AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಪ್ತಚರ ಸಂಸ್ಥೆಗಳು ಮತ್ತು ‘ಹನಿಟ್ರ್ಯಾಪ್’ ಬಗ್ಗೆ ಹಾಸ್ಯ ಮಾಡಿದ ಟೆಲಿಗ್ರಾಮ್ ಸಿಇಒ ಪಾವೆಲ್ ದುರೋವ್; ಆನ್​ಲೈನ್​ನಲ್ಲಿ ವಿವಾದ

ಎನ್‌ವಿಡಿಯಾ ಸಿಇಒ ಜೆನ್ಸನ್ ಹುವಾಂಗ್ ಅವರ ವಿವಾದದ ಬೆನ್ನಲ್ಲೇ, ಟೆಲಿಗ್ರಾಮ್ ಸಂಸ್ಥಾಪಕ ಪಾವೆಲ್ ದುರೋವ್ ಅವರು ಪ್ರತಿಕ್ರಿಯಿಸಿದ್ದಾರೆ. ಗುಪ್ತಚರ ಸಂಸ್ಥೆಗಳು ಮತ್ತು ಮಹಿಳೆಯರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹಾಸ್ಯಭರಿತ ಪೋಸ್ಟ್ ಹಂಚಿಕೊಂಡಿದ್ದಾರೆ. ಟೆಲಿಗ್ರಾಮ್ ಸಿಇಒ ಅವರ ಹೇಳಿಕೆಗಳಿಗೆ ಆನ್​ಲೈನ್​ನಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಹಾಗೂ ಚರ್ಚೆಗೆ ಗ್ರಾಸವಾಗಿದೆ.

ಗುಪ್ತಚರ ಸಂಸ್ಥೆಗಳು ಮತ್ತು ‘ಹನಿಟ್ರ್ಯಾಪ್’ ಬಗ್ಗೆ ಹಾಸ್ಯ ಮಾಡಿದ ಟೆಲಿಗ್ರಾಮ್ ಸಿಇಒ ಪಾವೆಲ್ ದುರೋವ್; ಆನ್​ಲೈನ್​ನಲ್ಲಿ ವಿವಾದ
ಪಾವೆಲ್ ದುರೋವ್Image Credit source: Getty Images
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 12, 2026 | 1:04 PM

Share

ವಾಷಿಂಗ್ಟನ್, ನವೆಂಬರ್ 12: ಎನ್​ವಿಡಿಯ ಸಿಇಒ ಜೆನ್ಸೆನ್ ಹುವಾಂಗ್ ಅವರು ಚೀನೀ ಗೂಢಚಾರಣಿ ಜೊತೆ ಸಂಬಂಧ ಹೊಂದಿದ್ದ ವಿಚಾರ ಸೋಷಿಯಲ್ ಮೀಡಿಯಾದಲ್ಲಿ ವಿವಿಧ ರೀತಿಯ ಚರ್ಚೆಗೆ ಎಡೆ ಮಾಡಿಕೊಟ್ಟಿದೆ. ಟೆಲಿಗ್ರಾಮ್ (Telegram) ಮೆಸೇಜಿಂಗ್ ಆ್ಯಪ್‌ನ ಮುಖ್ಯಸ್ಥ ಪಾವೆಲ್ ದುರೋವ್ (Pavel Durov) ಅವರು ಸಾಮಾಜಿಕ ಜಾಲತಾಣ ಎಕ್ಸ್ (X) ನಲ್ಲಿ ಗುಪ್ತಚರ ಸಂಸ್ಥೆಗಳು ಮತ್ತು ಟೆಕ್ ಸಿಇಒಗಳ ನಡುವಿನ ನಂಟಿನ ಕುರಿತು ವ್ಯಂಗ್ಯವಾಗಿ ಪೋಸ್ಟ್ ಮಾಡಿದ್ದಾರೆ.

ತಮಗೆ ಅಂತಹ ಯಾವುದೇ ಗೂಢಚಾರಿ ಮಹಿಳೆಯರ (Spy/Honeypot) ಆಫರ್‌ಗಳು ಅಥವಾ ಡೇಟಿಂಗ್ ಆಯ್ಕೆಗಳೇ ಸಿಗುತ್ತಿಲ್ಲ ಎಂದು ಟೆಲಿಗ್ರಾಮ್ ಸಿಇಒ ಹಾಸ್ಯಮಯವಾಗಿ ಬರೆದುಕೊಂಡಿರುವುದು ಆನ್‌ಲೈನ್‌ನಲ್ಲಿ ಚರ್ಚೆಗೆ ತಿರುಗಿದೆ.

ಇದನ್ನೂ ಓದಿ: ಚೀನಾದ ಗೂಢಚಾರಿಣಿ ಸೇರಿ ಇಬ್ಬರ ಜತೆ ವಿವಾಹೇತರ ಸಂಬಂಧದ ಆರೋಪ, ಎನ್‌ವಿಡಿಯಾ ಸಿಇಒ ಜೆನ್ಸನ್ ಹುವಾಂಗ್‌ ಕುರ್ಚಿಗೆ ಕಂಟಕ

ನೆಟ್ಟಿಗರ ಆಕ್ರೋಶ ಮತ್ತು ಟೀಕೆ

ಪಾವೆಲ್ ದುರೋವ್ ಅವರ ಈ ಲಘು ಧೋರಣೆಯ ಹೇಳಿಕೆಯು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿದ್ದು, ಟೆಕ್ ದಿಗ್ಗಜರು ಗಂಭೀರ ವಿಷಯಗಳ ಬಗ್ಗೆ ಈ ರೀತಿಯಾಗಿ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದು ಅನೇಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಹಿಂದಿನ ವೈಯಕ್ತಿಕ ಹಿನ್ನೆಲೆ

ಮುಂಚೆ ಫ್ರಾನ್ಸ್‌ನಲ್ಲಿ ಪಾವೆಲ್ ದುರೋವ್ ಬಂಧನಕ್ಕೊಳಗಾದ ಸಂದರ್ಭದಲ್ಲೂ ಅವರ ಜೊತೆಗಿದ್ದ ಸ್ನೇಹಿತೆ ಹಾಗೂ ಕ್ರಿಪ್ಟೋ ಕೋಚ್ ಜೂಲಿ ವಾವಿಲೋವಾ (Yulia Vavilova) ಅವರ ನಂಟಿನ ಬಗ್ಗೆ ಹನಿಟ್ರ್ಯಾಪ್ ವಾದಗಳು ಮುನ್ನೆಲೆಗೆ ಬಂದಿದ್ದು, ಈಗ ಅವರೇ ಈ ಕುರಿತು ವ್ಯಂಗ್ಯವಾಡಿರುವುದು ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ಎನ್​ವಿಡಿಯಾ ಸಿಇಒ ಜೆನ್ಸೆನ್ ಹುವಾಂಗ್ ಹಗರಣದಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ಟ್; ಚೀನಾದ ಗೂಢಚಾರಿಣಿ ಮತ್ತಾಕೆಯ ಪತಿ ಮತ್ತು ಕಾರ್ಪೊರೇಟ್ ನೆಟ್ವರ್ಕ್

ಎನ್​ವಿಡಿಯಾ ಸಹ-ಸಂಸ್ಥಾಪಕ ಮತ್ತು ಸಿಇಒ ಜೆನ್ಸೆನ್ ಹುವಾಂಗ್ ಅವರು ಕೆಲ ದಿನಗಳ ಹಿಂದಷ್ಟೇ ತಮ್ಮ ಅಕ್ರಮ ಸಂಬಂಧದ ಬಗ್ಗೆ ಬಹಿರಂಗವಾಗಿ ತಪ್ಪೊಪ್ಪಿಕೊಂಡಿದ್ದಾರೆ. ಚೀನಾದ ಗೂಢಚಾರಿಣಿ ಎಂದು ಶಂಕಿಸಲಾದ ಮಹಿಳೆ ಜೊತೆ ಅವರು ಅಫೇರ್ ಹೊಂದಿದ್ದರು. ತಮ್ಮದೇ ಸಂಸ್ಥೆಯಲ್ಲಿ ಕೆಲಸ ಮಾಡುವ ಹಿರಿಯ ಅಧಿಕಾರಿಯೊಬ್ಬಳೊಂದಿಗೂ ಅವರು ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ವಿಷಯವೂ ಬೆಳಕಿಗೆ ಬಂದಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಮೈಸೂರಿನಲ್ಲಿ ಯುವತಿ ಜತೆ ರ್ಯಾಪಿಡೋ ಚಾಲಕ ಅವಾಚ್ಯ ಸಂಭಾಷಣೆ
ಮೈಸೂರಿನಲ್ಲಿ ಯುವತಿ ಜತೆ ರ್ಯಾಪಿಡೋ ಚಾಲಕ ಅವಾಚ್ಯ ಸಂಭಾಷಣೆ
ಸ್ಟಿಂಗ್ ಪ್ರಕರಣ: ವಿಡಿಯೋ ಮಾಡಿದ್ದೇ ಗೊತ್ತಿಲ್ಲವೆಂದ ಕೃಪಾ ಆಳ್ವ!
ಸ್ಟಿಂಗ್ ಪ್ರಕರಣ: ವಿಡಿಯೋ ಮಾಡಿದ್ದೇ ಗೊತ್ತಿಲ್ಲವೆಂದ ಕೃಪಾ ಆಳ್ವ!
ದಾವಣಗೆರೆಯ ಸೂಳೆಕರೆಗೆ ಅಪರೂಪದ ಅತಿಥಿ ಭೇಟಿ! ನೀರುನಾಯಿಗಳು ಪ್ರತ್ಯಕ್ಷ
ದಾವಣಗೆರೆಯ ಸೂಳೆಕರೆಗೆ ಅಪರೂಪದ ಅತಿಥಿ ಭೇಟಿ! ನೀರುನಾಯಿಗಳು ಪ್ರತ್ಯಕ್ಷ
ಡಿ.2ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ಬಿಗಿ ಭದ್ರತೆ
ಡಿ.2ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ಬಿಗಿ ಭದ್ರತೆ
ಕರಾವಳಿ ಬಳಿಕ ಉತ್ತರ ಕರ್ನಾಟಕದತ್ತ ಮುಖ ಮಾಡಿದ ಪ್ರಮೋದ್ ಶೆಟ್ಟಿ
ಕರಾವಳಿ ಬಳಿಕ ಉತ್ತರ ಕರ್ನಾಟಕದತ್ತ ಮುಖ ಮಾಡಿದ ಪ್ರಮೋದ್ ಶೆಟ್ಟಿ
ಪ್ರಧಾನಿ ಮೋದಿ ಬೆಂಗಳೂರು ಭೇಟಿಯ ಸಂಪೂರ್ಣ ವೇಳಾಪಟ್ಟಿ
ಪ್ರಧಾನಿ ಮೋದಿ ಬೆಂಗಳೂರು ಭೇಟಿಯ ಸಂಪೂರ್ಣ ವೇಳಾಪಟ್ಟಿ
ನಂಜನಗೂಡು ಸಿದ್ದೇಶ್ವರ ಜಾತ್ರೆ ಮೆರವಣಿಗೆ ವೇಳೆ ಗಲಾಟೆ, ಕಲ್ಲುತೂರಾಟ
ನಂಜನಗೂಡು ಸಿದ್ದೇಶ್ವರ ಜಾತ್ರೆ ಮೆರವಣಿಗೆ ವೇಳೆ ಗಲಾಟೆ, ಕಲ್ಲುತೂರಾಟ
Horoscope Today: ಕುಜ ಗ್ರಹವು ಕರ್ಕಾಟಕ ರಾಶಿಯಿಂದ ಸಿಂಹ ರಾಶಿಗೆ ಪ್ರವೇಶ
Horoscope Today: ಕುಜ ಗ್ರಹವು ಕರ್ಕಾಟಕ ರಾಶಿಯಿಂದ ಸಿಂಹ ರಾಶಿಗೆ ಪ್ರವೇಶ
ಬಿಗ್ ಬಾಸ್ ಮನೆಯಲ್ಲಿ ಗಾನವಿಗೆ ಮೆಮೋರಿ ಲಾಸ್? ಟಾಸ್ಕ್ ಬಳಿಕ ಏನೂ ನೆನಪಿಲ್ಲ
ಬಿಗ್ ಬಾಸ್ ಮನೆಯಲ್ಲಿ ಗಾನವಿಗೆ ಮೆಮೋರಿ ಲಾಸ್? ಟಾಸ್ಕ್ ಬಳಿಕ ಏನೂ ನೆನಪಿಲ್ಲ
ರಿಷಬ್ ಶೆಟ್ಟಿ, ಪ್ರಮೋದ್ ಶೆಟ್ಟಿ ದೂರ ಆಗಿಲ್ಲ: ಸ್ಪಷ್ಟನೆ ನೀಡಿದ ನಟ
ರಿಷಬ್ ಶೆಟ್ಟಿ, ಪ್ರಮೋದ್ ಶೆಟ್ಟಿ ದೂರ ಆಗಿಲ್ಲ: ಸ್ಪಷ್ಟನೆ ನೀಡಿದ ನಟ