AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದ; ದಾರಿ ತಪ್ಪಿಸುತ್ತಿರುವ ರಾಹುಲ್ ಗಾಂಧಿ: ವಾಣಿಜ್ಯ ಸಚಿವರ ಟೀಕೆ

Piyush Goyal criticizes Rahul Gandhi's double standards on India US trade deal: ಅಮೆರಿಕದೊಂದಿಗೆ ಭಾರತ ಮಾಡಿಕೊಂಡಿರುವ ಒಪ್ಪಂದ ಅತ್ಯುತ್ತಮವಾದುದು ಎಂದು ಪೀಯೂಶ್ ಗೋಯಲ್ ಹೇಳಿದ್ದಾರೆ. ಭಾರತದ ನೆರೆ ದೇಶಗಳೊಂದಿಗೆ ಅಮೆರಿಕ ಮಾಡಿಕೊಂಡು ಒಪ್ಪಂದಗಳಲ್ಲೇ ಇದು ಬೆಸ್ಟ್ ಎಂದು ಅಭಿಪ್ರಾಯಪಟ್ಟಿದ್ದಾರೆ. ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದ ವಿಳಂಬ ಆಗುತ್ತಿದೆ ಎಂದು ಹೇಳುತ್ತಿದ್ದ ರಾಹುಲ್ ಗಾಂಧಿ ಈಗ ಟೀಕಿಸುತ್ತಿರುವುದು ಅವರ ದ್ವಂದ್ವ ಮನೋಭಾವನೆ ತೋರಿಸುತ್ತದೆ ಎಂದೂ ಗೋಯಲ್ ಟೀಕಿಸಿದ್ದಾರೆ.

ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದ; ದಾರಿ ತಪ್ಪಿಸುತ್ತಿರುವ ರಾಹುಲ್ ಗಾಂಧಿ: ವಾಣಿಜ್ಯ ಸಚಿವರ ಟೀಕೆ
ಪೀಯೂಶ್ ಗೋಯಲ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 03, 2026 | 7:16 PM

Share

ನವದೆಹಲಿ, ಫೆಬ್ರುವರಿ 3: ಭಾರತ ಮತ್ತು ಅಮೆರಿಕ ನಡುವಿನ ಒಪ್ಪಂದವನ್ನು (India US trade deal) ವಾಣಿಜ್ಯ ಸಚಿವ ಪೀಯೂಶ್ ಗೋಯಲ್ (Piyush Goyal) ತುಂಬು ಹೃದಯದಿಂದ ಸ್ವಾಗತಿಸಿದ್ದಾರೆ. ಇದುದೇಶ ಹೆಮ್ಮೆ ಪಡಬಹುದಾದ ಒಪ್ಪಂದವಾಗಿದೆ. ಭಾರತದ ಯಾವುದೇ ನೆರೆಹೊರೆಯವರೊಂದಿಗೆ ಅಮೆರಿಕ ಮಾಡಿಕೊಂಡಿರುವ ಒಪ್ಪಂದಗಳಲ್ಲೇ ಇದು ಅತ್ಯುತ್ತಮ ಡೀಲ್ ಎಂದು ಪೀಯೂಶ್ ಗೋಯಲ್ ಬಣ್ಣಿಸಿದ್ದಾರೆ. ಇಂದು ಮಂಗಳವಾರ ಇದೇ ವಿಚಾರವಾಗಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ವಾಣಿಜ್ಯ ಸಚಿವರು, ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯದ ವೈಯಕ್ತಿಕ ಸ್ನೇಹದಿಂದ ಈ ಡೀಲ್ ಕುದುರಲು ಸಾಧ್ಯವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

‘ಅಮೆರಿಕದೊಂದಿಗೆ ಬಹಳ ಪ್ರಬಲ ವ್ಯಾಪಾರ ಒಪ್ಪಂದ ಮಾಡಿಕೊಂಡಿದ್ದಕ್ಕೆ ಇವತ್ತು ದೇಶದ ಪ್ರತಿಯೊಬ್ಬರೂ ಕೂಡ ಪ್ರಧಾನಿ ಮೋದಿಗೆ ಧನ್ಯವಾದ ಹೇಳುತ್ತಿದ್ದಾರೆ. ರಾಷ್ಟ್ರ ಮತ್ತು ಜನರ ಹಿತಾಸಕ್ತಿ ಗಮನದಲ್ಲಿ ಇಟ್ಟುಕೊಂಡು, ಭಾರತದ ಭವಿಷ್ಯವನ್ನು ಸುಭದ್ರಗೊಳಿಸಲು ಒಪ್ಪಂದವನ್ನು ಅಂತಿಮಗೊಳಿಸಲಾಗಿದೆ’ ಎಂದು ಪೀಯೂಶ್ ಗೋಯಲ್ ಹೇಳಿದ್ದಾರೆ.

ಇದನ್ನೂ ಓದಿ: ಏಷ್ಯನ್ ದೇಶಗಳ ಪೈಕಿ ಭಾರತಕ್ಕೆ ಕಡಿಮೆ ಟ್ಯಾರಿಫ್; ಅತಿ ಕಡಿಮೆ ಸುಂಕ ಎದುರಿಸುತ್ತಿರುವ ರಾಷ್ಟ್ರಗಳಿವು…

ಏನಿದು ಭಾರತ-ಅಮೆರಿಕ ಒಪ್ಪಂದ?

ಇತ್ತೀಚೆಗೆ 27 ರಾಷ್ಟ್ರಗಳ ಗುಂಪಾದ ಐರೋಪ್ಯ ಒಕ್ಕೂಟದೊಂದಿಗೆ ಭಾರತ ಟ್ರೇಡ್ ಡೀಲ್ ಮಾಡಿಕೊಂಡಿದೆ. ಅದನ್ನು ಮದರ್ ಆಫ್ ಆಲ್ ಡೀಲ್ಸ್ ಎಂದು ಬಣ್ಣಿಸಲಾಗುತ್ತಿದೆ. ಈಗ ಅಮೆರಿಕದೊಂದಿಗೆ ಭಾರತ ಮಾಡಿಕೊಳ್ಳಲಿರುವ ಒಪ್ಪಂದವು ಅದಕ್ಕಿಂತಲೂ ಬೃಹತ್ತಾಗಿರುವ ನಿರೀಕ್ಷೆ ಇದೆ. ಒಪ್ಪಂದ ಏರ್ಪಟ್ಟಿರುವುದನ್ನು ಟ್ರಂಪ್ ಮತ್ತು ಮೋದಿ ಘೋಷಿಸಿದ್ದಾರಾದರೂ ಮಾತುಕತೆ ಇನ್ನೂ ಅಂತಿಮಗೊಂಡಿಲ್ಲ. ಮಾತುಕತೆ ಮುಗಿದ ಬಳಿಕ ಒಪ್ಪಂದಕ್ಕೆ ಸಹಿ ಆದ ನಂತರ ಅದು ಚಾಲನೆಗೆ ಬರುತ್ತದೆ.

ಈ ಒಪ್ಪಂದದಲ್ಲಿ ಮಾಡಲಾಗಿರುವ ತೀರ್ಮಾನದ ಪ್ರಕಾರ ಭಾರತದ ಸರಕುಗಳಿಗೆ ಅಮೆರಿಕ ವಿಧಿಸುವ ಟ್ಯಾರಿಫ್ ಶೇ. 50ರಿಂದ ಶೇ. 18ಕ್ಕೆ ಇಳಿಕೆಯಾಗುತ್ತದೆ. ಅದೇ ವೇಳೆ, ಅಮೆರಿಕ ಸರಕುಗಳಿಗೆ ಭಾರತದ ಮಾರುಕಟ್ಟೆಗೆ ಮುಕ್ತ ಪ್ರವೇಶ ಸಿಗುತ್ತದೆ.

ಇದನ್ನೂ ಓದಿ: ಅಮೆರಿಕದೊಂದಿಗೆ ಟ್ರೇಡ್ ಡೀಲ್; ಭಾರತದ ಕೃಷಿ ಮಾರುಕಟ್ಟೆ ರಕ್ಷಣೆಯಲ್ಲಿ ರಾಜಿ ಇರೋದಿಲ್ಲವಾ?

ದಾರಿತಪ್ಪಿಸುತ್ತಿರುವ ರಾಹುಲ್ ಗಾಂಧಿ: ವಾಣಿಜ್ಯ ಸಚಿವರು ಟೀಕೆ

ಈ ವ್ಯಾಪಾರ ಒಪ್ಪಂದ ಮಾಡಿಕೊಂಡು ಅಮೆರಿಕಕ್ಕೆ ಭಾರತವನ್ನು ಮಾರಲಾಗುತ್ತಿದೆ ಎಂಬರ್ಥದಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಟೀಕೆ ಮಾಡಿದ್ದಾರೆ. ಇವರ ಹೇಳಿಕೆಯನ್ನು ಪಿಯೂಶ್ ಗೋಯಲ್ ಬಲವಾಗಿ ಖಂಡಿಸಿದ್ದಾರೆ.

ಇಷ್ಟು ದಿನ ರಾಹುಲ್ ಗಾಂಧಿ ಅಮೆರಿಕದೊಂದಿಗೆ ಒಪ್ಪಂದ ಆಗಿಲ್ಲ ಎಂದು ಪ್ರಶ್ನಿಸುತ್ತಿದ್ದರು. ಈಗ ಒಪ್ಪಂದ ಆದಾಗ ಅದನ್ನು ಟೀಕಿಸುತ್ತಿದ್ದಾರೆ. ಇದು ರಾಹುಲ್ ಗಾಂಧಿ ಅವರ ಆಷಾಢಭೂತಿತನ ತೋರುತ್ತದೆ. ಅವರು ದೇಶದ ಜನರ ದಾರಿತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಾಣಿಜ್ಯ ಸಚಿವರು ಸಿಡಿಗುಟ್ಟಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ