ಏರ್ ಇಂಡಿಯಾಗೆ (Air India) ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಹತ್ತು ಲಕ್ಷ ರೂ. ದಂಡವನ್ನು ವಿಧಿಸಿದೆ. ಡಿಜಿಸಿಎ ನಿಯಮಾವಳಿಗಳನ್ನು ಅನುಸರಿಸದಿದ್ದಕ್ಕಾಗಿ ಈ ದಂಡವನ್ನು ಹಾಕಲಾಗಿದೆ. ಈ ಹಿಂದೆ ಅಂದರೆ ನವೆಂಬರ್ 3ರಂದು ಡಿಜಿಸಿಎ ಸಂಬಂಧಿತ ನಿಯಮಾವಳಿಗಳ ನಿಬಂಧನೆಗಳನ್ನು ಅನುಸರಿಸದಿದ್ದಕ್ಕಾಗಿ ಏರ್ ಇಂಡಿಯಾಗೆ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ಡಿಜಿಸಿಎ ಹೇಳಿದೆ.
ದೆಹಲಿ, ಕೊಚ್ಚಿ ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳಲ್ಲಿ ವಿಮಾನಯಾನ ಸಂಸ್ಥೆಗಳ ತಪಾಸಣೆ ನಡೆಸಿದ ನಂತರ, ಸಂಬಂಧಿತ ನಾಗರಿಕ ವಿಮಾನಯಾನ ಅಗತ್ಯತೆಯ (ಸಿಎಆರ್) ನಿಬಂಧನೆಗಳನ್ನು ಏರ್ ಇಂಡಿಯಾ ಅನುಸರಿಸುತ್ತಿಲ್ಲ ಎಂದು ನಿಯಂತ್ರಕರು ದೂರು ನೀಡಿದ್ದಾರೆ. ಈ ದೂರಿನ ಆಧಾರದ ಮೇಲೆ ಏರ್ ಇಂಡಿಯಾಕ್ಕೆ ನವೆಂಬರ್ 3ರಂದು ಶೋಕಾಸ್ ನೋಟಿಸ್ ನೀಡಲಾಗಿದೆ.
ಏರ್ ಇಂಡಿಯಾ ಈ ಶೋಕಾಸ್ ನೋಟಿಸ್ಗೆ ಉತ್ತರ ನೀಡಿದ ಆಧಾರದ ಮೇಲೆ ಸಿಎಆರ್‌ನ ನಿಬಂಧನೆಗಳನ್ನು ಅನುಸರಿಸುತ್ತಿಲ್ಲ ಎಂದು ಕಂಡುಬಂದಿದೆ ಎಂದು ಡಿಜಿಸಿಎ ಹೇಳಿಕೆಯಲ್ಲಿ ತಿಳಿಸಿದೆ.
ಏರ್ ಇಂಡಿಯಾ ವಿಮಾನಯಾನದಲ್ಲಿ ಅನೇಕ ದೋಷಗಳು ಕಂಡು ಬಂದಿದೆ. ತಡವಾಗಿ ಬಂದ ವಿಮಾನಗಳಿಂದ ತೊಂದರೆಗೀಡಾದ ಪ್ರಯಾಣಿಕರಿಗೆ ಹೋಟೆಲ್ ಸೌಕರ್ಯಗಳನ್ನು ಒದಗಿಸದಿರುವುದು, ನಿಲ್ದಾಣದ ಸಿಬ್ಬಂದಿಗಳಿಗೆ ಸರಿಯಾದ ತರಬೇತಿ ನೀಡದಿರುವುದು, ಇನ್ನು ಅನೇಕ ಲೋಪಗಳು ಏರ್ ಇಂಡಿಯಾದಲ್ಲಿ ಕಂಡು ಬಂದಿದೆ ಎಂದು ಹೇಳಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 3:06 pm, Wed, 22 November 23