ರಜ್ಞಾನವನ್ನು ಅಪ್‌ಗ್ರೇಡ್ ಮಾಡಲಿದ್ದೇವೆ. ಈ ಅವಧಿಯಲ್ಲಿ, INB/ Yono / Yono Lite / Yono Business / UPI ಲಭ್ಯ ಇರುವುದಿಲ್ಲ. ಅನನುಕೂಲತೆಗೆ ನಾವು ವಿಷಾದಿಸುತ್ತೇವೆ ಮತ್ತು ನಮ್ಮೊಂದಿಗೆ ಸಹಿಸಿಕೊಳ್ಳುವಂತೆ ವಿನಂತಿಸುತ್ತೇವೆ.” -ಎಂದು ತಿಳಿಸಿದೆ.”ನಾವು ಉತ್ತಮ ಬ್ಯಾಂಕಿಂಗ್ ಅನುಭವವನ್ನು ಒದಗಿಸಲು ಪ್ರಯತ್ನಿಸುತ್ತಿರುವಾಗ ಗೌರವಾನ್ವಿತ ಗ್ರಾಹಕರು ನಮ್ಮೊಂದಿಗೆ ಇರುವಂತೆ ವಿನಂತಿಸುತ್ತೇವೆ,” ಎಂದು ಅದು ಹೇಳಿದೆ. ಸ್ಟೇಟ್​ ಬ್ಯಾಂಕ್​ ಆಫ್ ಇಂಡಿಯಾವು ದೇಶದಾದ್ಯಂತ 22,000ಕ್ಕೂ ಹೆಚ್ಚು ಶಾಖೆಗಳನ್ನು ಮತ್ತು 57,889ಕ್ಕೂ ಹೆಚ್ಚು ಎಟಿಎಂಗಳೊಂದಿಗೆ ದೊಡ್ಡ ಜಾಲವನ್ನು ಹೊಂದಿದೆ.

ಈ ಮಧ್ಯೆ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಇತ್ತೀಚಿನ ಡಿಜಿಟಲ್ ವಹಿವಾಟಿನ ಸಾಲಿಗೆ ಪ್ರತಿಕ್ರಿಯಿಸಿದ ಬ್ಯಾಂಕ್, ಮೂಲ ಉಳಿತಾಯ ಬ್ಯಾಂಕ್ ಠೇವಣಿ (ಬಿಎಸ್‌ಬಿಡಿ) ಗ್ರಾಹಕರಿಂದ, (UPI) ಮತ್ತು RuPay ಡೆಬಿಟ್ ಕಾರ್ಡ್‌ಗಳ ಡಿಜಿಟಲ್ ವಹಿವಾಟುಗಳಿಗಾಗಿ ಯಾವುದೇ ಶುಲ್ಕವನ್ನು ವಿಧಿಸುವುದಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಿದೆ. ಮಾಧ್ಯಮ ವರದಿಯ ಪ್ರಕಾರ, ಐಐಟಿ ಅಧ್ಯಯನದಲ್ಲಿ, ಎಸ್‌ಬಿಐ 2017 ಮತ್ತು ಸೆಪ್ಟೆಂಬರ್ 2020ರ ನಡುವೆ ಜನ್ ಧನ್ ಖಾತೆದಾರರಿಂದ 164 ಕೋಟಿ ರೂಪಾಯಿ ಕಡಿತಗೊಳಿಸಿದೆ ಎಂದು ತಿಳಿದುಬಂದಿದೆ. 164 ಕೋಟಿ ರೂಪಾಯಿಯಲ್ಲಿ UPI ಮತ್ತು ರುಪೇ ಕಾರ್ಡ್‌ಗಳ ಮೂಲಕ ವಹಿವಾಟು ನಡೆಸುವವರಿಗೆ ಬ್ಯಾಂಕ್ ಕೇವಲ 90 ಕೋಟಿ ರೂಪಾಯಿಯನ್ನು ಹಿಂದಿರುಗಿಸಿದೆ. ಖಾತೆದಾರರಿಂದ ಈ ಅವಧಿಯಲ್ಲಿ ತಲಾ ರೂ. 17.70 ಸಂಗ್ರಹಿಸಿತ್ತು.

ಇದನ್ನೂ ಓದಿ: Personal loan: ಎಸ್​ಬಿಐ ಗ್ರಾಹಕರಿಗೆ ಪ್ರೀ ಅಪ್ರೂವ್ಡ್ ವೈಯಕ್ತಿಕ ಸಾಲದ ಮೇಲೆ ವಿಶೇಷ ವಿನಾಯಿತಿ; ಪಡೆಯುವುದು ಹೇಗೆ?

ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ