“ಕರಡಿ ಹಿಡಿತ”ದಲ್ಲಿ ಷೇರುಪೇಟೆ; ನೆಲ ಕಚ್ಚಿತು ಸೆನ್ಸೆಕ್ಸ್ 889 ಪಾಯಿಂಟ್ಸ್, ನಿಫ್ಟಿ 263 ಪಾಯಿಂಟ್ಸ್

ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಇಂದಿನ ಷೇರುಪೇಟೆಯಲ್ಲಿ ಏರಿಕೆ, ಇಳಿಕೆ ಕಂಡ ಪ್ರಮುಖ ಕಂಪೆನಿಗಳ ವಿವರ ಇಲ್ಲಿದೆ.

ಕರಡಿ ಹಿಡಿತದಲ್ಲಿ ಷೇರುಪೇಟೆ; ನೆಲ ಕಚ್ಚಿತು ಸೆನ್ಸೆಕ್ಸ್ 889 ಪಾಯಿಂಟ್ಸ್, ನಿಫ್ಟಿ 263 ಪಾಯಿಂಟ್ಸ್
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: Dec 17, 2021 | 5:14 PM

ಈ ಹಿಂದಿನ ಸೆಷನ್​ನಲ್ಲಿ ಸ್ವಲ್ಪ ಮಟ್ಟಿಗೆ ತುಸು ನಿರಾಳವಾದಂತೆ ಕಂಡುಬಂದ ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಡಿಸೆಂಬರ್ 17ನೇ ತಾರೀಕಿನ ಶುಕ್ರವಾರದಂದು ಭಾರೀ ಪ್ರಮಾಣದಲ್ಲಿ ಕುಸಿತ ಕಂಡಿತು. ಮಾರುಕಟ್ಟೆ ಸೂಚ್ಯಂಕಗಳು “ಕರಡಿ ಹಿಡಿತ”ಕ್ಕೆ ಸಿಲುಕಿದ್ದರಿಂದ ನಿಫ್ಟಿಯು 17 ಸಾವಿರ ಪಾಯಿಂಟ್ಸ್​ಗಿಂತ ಕೆಳಗೆ ಬಂದಿದೆ. ಮಾಹಿತಿ ತಂತ್ರಜ್ಞಾನ ವಲಯವೊಂದನ್ನು ಹೊರತುಪಡಿಸಿ, ಉಳಿದ ವಲಯಗಳಲ್ಲಿ ಮಾರಾಟದ ಒತ್ತಡ ಕಂಡುಬಂತು. ದಿನಾಂತ್ಯಕ್ಕೆ ಸೆನ್ಸೆಕ್ಸ್ 889.40 ಪಾಯಿಂಟ್ಸ್ ಅಥವಾ ಶೇ 1.54ರಷ್ಟು ಕುಸಿದು, 57,011.74 ಪಾಯಿಂಟ್ಸ್​​ನೊಂದಿಗೆ ವ್ಯವಹಾರ ಮುಗಿಸಿತು. ಇನ್ನು ನಿಫ್ಟಿ 263.20 ಪಾಯಿಂಟ್ಸ್​ ಅಥವಾ ಶೇ 1.53ರಷ್ಟು ನೆಲ ಕಚ್ಚಿ, 16,985.30 ಪಾಯಿಂಟ್ಸ್​​ನೊಂದಿಗೆ ವಹಿವಾಟು ಚುಕ್ತಾಗೊಳಿಸಿತು. ಇಂದಿನ ವಹಿವಾಟಿನಲ್ಲಿ 913 ಕಂಪೆನಿ ಷೇರುಗಳು ಏರಿಕೆ ದಾಖಲಿಸಿದರೆ, 2221 ಕಂಪೆನಿ ಷೇರುಗಳು ಇಳಿಕೆ ಕಂಡವು. 76 ಕಂಪೆನಿಯ ಷೇರುಗಳಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

ವಲಯವಾರು ನೋಡುವುದಾದರೆ ಮಾಹಿತಿ ತಂತ್ರಜ್ಞಾನ ಕ್ಷೇತ್ರವನ್ನು ಹೊರತುಪಡಿಸಿ, ಉಳಿದೆಲ್ಲವೂ ಇಳಿಕೆ ದಾಖಲಿಸಿದವು. ಬಿಎಸ್​ಇ ಮಿಡ್​ಕ್ಯಾಪ್ ಮತ್ತು ಸ್ಮಾಲ್​ಕ್ಯಾಪ್ ಸೂಚ್ಯಂಕಗಳು ತಲಾ ಶೇ 2ರಷ್ಟು ಇಳಿಕೆ ದಾಖಲಿಸಿದವು. ಇಂದಿನ ವಹಿವಾಟಿನಲ್ಲಿ ಏರಿಕೆ, ಇಳಿಕೆ ದಾಖಲಿಸಿದ ಪ್ರಮುಖ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ ಹೀಗಿದೆ:

ನಿಫ್ಟಿಯಲ್ಲಿ ಏರಿಕೆ ದಾಖಲಿಸಿದ ಪ್ರಮುಖ ಕಂಪೆನಿಗಳು ವಿಪ್ರೋ ಶೇ 4.11 ಇನ್ಫೋಸಿಸ್ ಶೇ 2.78 ಎಚ್​ಸಿಎಲ್​ ಟೆಕ್ ಶೇ 1.00 ಪವರ್​ಗ್ರಿಡ್ ಕಾರ್ಪೊರೇಷನ್ ಶೇ 0.84 ಸನ್​ ಫಾರ್ಮಾ ಶೇ 0.59

ನಿಫ್ಟಿಯಲ್ಲಿ ಇಳಿಕೆ ದಾಖಲಿಸಿದ ಪ್ರಮುಖ ಕಂಪೆನಿಗಳು ಇಂಡಸ್​ಇಂಡ್ ಬ್ಯಾಂಕ್ ಶೇ -4.88 ಟಾಟಾ ಮೋಟಾರ್ಸ್ ಶೇ -4.42 ಒಎನ್​ಜಿಸಿ ಶೇ -4.09 ಕೊಟಕ್ ಮಹೀಂದ್ರಾ ಶೇ -3.60 ಹಿಂದೂಸ್ತಾನ್ ಯುನಿಲಿವರ್​ ಲಿಮಿಟೆಡ್ ಶೇ -3.43

ಇದನ್ನೂ ಓದಿ: Rakesh Jhunjhunwala: ಕೇವಲ 10 ನಿಮಿಷದಲ್ಲಿ ಈ ಷೇರಿನಿಂದ 318 ಕೋಟಿ ರೂ. ಕಳೆದುಕೊಂಡ ರಾಕೇಶ್ ಜುಂಜುನ್​ವಾಲಾ

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು