ಕರ್ನಾಟಕ ಹೈಕೋರ್ಟ್​ನಲ್ಲಿ ಅಮೇಜಾನ್, ಫ್ಲಿಪ್​ಕಾರ್ಟ್ ಅರ್ಜಿಗಳ ವಿಚಾರಣೆಗೆ ಸುಪ್ರೀಂ ತಾತ್ಕಾಲಿಕ ತಡೆ

Amazon, Flipkart cases in Karnataka High Court: ಕಾಂಪಿಟೀಶನ್ ಕಮಿಷನ್ ಆಫ್ ಇಂಡಿಯಾದಿಂದ ತನಿಖೆಗೆ ಮಾಡಲಾಗಿರುವ ಆದೇಶವನ್ನು ಪ್ರಶ್ನಿಸಿ ಅಮೇಜಾನ್ ಮತ್ತು ಫ್ಲಿಪ್​ಕಾರ್ಟ್ ವಿವಿಧ ಹೈಕೋರ್ಟ್​ಗಳಲ್ಲಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್​ಗೆ ವರ್ಗಾಯಿಸಲಾಗುತ್ತಿದೆ. ಸುಪ್ರೀಂಕೋರ್ಟ್​ನ ವಿಭಾಗೀಯ ಪೀಠವೊಂದು ಸೋಮವಾರ ಈ ಅರ್ಜಿ ವರ್ಗಾವಣೆಗೆ ಸೂಚಿಸಿದೆ. ಹಾಗೆಯೇ, ಕರ್ನಾಟಕ ಹೈಕೋರ್ಟ್​ನಲ್ಲಿ ನಡೆಯುತ್ತಿರುವ ಈ ಅರ್ಜಿಯ ವಿಚಾರಣೆಗೆ ತಾತ್ಕಾಲಿಕವಾಗಿ ತಡೆಯನ್ನೂ ನೀಡಲಾಗಿದೆ.

ಕರ್ನಾಟಕ ಹೈಕೋರ್ಟ್​ನಲ್ಲಿ ಅಮೇಜಾನ್, ಫ್ಲಿಪ್​ಕಾರ್ಟ್ ಅರ್ಜಿಗಳ ವಿಚಾರಣೆಗೆ ಸುಪ್ರೀಂ ತಾತ್ಕಾಲಿಕ ತಡೆ
ಅಮೇಜಾನ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 16, 2024 | 7:55 PM

ನವದೆಹಲಿ, ಡಿಸೆಂಬರ್ 16: ಸಿಸಿಐ ತನಿಖೆಯ ಆದೇಶವನ್ನು ಪ್ರಶ್ನಿಸಿ ಅಮೇಜಾನ್ ಮತ್ತು ಫ್ಲಿಪ್​ಕಾರ್ಟ್ ಸಂಸ್ಥೆಗಳು ಕರ್ನಾಟಕ ಹೈಕೋರ್ಟ್​ನಲ್ಲಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಗಳಿಗೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಅಷ್ಟೇ ಅಲ್ಲ, ದೇಶದ ವಿವಿಧ ಹೈಕೋರ್ಟ್​ಗಳಲ್ಲಿ ಸಲ್ಲಿಕೆಯಾಗಿದ್ದ ಇಂತಹ ಅರ್ಜಿಗಳೆಲ್ಲವನ್ನೂ ಕರ್ನಾಟಕ ಹೈಕೋರ್ಟ್​ಗೆ ವರ್ಗಾಯಿಸಲು ಸರ್ವೋಚ್ಚ ನ್ಯಾಯಾಲಯ ಸೂಚಿಸಿದೆ. ದೇಶಾದ್ಯಂತ ವಿವಿಧ ಹೈಕೋರ್ಟ್​ಗಳಲ್ಲಿ 20 ಅರ್ಜಿಗಳು ಸಲ್ಲಿಕೆಯಾಗಿವೆ. ಸುಪ್ರೀಂಕೋರ್ಟ್ ಹಸಿರು ನಿಶಾನೆ ತೋರಿದ ಬಳಿಕ ಅವೆಲ್ಲವುಗಳ ವಿಚಾರಣೆ ಕರ್ನಾಟಕ ಹೈಕೋರ್ಟ್​ನಲ್ಲಿ ಒಟ್ಟಿಗೆ ನಡೆಯಲಿದೆ. ನಾಳೆ ಮಂಗಳವಾರ ಕರ್ನಾಟಕ ಹೈಕೋರ್ಟ್​​ನಲ್ಲಿ ವಿಚಾರಣೆ ನಿಗದಿಯಾಗಿತ್ತು. ಅದೀಗ

ಅಮೇಜಾನ್ ಮತ್ತು ಫ್ಲಿಪ್​ಕಾರ್ಟ್ ಸಂಸ್ಥೆಗಳು ಸ್ಪರ್ಧಾ ವಿರೋಧಿ ತಂತ್ರಗಳನ್ನು ಅನುಸರಿಸುತ್ತಿವೆ ಎನ್ನುವ ಆರೋಪದ ಮೇಲೆ ಭಾರತೀಯ ಸ್ಪರ್ಧಾ ಆಯೋಗವಾದ ಸಿಸಿಐ 2019ರಲ್ಲಿ ತನಿಖೆಗೆ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಈ ಎರಡು ಇ-ಕಾಮರ್ಸ್ ಕಂಪನಿಗಳು ವಿವಿಧ ಹೈಕೋರ್ಟ್​​ಗಳಲ್ಲಿ ಅರ್ಜಿ ಸಲ್ಲಿಸಿವೆ. ಈ ಅರ್ಜಿಗಳ ವಿಚಾರಣೆಯನ್ನು ಒಂದು ಕಡೆಗೆ ವರ್ಗಾವಣೆ ಮಾಡುವಂತೆ ಸಿಸಿಐ ಸುಪ್ರೀಂಕೋರ್ಟ್​ನಲ್ಲಿ ಮನವಿ ಮಾಡಿತ್ತು. ಈ ಮನವಿಯನ್ನು ಪುರಸ್ಕರಿಸಿರುವ ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಮನಮೋಹನ್ ಅವರಿರುವ ವಿಭಾಗೀಯ ಪೀಠವು, ಸದ್ಯ ಹೈಕೋರ್ಟ್​ನಲ್ಲಿ ಅರ್ಜಿ ವಿಚಾರಣೆಗೆ ತಾತ್ಕಾಲಿಕವಾಗಿ ತಡೆ ನೀಡಿದೆ.

ಬೇರೆ ಬೇರೆ ಕೋರ್ಟ್​ಗಳಲ್ಲಿ ಅಭಿಪ್ರಾಯಭೇದ ಎದುರಾಗುವ ಸಂಭವ ಇದ್ದರಿಂದ ಎಲ್ಲಾ ಅರ್ಜಿಗಳ ವಿಚಾರಣೆ ಒಂದೇ ಕಡೆ ನಡೆಯುವುದು ಉತ್ತಮ ಎನ್ನುವ ಕಾರಣಕ್ಕೆ ಎಲ್ಲಾ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್​ಗೆ ವರ್ಗಾಯಿಸುವಂತೆ ಸುಪ್ರೀಂ ಕೋರ್ಟ್ ವಿಭಾಗೀಯ ಪೀಠವು ಸೂಚಿಸಿದೆ. ಅರ್ಜಿಗಳೆಲ್ಲವೂ ವರ್ಗಾವಣೆ ಆದ ಬಳಿಕ ಕರ್ನಾಟಕ ಹೈಕೋರ್ಟ್​ನಲ್ಲಿ ವಿಚಾರಣೆ ಆರಂಭವಾಗುವ ಸಂಭವ ಇದೆ.

ಇದನ್ನೂ ಓದಿ: ಪಿಎಂ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆ ಯಶಸ್ಸು; ಒಂದು ದಶಕದ ಸಾಧನೆ ಒಂದೇ ವರ್ಷದಲ್ಲಿ…

ಅಮೇಜಾನ್, ಫ್ಲಿಪ್​ಕಾರ್ಟ್​ನಿಂದ ಸ್ಪರ್ಧಾ ನಿಯಮಗಳ ಉಲ್ಲಂಘನೆ…

ಅಮೇಜಾನ್ ಮತ್ತು ಫ್ಲಿಪ್​ಕಾರ್ಟ್ ಭಾರತದ ಅತಿದೊಡ್ಡ ಇ-ಕಾಮರ್ಸ್ ಪ್ಲಾಟ್​ಫಾರ್ಮ್​ಗಳಾಗಿವೆ. ಇಲ್ಲಿ ಸಾವಿರಾರು ವರ್ತಕರ ಉತ್ಪನ್ನಗಳನ್ನು ಕಾಣಬಹುದು. ಆದರೆ, ಕೆಲ ಆಯ್ದ ಮಾರಾಟಗಾರರಿಗೆ ಈ ಪ್ಲಾಟ್​ಫಾರ್ಮ್​ಗಳಲ್ಲಿ ಆದ್ಯತೆ ನೀಡಲಾಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿತ್ತು. ಇದು ಭಾರತದ ಸ್ಪರ್ಧಾ ಕಾನೂನುಗಳ ಉಲ್ಲಂಘನೆ ಎನಿಸಿದೆ. ಹೀಗಾಗಿ, ಭಾರತೀಯ ಸ್ಪರ್ಧಾ ಆಯೋಗವು 2019ರಲ್ಲಿ ಅಮೇಜಾನ್ ಮತ್ತು ಫ್ಲಿಪ್​ಕಾರ್ಟ್​ಗಳ ವಿರುದ್ಧ ತನಿಖೆಗೆ ಆದೇಶ ನೀಡಿತ್ತು. ಹಾಗೆಯೇ, ಈ ಎರಡು ಪ್ಲಾಟ್​ಫಾರ್ಮ್​ಗಳೊಂದಿಗೆ ಸ್ಮಾರ್ಟ್​ಫೋನ್ ತಯಾರಕರಾದ ಸ್ಯಾಮ್ಸುಂಗ್ ಮತ್ತು ವಿವೋ ಸಂಸ್ಥೆಗಳು ಒಳಒಪ್ಪಂದ ಮಾಡಿಕೊಂಡು ತಮ್ಮ ಉತ್ಪನ್ನ ಬಿಡುಗಡೆಗೆ ಆದ್ಯತೆ ಗಿಟ್ಟಿಸುವ ಕೆಲಸ ಮಾಡಿರುವ ಆರೋಪವೂ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ