AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಮಿಕಂಡಕ್ಟರ್ ಚಿಪ್ ತಯಾರಿಸಿಕೊಡಲು ಟಾಟಾ ಸಂಸ್ಥೆ ಜೊತೆ ಅಮೆರಿಕದ ಟೆಸ್ಲಾ ಒಪ್ಪಂದ

Tesla-Tata Electronics Deal: ಅಮೆರಿಕದ ಟೆಸ್ಲಾ ತನ್ನ ಎಲೆಕ್ಟ್ರಿಕ್ ಕಾರುಗಳಿಗೆ ಸೆಮಿಕಂಡಕ್ಟರ್ ಚಿಪ್ ತಯಾರಿಸಿಕೊಡಲು ಟಾಟಾ ಎಲೆಕ್ಟ್ರಾನಿಕ್ಸ್ ಸಂಸ್ಥೆ ಜೊತೆ ಒಪ್ಪಂದ ಮಾಡಿಕೊಂಡಿದೆ ಎನ್ನುವಂತಹ ಸುದ್ದಿ ಎಕನಾಮಿಕ್ ಟೈಮ್ಸ್ ಪತ್ರಿಕೆಯಲ್ಲಿ ವರದಿಯಾಗಿದೆ. ಟೆಸ್ಲಾ ಕಾರುಗಳು ಸದ್ಯ ಚೀನಾದಲ್ಲಿ ಉತ್ಪಾದನೆ ಆಗುತ್ತಿವೆ. ಅವುಗಳ ಬಿಡಿಭಾಗಗಳೂ ಚೀನೀ ಕಂಪನಿಗಳೇ ಪೂರೈಸುತ್ತವೆ. ಈ ಚೀನೀ ಅವಲಂಬನೆಯನ್ನು ತಪ್ಪಿಸಲು ಮತ್ತು ತನ್ನ ಬಿಡಿಭಾಗ ಸರಬರಾಜು ಸರಪಳಿ ವಿಸ್ತರಿಸಲು ಹೊರಟಿರುವ ಟೆಸ್ಲಾ ಈ ನಿಟ್ಟಿನಲ್ಲಿ ಟಾಟಾ ಜೊತೆ ಒಪ್ಪಂದ ಮಾಡಿಕೊಂಡಿರುವ ಸಾಧ್ಯತೆ ಇದೆ.

ಸೆಮಿಕಂಡಕ್ಟರ್ ಚಿಪ್ ತಯಾರಿಸಿಕೊಡಲು ಟಾಟಾ ಸಂಸ್ಥೆ ಜೊತೆ ಅಮೆರಿಕದ ಟೆಸ್ಲಾ ಒಪ್ಪಂದ
ಟೆಸ್ಲಾ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 15, 2024 | 12:02 PM

Share

ನವದೆಹಲಿ, ಏಪ್ರಿಲ್ 15: ಅಮೆರಿಕದ ಇಲಾನ್ ಮಸ್ಕ್ ಮಾಲಕತ್ವದ ಎಲೆಕ್ಟ್ರಿಕಲ್ ವಾಹನ ತಯಾರಕ ಸಂಸ್ಥೆ ಟೆಸ್ಲಾ ಭಾರತದ ಟಾಟಾ ಎಲೆಕ್ಟ್ರಾನಿಕ್ಸ್ ಜೊತೆ ಒಪ್ಪಂದಕ್ಕೆ (Tata electronics and Tesla deal) ಸಹಿ ಹಾಕಿದೆ. ಟೆಸ್ಲಾದ ವಾಹನಗಳಿಗೆ ಸೆಮಿಕಂಡಕ್ಟರ್ ಚಿಪ್ ತಯಾರಿಸಿಕೊಡಲು ಟಾಟಾ ಎಲೆಕ್ಟ್ರಾನಿಕ್ಸ್ ಗುತ್ತಿಗೆ ಪಡೆದಿದೆ ಎಂದು ಇಕನಾಮಿಕ್ ಟೈಮ್ಸ್​ನಲ್ಲಿ ವರದಿ ಪ್ರಕಟವಾಗಿದೆ. ಆದರೆ, ಎಷ್ಟು ಮೊತ್ತಕ್ಕೆ ಮತ್ತು ಎಷ್ಟು ಚಿಪ್​ಗಳಿಗೆ ಈ ಡೀಲ್ ನಡೆದಿದೆ ಎನ್ನುವುದು ಗೊತ್ತಾಗಿಲ್ಲ. ಎರಡೂ ಕಂಪನಿಗಳಿಂದ ಇನ್ನೂ ಅಧಿಕೃತವಾಗಿ ಯಾವ ಹೇಳಿಕೆಯೂ ಬಂದಿಲ್ಲ.

ಟಾಟಾ ಎಲೆಕ್ಟ್ರಾನಿಕ್ಸ್ ಜೊತೆ ಟೆಸ್ಲಾ ಒಪ್ಪಂದ ಮಾಡಿಕೊಂಡಿರುವುದು ನಿಜವೇ ಆಗಿದ್ದಲ್ಲಿ ಇದು ಮಹತ್ವದ ಹೆಜ್ಜೆಯಾಗಿರಲಿದೆ. ಈ ಡೀಲ್ ಎರಡೂ ಸಂಸ್ಥೆಗಳಿಗೆ ಅನುಕೂಲವಾಗಲಿದೆ. ಭಾರತದ ಸೆಮಿಕಂಡಕ್ಟರ್ ಉದ್ಯಮಕ್ಕೂ ಅನುಕೂಲವಾಗಲಿದೆ. ಟೆಸ್ಲಾದ ಎಲೆಕ್ಟ್ರಿಕ್ ಕಾರುಗಳಿಗೆ ಬೇಕಾದ ಚಿಪ್​ಗಳನ್ನು ಬಹುತೇಕ ಚೀನೀ ಕಂಪನಿಗಳಿಂದಲೇ ಪಡೆಯಲಾಗುತ್ತಿದೆ. ಚೀನಾ ಮೇಲಿನ ಅತಿಯಾದ ಅವಲಂಬನೆಯನ್ನು ತಪ್ಪಿಸಲು ಟೆಸ್ಲಾ ಮತ್ತಿತರ ಅಮೆರಿಕನ್ ಕಂಪನಿಗಳು ಪ್ರಯತ್ನಿಸುತ್ತಿವೆ. ಈ ನಿಟ್ಟಿನಲ್ಲಿ ಬಿಡಿವಸ್ತುಗಳನ್ನು ಚೀನಾಯೇತರ ಮೂಲಗಳಿಂದ ತರಿಸಿಕೊಳ್ಳಲು ಗಮನ ಕೊಡಲಾಗುತ್ತಿದೆ. ಇದರ ಭಾಗವಾಗಿ ಟೆಸ್ಲಾ ಮತ್ತು ಟಾಟಾ ಒಪ್ಪಂದವಾಗಿದೆ.

ಟೆಸ್ಲಾ ಸಂಸ್ಥೆ ಭಾರತದಲ್ಲಿ ವಾಹನ ತಯಾರಿಕಾ ಘಟಕ ಸ್ಥಾಪಿಸಿ ಬಂಡವಾಳ ಹೂಡಿಕೆ ಮಾಡಲೂ ನಿರ್ಧರಿಸಿದೆ. ಭಾರತದ ಮಾರುಕಟ್ಟೆಗೆ ಮಾತ್ರವಲ್ಲ ಜಾಗತಿಕ ಸರಬರಾಜಿಗೂ ಇಲ್ಲಿಯೇ ಉತ್ಪಾದನೆ ಮಾಡಲಿದೆ. ಇಲಾನ್ ಮಸ್ಕ್ ಶೀಘ್ರದಲ್ಲೇ ಭಾರತಕ್ಕೆ ಮೂರು ದಿನಗಳ ಭೇಟಿಗೆ ಬರಲಿದ್ದು, ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಇಸ್ರೇಲ್-ಇರಾನ್ ಯುದ್ಧಭೀತಿ; ಭಾರತದ ಷೇರುಪೇಟೆಗೆ ಆರಂಭಿಕ ಪೆಟ್ಟು; 15 ನಿಮಿಷದಲ್ಲಿ 5 ಲಕ್ಷ ಕೋಟಿ ರೂ ನಷ್ಟ

ಇನ್ನೊಂದೆಡೆ, ಐಫೋನ್ ಸೇರಿದಂತೆ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳನ್ನು ತಯಾರಿಸುತ್ತಿರುವ ಟಾಟಾ ಎಲೆಕ್ಟ್ರಾನಿಕ್ಸ್ ಸಂಸ್ಥೆ ಸೆಮಿಕಂಡಕ್ಟರ್ ಕ್ಷೇತ್ರಕ್ಕೆ ಕಾಲಿಟ್ಟಿದೆ. ಬೆಂಗಳೂರು ಗಡಿಭಾಗದಲ್ಲಿರುವ ಹೊಸೂರು, ಧೋಲೇರಾ ಮತ್ತು ಅಸ್ಸಾಮ್​ನಲ್ಲಿ ಟಾಟಾದಿಂದ ಚಿಪ್ ಫ್ಯಾಕ್ಟರಿಗಳು ಸ್ಥಾಪನೆಯಾಗಿದೆ. ಇಲ್ಲಿಯವರೆಗೆ ಈ ಉದ್ಯಮಕ್ಕೆ ಟಾಟಾದಿಂದ 14 ಬಿಲಿಯನ್ ಡಾಲರ್ ಬಂಡವಾಳ ಹೂಡಿಕೆ ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್