AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನ್ಯಾವತ್ತೂ ಹೂಡಿಕೆ ಬಗ್ಗೆ ಮಾತನಾಡಲ್ಲ, ನಕಲಿ ವಿಡಿಯೋಗಳ ಬಗ್ಗೆ ಎಚ್ಚರದಿಂದಿರಿ: ಸುಧಾ ಮೂರ್ತಿ

Sudha Murthy warns of deepfake videos misusing her identity: 200 ಡಾಲರ್ ಹೂಡಿಕೆ ಮಾಡಿದರೆ 10 ಪಟ್ಟು ರಿಟರ್ನ್ ಸಿಗುತ್ತದೆ ಎಂದು ಸುಧಾ ಮೂರ್ತಿ ಹೇಳಿದರೆನ್ನಲಾದ ವಿಡಿಯೋವೊಂದು ವೈರಲ್ ಆಗಿದೆ. ಆದರೆ, ಇವು ಡೀಪ್​ಫೇಕ್ ನಕಲಿ ವಿಡಿಯೋಗಳಾಗಿದ್ದು, ಅವನ್ನು ನಂಬಿ ಮೋಸಹೋಗಬೇಡಿ ಎಂದು ಸುಧಾ ಮೂರ್ತಿ ಹೇಳಿದ್ದಾರೆ. ತಾನು ಯಾವತ್ತೂ ಕೂಡ ಹೂಡಿಕೆ ಬಗ್ಗೆ ಮಾತನಾಡಲ್ಲ. ಕೆಲಸ, ಸಂಸ್ಕೃತಿ, ಮಹಿಳೆ, ಸಮಾಜದ ಬಗ್ಗೆ ಮಾತನಾಡುತ್ತೇನೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ನಾನ್ಯಾವತ್ತೂ ಹೂಡಿಕೆ ಬಗ್ಗೆ ಮಾತನಾಡಲ್ಲ, ನಕಲಿ ವಿಡಿಯೋಗಳ ಬಗ್ಗೆ ಎಚ್ಚರದಿಂದಿರಿ: ಸುಧಾ ಮೂರ್ತಿ
ಸುಧಾ ಮೂರ್ತಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 21, 2026 | 1:25 PM

Share

ಬೆಂಗಳೂರು, ಜನವರಿ 21: ಡೀಪ್ ಫೇಕ್ ತಂತ್ರಜ್ಞಾನ ಬಂದ ಬಳಿಕ ಸೋಷಿಯಲ್ ಮೀಡಿಯಾಗಳಲ್ಲಿ ನಾನಾ ಸೆಲಬ್ರಿಟಿಗಳ ವಿಡಿಯೋಗಳು ಹರಿದಾಡುತ್ತಿವೆ. ಇಷ್ಟು ಹಣ ಹೂಡಿಕೆ ಮಾಡಿ, ಇಷ್ಟು ಲಾಭ ಮಾಡಿ ಎಂಬಿತ್ಯಾದಿ ಪ್ರಲೋಭನೆಗಳನ್ನು ಈ ವಿಡಿಯೋಗಳಲ್ಲಿ ಕಾಣಬಹುದು. ಇಂಥ ಬಹುತೇಕ ವಿಡಿಯೋಗಳು ಡೀಪ್​ಫೇಕ್ (Deepfake) ಬಳಸಿ ತಯಾರಾದ ನಕಲಿ ವಿಡಿಯೋಗಳೇ ಆಗಿವೆ. ನಿರ್ಮಲಾ ಸೀತಾರಾಮನ್, ಸುಧಾ ಮೂರ್ತಿ (Sudha Murthy) ಇತ್ಯಾದಿ ಗಣ್ಯ ವ್ಯಕ್ತಿಗಳೇ ಮಾತನಾಡಿರುವಂತೆ ಈ ವಿಡಿಯೋಗಳಿವೆ. ಸ್ವತಃ ನರೇಂದ್ರ ಮೋದಿ ಅವರನ್ನೇ ಬಿಟ್ಟಿಲ್ಲ.

ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾ ಮೂರ್ತಿ ಅವರು ತಮ್ಮ ಮುಖ ಬಳಸಿ ಸೃಷ್ಟಿ ಮಾಡಲಾಗಿರುವ ನಕಲಿ ವಿಡಿಯೋಗಳ ಬಗ್ಗೆ ಜಾಗ್ರತೆಯಿಂದ ಇರುವಂತೆ ಸಾರ್ವಜನಿಕರನ್ನು ಎಚ್ಚರಿಸಿ ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದಾರೆ. 200 ಡಾಲರ್ ಹೂಡಿಕೆ ಮಾಡಿ ಹತ್ತು ಪಟ್ಟು ಹೆಚ್ಚು ರಿಟರ್ನ್ ಗಳಿಸಬಹುದು ಎಂದು ಅವರು ಹೇಳಿರುವ ಫೇಕ್ ವಿಡಿಯೋವೊಂದರ ಸಂಬಂಧ ಸುಧಾ ಮೂರ್ತಿ ಸ್ಪಷ್ಟನೆ ಕೊಟ್ಟು ವಿಡಿಯೋ ಹಾಕಿದ್ದಾರೆ.

ಇದನ್ನೂ ಓದಿ: ಸಿಮೆಂಟ್ ತ್ಯಾಜ್ಯದಿಂದ ಹೊಸ ಬ್ಯುಸಿನೆಸ್ ಐಡಿಯಾ ಮಾಡಿ ಗೆದ್ದ ಪ್ರಾಚಿ ಪೊದ್ದಾರ್; ಮದುವೆ ಒತ್ತಡದ ನಡುವೆಯೂ ಕುಂದದ ಛಲ

‘ನನ್ನ ಚಿತ್ರ ಮತ್ತು ಧ್ವನಿ ಬಳಸಿ ಹಣಕಾಸು ಯೋಜನೆ ಮತ್ತು ಹೂಡಿಕೆಗಳ ಬಗ್ಗೆ ಪ್ರಚಾರ ಮಾಡುತ್ತಿರುವ ವಿಡಿಯೋಗಳನ್ನು ರಚಿಸಿ ಆನ್​ಲೈನ್​ನಲ್ಲಿ ಹರಿಯಿಸಲಾಗುತ್ತಿದೆ. ಇವು ನನಗೆ ಗೊತ್ತಿಲ್ಲದಂತೆ ಮಾಡಿರುವ ಡೀಪ್​ಫೇಕ್ ವಿಡಿಯೋಗಳಾಗಿವೆ. ಇವುಗಳ ಬಗ್ಗೆ ಎಚ್ಚರದಿಂದಿರಿ’ ಎಂದು ಸುಧಾ ಮೂರ್ತಿ ಅವರು ತಿಳಿಸಿದ್ದಾರೆ.

200 ಡಾಲರ್ ಹೂಡಿಕೆ ಮಾಡಿ ಹತ್ತು ಪಟ್ಟು ಹೆಚ್ಚು ಹಣ ಗಳಿಸಿ ಎಂದು ತಾನು ಹೇಳಿದ್ದೆನ್ನಲಾದ ವಿಡಿಯೋಗಳು ಹರಿದಾಡುತ್ತಿವೆ. ಇದರಲ್ಲ ತಿಳಿಸಲಾಗಿರುವುದೆಲ್ಲವೂ ಸುಳ್ಳು. ತನಗೆ ಗೊತ್ತಿರುವ ಕೆಲ ಜನರು ಇಂಥ ಸ್ಕ್ಯಾಮ್​ಗಳಿಗೆ ಬಲಿಯಾಗಿ ಹಣ ಕಳೆದುಕೊಂಡಿದ್ದಾರೆ ಎಂದೂ ಸುಧಾ ಮೂರ್ತಿ ವಿವರಿಸಿದ್ದಾರೆ.

ಸುಧಾ ಮೂರ್ತಿ ಅವರ ಎಕ್ಸ್ ಪೋಸ್ಟ್

‘ನಾನ್ಯಾವತ್ತೂ ಕೂಡ ಹೂಡಿಕೆಗಳ ಬಗ್ಗೆ ಮಾತನಾಡುವುದಿಲ್ಲ. ಹಣದ ವಿಚಾರವನ್ನೂ ಮಾತನಾಡುವುದಿಲ್ಲ. ನಾನೇನಿದ್ದರೂ ಕೆಲಸ, ಭಾರತದ ಸಂಸ್ಕೃತಿ, ಮಹಿಳೆಯರು, ಶಿಕ್ಷಣದ ಬಗ್ಗೆ ಮಾತನಾಡುತ್ತೇನೆ’ ಎಂದು ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಜಗತ್ತು ಮಂದಗೊಂಡರೂ ಭಾರತದ ಚುರುಕು ಬೆಳವಣಿಗೆ: ಡಾವೊಸ್ ಸಮಿಟ್​ನಲ್ಲಿ ಪ್ರಹ್ಲಾದ ಜೋಷಿ

‘ಇಂಥ ನಕಲಿ ವಿಡಿಯೋಗಳಲ್ಲಿ ಹೇಳಲಾಗಿರುವುದನ್ನು ನಂಬಿ ಯಾವುದೇ ಹಣಕಾಸು ನಿರ್ಧಾರ ತೆಗೆದುಕೊಳ್ಳಬೇಡಿ. ಹೊಸ ಸ್ಕೀಮ್ ಎಂದಿದ್ದರೆ ಬ್ಯಾಂಕಿಗೆ ಹೋಗಿ ವಿಚಾರಿಸಿ, ಮಾಹಿತಿ ಸರಿಯೋ ತಪ್ಪೋ ಎಂಬುದನ್ನು ತಿಳಿದುಕೊಳ್ಳಿ. ಅನುಮಾನ ಬಂದರೆ ಪೊಲೀಸ್ ಠಾಣೆಗೆ ಹೋಗಿ ಮಾಹಿತಿ ಕೊಡಿ’ ಎಂದು ಸುಧಾ ಮೂರ್ತಿ ಸಲಹೆ ಕೊಟ್ಟಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

VIDEO: ಮೊದಲ ಓವರ್​ನಲ್ಲೇ ಗೆರೆ ದಾಟಿ ಔಟಾದ ಬಾಬರ್ ಆಝಂ
VIDEO: ಮೊದಲ ಓವರ್​ನಲ್ಲೇ ಗೆರೆ ದಾಟಿ ಔಟಾದ ಬಾಬರ್ ಆಝಂ
ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕೈದಿಗಳ ಮಾರಾಮಾರಿ: ಕಲ್ಲಿನಿಂದ ಜಜ್ಜಿ ಹಲ್ಲೆ
ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕೈದಿಗಳ ಮಾರಾಮಾರಿ: ಕಲ್ಲಿನಿಂದ ಜಜ್ಜಿ ಹಲ್ಲೆ
ತೆಂಗಿನ ಗರಿಯಲ್ಲಿ ಅರಳಿದ ಡಾ. ಶಿವಕುಮಾರ ಸ್ವಾಮೀಜಿ ಕಲಾಕೃತಿ
ತೆಂಗಿನ ಗರಿಯಲ್ಲಿ ಅರಳಿದ ಡಾ. ಶಿವಕುಮಾರ ಸ್ವಾಮೀಜಿ ಕಲಾಕೃತಿ
ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್
ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್
ಉದ್ಘಾಟನೆಗೂ ಮುನ್ನವೇ ಕುಸಿದು ಬಿತ್ತು 21 ಕೋಟಿ ರೂ. ವೆಚ್ಚದ ನೀರಿನ ಟ್ಯಾಂಕ್
ಉದ್ಘಾಟನೆಗೂ ಮುನ್ನವೇ ಕುಸಿದು ಬಿತ್ತು 21 ಕೋಟಿ ರೂ. ವೆಚ್ಚದ ನೀರಿನ ಟ್ಯಾಂಕ್
ಕೆಲಸ ಮಾಡುವ ಕಚೇರಿಯಲ್ಲಿ ಇರಬೇಕಾದ ದೇವರ ಫೋಟೋಗಳು
ಕೆಲಸ ಮಾಡುವ ಕಚೇರಿಯಲ್ಲಿ ಇರಬೇಕಾದ ದೇವರ ಫೋಟೋಗಳು
ಇಂದು ಈ ರಾಶಿಯವರ ವೈವಾಹಿಕ ಜೀವನದಲ್ಲಿ ಅಸ್ಥಿರತೆ!
ಇಂದು ಈ ರಾಶಿಯವರ ವೈವಾಹಿಕ ಜೀವನದಲ್ಲಿ ಅಸ್ಥಿರತೆ!
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು