Vikram Kirloskar: ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ಹೃದಯಾಘಾತದಿಂದ ನಿಧನ

ವಾಹನ ಉದ್ಯಮದಲ್ಲಿ ಭಾರತದ ದಿಗ್ಗಜರಲ್ಲಿ ಒಬ್ಬರಾದ, ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ಅವರು ಮಂಗಳವಾರ ತಡರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

Vikram Kirloskar: ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ಹೃದಯಾಘಾತದಿಂದ ನಿಧನ
ವಿಕ್ರಮ್ ಕಿರ್ಲೋಸ್ಕರ್
Follow us
TV9 Web
| Updated By: ಆಯೇಷಾ ಬಾನು

Updated on:Nov 30, 2022 | 8:57 AM

ಬೆಂಗಳೂರು: ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್​(Toyota Kirloskar Motor Company) ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್(64)(Vikram Kirloskar) ಮಂಗಳವಾರ ತಡರಾತ್ರಿ ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಬೆಂಗಳೂರಿನ ಹೆಬ್ಬಾಳ ಚಿತಾಗಾರದಲ್ಲಿಂದು ಅಂತ್ಯಕ್ರಿಯೆ ನಡೆಯಲಿದೆ.

ವಾಹನ ಉದ್ಯಮದಲ್ಲಿ ಭಾರತದ ದಿಗ್ಗಜರಲ್ಲಿ ಒಬ್ಬರಾದ, ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ಅವರು ಮಂಗಳವಾರ ಬೆಳಗ್ಗೆ ಹೃದಯಾಘಾತದಿಂದ ಕುಸಿದು ಬಿದ್ದರು. ಆ ತಕ್ಷಣವೇ ಅವರನ್ನು ಬೆಂಗಳೂರಿನ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಹೃದಯಾಘಾತದಿಂದ ಮಂಗಳವಾರ ತಡರಾತ್ರಿ ಸಾವನ್ನಪ್ಪಿದ್ದಾರೆ. ಟೊಯೋಟಾ ಕಿರ್ಲೋಸ್ಕರ್ ಮೋಟಾರ್‌ನ ಉಪಾಧ್ಯಕ್ಷರಾದ ವಿಕ್ರಮ್ ಎಸ್. ಕಿರ್ಲೋಸ್ಕರ್ ಅವರ ಅಕಾಲಿಕ ನಿಧನದ ಬಗ್ಗೆ ಟೊಯೊಟಾ ಇಂಡಿಯಾ ತನ್ನ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳಲ್ಲಿ ದೃಢಪಡಿಸಿದೆ.

ನಾವು ನಿಮಗೆ ಈ ವಿಚಾರ ತಿಳಿಸಲು ತುಂಬಾ ದುಃಖಿತರಾಗಿದ್ದೇವೆ. ಈ ದುಃಖದ ಸಮಯದಲ್ಲಿ, ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ನಾವು ಪ್ರಾರ್ಥಿಸುತ್ತೇವೆ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ನಮ್ಮ ಆಳವಾದ ಸಹಾನುಭೂತಿಗಳನ್ನು ವ್ಯಕ್ತಪಡಿಸುತ್ತೇವೆ. 30 ನವೆಂಬರ್ 2022 ರ ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನ ಹೆಬ್ಬಾಳ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಯುತ್ತೆ ಎಂದು ಟ್ವೀಟ್ ಮಾಡಿದೆ.

ವಿಕ್ರಮ್ ಅವರು ಕಿರ್ಲೋಸ್ಕರ್ ಗ್ರೂಪ್‌ನ ನಾಲ್ಕನೇ ತಲೆಮಾರಿನ ಮುಖ್ಯಸ್ಥರಾಗಿದ್ದರು. ಅವರು ಕಿರ್ಲೋಸ್ಕರ್ ಸಿಸ್ಟಮ್ಸ್ ಲಿಮಿಟೆಡ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿದ್ದರು ಮತ್ತು ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್‌ನ ಉಪಾಧ್ಯಕ್ಷರೂ ಆಗಿದ್ದರು. ಮ್ಯಾಸಚೂಸೆಟ್ಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT) ಯಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್‌ನಲ್ಲಿ ಪದವೀಧರರಾದ ವಿಕ್ರಮ್ ಕಿರ್ಲೋಸ್ಕರ್ ಅವರು ಭಾರತೀಯ ಆಟೋ ವಲಯದಲ್ಲಿ ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಒಬ್ಬರು.

ಟ್ವಿಟರ್ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ

ಇನ್ನು ವಿಕ್ರಮ್ ಕಿರ್ಲೋಸ್ಕರ್ ಅವರ ನಿಧನಕ್ಕೆ ಸಿಎಂ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ. ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಅಕಾಲಿಕ ನಿಧನದಿಂದ ದುಃಖವಾಗಿದೆ. ಕುಟುಂಬಕ್ಕೆ ನೋವು ಸಹಿಸುವ ಶಕ್ತಿ ಸಿಗಲೆಂದು ದೇವರಲ್ಲಿ ಪ್ರಾರ್ಥನೆ ಮಾಡುವೆ ಎಂದು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

Published On - 7:54 am, Wed, 30 November 22

ಟೀಂ ಇಂಡಿಯಾದ ನೂತನ ಏಕದಿನ ಜೆರ್ಸಿ ಹೇಗಿದೆ ಗೊತ್ತಾ?
ಟೀಂ ಇಂಡಿಯಾದ ನೂತನ ಏಕದಿನ ಜೆರ್ಸಿ ಹೇಗಿದೆ ಗೊತ್ತಾ?
ರಾತ್ರಿ ಬಾರ್​ಗೆ ಕನ್ನ ಹಾಕಿ 2 ಆಲ್ಕೋಹಾಲ್ ಬಾಟಲಿಯನ್ನು ಕದ್ದ ಕಳ್ಳ!
ರಾತ್ರಿ ಬಾರ್​ಗೆ ಕನ್ನ ಹಾಕಿ 2 ಆಲ್ಕೋಹಾಲ್ ಬಾಟಲಿಯನ್ನು ಕದ್ದ ಕಳ್ಳ!
ರಂಗಾಯಣ ರಘು ಪಾತ್ರಕ್ಕೆ ಹೊಸ ಭಾಷೆ ಸೃಷ್ಟಿ ಮಾಡಿದ ಯೋಗರಾಜ್​ ಭಟ್
ರಂಗಾಯಣ ರಘು ಪಾತ್ರಕ್ಕೆ ಹೊಸ ಭಾಷೆ ಸೃಷ್ಟಿ ಮಾಡಿದ ಯೋಗರಾಜ್​ ಭಟ್
ಸಿಎಂ, ಡಿಸಿಎಂ ಸಿಡಬ್ಲ್ಯೂಸಿ ಸಭೆಯಲ್ಲಿ ಪಾಲ್ಗೊಳ್ಳಲು ಹೋಗಿದ್ದಾರೆ: ಜಮೀರ್
ಸಿಎಂ, ಡಿಸಿಎಂ ಸಿಡಬ್ಲ್ಯೂಸಿ ಸಭೆಯಲ್ಲಿ ಪಾಲ್ಗೊಳ್ಳಲು ಹೋಗಿದ್ದಾರೆ: ಜಮೀರ್
ನಂಜನಗೂಡು ಶ್ರೀಕಂಠೇಶ್ವರ ಕೋಟಿ ಒಡೆಯ, ನಾಲ್ಕೈದು ದೇಶ ಕರೆನ್ಸಿ ಪತ್ತೆ!
ನಂಜನಗೂಡು ಶ್ರೀಕಂಠೇಶ್ವರ ಕೋಟಿ ಒಡೆಯ, ನಾಲ್ಕೈದು ದೇಶ ಕರೆನ್ಸಿ ಪತ್ತೆ!
ಶೋಷಿತ ಸಮುದಾಯಗಳ ಒಕ್ಕೂಟ ಮತ್ತು ಕೆಪಿಸಿಸಿ ಸಂಯುಕ್ತ ಆಶ್ರಯದಲ್ಲಿ ಸಮಾವೇಶ
ಶೋಷಿತ ಸಮುದಾಯಗಳ ಒಕ್ಕೂಟ ಮತ್ತು ಕೆಪಿಸಿಸಿ ಸಂಯುಕ್ತ ಆಶ್ರಯದಲ್ಲಿ ಸಮಾವೇಶ
ಸಿದ್ದರಾಮಯ್ಯ ಸರ್ಕಾರಕ್ಕೆ ಹಿಂದೂಗಳನ್ನು ಕಂಡರಾಗಲ್ಲ, ಅಲರ್ಜಿ: ಅಶೋಕ
ಸಿದ್ದರಾಮಯ್ಯ ಸರ್ಕಾರಕ್ಕೆ ಹಿಂದೂಗಳನ್ನು ಕಂಡರಾಗಲ್ಲ, ಅಲರ್ಜಿ: ಅಶೋಕ
ಬಾಯ್ಮುಚ್ಚಿಕೊಂಡಿರುವಂತೆ ಬಸನಗೌಡ ಯತ್ನಾಳ್​ರನ್ನು ಎಚ್ಚರಿಸಿದ ರೇಣುಕಾಚಾರ್ಯ
ಬಾಯ್ಮುಚ್ಚಿಕೊಂಡಿರುವಂತೆ ಬಸನಗೌಡ ಯತ್ನಾಳ್​ರನ್ನು ಎಚ್ಚರಿಸಿದ ರೇಣುಕಾಚಾರ್ಯ
ಅಂಗವಿಕಲರ ಅನುದಾನ ಗ್ಯಾರಂಟಿಗಳಿಗೆ ಬಳಕೆ: ಸರ್ಕಾರದ ವಿರುದ್ಧ ಮತ್ತೊಂದು ಆರೋಪ
ಅಂಗವಿಕಲರ ಅನುದಾನ ಗ್ಯಾರಂಟಿಗಳಿಗೆ ಬಳಕೆ: ಸರ್ಕಾರದ ವಿರುದ್ಧ ಮತ್ತೊಂದು ಆರೋಪ
ಮಂಜು ವಿರುದ್ಧ ತಂತ್ರ ರೂಪಿಸಿದ ರಜತ್, ತ್ರಿವಿಕ್ರಮ್; ಸಾಥ್ ಕೊಟ್ಟ ಭವ್ಯಾ
ಮಂಜು ವಿರುದ್ಧ ತಂತ್ರ ರೂಪಿಸಿದ ರಜತ್, ತ್ರಿವಿಕ್ರಮ್; ಸಾಥ್ ಕೊಟ್ಟ ಭವ್ಯಾ