AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಪಿಐ ಪೇಮೆಂಟ್​ಗೆ ಎಂಡಿಆರ್ ಶುಲ್ಕ; ತಡೆ ನೀಡಲು ಸುಪ್ರೀಂಕೋರ್ಟ್ ನಕಾರ; ವಿವರಣೆ ಕೋರಿ ಸರ್ಕಾರಕ್ಕೆ ನೋಟೀಸ್

ನಿರ್ದಿಷ್ಟ ಯುಪಿಐ ಪಾವತಿಗಳಿಗೆ ಮರ್ಚೆಂಟ್ ಡಿಸ್ಕೌಂಟ್ ರೇಟ್ ಅಥವಾ ಎಂಡಿಆರ್ ಶುಲ್ಕ ವಿಧಿಸುವ ಸರ್ಕಾರದ ನಿರ್ಧಾರವು ಕೋರ್ಟ್ ಕಟಕಟೆಯಲ್ಲಿ ವಿಚಾರಣೆ ಎದುರಿಸುತ್ತಿದೆ. ಶುಲ್ಕ ಜಾರಿಯಾಗದಂತೆ ತಡೆ ನೀಡಲು ಸುಪ್ರೀಂ ನ್ಯಾಯಪೀಠ ನಿರಾಕರಿಸಿದೆ. ವಕೀಲ ಅಂಜನ್ ದತ್ತಾ ಅವರು ಸರ್ವೋಚ್ಚ ನ್ಯಾಯಾಲಯದಲ್ಲಿ ಎಂಡಿಆರ್ ಶುಲ್ಕದ ಅಧಿಕೃತತೆಯನ್ನು ಪ್ರಶ್ನಿಸಿದ್ದರು. ಇದೇ ವೇಳೆ, ನ್ಯಾಯಾಲಯವು ಸರ್ಕಾರದಿಂದ ವಿವರಣೆ ಕೋರಿ ನೋಟೀಸ್ ನೀಡಿದೆ.

ಯುಪಿಐ ಪೇಮೆಂಟ್​ಗೆ ಎಂಡಿಆರ್ ಶುಲ್ಕ; ತಡೆ ನೀಡಲು ಸುಪ್ರೀಂಕೋರ್ಟ್ ನಕಾರ; ವಿವರಣೆ ಕೋರಿ ಸರ್ಕಾರಕ್ಕೆ ನೋಟೀಸ್
ಸುಪ್ರೀಂಕೋರ್ಟ್Image Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 28, 2026 | 3:18 PM

Share

ನವದೆಹಲಿ, ಸೆಪ್ಟೆಂಬರ್ 28: ದೊಡ್ಡ ವರ್ತಕರಿಗೆ ಮಾಡಲಾಗುವ 2,000 ರೂಗಿಂತ ಅಧಿಕ ಮೊತ್ತದ ಯುಪಿಐ ಪಾವತಿಗಳಿಗೆ ಎಂಡಿಆರ್ ಶುಲ್ಕ ವಿಧಿಸುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯ ನಿರಾಕರಿಸಿದೆ. ಅಡ್ವೋಕೇಟ್ ಅಂಜನ್ ದತ್ತಾ ಅವರು ಸಲ್ಲಿಸಿದ ಸಾರ್ಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಮಾಡಿದ ಸಿಜೆಐ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಯಮಾಲ್ಯ ಬಾಗ್ಚಿ ಮತ್ತು ವಿ ಮೋಹನಾ ಅವರಿರುವ ಸರ್ವೋಚ್ಚ ನ್ಯಾಯಪೀಠವು, ಈ ವಿಚಾರದ ಬಗ್ಗೆ ಕೇಂದ್ರ ಸರ್ಕಾರದಿಂದ ವಿವರಣೆ ಬಯಸಿದೆ.

ಎಂಡಿಆರ್ ದರಗಳನ್ನು ಯಾವ ಆಧಾರದ ಮೇಲೆ ನಿಗದಿ ಮಾಡಲಾಗಿದೆ. ಅದರ ಕಾನೂನು ಚೌಕಟ್ಟು ಏನಿದೆ ಎಂಬುದನ್ನು ವಿವರಿಸುವ ಒಂದು ಅಫಿಡವಿಟ್ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ತಿಳಿಸಿದೆ.

ವಿಚಾರಣೆ ವೇಳೆ ನ್ಯಾಯಮೂರ್ತಿಗಳು ಎಂಡಿಆರ್ ದರದ ಕಾನೂನು ಅಂಶಗಳನ್ನು ಪ್ರಶ್ನಿಸಿದರು. ಎಂಡಿಆರ್ ಎಂಬುದು ತೆರಿಗೆಯೋ ಅಥವಾ ಶುಲ್ಕವೋ, ಅಥವಾ ಎರಡೂ ಅಲ್ಲದಿದ್ದರೆ ಯಾವ ಆಧಾರದ ಮೇಲೆ ಅದನ್ನು ಹೇರಲಾಗುತ್ತಿದೆ ಎಂದು ನ್ಯಾಯಪೀಠವು ವಿವರಣೆ ಕೇಳಿತು.

ಇದನ್ನೂ ಓದಿ: ಗಾಂಧಿ ಜಯಂತಿಯಂದು ‘ನೋ ಯುಪಿಐ ಡೇ’ ಕರೆ ನೀಡಿರುವ ಸುದ್ದಿ ಸುಳ್ಳು: ವರ್ತಕರ ಒಕ್ಕೂಟ ಸ್ಪಷ್ಟನೆ

ಸರ್ಕಾರವನ್ನು ಪ್ರತಿನಿಧಿಸಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎನ್ ವೆಂಕಟರಾಮನ್ ಅವರು ಈ ಎಂಡಿಆರ್ ಕುರಿತು ವಿವರಣೆ ನೀಡಿದರು. ಎಂಡಿಆರ್ ತೆರಿಗೆ ಅಲ್ಲ, ಸರ್ಕಾರದ ಶುಲ್ಕವೂ ಅಲ್ಲ. ಆ ಹಣದಲ್ಲಿ ಒಂದು ಪೈಸೆಯೂ ಸರ್ಕಾರಕ್ಕೆ ಹೋಗಲ್ಲ. ಪೇಮೆಂಟ್ ಇಕೋಸಿಸ್ಟಂನೊಳಗೆ ಅದು ಒಂದು ಸೆಟಲ್ಮೆಂಟ್ ಫೀ ಆಗಿರುತ್ತದೆ. ಎಲೆಕ್ಟ್ರಾನಿಕ್ಸ್ ಪೇಮೆಂಟ್​ಗಳನ್ನು ಪ್ರೋಸಸ್ ಮಾಡಲು ಬ್ಯಾಂಕು ಹಾಗೂ ಇತರ ಸಂಸ್ಥೆಗಳಿಗೆ ತಗಲುವ ವೆಚ್ಚಕ್ಕೆ ಪರಿಹಾರವಾಗಿ ಎಂಡಿಆರ್ ವಿಧಿಸಲಾಗುತ್ತಿದೆ ಎಂದು ಅಡಿಶನಲ್ ಸಾಲಿಸಿಟರ್ ಜನರಲ್ ವಿವರಿಸಿದರು. ಸಾಮಾನ್ಯ ಗ್ರಾಹಕರು ಮತ್ತು ಸಣ್ಣ ವರ್ತಕರಿಗೆ ಯಾವುದೇ ಶುಲ್ಕ ಇರುವುದಿಲ್ಲ ಎಂದೂ ಸ್ಪಷ್ಟಪಡಿಸಿದರು.

ಆದರೆ, ಅರ್ಜಿದಾರರು ಇದರ ಕಾನೂನು ಮಾನ್ಯತೆಯನ್ನೇ ಪ್ರಶ್ನಿಸಿದರು. 2,000 ರೂ ಮಿತಿ ಹೇಗೆ ಹಾಕಲಾಯಿತು, ಹಾಗು ಯುಪಿಐ ಮತ್ತು ರುಪೇ ಡೆಬಿಟ್ ಕಾರ್ಡ್ ಪೇಮೆಂಟ್​ಗಳ ಮಧ್ಯೆ ಭಿನ್ನ ನೀತಿ ಯಾಕೆ ತರಲಾಯಿತು ಎಂಬುದನ್ನೂ ಅರ್ಜಿದಾರರು ಪ್ರಶ್ನಿಸಿದರು. ಹಾಗೆಯೇ, ಸರ್ಕಾರದ ಈ ಕ್ರಮವು ವರ್ತಕರಿಗೆ ಹೆಚ್ಚುವರಿ ಹೊರೆ ಬೀಳುತ್ತದೆ. ಆ ಹೊರೆ ಇಳಿಸಲು ಪ್ರಯತ್ನದಲ್ಲಿ ಗ್ರಾಹಕರಿಗೆ ಪರೋಕ್ಷವಾಗಿ ಹೊರೆ ಬೀಳುತ್ತದೆ. ಹಾಗಾಗಿ, ಸರ್ಕಾರದ ಈ ನಿರ್ಧಾರ ಜಾರಿಯಾಗದಂತೆ ಮಧ್ಯಂತರವಾಗಿ ತಡೆ ನೀಡಬೇಕು ಎಂದು ಅರ್ಜಿದಾರರು ಮನವಿ ಮಾಡಿದರು.

ಇದನ್ನೂ ಓದಿ: ಯುಪಿಐ ಮೇಲೆ ಎಂಡಿಆರ್ ಶುಲ್ಕ ವಿಧಿಸುತ್ತಿರುವುದು ಅಮೆರಿಕನ್ ಕ್ರೆಡಿಟ್ ಕಾರ್ಡ್ ಕಂಪನಿಗಳ ಒತ್ತಡದಿಂದಲಾ? ಸರ್ಕಾರದ ಸ್ಪಷ್ಟನೆ ಇದು

ನ್ಯಾಯಾಲಯವು ಉಭಯ ಪಕ್ಷಗಳ ವಾದ ಪ್ರತಿವಾದ ಆಲಿಸಿತು. ಅರ್ಜಿದಾರರ ಮನವಿಯಂತೆ ಕೇಂದ್ರದ ನಿರ್ಧಾರಕ್ಕೆ ತಡೆ ನೀಡಲು ನಿರಾಕರಿಸಿತು. ಆದರೆ, ಈ ವಿಚಾರದ ಬಗ್ಗೆ ವಿವರಣೆ ಕೋರಿ ಕೇಂದ್ರ ಸರ್ಕಾರ, ಆರ್​ಬಿಐ ಮತ್ತು ಎನ್​ಪಿಸಿಐ ಹಾಗೂ ಇತರ ಸಂಬಂಧಿತರಿಗೆ ನೋಟೀಸ್ ನೀಡಿದೆ.

ಅಕ್ಟೋಬರ್ 15ರಿಂದ ಎಂಡಿಆರ್ ಜಾರಿ

ಸರ್ಕಾರವು ದೊಡ್ಡ ವರ್ತಕರಿಗೆ ಮಾಡಲಾಗುವ 2,000 ರೂಗಿಂತ ಹೆಚ್ಚಿನ ಮೊತ್ತದ ಯುಪಿಐ ಪೇಮೆಂಟ್​ಗೆ ಶೇ. 0.4ರಷ್ಟು ಎಂಡಿಆರ್ ಶುಲ್ಕ ವಿಧಿಸಲು ನಿರ್ಧರಿಸಿದೆ. ಯುಪಿಐ ಕ್ಯೂಆರ್ ಕೋಡ್ ಮೂಲಕ ಒಂದು ತಿಂಗಳಲ್ಲಿ ಒಂದು ಲಕ್ಷ ರೂಗಿಂತ ಹೆಚ್ಚಿನ ಪೇಮೆಂಟ್ ಪಡೆಯುವ ವರ್ತಕರನ್ನು ದೊಡ್ಡ ವರ್ತಕರೆಂದು ಪರಿಗಣಿಸಲಾಗುತ್ತಿದೆ. ಈ ಎಂಡಿಆರ್ ಶುಲ್ಕವು ಅಕ್ಟೋಬರ್ 15ರಿಂದ ಜಾರಿಗೆ ಬರುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ
ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್​ಗೆ ತೆರಳಿದ್ದ ವೃದ್ಧ ಬಲಿ!
ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್​ಗೆ ತೆರಳಿದ್ದ ವೃದ್ಧ ಬಲಿ!