ಕೇಂದ್ರ ಹಣಕಾಸು ಇಲಾಖೆಯಿಂದ ರಾಜ್ಯಗಳ ಪಾಲಿನ ತೆರಿಗೆ ಹಣ ಬಿಡುಗಡೆ, ಕರ್ನಾಟಕ ರಾಜ್ಯಕ್ಕೆ ಬಿಡುಗಡೆಯಾಗಿರುವುದು ಎಷ್ಟು?

tax devolution instalments: ಕೇಂದ್ರ ಹಣಕಾಸು ಇಲಾಖೆಯಿಂದ ರಾಜ್ಯಗಳ ಪಾಲಿನ ತೆರಿಗೆ ಹಣ ಬಿಡುಗಡೆ ಮಾಡಲಾಗಿದೆ. ಇದು ಬಂಡವಾಳ ಮತ್ತು ಅಭಿವೃದ್ಧಿ ವೆಚ್ಚವನ್ನು ವೇಗಗೊಳಿಸುವ ನಿಟ್ಟಿನಲ್ಲಿ ರಾಜ್ಯಗಳನ್ನು ಬಲಪಡಿಸುವ ಕೇಂದ್ರ ಸರ್ಕಾರದ ಆಶಯ, ಬದ್ಧತೆಗೆ ಅನುಗುಣವಾಗಿದೆ.

ಕೇಂದ್ರ ಹಣಕಾಸು ಇಲಾಖೆಯಿಂದ ರಾಜ್ಯಗಳ ಪಾಲಿನ ತೆರಿಗೆ ಹಣ ಬಿಡುಗಡೆ, ಕರ್ನಾಟಕ ರಾಜ್ಯಕ್ಕೆ ಬಿಡುಗಡೆಯಾಗಿರುವುದು ಎಷ್ಟು?
ಸಾಂದರ್ಭಿಕ ಚಿತ್ರ
Edited By:

Updated on: Aug 10, 2022 | 10:14 PM

ನವದೆಹಲಿ: ಕೇಂದ್ರದ ತೆರಿಗೆಗಳು ಮತ್ತು ಸುಂಕಗಳ ನಿವ್ವಳ ಆದಾಯದಲ್ಲಿ ಆಗಸ್ಟ್​ ತಿಂಗಳ ಬಾಬತ್ತಿನಲ್ಲಿ ರಾಜ್ಯಗಳ ಪಾಲಿನ ಹಣ (tax devolution instalments) ಬಿಡುಗಡೆ ಮಾಡಲಾಗಿದೆ. 15 ನೇ ಹಣಕಾಸು ಆಯೋಗದ ಶಿಫಾರಸು ಪ್ರಕಾರ ಈ ಹಣ ಬಿಡುಗಡೆ ಮಾಡಲಾಗಿದೆ. ಕೇಂದ್ರ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ (Karnataka) ‌ಎರಡು ಕಂತುಗಳ 4,254 ಕೋಟಿ ರೂಪಾಯಿ ಬಿಡುಗಡೆಯಾಗಿದೆ. ಎಲ್ಲ ರಾಜ್ಯಗಳಿಗೂ ಇಂದು ಒಟ್ಟಾರೆ 1,16,665 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ.

ಬಿಹಾರ ರಾಜ್ಯಕ್ಕೆ 11,734 ಕೋಟಿ ರೂಪಾಯಿ ಹಣ ಬಿಡುಗಡೆಯಾಗಿದ್ದರೆ ಉತ್ತರ ಪ್ರದೇಶ ರಾಜ್ಯ ಸರ್ಕಾರಕ್ಕೆ 20,928 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ. ಇದು ಬಂಡವಾಳ ಮತ್ತು ಅಭಿವೃದ್ಧಿ ವೆಚ್ಚವನ್ನು ವೇಗಗೊಳಿಸುವ ನಿಟ್ಟಿನಲ್ಲಿ ರಾಜ್ಯಗಳನ್ನು ಬಲಪಡಿಸುವ ಕೇಂದ್ರ ಸರ್ಕಾರದ ಆಶಯ, ಬದ್ಧತೆಗೆ ಅನುಗುಣವಾಗಿದೆ.