State Bank Of India: ಸ್ಟೇಟ್​ ಬ್ಯಾಂಕ್​ ಆಫ್ ಇಂಡಿಯಾದಿಂದ ಶ್ರೀಲಂಕಾಗೆ 7613 ಕೋಟಿ ರೂಪಾಯಿ ಸಾಲ

ದ್ವೀಪ ರಾಷ್ಟ್ರ ಶ್ರೀಲಂಕಾಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ 7613 ಕೋಟಿ ರೂಪಾಯಿ ಸಾಲ ನೀಡಲಿದೆ ಕೇಂದ್ರ ಹಣಕಾಸು ಸಚಿವಾಲಯವು ಮಾಹಿತಿ ನೀಡಿದೆ.

State Bank Of India: ಸ್ಟೇಟ್​ ಬ್ಯಾಂಕ್​ ಆಫ್ ಇಂಡಿಯಾದಿಂದ ಶ್ರೀಲಂಕಾಗೆ 7613 ಕೋಟಿ ರೂಪಾಯಿ ಸಾಲ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on:Mar 18, 2022 | 2:02 PM

ಆಹಾರ, ಔಷಧಿಗಳು ಮತ್ತು ಇತರ ಅಗತ್ಯ ವಸ್ತುಗಳ ಖರೀದಿಗಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (State Bank Of India) ಶ್ರೀಲಂಕಾಗೆ ಯುಎಸ್​ಡಿ 1 ಶತಕೋಟಿ ಅಥವಾ ಭಾರತದ ರೂಪಾಯಿ ಲೆಕ್ಕದಲ್ಲಿ ಇವತ್ತಿಗೆ 7613 ಕೋಟಿ ಮೊತ್ತದ ಸಾಲ ಸೌಲಭ್ಯವನ್ನು ಒದಗಿಸುತ್ತದೆ ಎಂದು ಕೇಂದ್ರ ಹಣಕಾಸು ಸಚಿವಾಲಯವು ಮಾರ್ಚ್ 17ನೇ ತಾರೀಕಿನ ಗುರುವಾರ ಹೇಳಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಶ್ರೀಲಂಕಾದ ಹಣಕಾಸು ಸಚಿವ ಬಸಿಲ್ ರಾಜಪಕ್ಸೆ ಅವರನ್ನು ಭೇಟಿ ಮಾಡಿದ್ದಾರೆ ಎಂದು ಸಚಿವಾಲಯ ಟ್ವೀಟ್‌ನಲ್ಲಿ ತಿಳಿಸಿದೆ.

ಸಚಿವರು ಈ ವಿಷಯಗಳ ಕುರಿತು ವ್ಯಾಪಕವಾಗಿ ಚರ್ಚಿಸಿದರು ಎಂದು ಅದು ಸೇರಿಸಿದೆ. “ಶ್ರೀಲಂಕಾಕ್ಕೆ ಆಹಾರ, ಔಷಧ ಮತ್ತು ಇತರ ಅಗತ್ಯ ವಸ್ತುಗಳನ್ನು ಸಂಗ್ರಹಿಸಲು ಯುಎಸ್​ಡಿ 1 ಶತಕೋಟಿ ಸಾಲ ಸೌಲಭ್ಯಕ್ಕಾಗಿ ಸ್ಟೇಟ್​ ಬ್ಯಾಂಕ್​ ಆಫ್ ಇಂಡಿಯಾ ಮತ್ತು ಶ್ರೀಲಂಕಾ ಸರ್ಕಾರದ ಮಧ್ಯೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ,” ಎಂದು ಸಚಿವಾಲಯ ಮತ್ತೊಂದು ಟ್ವೀಟ್‌ನಲ್ಲಿ ತಿಳಿಸಿದೆ.

ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ದ್ವೀಪ ರಾಷ್ಟ್ರವಾದ ಶ್ರೀಲಂಕಾಗೆ ಪೆಟ್ರೋಲಿಯಂ ಉತ್ಪನ್ನಗಳನ್ನು ಖರೀದಿ ಮಾಡುವುಕ್ಕೆ ಹಣಕಾಸು ಒದಗಿಸಲು ಎಕ್ಸ್​ಪೋರ್ಟ್-ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ (ಎಕ್ಸಿಮ್ ಬ್ಯಾಂಕ್) ಯುಎಸ್​ಡಿ 500 ಮಿಲಿಯನ್ ಸಾಲವನ್ನು ಈ ಹಿಂದೆ ವಿಸ್ತರಿಸಿತ್ತು.

ಇದನ್ನೂ ಓದಿ: State Bank Of India: ಎಸ್​ಬಿಐ ಯೋನೋ ಆ್ಯಪ್​ ಮೂಲಕ ಚೆಕ್​ ಪಾವತಿ ನಿಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

Published On - 1:59 pm, Fri, 18 March 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್