AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೇಕಡಾ 7ರ ಆರ್ಥಿಕ ಬೆಳವಣಿಗೆ ಸಾಧಿಸಲಿದೆ ಭಾರತ; ನೀತಿ ಆಯೋಗದ ಮಾಜಿ ಉಪಾಧ್ಯಕ್ಷ

ಉಕ್ರೇನ್ ಸಂಘರ್ಷ ಮುಂದುವರಿದಿರುವುದು ಜಾಗತಿಕ ತೈಲ ಬೆಲೆ ಹೆಚ್ಚಳಕ್ಕೆ ಕಾರಣವಾಗಲಿದೆ. ಇದು ಭಾರತದ ಹಣದುಬ್ಬರದ ಮೇಲೆ ಬೀರುತ್ತಿರುವ ಪರಿಣಾಮವೂ ಮುಂದುವರಿಯಲಿದೆ ಎಂದು ರಾಜೀವ್ ಕುಮಾರ್ ಹೇಳಿದ್ದಾರೆ.

ಶೇಕಡಾ 7ರ ಆರ್ಥಿಕ ಬೆಳವಣಿಗೆ ಸಾಧಿಸಲಿದೆ ಭಾರತ; ನೀತಿ ಆಯೋಗದ ಮಾಜಿ ಉಪಾಧ್ಯಕ್ಷ
ನೀತಿ ಆಯೋಗದ ಮಾಜಿ ಉಪಾಧ್ಯಕ್ಷ ರಾಜೀವ್ ಕುಮಾರ್Image Credit source: Reuters
TV9 Web
| Edited By: |

Updated on: Nov 21, 2022 | 10:51 AM

Share

ನವದೆಹಲಿ: ಜಾಗತಿಕ ಆರ್ಥಿಕ ಹಿಂಜರಿತ (Global recession) ಹೊರತಾಗಿಯೂ ಭಾರತವು 2023-24ನೇ ಸಾಲಿನಲ್ಲಿ ಶೇಕಡಾ 6ರಿಂದ 7ರ ಆರ್ಥಿಕ ಬೆಳವಣಿಗೆ ಸಾಧಿಸಲಿದೆ ಎಂದು ನೀತಿ ಆಯೋಗದ (NITI Aayog) ಮಾಜಿ ಉಪಾಧ್ಯಕ್ಷ ರಾಜೀವ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಕಳೆದ ತಿಂಗಳು ಅಂತಾರಾಷ್ಟ್ರೀಯ ಹಣಕಾಸು ನಿಧಿ (International Monetary Fund) ಭಾರತದ 2022-23ನೇ ಸಾಲಿನ ಆರ್ಥಿಕ ಬೆಳವಣಿಗೆ ದರ ಶೇಕಡಾ 6.8ರಿಂದ 7.4ರಷ್ಟಿರಲಿದೆ ಎಂದು ಪರಿಷ್ಕೃತ ಅಂದಾಜಿನಲ್ಲಿ ತಿಳಿಸಿತ್ತು. ರಷ್ಯಾ-ಉಕ್ರೇನ್ ಸಂಘರ್ಷ ಮುಂದುವರಿದಿರುವುದು ಮತ್ತು ಹಣದುಬ್ಬರ ಪ್ರಮಾಣ ಹೆಚ್ಚಿರುವುದು ಭಾರತದ ಆರ್ಥಿಕ ಬೆಳವಣಿಗೆ ದರದ ಅಂದಾಜನ್ನು ಪರಿಷ್ಕರಿಸಲು ಕಾರಣ ಎಂದು ಐಎಂಎಫ್ ತಿಳಿಸಿತ್ತು.

ಈ ಮಧ್ಯೆ, ಭಾರತದ ಹಣದುಬ್ಬರ ಪ್ರಮಾಣ ಅಕ್ಟೋಬರ್​​ನಲ್ಲಿ ಶೇಕಡಾ 6.77ಕ್ಕೆ ಇಳಿಕೆಯಾಗಿದೆ. ದೇಶದ ಸಗಟು ಹಣದುಬ್ಬರ ಪ್ರಮಾಣ ಶೇಕಡಾ 8.39ಕ್ಕೆ ಇಳಿಕೆಯಾಗಿದೆ.

‘ಹಣದುಬ್ಬರ ಸ್ಥಿರವಾಗಿರಲಿದೆ’

ದರ ಏರಿಕೆಯ ಸೂಚಕವಾಗಿರುವ ಹಣದುಬ್ಬರ ಪ್ರಮಾಣ ಶೇಕಡಾ 6ರಿಂದ 7ರ ಆಸುಪಾಸಿನಲ್ಲಿ ಕೆಲವು ಸಮಯ ಮುಂದುವರಿಯಲಿದೆ. ಗರಿಷ್ಠ ಮಟ್ಟ ತಲುಪಿದ ಬಳಿಕ ಇನ್ನೀಗ ಹಣದುಬ್ಬರ ಕಡಿಮೆಯಾಗಲಿದೆ ಎಂದು ರಾಜೀವ್ ಕುಮಾರ್ ‘ಪಿಟಿಐ’ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. ಉಕ್ರೇನ್ ಸಂಘರ್ಷ ಮುಂದುವರಿದಿರುವುದು ಜಾಗತಿಕ ತೈಲ ಬೆಲೆ ಹೆಚ್ಚಳಕ್ಕೆ ಕಾರಣವಾಗಲಿದೆ. ಇದು ಭಾರತದ ಹಣದುಬ್ಬರದ ಮೇಲೆ ಬೀರುತ್ತಿರುವ ಪರಿಣಾಮವೂ ಮುಂದುವರಿಯಲಿದೆ ಎಂದು ಅವರು ಹೇಳಿದ್ದಾರೆ.

‘ರಫ್ತು ಹೆಚ್ಚಿಸಲು ನೀತಿ ರೂಪಿಸಬೇಕು’

ದೇಶದ ಸರಕು ರಫ್ತು ಅಕ್ಟೋಬರ್​ನಲ್ಲಿ ಶೇಕಡಾ 17ರಷ್ಟು ಕಡಿಮೆಯಾಗಿರುವುದು ವಾಣಿಜ್ಯ ಸಚಿವಾಲಯ ಇತ್ತೀಚೆಗೆ ಬಿಡುಗಡೆ ಮಾಡಿರುವ ದತ್ತಾಂಶಗಳಿಂದ ತಿಳಿದುಬಂದಿದೆ. ಸೆಪ್ಟೆಂಬರ್​ನಲ್ಲಿ ಸುಮಾರು 2.8 ಲಕ್ಷ ಕೋಟಿ ರೂ. ಮೌಲ್ಯದ ಸರಕು ರಫ್ತು ಮಾಡಲಾಗಿದ್ದರೆ ಅಕ್ಟೋಬರ್​ನಲ್ಲಿ ಸುಮಾರು 2.4 ಲಕ್ಷ ಕೋಟಿ ರೂ. ಮೌಲ್ಯದ ಸರಕುಗಳನ್ನು ರಫ್ತು ಮಾಡಲಾಗಿದೆ. ಆಮದು ಪ್ರಮಾಣ ಹೆಚ್ಚಾಗಿದೆ. ಹೀಗಾಗಿ ರಫ್ತು ಬೆಳವಣಿಗೆ ಕುಂಠಿತವಾಗುತ್ತಿರುವುದನ್ನು ತಡೆಯಲು ಸರ್ಕಾರ ಸ್ಪಷ್ಟ ನೀತಿ ರೂಪಿಸಬೇಕಿದೆ ಎಂದು ರಾಜೀವ್ ಕುಮಾರ್ ಹೇಳಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ