AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stock Market Closing Bell: ಸೆನ್ಸೆಕ್ಸ್ 673 ಪಾಯಿಂಟ್ಸ್, ನಿಫ್ಟಿ 180 ಪಾಯಿಂಟ್ಸ್ ಏರಿಕೆ; ಎನ್​ಟಿಪಿಸಿ ಶೇ 5ಕ್ಕೂ ಹೆಚ್ಚು ಗಳಿಕೆ

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಹಾಗೂ ನಿಫ್ಟಿ ಜನವರಿ 4ನೇ ತಾರೀನ ಮಂಗಳವಾರದಂದು ಭಾರೀ ಏರಿಕೆ ಕಂಡಿವೆ.

Stock Market Closing Bell: ಸೆನ್ಸೆಕ್ಸ್ 673 ಪಾಯಿಂಟ್ಸ್, ನಿಫ್ಟಿ 180 ಪಾಯಿಂಟ್ಸ್ ಏರಿಕೆ; ಎನ್​ಟಿಪಿಸಿ ಶೇ 5ಕ್ಕೂ ಹೆಚ್ಚು ಗಳಿಕೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: Jan 04, 2022 | 4:57 PM

ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಜನವರಿ 4ನೇ ತಾರೀಕಿನ ಮಂಗಳವಾರದಂದು ಏರಿಕೆ ದಾಖಲಿಸಿವೆ. ದಿನಾಂತ್ಯಕ್ಕೆ 672.71 ಪಾಯಿಂಟ್ಸ್ ಅಥವಾ ಶೇ 1.14ರಷ್ಟು ಏರಿಕೆ ಕಂಡು, 59,855.93 ಪಾಯಿಂಟ್ಸ್​ನೊಂದಿಗೆ ವಹಿವಾಟು ಮುಗಿಸಿದೆ. ಇನ್ನು ನಿಫ್ಟಿ 179.60 ಪಾಯಿಂಟ್ಸ್ ಅಥವಾ ಶೇ 1.02ರಷ್ಟು ಮೇಲೇರಿ, 17805.30 ಪಾಯಿಂಟ್ಸ್​ನೊಂದಿಗೆ ವ್ಯವಹಾರ ಚುಕ್ತಾ ಮಾಡಿದೆ. ಲೋಹ ಹಾಗೂ ಫಾರ್ಮಾ ಇವೆರಡು ವಲಯಗಳನ್ನು ಹೊರತುಪಡಿಸಿ, ಇನ್ನೆಲ್ಲವೂ ಏರಿಕೆಯಲ್ಲೇ ದಿನದ ವ್ಯವಹಾರವನ್ನು ಮುಗಿಸಿವೆ. ಬ್ಯಾಂಕ್, ತೈಲ ಹಾಗೂ ಅನಿಲ ಮತ್ತು ವಿದ್ಯುತ್ ವಲಯದ ಸೂಚ್ಯಂಕಗಳು ಶೇ 1ರಿಂದ 2ರಷ್ಟು ಹೆಚ್ಚಳವಾಗಿವೆ. ಬಿಎಸ್​ಇ ಮಿಡ್​ಕ್ಯಾಪ್ ಸೂಚ್ಯಂಕದಲ್ಲಿ ಹೇಳಿಕೊಳ್ಳುವಂಥ ಬದಲಾವಣೆಗಳೇನೂ ಆಗಿಲ್ಲ. ಸ್ಮಾಲ್ ಕ್ಯಾಪ್ ಸೂಚ್ಯಂಕವು ಶೇ 0.39ರಷ್ಟು ಏರಿಕೆಯಾಗಿದೆ.

ನಿಫ್ಟಿಯಲ್ಲಿ ಏರಿಕೆ ಕಂಡ ಪ್ರಮುಖ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ ಎನ್​ಟಿಪಿಸಿ ಶೇ 5.48 ಒಎನ್​ಜಿಸಿ ಶೇ 3.32 ಪವರ್​ಗ್ರಿಡ್ ಕಾರ್ಪೊರೇಷನ್ ಶೇ 2.73 ಎಸ್​ಬಿಐ ಶೇ 2.70 ಟೈಟಾನ್ ಕಂಪೆನಿ ಶೇ 2.34

ನಿಫ್ಟಿಯಲ್ಲಿ ಇಳಿಕೆ ಕಂಡ ಪ್ರಮುಖ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ ಟಾಟಾ ಮೋಟಾರ್ಸ್ ಶೇ -1.61 ಕೋಲ್ ಇಂಡಿಯಾ ಶೇ -1.48 ಸನ್ ಫಾರ್ಮಾ ಶೇ -1.33 ಟಾಟಾ ಕನ್​ಸ್ಯೂಮರ್ ಪ್ರಾಡಕ್ಟ್ಸ್ ಶೇ -1.22 ಶ್ರೀ ಸಿಮೆಂಟ್ಸ್ ಶೇ -1.08

ಇದನ್ನೂ ಓದಿ: Multibagger stock: ಈ ಮಲ್ಟಿಬ್ಯಾಗರ್ ಸ್ಟಾಕ್ ಮೇಲೆ 3 ವರ್ಷದ ಹಿಂದೆ ಮಾಡಿದ 1 ಲಕ್ಷದ ಹೂಡಿಕೆ ಈಗ ಎಷ್ಟು ಕೋಟಿ ಗೊತ್ತೆ?

ಅಕ್ಷಯ ತೃತೀಯ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
ಅಕ್ಷಯ ತೃತೀಯ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ