ಏರ್ ಇಂಡಿಯಾಗೆ ಹತ್ತು ಲಕ್ಷ ರೂ. ದಂಡ ವಿಧಿಸಿದ ಡಿಜಿಸಿಎ, ಯಾಕೆ ಗೊತ್ತಾ?

Air India: ಏರ್ ಇಂಡಿಯಾಗೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಹತ್ತು ಲಕ್ಷ ರೂ. ದಂಡವನ್ನು ವಿಧಿಸಿದೆ. ಡಿಜಿಸಿಎ ನಿಯಮಾವಳಿಗಳನ್ನು ಅನುಸರಿಸದಿದ್ದಕ್ಕಾಗಿ ಈ ದಂಡವನ್ನು ಹಾಕಲಾಗಿದೆ.

ಏರ್ ಇಂಡಿಯಾಗೆ ಹತ್ತು ಲಕ್ಷ ರೂ. ದಂಡ ವಿಧಿಸಿದ ಡಿಜಿಸಿಎ, ಯಾಕೆ ಗೊತ್ತಾ?
ಏರ್ ಇಂಡಿಯಾ
Follow us
ಅಕ್ಷಯ್​ ಪಲ್ಲಮಜಲು​​
|

Updated on:Nov 22, 2023 | 3:55 PM

ಏರ್ ಇಂಡಿಯಾಗೆ (Air India) ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಹತ್ತು ಲಕ್ಷ ರೂ. ದಂಡವನ್ನು ವಿಧಿಸಿದೆ. ಡಿಜಿಸಿಎ ನಿಯಮಾವಳಿಗಳನ್ನು ಅನುಸರಿಸದಿದ್ದಕ್ಕಾಗಿ ಈ ದಂಡವನ್ನು ಹಾಕಲಾಗಿದೆ. ಈ ಹಿಂದೆ ಅಂದರೆ ನವೆಂಬರ್​​ 3ರಂದು ಡಿಜಿಸಿಎ ಸಂಬಂಧಿತ ನಿಯಮಾವಳಿಗಳ ನಿಬಂಧನೆಗಳನ್ನು ಅನುಸರಿಸದಿದ್ದಕ್ಕಾಗಿ ಏರ್ ಇಂಡಿಯಾಗೆ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ಡಿಜಿಸಿಎ ಹೇಳಿದೆ.

ದೆಹಲಿ, ಕೊಚ್ಚಿ ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳಲ್ಲಿ ವಿಮಾನಯಾನ ಸಂಸ್ಥೆಗಳ ತಪಾಸಣೆ ನಡೆಸಿದ ನಂತರ, ಸಂಬಂಧಿತ ನಾಗರಿಕ ವಿಮಾನಯಾನ ಅಗತ್ಯತೆಯ (ಸಿಎಆರ್) ನಿಬಂಧನೆಗಳನ್ನು ಏರ್ ಇಂಡಿಯಾ ಅನುಸರಿಸುತ್ತಿಲ್ಲ ಎಂದು ನಿಯಂತ್ರಕರು ದೂರು ನೀಡಿದ್ದಾರೆ. ಈ ದೂರಿನ ಆಧಾರದ ಮೇಲೆ ಏರ್​​ ಇಂಡಿಯಾಕ್ಕೆ ನವೆಂಬರ್​​ 3ರಂದು ಶೋಕಾಸ್ ನೋಟಿಸ್ ನೀಡಲಾಗಿದೆ.

ಏರ್​​ ಇಂಡಿಯಾ ಈ ಶೋಕಾಸ್ ನೋಟಿಸ್​​ಗೆ ಉತ್ತರ ನೀಡಿದ ಆಧಾರದ ಮೇಲೆ ಸಿಎಆರ್‌ನ ನಿಬಂಧನೆಗಳನ್ನು ಅನುಸರಿಸುತ್ತಿಲ್ಲ ಎಂದು ಕಂಡುಬಂದಿದೆ ಎಂದು ಡಿಜಿಸಿಎ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ರಷ್ಯಾದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ಪ್ರಯಾಣಿಕರಿಗೆ ಸೌಕರ್ಯಗಳ ಕೊರತೆ: ಒಂದೇ ಕೋಣೆಯಲ್ಲಿ 20 ಮಂದಿ; ಆಹಾರ,ಶೌಚಕ್ಕೂ ಸಮಸ್ಯೆ

ಏರ್​​ ಇಂಡಿಯಾ ವಿಮಾನಯಾನದಲ್ಲಿ ಅನೇಕ ದೋಷಗಳು ಕಂಡು ಬಂದಿದೆ. ತಡವಾಗಿ ಬಂದ ವಿಮಾನಗಳಿಂದ ತೊಂದರೆಗೀಡಾದ ಪ್ರಯಾಣಿಕರಿಗೆ ಹೋಟೆಲ್ ಸೌಕರ್ಯಗಳನ್ನು ಒದಗಿಸದಿರುವುದು, ನಿಲ್ದಾಣದ ಸಿಬ್ಬಂದಿಗಳಿಗೆ ಸರಿಯಾದ ತರಬೇತಿ ನೀಡದಿರುವುದು, ಇನ್ನು ಅನೇಕ ಲೋಪಗಳು ಏರ್​​​ ಇಂಡಿಯಾದಲ್ಲಿ ಕಂಡು ಬಂದಿದೆ ಎಂದು ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:06 pm, Wed, 22 November 23

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ