AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಂಕದ ಬಗ್ಗೆ ಅಮೆರಿಕದ ಸುಪ್ರೀಂ ಕೋರ್ಟ್ ತೀರ್ಪಿನ ಪರಿಣಾಮಗಳ ಅಧ್ಯಯನ ಮಾಡುತ್ತಿದ್ದೇವೆ; ಭಾರತ ಪ್ರತಿಕ್ರಿಯೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕ್ಯಾಬಿನೆಟ್ ಒಪ್ಪಿಗೆಯಿಲ್ಲದೆ ಏಕಾಂಗಿಯಾಗಿ ಸುಂಕ ವಿಧಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದು ಕಾನೂನುಬಾಹಿರ ಎಂದು ಅಮೆರಿಕದ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಅಲ್ಲದೆ, ಟ್ರಂಪ್ ಬೇರೆ ದೇಶಗಳ ಮೇಲೆ ವಿಧಿಸಿದ್ದ ಸುಂಕವನ್ನು ರದ್ದುಗೊಳಿಸಿದೆ. ಟ್ರಂಪ್ ಹೇರಿದ ಸುಂಕಗಳ ಕುರಿತು ಅಮೆರಿಕದ ಸುಪ್ರೀಂ ಕೋರ್ಟ್ ಆದೇಶದ ನಂತರ ಭಾರತ ಈ ಬಗ್ಗೆ ಪ್ರತಿಕ್ರಿಯೆ ನೀಡಿದೆ. ಅಮೆರಿಕದ ಬೆಳವಣಿಗೆಗಳನ್ನು ಅಧ್ಯಯನ ಮಾಡಲಾಗುತ್ತಿದೆ ಎಂದು ಭಾರತದ ವಾಣಿಜ್ಯ ಸಚಿವಾಲಯ ಮೊದಲ ಪ್ರತಿಕ್ರಿಯೆ ನೀಡಿದೆ.

ಸುಂಕದ ಬಗ್ಗೆ ಅಮೆರಿಕದ ಸುಪ್ರೀಂ ಕೋರ್ಟ್ ತೀರ್ಪಿನ ಪರಿಣಾಮಗಳ ಅಧ್ಯಯನ ಮಾಡುತ್ತಿದ್ದೇವೆ; ಭಾರತ ಪ್ರತಿಕ್ರಿಯೆ
Piyush Goyal
ಸುಷ್ಮಾ ಚಕ್ರೆ
|

Updated on: Feb 21, 2026 | 6:04 PM

Share

ನವದೆಹಲಿ, ಫೆಬ್ರವರಿ 21: ಅಮೆರಿಕದ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ (Donald Trump) ವಿಧಿಸಿದ ಸುಂಕಗಳನ್ನು ರದ್ದುಗೊಳಿಸುವ ಯುಎಸ್ ಸುಪ್ರೀಂ ಕೋರ್ಟ್ ತೀರ್ಪಿನ ಪರಿಣಾಮಗಳನ್ನು ಭಾರತ ಸೂಕ್ಷ್ಮವಾಗಿ ಪರಿಶೀಲಿಸುತ್ತಿದೆ ಎಂದು ಭಾರತದ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. “ನಿನ್ನೆ ಸುಂಕಗಳ ಕುರಿತು ಅಮೆರಿಕದ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ನಾವು ಗಮನಿಸಿದ್ದೇವೆ. ಅಧ್ಯಕ್ಷ ಟ್ರಂಪ್ ಆ ನಿಟ್ಟಿನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಯುಎಸ್ ಸರ್ಕಾರ ಈಗಾಗಲೇ ಕೆಲವು ಕ್ರಮಗಳನ್ನು ಪ್ರಕಟಿಸಿದೆ. ಈ ಎಲ್ಲಾ ಬೆಳವಣಿಗೆಗಳ ಪರಿಣಾಮಗಳಿ ಬಗ್ಗೆ ನಾವು ಅಧ್ಯಯನ ಮಾಡುತ್ತಿದ್ದೇವೆ” ಎಂದು ವಾಣಿಜ್ಯ ಸಚಿವಾಲಯ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಅಮೆರಿಕದಲ್ಲಿ ನಡೆದ ಬೆಳವಣಿಗೆಗಳ ನಂತರ ಭಾರತದಿಂದ ಬಂದ ಮೊದಲ ಅಧಿಕೃತ ಪ್ರತಿಕ್ರಿಯೆ ಇದಾಗಿದೆ. ರಷ್ಯಾದೊಂದಿಗಿನ ಕಚ್ಚಾ ತೈಲ ವ್ಯಾಪಾರದಿಂದಾಗಿ ಭಾರತದ ಮೇಲೆ ವಿಧಿಸಲಾಗಿದ್ದ ಶೇ. 25ರಷ್ಟು ಆರಂಭಿಕ ಸುಂಕವನ್ನು ಶೇ. 50ಕ್ಕೆ ಏರಿಸಿತ್ತು. ಇತ್ತೀಚೆಗೆ ಟ್ರಂಪ್ ಸರ್ಕಾರದೊಂದಿಗಿನ ಬಹುನಿರೀಕ್ಷಿತ ಮಧ್ಯಂತರ ವ್ಯಾಪಾರ ಒಪ್ಪಂದದ ಅಡಿಯಲ್ಲಿ ಸುಂಕವನ್ನು ಶೇ. 18ಕ್ಕೆ ಇಳಿಸಲಾಗಿತ್ತು.

ಇದನ್ನೂ ಓದಿ: ಮನಬಂದಂತೆ ಸುಂಕ ಹೇರಿದ ಟ್ರಂಪ್​ಗೆ ಶಾಕ್ ಕೊಟ್ಟ ಅಮೆರಿಕದ ಸುಪ್ರೀಂ ಕೋರ್ಟ್

ಆದರೆ, ಭಾರತವು ರಷ್ಯಾದಿಂದ ನೇರವಾಗಿ ಅಥವಾ ಪರೋಕ್ಷವಾಗಿ ಇಂಧನ ಆಮದು ಮಾಡಿಕೊಳ್ಳುವುದನ್ನು ನಿಲ್ಲಿಸಲು ಮತ್ತು ಅಮೇರಿಕನ್ ಇಂಧನ ಉತ್ಪನ್ನಗಳ ಖರೀದಿಯನ್ನು ವಿಸ್ತರಿಸಲು ಬದ್ಧವಾಗಿದೆ ಎಂದು ಟ್ರಂಪ್ ಹೇಳಿದ ನಂತರ ರಷ್ಯಾದ ತೈಲ ಆಮದುಗಳಿಗೆ ಸಂಬಂಧಿಸಿದ ಹೆಚ್ಚುವರಿ ಶೇ. 25ರಷ್ಟು ಸುಂಕಗಳನ್ನು ಹಿಂತೆಗೆದುಕೊಳ್ಳಲಾಯಿತು.

ಡೊನಾಲ್ಡ್​ ಟ್ರಂಪ್​ ಕ್ಯಾಬಿನೆಟ್ ಒಪ್ಪಿಗೆಯಿಲ್ಲದೆ ಸುಂಕದ ಬಗ್ಗೆ ಏಕಾಂಗಿಯಾಗಿ ನಿರ್ಧಾರ ತೆಗೆದುಕೊಳ್ಳುವಂತಿಲ್ಲ ಎಂದು ಅಮೆರಿಕದ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಟ್ರಂಪ್ ಹೇರಿದ ಸುಂಕಗಳ ವಿರುದ್ಧ ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಟ್ರಂಪ್ ಇಂದು ಜಾಗತಿಕವಾಗಿ ಹೊಸ ಸುಂಕವನ್ನು ಘೋಷಿಸಿದ್ದಾರೆ. ಆ ಪ್ರಕಾರ, ಅಮೆರಿಕಕ್ಕೆ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಭಾರತಕ್ಕೆ ವಿಧಿಸಲಾದ ಸುಂಕ ಇದೀಗ ಶೇ. 18ರಿಂದ ಶೇ. 10ಕ್ಕೆ ಇಳಿಕೆಯಾಗಿದೆ. ಫೆಬ್ರವರಿ 24ರಿಂದ ಈ ಆದೇಶ ಜಾರಿಗೆ ಬರಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ