AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sensex stocks: ಸತತ ಎರಡು ದಿನದಲ್ಲಿ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 1000 ಪಾಯಿಂಟ್ಸ್ ಇಳಿಕೆ

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಜನವರಿ 19ನೇ ತಾರೀಕಿನ ಬುಧವಾರದಂದು ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿವೆ.

Sensex stocks: ಸತತ ಎರಡು ದಿನದಲ್ಲಿ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 1000 ಪಾಯಿಂಟ್ಸ್ ಇಳಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 19, 2022 | 5:01 PM

Share

ಭಾರತದ ಷೇರು ಮಾರುಕಟ್ಟೆ (Stock Market) ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಜನವರಿ 19ನೇ ತಾರೀಕಿನ ಬುಧವಾರ ಸಹ ಸತತ ಎರಡನೇ ದಿನ ಇಳಿಕೆ ದಾಖಲಿಸಿದೆ. ದಿನಾಂತ್ಯಕ್ಕೆ ಸೆನ್ಸೆಕ್ಸ್ 656.04 ಪಾಯಿಂಟ್ಸ್ ಅಥವಾ ಶೇ 1.08ರಷ್ಟು ಕುಸಿತ ಕಂಡು, 60,098.82 ಪಾಯಿಂಟ್ಸ್​ನೊಂದಿಗೆ ವ್ಯವಹಾರ ಚುಕ್ತಾ ಮಾಡಿದೆ. ಇನ್ನು ನಿಫ್ಟಿ 174.60 ಪಾಯಿಂಟ್ಸ್ ಅಥವಾ ಶೇ 0.96ರಷ್ಟು ಇಳಿಕೆಯಾಗಿ, 17,938.40 ಪಾಯಿಂಟ್ಸ್​ನಲ್ಲಿ ವಹಿವಾಟು ಮುಕ್ತಾಯ ಮಾಡಿದೆ. ಇಂದಿನ ವಹಿವಾಟಿನಲ್ಲಿ 1432 ಷೇರುಗಳು ಏರಿಕೆಯನ್ನು ದಾಖಲು ಮಾಡಿದರೆ, 1766 ಕಂಪೆನಿಯ ಷೇರುಗಳು ಇಳಿಕೆ ಕಂಡಿವೆ. 72 ಕಂಪೆನಿಗಳ ಷೇರು ಬೆಲೆಯಲ್ಲಿ ಏನೂ ಬದಲಾವಣೆ ಆಗಲಿಲ್ಲ. ವಲಯವಾರು ನೋಡಿದಾಗ ಮಿಶ್ರ ಫಲಿತಾಂಶ ಕಂಡುಬಂತು. ವಾಹನ, ಲೋಹ, ವಿದ್ಯುತ್ ಮತ್ತು ತೈಲ ಹಾಗೂ ಅನಿಲ ಸೂಚ್ಯಂಕಗಳು ಏರಿಕೆಯಲ್ಲಿ ಕೊನೆಗೊಂಡವು.

ಬ್ಯಾಂಕ್, ಎಫ್​ಎಂಸಿಜಿ, ಮಾಹಿತಿ ತಂತ್ರಜ್ಞಾನ, ಫಾರ್ಮಾ ಮತ್ತು ರಿಯಾಲ್ಟಿ ವಲಯದಲ್ಲಿ ಮಾರಾಟ ಕಂಡುಬಂತು. ಬಿಎಸ್​ಇ ಮಿಡ್​ಕ್ಯಾಪ್​ ಸೂಚ್ಯಂಕ ಶೇ 0.3ರಷ್ಟು ಇಳಿಕೆ ಕಂಡರೆ, ಸ್ಮಾಲ್​ಕ್ಯಾಪ್ ಸೂಚ್ಯಂಕದಲ್ಲಿ ಹೆಚ್ಚಿನ ಬದಲಾವಣೆ ಇಲ್ಲದೆ ಕೊನೆ ಆಯಿತು. ಈ ಮಧ್ಯೆ 2014ರ ನಂತರ ಕಚ್ಚಾ ತೈಲ ಬೆಲೆಯು ದಾಖಲೆಯ ಮಟ್ಟವನ್ನು ಮುಟ್ಟಿದೆ. ಇರಾಕ್​ನಿಂದ ಟರ್ಕಿಗೆ ಪೈಪ್​ಲೈನ್ ಸಮಸ್ಯೆ ಮತ್ತು ಜಾಗತಿಕ ರಾಜಕೀಯ ಒತ್ತಡ, ಹಣದುಬ್ಬರದ ಆತಂಕ ಇವೆಲ್ಲದರ ಮಧ್ಯೆ ಡಾಲರ್ ವಾರದ ಗರಿಷ್ಠ ಮಟ್ಟದಲ್ಲಿತ್ತು.

ನಿಫ್ಟಿಯಲ್ಲಿ ಏರಿಕೆ ಕಂಡ ಪ್ರಮುಖ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ ಒಎನ್​ಜಿಸಿ ಶೇ 3.91 ಟಾಟಾ ಮೋಟಾರ್ಸ್ ಶೇ 1.97 ಕೋಲ್ ಇಂಡಿಯಾ ಶೇ 1.93 ಎಸ್​ಬಿಐ ಶೇ 1.78 ಹಿಂಡಾಲ್ಕೋ ಶೇ 1.77

ನಿಫ್ಟಿಯಲ್ಲಿ ಇಳಿಕೆ ಕಂಡ ಪ್ರಮುಖ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ ಇನ್ಫೋಸಿಸ್ ಶೇ -2.80 ಶ್ರೀ ಸಿಮೆಂಟ್ಸ್ ಶೇ -2.77 ಏಷ್ಯನ್ ಪೇಂಟ್ಸ್ ಶೇ -2.77 ಹಿಂದೂಸ್ತಾನ್ ಯುನಿಲಿವರ್ ಶೇ -2.52 ಗ್ರಾಸಿಮ್ ಶೇ -2.47

ಇದನ್ನೂ ಓದಿ: Multibagger penny stocks: ಈ ಮಲ್ಟಿಬ್ಯಾಗರ್ ಪೆನ್ನಿ ಸ್ಟಾಕ್​ನಲ್ಲಿ ಹೂಡಿದ 1 ಲಕ್ಷ ರೂಪಾಯಿ 10 ವರ್ಷಗಳಲ್ಲಿ ರೂ. 4 ಕೋಟಿಗೆ

Follow Us
TV9 Web
TV9 Web

TV9 Kannada

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್