ಟಾಟಾ ಗ್ರೂಪ್​ಗೆ ಮುಂದಿನ ವಾರಸುದಾರ ನೋಯಲ್ ಟಾಟಾ; ಟ್ರಸ್ಟ್​ಗಳ ಮಂಡಳಿಗೆ ಛೇರ್ಮನ್ ಆಗಿ ನೇಮಕ

Noel Tata appointed as Chairman of Tata Trusts board: ಟಾಟಾ ಟ್ರಸ್ಟ್​ಗಳ ಮಂಡಳಿಯು ನೋಯಲ್ ಟಾಟಾ ಅವರನ್ನು ಅಧ್ಯಕ್ಷರನ್ನಾಗಿ ಒಮ್ಮತದಿಂದ ಆಯ್ಕೆ ಮಾಡಿದೆ. ರತನ್ ಟಾಟಾ ಅವರ ತಂದೆಯ ಎರಡನೇ ಪತ್ನಿಯ ಮಗ ಈ ನೋಯಲ್ ಟಾಟಾ. ಕಳೆದ 12 ವರ್ಷಗಳಿಂದಲೂ ರತನ್ ಟಾಟಾ ನಂತರ ನೋಯಲ್ ಮುಂದಿನ ವಾರಸುದಾರನೆಂದು ಹೇಳಲಾಗುತ್ತಿತ್ತು.

ಟಾಟಾ ಗ್ರೂಪ್​ಗೆ ಮುಂದಿನ ವಾರಸುದಾರ ನೋಯಲ್ ಟಾಟಾ; ಟ್ರಸ್ಟ್​ಗಳ ಮಂಡಳಿಗೆ ಛೇರ್ಮನ್ ಆಗಿ ನೇಮಕ
ನೋಯಲ್ ಟಾಟಾ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 11, 2024 | 2:17 PM

ಮುಂಬೈ, ಅಕ್ಟೋಬರ್ 11: ಟಾಟಾ ಗ್ರೂಪ್​ಗೆ ಹೊಸ ವಾರಸುದಾರರ ಆಯ್ಕೆಯಾಗಿದೆ. ಟಾಟಾ ಟ್ರಸ್ಟ್​ಗಳ ಮುಖ್ಯಸ್ಥರಾಗಿ ನೋಯಲ್ ಟಾಟಾ ಅವರನ್ನು ನೇಮಕ ಮಾಡಲಾಗಿದೆ. ಇಂದು ಶುಕ್ರವಾರ ಟಾಟಾ ಟ್ರಸ್ಟ್​ಗಳ ಮಂಡಳಿ ಸಭೆ ನಡೆದಿದ್ದು, ಅದರಲ್ಲಿ ಒಮ್ಮತದಿಂದ ನೋಯಲ್ ಅವರ ಪರವಾಗಿ ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಟಾಟಾ ಗ್ರೂಪ್​ನ ಮಾಲೀಕ ಸಂಸ್ಥೆಯಾದ ಟಾಟಾ ಸನ್ಸ್​ನಲ್ಲಿ ಟಾಟಾ ಟ್ರಸ್ಟ್​ಗಳು ಬಹುಪಾಲು ಷೇರುದಾರಿಕೆ ಹೊಂದಿವೆ. ಈ ಮೂಲಕ ಟಾಟಾ ಗ್ರೂಪ್​ನ ಒಡೆತನ ನೋಯಲ್ ಟಾಟಾಗೆ ಸಿಗಲಿದೆ.

67 ವರ್ಷದ ನೋಯಲ್ ಟಾಟಾ ಅವರು ರತನ್ ಟಾಟಾ ತಂದೆಯ ಎರಡನೇ ಪತ್ನಿಯ ಮಗ. ಟಾಟಾ ಕುಟುಂಬಕ್ಕೆ ಸೇರಿದ ಸರ್ ದೊರಾಬ್​ಜಿ ಟಾಟಾ ಟ್ರಸ್ಟ್ ಮತ್ತು ಸರ್ ರತನ್ ಟಾಟಾ ಟ್ರಸ್ಟ್​ ಮಂಡಳಿಗಳ ಟ್ರಸ್ಟೀಗಳಲ್ಲಿ ಒಬ್ಬರಾಗಿರುವ ನೋಯಲ್ ಟಾಟಾ ಅವರು ಮುಂದಿನ ವಾರಸುದಾರ ಎಂಬುದು ಬಹುತೇಕ ನಿಶ್ಚಿತವಾಗಿತ್ತು.

87 ವರ್ಷದ ರತನ್ ಟಾಟಾ ಮೊನ್ನೆ ಬುಧವಾರ ಸಂಜೆ ಮುಂಬೈನಲ್ಲಿ ವಿಧಿವಶರಾಗಿದ್ದಾರೆ. ರತನ್ ಅವರ ತಂದೆ ನವಲ್ ಟಾಟಾ ಅವರಿಗೆ ಎರಡು ವಿವಾಹವಾಗಿತ್ತು. ಮೊದಲ ಪತ್ನಿಗೆ ವಿಚ್ಛೇದನ ನೀಡಿ ಎರಡನೇ ಮದುವೆಯಾಗಿದ್ದರು. ರತನ್ ಮತ್ತು ಜಿಮ್ಮಿ ಟಾಟಾ ಅವರು ಮೊದಲ ಪತ್ನಿಯ ಮಕ್ಕಳಾಗಿದ್ದಾರೆ. ನೋಯಲ್ ಟಾಟಾ ಅವರು ಎರಡನೇ ಪತ್ನಿಯ ಮಗ. ನೋಯಲ್ ಅವರಿಗೆ ಒಂದು ಗಂಡು ಮಗು ಸೇರಿ ಮೂವರು ಮಕ್ಕಳಿದ್ದಾರೆ.

ಇದನ್ನೂ ಓದಿ: ಅಂಬಾನಿ ಸಾಮ್ರಾಜ್ಯಕ್ಕಿಂತಲೂ ಟಾಟಾ ಗ್ರೂಪ್​ನದ್ದು ಹೆಚ್ಚು ಮಾರುಕಟ್ಟೆ ಬಂಡವಾಳ; ರತನ್ ಟಾಟಾ ಚಮತ್ಕಾರ

ನೋಯಲ್ ಟಾಟಾ ಅವರು ಬಹಳ ವರ್ಷಗಳಿಂದ ಟಾಟಾ ಗ್ರೂಪ್​ನ ವಿವಿಧ ಬ್ಯುಸಿನೆಸ್​ಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಟೈಟಾನ್ ಮತ್ತು ಟಾಟಾ ಸ್ಟೀಲ್ ಸಂಸ್ಥೆಗಳಿಗೆ ವೈಸ್ ಛೇರ್ಮನ್ ಆಗಿದ್ದಾರೆ. ಫ್ಯಾಷನ್ ಉಡುಪುಗಳ ಟ್ರೆಂಟ್ ಸಂಸ್ಥೆಯ ಛೇರ್ಮನ್ ಆಗಿದ್ದಾರೆ. ಎನ್​ಬಿಎಫ್​ಸಿ ಕ್ಷೇತ್ರದ ಟಾಟಾ ಇನ್ವೆಸ್ಟ್​ಮೆಂಟ್ ಕಾರ್ಪೊರೇಶನ್ ಸಂಸ್ಥೆಗೂ ಅವರೇ ಮುಖ್ಯಸ್ಥರಾಗಿದ್ದಾರೆ. ಇನ್ನು ವೋಲ್ಟಾಸ್ ಸಂಸ್ಥೆಯ ಮಂಡಳಿಯಲ್ಲೂ ಅವರು ಸ್ಥಾನ ಹೊಂದಿದ್ದಾರೆ.

2010-11ರಲ್ಲಿ ನೋಯಲ್ ಅವರನ್ನು ಟಾಟಾ ಇಂಟರ್ನ್ಯಾಷನಲ್​ನ ಎಂಡಿಯಾಗಿ ನೇಮಕ ಮಾಡಲಾಗಿತ್ತು. ಆಗಲೇ ಟಾಟಾ ಗ್ರೂಪ್​ಗೆ ಮುಂದಿನ ವಾರಸುದಾರನಾಗಿ ನೋಯಲ್ ಅವರನ್ನು ಬೆಳೆಸಲಾಗುತ್ತಿರಬಹುದು ಎನ್ನುವ ಸುದ್ದಿ ಹಬ್ಬಿತ್ತು. ಅದು ಈಗ ನಿಜವಾಗಿದೆ.

ಟಾಟಾ ಗ್ರೂಪ್​ನ ಬಿಸಿನೆಸ್​ಗೆ ಬರುವ ಮುನ್ನ ನೋಯಲ್ ಅವರು ಬ್ರಿಟನ್​ನ ನೆಸ್ಲೆ ಸಂಸ್ಥೆಯಲ್ಲಿ ಕೆಲಸ ಮಾಡಿದ್ದರು. ಅದಕ್ಕೂ ಮುನ್ನ ಬ್ರಿಟನ್ ಮತ್ತು ಫ್ರಾನ್ಸ್​ನಲ್ಲಿ ಉನ್ನತ ವ್ಯಾಸಂಗ ಮಾಡಿದ್ದರು ನೋಯಲ್.

ಇದನ್ನೂ ಓದಿ: ರತನ್ ಟಾಟಾಗೆ ಅಂತಿಮ ವಿದಾಯ; ಪೂರ್ಣ ಸರ್ಕಾರಿ ಗೌರವ ಸಲ್ಲಿಕೆ; ಒಂದು ದಿನ ಶೋಕಾಚರಣೆ ಘೋಷಿಸಿದ ಮಹಾ ಸರ್ಕಾರ

ಐರ್ಲೆಂಡ್ ದೇಶದ ಪ್ರಜೆಯಾಗಿರುವ ನೋಯಲ್ ಅವರು ಪಲ್ಲೋನ್​ಜಿ ಮಿಸ್ತ್ರಿ ಅವರ ಅಳಿಯನೂ ಹೌದು. ಟಾಟಾ ಸನ್ಸ್ ಸಂಸ್ಥೆಯ ಅತಿದೊಡ್ಡ ಷೇರುದಾರರಾಗಿರುವ ಪಲ್ಲೋನ್​ಜಿ ಅವರ ಮಗಳಾದ ಅಲೂ ಮಿಸ್ತ್ರಿ ಅವರನ್ನು ನೋಯಲ್ ವಿವಾಹವಾಗಿದ್ದಾರೆ. ಇವರಿಗೆ ಲಿಯಾ, ಮಾಯಾ ಮತ್ತು ನೆವಿಲ್ಲೆ ಎಂಬ ಮೂವರು ಮಕ್ಕಳಿದ್ದಾರೆ. ಲಿಯಾ ಮತ್ತು ಮಾಯಾ ಹೆಣ್ಮಕ್ಕಳು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ