ಬೆಲೆ ಏರಿಕೆಗೆ ಕಡಿವಾಣ ಹಾಕಲು ಸಕ್ಕರೆ ರಫ್ತಿಗೆ ಭಾರತ ಸರ್ಕಾರ ನಿರ್ಬಂಧ: ಕಳೆದ 6 ವರ್ಷಗಳಲ್ಲಿ ಇದೇ ಮೊದಲು

ಈ ಬಾರಿಯ ಸಕ್ಕರೆ ಹಂಗಾಮಿನಲ್ಲಿ ರಫ್ತು ಪ್ರಮಾಣವನ್ನು 1 ಕೋಟಿ ಟನ್​ಗೆ ಮಿತಗೊಳಿಸಲಾಗಿದೆ.

ಬೆಲೆ ಏರಿಕೆಗೆ ಕಡಿವಾಣ ಹಾಕಲು ಸಕ್ಕರೆ ರಫ್ತಿಗೆ ಭಾರತ ಸರ್ಕಾರ ನಿರ್ಬಂಧ: ಕಳೆದ 6 ವರ್ಷಗಳಲ್ಲಿ ಇದೇ ಮೊದಲು
ದಿನಸಿ ಅಂಗಡಿಯೊಂದರಲ್ಲಿ ಸಕ್ಕರೆ ಮಾರಾಟ (ಸಂಗ್ರಹ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:May 25, 2022 | 11:19 AM

ಮುಂಬೈ: ಕಳೆದ ಆರು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಭಾರತ ಸರ್ಕಾರವು ಸಕ್ಕರೆ ರಫ್ತಿಗೆ (Sugar Export) ನಿರ್ಬಂಧ ವಿಧಿಸಿದೆ. ಈ ಬಾರಿಯ ಸಕ್ಕರೆ ಹಂಗಾಮಿನಲ್ಲಿ ರಫ್ತು ಪ್ರಮಾಣವನ್ನು 1 ಕೋಟಿ ಟನ್​ಗೆ ಮಿತಗೊಳಿಸಲಾಗಿದೆ. ಹಲವು ಸಕ್ಕರೆ ಕಾರ್ಖಾನೆಗಳು (Sugar Factories) ತಮ್ಮ ಬಳಿಯಿದ್ದ ದಾಸ್ತಾನನ್ನು ವಿಶ್ವ ಮಾರುಕಟ್ಟೆಯಲ್ಲಿ ಗರಿಷ್ಠ ಪ್ರಮಾಣಕ್ಕೆ ಮಾರಾಟ ಮಾಡಲು ಮುಂದಾದ ಹಿನ್ನೆಲೆಯಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ಹಿಡಿತದಲ್ಲಿ ಇರಿಸಲು ಕೇಂದ್ರ ಸರ್ಕಾರವು ಈ ನಿರ್ಧಾರ ತೆಗೆದುಕೊಂಡಿದೆ.

ಜೂನ್ 1ರಿಂದ ಅಕ್ಟೋಬರ್ 31ರ ನಡುವಣ ಅವಧಿಯಲ್ಲಿ ವಿದೇಶಗಳಿಗೆ ಸಕ್ಕರೆ ರಫ್ತು ಮಾಡುವ ಮೊದಲು ತನ್ನ ಅನುಮತಿ ಪಡೆಯುವುದು ಕಡ್ಡಾಯ ಎಂದು ಭಾರತ ಸರ್ಕಾರವು ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ. ವಿಶ್ವದ ಅತ್ಯಂತ ದೊಡ್ಡ ಸಕ್ಕರೆ ಉತ್ಪಾದಕ ದೇಶವಾಗಿರುವ ಭಾರತವು ಎರಡನೇ ಅತಿ ಹೆಚ್ಚು ಪ್ರಮಾಣದ ಸಕ್ಕರೆ ರಫ್ತು ಮಾಡುವ ದೇಶವೂ ಹೌದು. ಬ್ರೆಜಿಲ್ ವಿಶ್ವದಲ್ಲಿ ಅತಿಹೆಚ್ಚು ಸಕ್ಕರೆ ರಫ್ತು ಮಾಡುವ ದೇಶ ಎನಿಸಿದೆ.

ಸಕ್ಕರೆ ರಫ್ತಿಗೆ ಭಾರತ ಸರ್ಕಾರವು ಕಡಿವಾಣ ಹಾಕಬಹುದು ಎಂದು ಕಳೆದ ಮಾರ್ಚ್ ತಿಂಗಳಲ್ಲಿ ರಾಯಿಟರ್ಸ್ ಸುದ್ದಿಸಂಸ್ಥೆಯು ವರದಿ ಮಾಡಿತ್ತು. ಸ್ಥಳೀಯ ಮಾರುಕಟ್ಟೆಯಲ್ಲಿ ಬೆಲೆಏರಿಕೆಗೆ ಕಡಿವಾಣ ಹಾಕುವುದು ಮತ್ತು ನಿರಂತರ ಪೂರೈಕೆಯನ್ನು ಖಾತ್ರಿಪಡಿಸಿಕೊಳ್ಳುವ ಉದ್ದೇಶದಿಂದ ಭಾರತ ಸರ್ಕಾರವು ಇಂಥ ಕ್ರಮ ತೆಗೆದುಕೊಳ್ಳಬಹುದು ಎಂದು ವಿಶ್ಲೇಷಿಸಲಾಗಿತ್ತು.

ಸಕ್ಕರೆ ರಫ್ತು ನಿಷೇಧದ ಆದೇಶವನ್ನು ಭಾರತ ಸರ್ಕಾರವು ಪ್ರಕಟಿಸಿದ ನಂತರ ಲಂಡನ್​ನಲ್ಲಿ ಸಕ್ಕರೆ ವಹಿವಾಟಿನ ಮಾನದಂಡವಾಗಿ ಬಳಸುವ (ಬೆಂಚ್​ಮಾರ್ಕ್​ ವೈಟ್ ಶುಗರ್) ಬಿಳಿ ಸಕ್ಕರೆ ಬೆಲೆಯು ಶೇ 1ರಷ್ಟು ಹೆಚ್ಚಾಗಿದೆ. ಭಾರತದಲ್ಲಿ ಪ್ರತಿವರ್ಷವೂ ಹಬ್ಬಸಾಲಿನಲ್ಲಿ (ಅಕ್ಟೋಬರ್) ಸಕ್ಕರೆಗೆ ಬೇಡಿಕೆ ಹೆಚ್ಚಾಗುವುದು ವಾಡಿಕೆ. ಈ ಅವಧಿಯಲ್ಲಿ ದೇಶದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಸಕ್ಕರೆ ಇರಬೇಕು ಎನ್ನುವ ಕಾರಣಕ್ಕಾಗಿ ಸರ್ಕಾರವು ಇಂಥ ತೀರ್ಮಾನ ತೆಗೆದುಕೊಂಡಿದೆ ಎಂದು ಮುಂಬೈ ಮೂಲದ ಜಾಗತಿಕ ಸಕ್ಕರೆ ವಹಿವಾಟುದಾರರೊಬ್ಬರು ಪ್ರತಿಕ್ರಿಯಿಸಿದ್ದಾರೆ.

1 ಕೋಟಿ ಟನ್​ನಷ್ಟು ಸಕ್ಕರೆಯನ್ನು ವಿಶ್ವ ಮಾರುಕಟ್ಟೆಯಲ್ಲಿ ಮಾರಲು ಅವಕಾಶ ಮಾಡಿಕೊಟ್ಟಿರುವುದು ಸಹ ಉತ್ತಮ ನಿರ್ಧಾರವೇ ಆಗಿದೆ. ಇದರಿಂದ ವಿಶ್ವದ ವಿವಿಧ ದೇಶಗಳಲ್ಲಿ ಸಕ್ಕರೆ ಬೆಲೆ ತಹಬಂದಿಗೆ ಬರಲಿದೆ ಎಂದು ನಿರೀಕ್ಷಿಸಲಾಗಿದೆ. ಆರಂಭದಲ್ಲಿ 80 ಲಕ್ಷ ಟನ್​ ಸಕ್ಕರೆ ರಫ್ತಿಗೆ ಮಿತಿ ವಿಧಿಸಲು ಕೇಂದ್ರ ಸರ್ಕಾರ ನಿರ್ಧರಿಸಿತ್ತು. ಆದರೆ ನಂತರದ ದಿನಗಳಲ್ಲಿ ದೇಶದಲ್ಲಿ ಈ ಬಾರಿ ಸಕ್ಕರೆ ಉತ್ಪಾದನೆ ಹೆಚ್ಚಾಗಬಹುದು ಎಂಬ ಪರಿಷ್ಕೃತ ಅಂದಾಜು ಸಿಕ್ಕ ಕಾರಣ, ರಫ್ತು ಮಿತಿಯನ್ನು 1 ಕೋಟಿ ಟನ್​ಗೆ ಹೆಚ್ಚಿಸುವ ನಿರ್ಧಾರ ತೆಗೆದುಕೊಂಡಿತು.

ಸುದ್ದಿಯಲ್ಲಿ ಇಂಗ್ಲಿಷ್​ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

ಹಾಲಿ ಸಕ್ಕರೆ ಹಂಗಾಮಿನಲ್ಲಿ 3.55 ಕೋಟಿ ಟನ್ ಸಕ್ಕರೆ ಉತ್ಪಾದನೆಯಾಗಬಹುದು ಎಂದು ಭಾರತೀಯ ಸಕ್ಕರೆ ಕಾರ್ಖಾನೆಗಳ ಒಕ್ಕೂಟ (The Indian Sugar Mills Association) ಅಂದಾಜಿಸಿದೆ. ಈ ಹಿಂದೆ 3.1 ಕೋಟಿ ಟನ್ ಸಕ್ಕರೆ ಉತ್ಪಾದನೆಯಾಗಬಹುದು ಎಂದು ಅಂದಾಜಿಸಲಾಗಿತ್ತು. ಭಾರತದ ಸಕ್ಕರೆ ಕಾರ್ಖಾನೆಗಳು ಈವರೆಗೆ 91 ಲಕ್ಷ ಟನ್ ಸಕ್ಕರೆ ರಫ್ತಿಗೆ ವಿವಿಧ ದೇಶಗಳೊಂದಿಗೆ ಒಪ್ಪಂದ ಮಾಡಿಕೊಂಡಿವೆ. ಈ ಪೈಕಿ 82 ಲಕ್ಷ ಟನ್ ಸಕ್ಕರೆ ಈಗಾಗಲೇ ರವಾನೆಯಾಗಿದೆ. ಈ ಸರಕಿಗೆ ಸರ್ಕಾರದಿಂದ ಯಾವುದೇ ಸಬ್ಸಿಡಿ ಸಿಗುವುದಿಲ್ಲ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 11:04 am, Wed, 25 May 22

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ