ವಿವಿಧ ಉದ್ಯೋಗಿ ಸಂಘಟನೆಗಳಿಂದ ಮಾರ್ಚ್​ 28, 29ಕ್ಕೆ ಮುಷ್ಕರ; ಸೇವೆ ವ್ಯತ್ಯಯದ ಬಗ್ಗೆ ಎಸ್​ಬಿಐ ಮಾಹಿತಿ

ಉದ್ಯೋಗಿಗಳ ವಿವಿಧ ಸಂಘಟನೆಗಳು ಮಾರ್ಚ್ 28, 29ರಂದು ಮುಷ್ಕರಕ್ಕೆ ಕರೆ ನೀಡಿರುವುದರಿಂದ ಬ್ಯಾಂಕ್​ ಸೇವೆಗಳಲ್ಲಿ ವ್ಯತ್ಯಯ ಆಗಬಹುದು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ತಿಳಿಸಲಾಗಿದೆ.

ವಿವಿಧ ಉದ್ಯೋಗಿ ಸಂಘಟನೆಗಳಿಂದ ಮಾರ್ಚ್​ 28, 29ಕ್ಕೆ ಮುಷ್ಕರ; ಸೇವೆ ವ್ಯತ್ಯಯದ ಬಗ್ಗೆ ಎಸ್​ಬಿಐ ಮಾಹಿತಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: Mar 22, 2022 | 11:55 PM

ಭಾರತದ ಅತಿ ದೊಡ್ಡ ಬ್ಯಾಂಕ್ ಆದ ಸ್ಟೇಟ್​ ಬ್ಯಾಂಕ್​ ಆಫ್ ಇಂಡಿಯಾ (State Bank Of India) ಹೇಳಿರುವ ಪ್ರಕಾರ, ಉದ್ಯೋಗಿಗಳ ವಿವಿಧ ಸಂಘಟನೆಗಳು ಮಾರ್ಚ್ 28-29ರಂದು ಎರಡು ದಿನಗಳ ಮುಷ್ಕರಕ್ಕೆ ಕರೆ ನೀಡಿರುವುದರಿಂದ ಬ್ಯಾಂಕಿಂಗ್ ಸೇವೆಗಳು ಸ್ವಲ್ಪ ಮಟ್ಟಿಗೆ ಪರಿಣಾಮ ಬೀರಬಹುದು. ಈ ಬಗ್ಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮಂಗಳವಾರ ಹೇಳಿದೆ. ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘ (ಎಐಬಿಇಎ), ಬ್ಯಾಂಕ್ ಎಂಪ್ಲಾಯೀಸ್ ಫೆಡರೇಷನ್ ಆಫ್ ಇಂಡಿಯಾ (ಬಿಇಎಫ್‌ಐ) ಮತ್ತು ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ (ಎಐಬಿಒಎ) ರಾಷ್ಟ್ರವ್ಯಾಪಿ ಮುಷ್ಕರ ನಡೆಸಲು ನಿರ್ಧಾರ ಮಾಡಿರುವ ಬಗ್ಗೆ ನೋಟಿಸ್ ನೀಡಿವೆ ಎಂದು ಭಾರತೀಯ ಬ್ಯಾಂಕ್‌ಗಳ ಒಕ್ಕೂಟ (ಐಬಿಎ) ಮಾಹಿತಿ ನೀಡಿದೆ ಎಂದು ಎಸ್‌ಬಿಐ ಹೇಳಿದೆ.

ಸಾರ್ವಜನಿಕ ವಲಯದ ಬ್ಯಾಂಕ್‌ಗಳನ್ನು ಖಾಸಗೀಕರಣಗೊಳಿಸುವ ಸರ್ಕಾರದ ಕ್ರಮ ಮತ್ತು ಬ್ಯಾಂಕಿಂಗ್ ಕಾನೂನುಗಳ ತಿದ್ದುಪಡಿ ಮಸೂದೆ 2021 ಅನ್ನು ವಿರೋಧಿಸಿ ಈ ಮುಷ್ಕರಕ್ಕೆ ಕರೆ ನೀಡಲಾಗಿದೆ. “ಮುಷ್ಕರದ ದಿನಗಳಲ್ಲಿ ಬ್ಯಾಂಕ್ ತನ್ನ ಶಾಖೆಗಳು ಮತ್ತು ಕಚೇರಿಗಳಲ್ಲಿ ಸಾಮಾನ್ಯ ಕಾರ್ಯ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಅಗತ್ಯ ವ್ಯವಸ್ಥೆಗಳನ್ನು ಮಾಡಿದೆ. ಆದರೆ ಮುಷ್ಕರದಿಂದ ನಮ್ಮ ಬ್ಯಾಂಕಿನ ಕೆಲಸವು ಸೀಮಿತ ಪ್ರಮಾಣದಲ್ಲಿ ಪರಿಣಾಮ ಬೀರುವ ಸಾಧ್ಯತೆಯಿದೆ,” ಎಂದು ಎಸ್‌ಬಿಐ ನಿಯಂತ್ರಕ ಫೈಲಿಂಗ್​ನಲ್ಲಿ ತಿಳಿಸಿದೆ.

ಈಗ ಕೈಗೊಳ್ಳಲು ನಿರ್ಧರಿಸಿರುವ ಮುಷ್ಕರದಿಂದಾಗಿ ಉಂಟಾಗಲಿರುವ ಪರಿಣಾಮದಿಂದ ಆಗಬಹುದಾದ ನಷ್ಟವನ್ನು ಲೆಕ್ಕ ಹಾಕಲು ಸಾಧ್ಯವಿಲ್ಲ ಎಂದು ಸ್ಟೇಟ್​ ಬ್ಯಾಂಕ್ ಆಫ್ ಇಂಡಿಯಾ ಹೇಳಿದೆ. ಈ ಬಗ್ಗೆ ಎಕನಾಮಿಕ್ ಟೈಮ್ಸ್​ನಲ್ಲಿ ವರದಿಯನ್ನು ಮಾಡಲಾಗಿದೆ.

ಇದನ್ನೂ ಓದಿ: SBI Fixed Deposits: ಎಸ್​ಬಿಐ ಎಫ್​ಡಿ ದರದಲ್ಲಿ ಏರಿಕೆ; ಯಾವ ಅವಧಿಗೆ ಎಷ್ಟು ಎಂಬ ಮಾಹಿತಿ ಇಲ್ಲಿದೆ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ