AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sensex Stocks: ಷೇರುಪೇಟೆಯಲ್ಲಿ ಒಂದೇ ದಿನ ಹೂಡಿಕೆದಾರರ 4.29 ಲಕ್ಷ ಕೋಟಿ ರೂ. ಉಡೀಸ್; ಸೆನ್ಸೆಕ್ಸ್ 950 ಪಾಯಿಂಟ್ಸ್ ಕುಸಿತ

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ 950 ಪಾಯಿಂಟ್ಸ್, ನಿಫ್ಟಿ 284 ಪಾಯಿಂಟ್ಸ್ ಕುಸಿತವಾಗಿದೆ. ಇಂದಿನ ವಹಿವಾಟಿನಲ್ಲಿ ಕುಸಿತ ಕಂಡ ಪ್ರಮುಖ ಷೇರುಗಳ ವಿವರ ಇಲ್ಲಿದೆ.

Sensex Stocks: ಷೇರುಪೇಟೆಯಲ್ಲಿ ಒಂದೇ ದಿನ ಹೂಡಿಕೆದಾರರ 4.29 ಲಕ್ಷ ಕೋಟಿ ರೂ. ಉಡೀಸ್; ಸೆನ್ಸೆಕ್ಸ್ 950 ಪಾಯಿಂಟ್ಸ್ ಕುಸಿತ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 06, 2021 | 5:03 PM

Share

ಕೊರೊನಾದ ಒಮಿಕ್ರಾನ್ ವೇರಿಯಂಟ್​ ವ್ಯಾಪಿಸುತ್ತಿರುವ ಬಗ್ಗೆ ಹೆಚ್ಚುತ್ತಿರುವ ಆತಂಕದ ಮಧ್ಯೆ ಡಿಸೆಂಬರ್ 6ನೇ ತಾರೀಕಿನ ಸೋಮವಾರದಂದು ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳ ಪೈಕಿ ಎನ್​ಎಸ್​ಇ ನಿಫ್ಟಿ 17,000 ಪಾಯಿಂಟ್ಸ್​ಗಳಿಗಿಂತ ಕೆಳಗೆ ದಿನಾಂತ್ಯದ ವ್ಯವಹಾರವನ್ನು ಮುಗಿಸಿದೆ. ಆ ಮೂಲಕ ಷೇರು ಮಾರುಕಟ್ಟೆಯು ಸತತ ಎರಡನೇ ದಿನವೂ ಇಳಿಕೆ ದಾಖಲಿಸಿದೆ. ದಿನಾಂತ್ಯಕ್ಕೆ ಬಿಎಸ್​ಇ ಸೆನ್ಸೆಕ್ಸ್ 949.32 ಪಾಯಿಂಟ್ ಅಥವಾ ಶೇ 1.65ರಷ್ಟು ಇಳಿಕೆಯಾಗಿ 56,747.14 ಪಾಯಿಂಟ್ಸ್​ನಲ್ಲಿ ವಹಿವಾಟು ಚುಕ್ತಾ ಮಾಡಿದೆ. ಇನ್ನು ಎನ್​ಎಸ್​ಇ ನಿಫ್ಟಿ 284.40 ಪಾಯಿಂಟ್ ಅಥವಾ ಶೇ 1.65ರಷ್ಟು ಕುಸಿದು, 16,912.30 ಪಾಯಿಂಟ್ಸ್​ಗೆ ತಲುಪಿದೆ. ಇಂದಿನ ವಹಿವಾಟಿನಲ್ಲಿ ಸುಮಾರು 1340 ಕಂಪೆನಿಗಳ ಷೇರು ಮೇಲಕ್ಕೆ ಏರಿದರೆ, 1948 ಕಂಪೆನಿಗಳ ಷೇರು ಇಳಿಕೆ ಕಂಡಿವೆ. 165 ಕಂಪೆನಿಯ ಷೇರುಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

ಯುಪಿಎಲ್ ಹೊರತುಪಡಿಸಿ ನಿಫ್ಟಿ- 50 ಅಡಿಯಲ್ಲಿನ ಇತರ ಎಲ್ಲ ಷೇರುಗಳು ಇಳಿಕೆ ದಾಖಲಿಸಿದವು. ವಲಯವಾರು ಗಮನಿಸುವುದಾದರೆ, ಮಾಹಿತಿ ತಂತ್ರಜ್ಞಾನ ಸೂಚ್ಯಂಕವು ಶೇಕಡಾ 2 ಕ್ಕಿಂತ ಹೆಚ್ಚು ಕುಸಿದಿದೆ, ಆದರೆ ಇತರ ವಲಯಗಳು ತಲಾ ಶೇಕಡಾ 1ರಷ್ಟು ಕಳೆದುಕೊಂಡಿವೆ. ಬಿಎಸ್‌ಇ ಮಿಡ್‌ಕ್ಯಾಪ್ ಮತ್ತು ಸ್ಮಾಲ್‌ಕ್ಯಾಪ್ ಸೂಚ್ಯಂಕಗಳು ತಲಾ ಶೇ 1ರಷ್ಟು ಕುಸಿದವು. ಷೇರು ಮಾರುಕಟ್ಟೆಯ ಹೂಡಿಕೆದಾರರ ಸಂಪತ್ತು 4.29 ಲಕ್ಷ ಕೋಟಿ ರೂಪಾಯಿ ಕೊಚ್ಚಿಕೊಂಡು ಹೋಯಿತು.

ಎನ್​ಎಸ್​ಇಯಲ್ಲಿ ಏರಿಕೆ ಕಂಡ ಪ್ರಮುಖ ಷೇರುಗಳು ಮತ್ತು ಶೇಕಡಾವಾರು ಪ್ರಮಾಣ ಯುಪಿಎಲ್​ ಶೇ 0.53

ಎನ್​ಎಸ್​ಇಯಲ್ಲಿ ಏರಿಕೆ ಕಂಡ ಪ್ರಮುಖ ಷೇರುಗಳು ಮತ್ತು ಶೇಕಡಾವಾರು ಪ್ರಮಾಣ ಕೋಲ್ ಇಂಡಿಯಾ ಶೇ -7.01 ಇಂಡಸ್​ಇಂಡ್​ ಬ್ಯಾಂಕ್ ಶೇ -3.73 ಟಾಟಾ ಕನ್ಸ್ಯೂಮರ್ ಪ್ರಾಡಕ್ಟ್ಸ್ ಶೇ -3.45 ಬಜಾಜ್​ ಫಿನ್​ಸರ್ವ್ ಶೇ -3.40 ಎಚ್​ಸಿಎಲ್​ ಟೆಕ್ ಶೇ -2.98

ಇದನ್ನೂ ಓದಿ: T+1 Settlement Cycle: ಷೇರುಪೇಟೆಯಲ್ಲಿ T+1 ತೀರುವಳಿ ಫೆಬ್ರವರಿ 25ರಿಂದ ಹಂತ ಹಂತವಾಗಿ ಪರಿಚಯ

Published On - 4:58 pm, Mon, 6 December 21

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ