AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tata Group: ಐಫೋನ್ ತಯಾರಿಸುವ ವಿಸ್ಟ್ರಾನ್ ಬೆಂಗಳೂರು ಘಟಕ ಖರೀದಿಸಲಿದೆ ಟಾಟಾ; ಅಂತಿಮ ಹಂತದಲ್ಲಿ ಒಪ್ಪಂದ

ವಿಸ್ಟ್ರಾನ್ ಕಂಪನಿಯು 2017ರಲ್ಲಿ ಭಾರತದಲ್ಲಿ ಐಫೋನ್ ತಯಾರಿ ಆರಂಭಿಸಿತ್ತು. ಕಂಪನಿಯ ಬೆಂಗಳೂರಿನಲ್ಲಿರುವ ಘಟಕದಲ್ಲಿ ಐಫೋನ್ ತಯಾರಿಸಲಾಗುತ್ತಿದೆ.

Tata Group: ಐಫೋನ್ ತಯಾರಿಸುವ ವಿಸ್ಟ್ರಾನ್ ಬೆಂಗಳೂರು ಘಟಕ ಖರೀದಿಸಲಿದೆ ಟಾಟಾ; ಅಂತಿಮ ಹಂತದಲ್ಲಿ ಒಪ್ಪಂದ
ಟಾಟಾ ಗ್ರೂಪ್Image Credit source: Reuters
TV9 Web
| Edited By: |

Updated on: Jan 10, 2023 | 10:47 AM

Share

ಬೆಂಗಳೂರು: ಆ್ಯಪಲ್ ಇಂಕ್​ನ (Apple Inc) ಐಫೋನ್ ಅನ್ನು ಬೆಂಗಳೂರಿನಲ್ಲಿ (Bangalore) ತಯಾರಿಸುವ ತೈವಾನ್​ನ ತೈಪೆಯಿಯ (Taipei) ವಿಸ್ಟ್ರಾನ್​ (Wistron Corp) ಕಂಪನಿಯ ಘಟಕವನ್ನು ಖರೀದಿಸಲು ಟಾಟಾ ಸಮೂಹ (Tata Group) ಮುಂದಾಗಿದ್ದು, ಒಪ್ಪಂದ ಬಹುತೇಕ ಅಂತಿಮಗೊಂಡಿದೆ. ಮಾರ್ಚ್​ ಅಂತ್ಯದ ವೇಳೆಗೆ ಖರೀದಿ ಪ್ರಕ್ರಿಯೆ ಕೊನೆಗೊಳ್ಳುವ ನಿರೀಕ್ಷೆ ಇದೆ ಎಂದು ಉನ್ನತ ಮೂಲಗಳನ್ನು ಉಲ್ಲೇಖಿಸಿ ‘ಬ್ಲೂಮ್​ಬರ್ಗ್’ ವರದಿ ಮಾಡಿದೆ. ವಿವಿಧ ಸಹಭಾಗಿತ್ವ ಯೋಜನೆಗಳ ಬಗ್ಗೆ ಎರಡೂ ಕಂಪನಿಗಳು ಸಮಾಲೋಚನೆ ನಡೆಸಿವೆ. ಅದರಂತೆ, ವಿಸ್ಟ್ರಾನ್​ನ ಬೆಂಗಳೂರು ಘಟಕದ ಹೆಚ್ಚು ಪಾಲನ್ನು ವಹಿಸಿಕೊಳ್ಳುವ ಬಗ್ಗೆ ಟಾಟಾ ಸಮೂಹ ಒಲವು ವ್ಯಕ್ತಪಡಿಸಿದೆ. ವಿಸ್ಟ್ರಾನ್ ಬೆಂಬಲದೊಂದಿಗೆ ಉತ್ಪಾದನೆ ಕಾರ್ಯಾಚರಣೆ ಆರಂಭಿಸಲು ಟಾಟಾ ಉತ್ಸುಕವಾಗಿದೆ ಎಂದು ಮೂಲಗಳು ಹೇಳಿವೆ.

ಆ್ಯಪಲ್ ಇಂಕ್​ನ ಐಫೋನ್​ಗಳನ್ನು ಭಾರತದಲ್ಲಿ ಮುಖ್ಯವಾಗಿ ತೈವಾನ್​ನ ವಿಸ್ಟ್ರಾನ್ ಮತ್ತು ಫಾಕ್ಸ್​ಕಾನ್ ಟೆಕ್ನಾಲಜಿ ಸಮೂಹಗಳು ತಯಾರಿಸುತ್ತಿವೆ. ಚೀನಾದಲ್ಲಿಯೂ ಇದೇ ಕಂಪನಿಗಳು ಐಫೋನ್ ತಯಾರಿಸುತ್ತಿವೆ. ಇದೀಗ ಟಾಟಾ ಸಮೂಹ ಐಫೋನ್ ಉತ್ಪಾದನೆ ಆರಂಭಿಸಿದರೆ ಚೀನಾಕ್ಕೆ ಸ್ಪರ್ಧೆಯೊಡ್ಡುವ ಭಾರತದ ಯತ್ನಕ್ಕೆ ಯಶಸ್ಸು ದೊರೆಯಲಿದೆ. ಚೀನಾದಲ್ಲಿ ಹೆಚ್ಚುತ್ತಿರುವ ಅಸ್ಥಿರತೆ ಹಾಗೂ ಅನಿಶ್ಚಿತತೆಯ ಈ ಸಂದರ್ಭದಲ್ಲಿ ಜಾಗತಿಕ ಎಲೆಕ್ಟ್ರಾನಿಕ್ಸ್ ಬ್ರ್ಯಾಂಡ್‌ಗಳು ಭಾರತದ ಕಂಪನಿಗಳ ಜತೆ ಒಪ್ಪಂದ ಮಾಡಿಕೊಳ್ಳುವಂತೆ ಮನವೊಲಿಸುವಲ್ಲಿ ಈ ಒಪ್ಪಂದ ಪೂರಕವಾಗಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ಇದನ್ನೂ ಓದಿ: Multibagger Stock: ಟಾಟಾ ಸಮೂಹದ ಈ ಸ್ಟಾಕ್​ನಿಂದ ವರ್ಷದಲ್ಲಿ ಶೇ 1000ದಷ್ಟು ರಿಟರ್ನ್ಸ್

ಮಾರ್ಚ್ 31ರ ಒಳಗಾಗಿ ಒಪ್ಪಂದ ಪೂರ್ಣಗೊಳಿಸುವುದು ಟಾಟಾ ಸಮೂಹದ ಗುರಿಯಾಗಿದೆ. ಟಾಟಾ ಎಲೆಕ್ಟ್ರಾನಿಕ್ಸ್ ಸಂಸ್ಥೆಯು ಅಧಿಕೃತವಾಗಿ ವಿನ್​ಸ್ಟ್ರಾನ್​ ಘಟಕದ ಜವಾಬ್ದಾರಿ ವಹಿಸಿಕೊಳ್ಳಲಿದ್ದು, ಏಪ್ರಿಲ್ 1ರಿಂದ ಸರ್ಕಾರದ ಭತ್ಯೆಗಳನ್ನು ಪಡೆಯಲಿದೆ ಎಂದು ‘ಬ್ಲೂಮ್​ಬರ್ಗ್’ ವರದಿ ಹೇಳಿದೆ. ಈ ವಿಚಾರವಾಗಿ ಪ್ರತಿಕ್ರಿಯಿಸಲು ಟಾಟಾ ಪ್ರತಿನಿಧಿ ನಿರಾಕರಿಸಿದ್ದಾರೆ. ವಿಸ್ಟ್ರಾನ್ ಮತ್ತು ಆ್ಯಪಲ್ ಕೂಡ ಪ್ರತಿಕ್ರಿಯೆ ನೀಡಿಲ್ಲ.

ವಿಸ್ಟ್ರಾನ್ ಕಂಪನಿಯು 2017ರಲ್ಲಿ ಭಾರತದಲ್ಲಿ ಐಫೋನ್ ತಯಾರಿ ಆರಂಭಿಸಿತ್ತು. ಕಂಪನಿಯ ಬೆಂಗಳೂರಿನಲ್ಲಿರುವ ಘಟಕದಲ್ಲಿ ಐಫೋನ್ ತಯಾರಿಸಲಾಗುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!